Janatha Darshan : ರೈತರ ಸಮಸ್ಯೆಗೆ ಪರಿಹಾರದ ದರ್ಶನ ನೀಡಿದ ಸಿಎಂ ಸಿದ್ದರಾಮಯ್ಯ! - Vistara News

ಕರ್ನಾಟಕ

Janatha Darshan : ರೈತರ ಸಮಸ್ಯೆಗೆ ಪರಿಹಾರದ ದರ್ಶನ ನೀಡಿದ ಸಿಎಂ ಸಿದ್ದರಾಮಯ್ಯ!

Janatha Darshan : ಜನತಾ ದರ್ಶನದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಅನೇಕರ ಸಮಸ್ಯೆಗಳನ್ನು ಬಗೆಹರಿಸಿದ್ದಾರೆ. ಅಲ್ಲದೆ, ಈ ವೇಳೆ ಹಲವು ರೈತರು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡಿದ್ದು, ತಕ್ಷಣ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿ ಪರಿಹರಿಸುವಂತೆ ಸೂಚನೆ ನೀಡಿದ್ದಾರೆ.

VISTARANEWS.COM


on

CM Siddaramaiah Janatha Darshan in bangalore solve farmers problem
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಎರಡನೇ ಅವಧಿಯ ಸಿಎಂ ಆದ ಬಳಿಕ ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ (CM Home office) ಏರ್ಪಡಿಸಲಾಗಿದ್ದ ಮೊದಲ ಜನತಾ ದರ್ಶನಕ್ಕೆ (Janatha Darshan) ಸಾವಿರಾರು ಮಂದಿ ಆಗಮಿಸಿದ್ದರು. ಈ ವೇಳೆ ರೈತರು ಸಹ ಆಗಮಿಸಿದ್ದು, ಸ್ಥಳದಲ್ಲಿಯೇ ಸಮಸ್ಯೆಯನ್ನು ಪರಿಹರಿಸುವ ಭರವಸೆಯನ್ನು ಸಿಎಂ ನೀಡಿದರು. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿ ಸೂಕ್ತ ಕ್ರಮವಹಿಸುವಂತೆ ಆದೇಶಿಸಿದರು. ರೈತರೊಬ್ಬರು ಜಮೀನಿನ ಮಾರ್ಗದ ಸಮಸ್ಯೆಯನ್ನು ಗಮನಕ್ಕೆ ತಂದಿದ್ದರು. ಮತ್ತೊಬ್ಬ ರೈತರು ಖಾತೆ ಮಾಡಿಕೊಡಲು ಆಗುತ್ತಿರುವ ಅಲೆದಾಟವನ್ನು ಸಿಎಂ ಗಮನಕ್ಕೆ ತಂದಿದ್ದರು. ಎರಡನ್ನೂ ಬಗೆಹರಿಸುವಂತೆ ಸಿಎಂ ಸೂಚಿಸಿದ್ದಾರೆ.

ರಸ್ತೆ ತೊಡಕು ನಿವಾರಣೆಯ ಭರವಸೆ

ಚನ್ನಪಟ್ಟಣ ತಾಲ್ಲೂಕು ಮಳೂರು ಗ್ರಾಮದ ಜಮೀನುಗಳಿಗೆ ರಸ್ತೆ ನಿರ್ಮಾಣ ಕಾರ್ಯವನ್ನು ಗ್ರಾಮ ಪಂಚಾಯಿತಿಯವರು ಅರ್ಧಕ್ಕೆ ಸ್ಥಗಿತಗೊಳಿಸಿರುವುದರಿಂದ, ಎತ್ತಿನಗಾಡಿ ಹೊಡೆದುಕೊಂಡು ಹೋಗಿ ಕೃಷಿ ಚಟುವಟಿಕೆ ನಡೆಸಲು ತೊಂದರೆಯಾಗಿದೆ ಎಂದು ರೈತರೊಬ್ಬರು ಜನತಾ ದರ್ಶನದಲ್ಲಿ ದೂರು ಸಲ್ಲಿಸಿದರು.

ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ಆನ್‌ಲೈನ್ ಮೂಲಕ ಪಂಚಾಯತ್‌ ರಾಜ್‌ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಿ ಅಗತ್ಯ ಕ್ರಮ ಕೈಗೊಂಡು, ಆದ್ಯತೆ ಮೇರೆಗೆ ಅನ್ನದಾತನ ಸಮಸ್ಯೆ ಬಗೆಹರಿಸುವಂತೆ ಸೂಚನೆ ನೀಡಿದರು.

ಜಮೀನಿಗೆ ಖಾತೆ ಮಾಡಿಸಿಕೊಟ್ಟಿಲ್ಲ ಎಂದು ದೂರು; ಸಿಎಂ ನೆರವು

ನರಸಿಂಹಮೂರ್ತಿ ಎಂಬುವವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬನವತಿ ಗ್ರಾಮದಲ್ಲಿ ಕಳೆದ 20 ವರ್ಷಗಳಿಂದ ಸಾಗುವಳಿ ಮಾಡುತ್ತಿದ್ದು, ಜೀವನ ನಿರ್ವಹಣೆಗಾಗಿ ನಂಬಿರುವ ಜಮೀನಿಗೆ ಖಾತೆ ಮಾಡಿಕೊಟ್ಟಿಲ್ಲ ಎಂದು ಇಂದಿನ ಜನತಾ ದರ್ಶನದಲ್ಲಿ ಮನವಿ ಸಲ್ಲಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳಿಗೆ ಕೂಡಲೇ ಕ್ರಮ ವಹಿಸುವಂತೆ ಸೂಚಿಸಿ, ವಯೋವೃದ್ಧ ರೈತನ ಸಂಕಷ್ಟಕ್ಕೆ ನೆರವಾದರು.

ಒತ್ತುವರಿ ಸಮಸ್ಯೆ ಬಗೆಹರಿಸಲು ಸೂಚನೆ

ಮಂಡ್ಯ ಜಿಲ್ಲೆಯ 96 ವರ್ಷದ ಪರಂಧಾಮಯ್ಯ ಅವರು ನಾಗಮಂಗಲದಿಂದ ತಾಳವಾಡಿಯ ಮಾರ್ಗ ಮಧ್ಯದಲ್ಲಿ ಜಮೀನು ಹೊಂದಿದ್ದು, ವ್ಯವಸಾಯ ಮಾಡುವ ಜಮೀನನ್ನು ಬೈಪಾಸ್‌ಗಾಗಿ ಒತ್ತುವರಿ ಮಾಡಿಕೊಳ್ಳಲಾಗಿದೆ ಎಂದು ಜನತಾ ದರ್ಶನದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ದೂರು ನೀಡಿದರು.

ಇದನ್ನೂ ಓದಿ: Janatha Darshan : ಮಾಲೀಕನ ಮನೆ ಹರಾಜು; ಲೀಸ್‌ ದುಡ್ಡಿಗೆ ಯಾರು ಗ್ಯಾರಂಟಿ? ಕಂಗೆಟ್ಟ ಕುಟುಂಬಕ್ಕೆ ಸಿಎಂ ರಕ್ಷಣೆ!

ಆಗ ಮಂಡ್ಯ ಜಿಲ್ಲಾಧಿಕಾರಿಗಳಿಗೆ ವಿಡಿಯೋ ಕಾಲ್‌ ಮೂಲಕ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೂಡಲೇ ಸೂಕ್ತ ಕ್ರಮ ವಹಿಸುವಂತೆ ಸೂಚಿಸಿದರು. 96 ವರ್ಷದ ಪರಂಧಾಮಯ್ಯ ಅವರ ಜೀವನೋತ್ಸಾಹಕ್ಕೆ ಮೆಚ್ಚುಗೆ ಸೂಚಿಸಿದ ಮುಖ್ಯಮಂತ್ರಿಗಳು ಇನ್ನಷ್ಟು ಕಾಲ ಹೀಗೆಯೇ ಆರೋಗ್ಯವಾಗಿರಿ ಎಂದು ಶುಭ ಕೋರಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Prajwal Revanna Case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಕೇಸ್‌; ಇಬ್ಬರು ಪೆನ್‌ಡ್ರೈವ್‌ ಹಂಚಿಕೆದಾರರ ಅರೆಸ್ಟ್‌

