ಬೆಂಗಳೂರು: ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನದಲ್ಲಿ ಬಾಂಬ್ ನಿಷ್ಕ್ರೀಯ ಪತ್ತೆ ಮತ್ತು ದಳದ ಮೊಬೈಲ್ ಲ್ಯಾಬ್, ಎಫ್ಎಸ್‌ಎಲ್ ಮೊಬೈಲ್ ಲ್ಯಾಬ್ ವಾಹನ, ಕಂಟ್ರೋಲ್ ಸೆಂಟರ್ ವಾಹನಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಇದೇ ವೇಳೆ ಕರ್ನಾಟಕ ಏಕೀಕರಣದ ಸುವರ್ಣ ಮಹೋತ್ಸವದ ಅಂಗವಾಗಿ ಪೊಲೀಸ್ ಇಲಾಖೆಗೆ ಸಿಎಂ ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ.
ರಾಜ್ಯದದಲ್ಲಿ ಭವ್ಯವಾದ ಸುಸಜ್ಜಿತ ಸುವರ್ಣ ಪೊಲೀಸ್ ಭವನ ನಿರ್ಮಾಣಕ್ಕೆ ಬಜೆಟ್‌ನಲ್ಲಿ ಅನುದಾನ ನಿಗದಿ, ಎಲ್ಲಾ ಪೊಲೀಸ್ ಸಿಬ್ಬಂದಿಗೆ ಬೆಳ್ಳಿ ಪದಕ, ವೈದ್ಯಕೀಯ ವೆಚ್ಚ 1000 ದಿಂದ 1500 ರೂ.ಗೆ ಹೆಚ್ಚಿಸಲಾಗುವುದು, CEN ಠಾಣಾಧಿಕಾರಿಗಳ ಹುದ್ದೆಯನ್ನು ACP ಮತ್ತು DCP ಮಟ್ಟಕ್ಕೆ ಉನ್ನತೀಕರಣ, ಬೆಂಗಳೂರು ನಗರದಲ್ಲಿ 8 ಅಡಿಷನಲ್ DCP ಹುದ್ದೆಗಳನ್ನು ಹೆಚ್ಚುವರಿಯಾಗಿ ಸೃಜನೆ ಹಾಗೂ ರಾಜ್ಯವನ್ನು ಡ್ರಗ್ ಮುಕ್ತ ಗೊಳಿಸುವ ದಿಕ್ಕಿನಲ್ಲಿ ಪರಿಣಾಮಕಾರಿ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಘೋಷಿಸಿದ್ದಾರೆ.
ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ.
— CM of Karnataka (@CMofKarnataka) January 16, 2024
ಪೊಲೀಸರಿಗೆ ನಮ್ಮ ಸರ್ಕಾರ ಸಂಪೂರ್ಣ ಫ್ರೀ ಹ್ಯಾಂಡ್ ಕೊಟ್ಟಿದೆ. ಪೊಲೀಸರ ಕೆಲಸದಲ್ಲಿ ಮೂಗು ತೂರಿಸಬಾರದು ಎನ್ನುವುದು ನನ್ನ ಬದ್ಧತೆ. ಆದರೆ ನಾವು ಫ್ರೀ ಹ್ಯಾಂಡ್… pic.twitter.com/M914LEq0KL
ನೈತಿಕ ಪೋಲಿಸ್‍ಗಿರಿ ಮಾಡಿದ್ರೆ ಕಠಿಣ ಕ್ರಮ: ಸಿಎಂ ಎಚ್ಚರಿಕೆ
ನೈತಿಕ ಪೋಲಿಸ್‍ಗಿರಿ ಮಾಡುವ ಮೂಲಕ ಕಾನೂನು ಕೈಗೆತ್ತಿಕೊಂಡರೆ ನಮ್ಮ ಸರ್ಕಾರ ಸಹಿಸುವುದಿಲ್ಲ. ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಪ್ರಕಾರ ಕ್ರಮ ಜರುಗಿಸಲಾಗುವುದು. ಸೈಬರ್ ಅಪರಾಧಗಳು ಹೆಚ್ಚುತ್ತಿದ್ದು, ದಲಿತರು, ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಳವಾಗುತ್ತಿವೆ. ಇವುಗಳನ್ನು ನಿಯಂತ್ರಿಸಿ, ಅಪರಾಧಿಗಳನ್ನು ಶಿಕ್ಷೆಗೆ ಗುರಿಪಡಿಸಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.
ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನದ ನಂತರ ಸುದ್ದಿಗೋಷ್ಠಿಯಲ್ಲಿ ಸಿಎಂ ಮಾತನಾಡಿದರು. ರಾಜ್ಯದಲ್ಲಿ ಕೋಮುಗಲಭೆಗಳು ನಡೆದಿಲ್ಲ, ಇದು ಉತ್ತಮ ಕಾನೂನು ಸುವ್ಯವಸ್ಥೆಗೆ ಸಾಕ್ಷಿ. ಆದರೆ ಸೈಬರ್ ಕ್ರೈಂ ಹೆಚ್ಚಾಗಿದ್ದು, ಆಧುನಿಕ ತಂತ್ರಜ್ಞಾನವನ್ನು ಬಳಸಿ ಸೈಬರ್ ಅಪರಾಧಗಳ ನಿಗ್ರಹಿಸಿ, ಅಪರಾಧ ಪತ್ತೆ ಹಚ್ಚಬೇಕು.
ಪೊಲೀಸರು ಜನಸ್ನೇಹಿಯಾಗಿರಬೇಕು. ನೊಂದವರಿಗೆ ಸಾಂತ್ವನ ಹೇಳಿ, ಅವರ ಕಷ್ಟಗಳಿಗೆ ಸ್ಪಂದಿಸಬೇಕು. ಪೊಲೀಸರ ಮೇಲೆ ವಿಶ್ವಾಸ ಬರುವ ರೀತಿಯಲ್ಲಿ ಕೆಲಸ ಮಾಡಬೇಕು ಎಂದು ತಿಳಿಸಿದ್ದಾರೆ.
ಸರ್ಕಾರ ಅಧಿಕಾರಕ್ಕೆ ಬಂದು 8 ತಿಂಗಳಾಗಿದೆ. ಪೊಲೀಸ್ ಅಧಿಕಾರಿಗಳಿಂದ ನಮಗಿರುವ ನಿರೀಕ್ಷೆಗಳ ಬಗ್ಗೆ ಸಭೆ ನಡೆಸಲಾಗಿದೆ. ಸಮಾಜದ ದುರ್ಬಲ ವರ್ಗ, ಮಹಿಳೆಯರು , ಎಸ್‌ಸಿ, ಎಸ್‌ಟಿ ವರ್ಗಗಳಿಗೆ ರಕ್ಷಣೆ, ಒಂಟಿಯಾಗಿ ವಾಸಿಸುವ ಜನರಿಗೆ ರಕ್ಷಣೆ ನಮ್ಮ ಆದ್ಯತೆ ಎಂದು ಹೇಳಿದರು.
ಇದನ್ನೂ ಓದಿ | Hanagal Case: ಹಾನಗಲ್ ಅತ್ಯಾಚಾರ ಕೇಸ್ ಮುಚ್ಚಿ ಹಾಕಲು ಲೈಸೆನ್ಸ್ ಕೊಟ್ಟ ಸಿದ್ದರಾಮಯ್ಯ; ಬೊಮ್ಮಾಯಿ ಕಿಡಿ
ಪೊಲೀಸ್ ಹಿರಿಯ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಪೊಲೀಸ್ ಠಾಣೆಗಳಿಗೆ ಭೇಟಿ ನೀಡಿ ಮೇಲ್ವಿಚಾರಿಸಬೇಕು. ಇದರಿಂದ ಪೊಲೀಸ್ ವ್ಯವಸ್ಥೆ ಸುಧಾರಣೆ ಸಾಧ್ಯ.. ರಾಜ್ಯದಲ್ಲಿ ಕೋಮುಗಲಭೆಗಳು ನಡೆದಿಲ್ಲ, ಇದು ಉತ್ತಮ ಕಾನೂನು ಸುವ್ಯವಸ್ಥೆಗೆ ಸಾಕ್ಷಿ. ಆದರೆ ಸೈಬರ್ ಕ್ರೈಂ ಹೆಚ್ಚಾಗಿದ್ದು, ಆಧುನಿಕ ತಂತ್ರಜ್ಞಾನವನ್ನು ಬಳಸಿ ಸೈಬರ್ ಅಪರಾಧಗಳ ನಿಗ್ರಹಿಸಿ, ಅಪರಾಧ ಪತ್ತೆ ಹಚ್ಚಬೇಕು ಎಂದು ಸೂಚಿಸಿದರು.
