Site icon Vistara News

CM Siddaramaiah: ಗೃಹ ಸಚಿವ ಅಮಿತ್ ಶಾ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ, ‘ಅನ್ನಭಾಗ್ಯ’ ಅಕ್ಕಿ ಪ್ರಸ್ತಾಪ!

CM Siddaramaiah and Home Minister Amit Shah

ಬೆಂಗಳೂರು, ಕರ್ನಾಟಕ: ದಿಲ್ಲಿ ಪ್ರವಾಸದಲ್ಲಿರುವ ಕರ್ನಾಟಕ (Karnataka) ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಬುಧವಾರ ಸಂಜೆ ಕೇಂದ್ರ ಗೃಹ ಸಚಿವ ಅಮಿತ್ ಶಾ (Home Minister Amit Shah) ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ದಿಲ್ಲಿಯ ಕೃಷ್ಣ ಮೆನನ್ ಮಾರ್ಗದಲ್ಲಿರುವ ಶಾ ಅವರ ನಿವಾಸದಲ್ಲಿಉಭಯ ನಾಯಕರು ಮಾತುಕತೆ ನಡೆಸಿದ್ದಾರೆ.

ಅಮಿತ್ ಶಾ ಅವರ ಜತೆಗಿನ ಮಾತುಕತೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನ್ನಭಾಗ್ಯ ಯೋಜನೆಗೆ ಕೇಂದ್ರದಿಂದ ಅಕ್ಕಿ ತಡೆ ಹಿಡಿದಿರುವ ವಿಷಯವನ್ನು ಪ್ರಸ್ತಾಪಿಸಿದ್ದಾರೆ ಎಂದು ತಿಳಿದು ಬಂದಿದೆ. ಅಲ್ಲದೇ, ರಾಜ್ಯದ ಕಾನೂನು ಸುವ್ಯವಸ್ಥೆ ಸೇರಿ ಹಲವು ವಿಚಾರಗಳನ್ನು ಮುಖ್ಯಮಂತ್ರಿಗಳು ಪ್ರಸ್ತಾಪ ಮಾಡಿದ್ದಾರೆಂದು ಹೇಳಲಾಗುತ್ತಿದೆ.

ಈ ಸುದ್ದಿಯನ್ನೂ ಓದಿ: Congress Guarantee: ಜವಳಿ ಸಚಿವರಿಗೆ ಸಿಕ್ಕ ಗೋಯೆಲ್‌, ಆಹಾರ ಸಚಿವರು ಬಂದಾಗ ಗಾಯಬ್‌?: ಏನಂದ್ರು ಮುನಿಯಪ್ಪ?

ಇತ್ತೀಚೆಗೆ ರಾಜ್ಯ ಸರ್ಕಾರ ರದ್ದು ಪಡಿಸಿದ ಕಾನೂನುಗಳ ಬಗ್ಗೆ ಗೃಹ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಅವರು ಮನವರಿಕೆ ಮಾಡಿಕೊಟ್ಟಿದ್ದಾರೆ. ಗೋಹತ್ಯೆ ಮಸೂದೆ, ಎಪಿಎಂಸಿ ಕಾಯ್ದೆ, ಮತಾಂತರ ನಿಷೇಧ ಕಾಯ್ದೆಗಳನ್ನು ಕೇಂದ್ರ ಸರ್ಕಾರ ಹಿಂದಕ್ಕೆ ಪಡೆದಿತ್ತು.ಹಿಂಪಡೆದ ಕಾನೂನುಗಳ ಅನುರ್ಜಿತಗೊಳ್ಳಲು ರಾಷ್ಟ್ರಪತಿಗಳ ಒಪ್ಪಿಗೆ ಅಗತ್ಯ. ಹಾಗಾಗಿ, ಈ ವಿಚಾರಗಳ ಕುರಿತು ಸಿಎಂ ಸಿದ್ದರಾಮಯ್ಯ ಅವರು ಅಮಿತ್ ಶಾ ಅವರಿಗೆ ತಿಳಿಸಿ ಕೊಟ್ಟಿದ್ದಾರೆ.

ದೇಶದ ಇನ್ನಷ್ಟು ಸುದ್ದಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Exit mobile version