ಎಫ್‌ಐಆರ್ ದಾಖಲಾದ ನಂತರ ಗುಣಮಟ್ಟದ ತನಿಖೆಯಾಗಬೇಕು. ಇದರಿಂದ ಶಿಕ್ಷೆಯ ಪ್ರಮಾಣವನ್ನು ಹೆಚ್ಚಿಸಬಹುದು. ಹಿರಿಯ ಅಧಿಕಾರಿಗಳು ತನಿಖಾ ತಂಡಕ್ಕೆ ಸೂಕ್ತ ಮಾರ್ಗದರ್ಶನ ನೀಡಬೇಕು. ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಶಿಕ್ಷೆ ಪ್ರಮಾಣ ಕಡಿಮೆ ಇದೆ. ರಾಷ್ಟ್ರ ಸರಾಸರಿ 33% ಇದೆ. ಇದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಶಿಕ್ಷೆಯಾಗಬೇಕು. ಈ ವರ್ಗದವರು ಭಯದ ವಾತಾವರಣದಲ್ಲಿರಬಾರದು ಎಂದರು.
ಇಂತಹ ಪ್ರಕರಣದಲ್ಲಿ 60 ದಿನದೊಳಗೆ ಚಾರ್ಜುಶೀಟ್ ಸಿದ್ಧಪಡಿಸಿ, ನ್ಯಾಯಾಲಯಕ್ಕೆ ಸಲ್ಲಿಸಬೇಕು. ಒಟ್ಟಾರೆ ಶಿಕ್ಷೆ ಪ್ರಮಾಣ ಹೆಚ್ಚಾದರೆ, ಅಪರಾಧ ಪ್ರಕರಣಗಳು ಇಳಿಮುಖವಾಗುತ್ತದೆ. ಈ ಬಗ್ಗೆ ಪೊಲೀಸ್ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಇದನ್ನೂ ಓದಿ | DK Shivakumar: ಆಸ್ತಿ ತೆರಿಗೆ ವಿನಾಯಿತಿ, ದಂಡ ಕಡಿಮೆ ಮಾಡುವ ಬಗ್ಗೆ ಚರ್ಚೆ ನಡೆಯುತ್ತಿದೆ: ಡಿ.ಕೆ. ಶಿವಕುಮಾರ್
ಪೊಲೀಸ್ ಬೀಟ್ ವ್ಯವಸ್ಥೆ ಸಮರ್ಪಕವಾಗಿರಬೇಕು. ರಾತ್ರಿ ಹಗಲು ನಡೆಯುವ ಕಳ್ಳತನಗಳ ನಿಗ್ರಹಕ್ಕೆ ಹೊಯ್ಸಳ ಮೇಲ್ವಿಚಾರಣೆ ಇರಬೇಕು. ಚುನಾವಣಾ ಸಂದರ್ಭದಲ್ಲಿ ರೌಡಿಗಳು, ರೂಢಿಗತ ಅಪರಾಧಿಗಳನ್ನು ಗುರುತಿಸಿ , ಅವರ ಮೇಲೆ ನಿಗಾ ಇರಿಸುವ ಜೊತೆಗೆ ಕೋಮುಗಲಭೆ ಆಗದಂತೆ ನೋಡಿಕೊಳ್ಳಬೇಕು. ಸಾಮಾನ್ಯವಾಗಿ ಕಳೆದ ಆರು ತಿಂಗಳಲ್ಲಿ ಶಿಕ್ಷೆಯ ಪ್ರಮಾಣ ಶೇ. 50 ರಷ್ಟು ಜಾಸ್ತಿಯಾಗಿದ್ದು, ಈ ಪ್ರಮಾಣ ಇನ್ನೂ ಹೆಚ್ಚಿಸಬೇಕು ಎಂದು ತಿಳಿಸಿದ್ದಾರೆ.