Prajwal Revanna Case: ಬೇಲೂರಿನ ಕಾಂಗ್ರೆಸ್ ಕಾರ್ಯಕರ್ತನಾಗಿರುವ ಹಾಸನದಾದ್ಯಂತ ಅಶ್ಲೀಲ ವಿಡಿಯೊವನ್ನು ಪೆನ್ ಡ್ರೈವ್ ಮೂಲಕ ಹಂಚಿಕೆ ಮಾಡಿದ ಆರೋಪ ಚೇತನ್ ಮೇಲೆ ಕೇಳಿಬಂದಿತ್ತು. ಈ ಸಂಬಂಧ ಹಾಸನ ಸೈಬರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು. ಬಳಿಕ ಈ ಕೇಸ್‌ ಎಸ್‌ಐಟಿಗೆ ವರ್ಗಾವಣೆಯಾಗಿತ್ತು. ಇದೀಗ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಆದರೆ, ಇನ್ನಿಬ್ಬರು ಪ್ರಮುಖ ಆರೋಪಿಗಳಾದ ನವೀನ್ ಗೌಡ ಹಾಗೂ ಪುಟ್ಟರಾಜುವಿಗಾಗಿ ಪೊಲೀಸರು ಹುಡುಕಾಟವನ್ನು ಮುಂದುವರಿಸಿದ್ದಾರೆ.

VISTARANEWS.COM


on

Prajwal Revanna Case Two people of pen drive allottees arrested
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೆನ್ ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಎಸ್‌ಐಟಿಯಿಂದ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಚೇತನ್ ಹಾಗೂ ಲಿಖಿತ್ ಬಂಧಿತ ಆರೋಪಿಗಳು. ಇವರ ನಿರೀಕ್ಷಣಾ ಜಾಮೀನು ವಜಾ ಬೆನ್ನಲ್ಲೇ ಇಬ್ಬರು ಆರೋಪಿಗಳನ್ನು ಅರೆಸ್ಟ್‌ ಮಾಡಲಾಗಿದೆ.

ಬೇಲೂರಿನ ಕಾಂಗ್ರೆಸ್ ಕಾರ್ಯಕರ್ತನಾಗಿರುವ ಹಾಸನದಾದ್ಯಂತ ಅಶ್ಲೀಲ ವಿಡಿಯೊವನ್ನು ಪೆನ್ ಡ್ರೈವ್ ಮೂಲಕ ಹಂಚಿಕೆ ಮಾಡಿದ ಆರೋಪ ಚೇತನ್ ಮೇಲೆ ಕೇಳಿಬಂದಿತ್ತು. ಈ ಸಂಬಂಧ ಹಾಸನ ಸೈಬರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು. ಬಳಿಕ ಈ ಕೇಸ್‌ ಎಸ್‌ಐಟಿಗೆ ವರ್ಗಾವಣೆಯಾಗಿತ್ತು. ಇದೀಗ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಆದರೆ, ಇನ್ನಿಬ್ಬರು ಪ್ರಮುಖ ಆರೋಪಿಗಳಾದ ನವೀನ್ ಗೌಡ ಹಾಗೂ ಪುಟ್ಟಿ @ ಪುಟ್ಟರಾಜುವಿಗಾಗಿ ಪೊಲೀಸರು ಹುಡುಕಾಟವನ್ನು ಮುಂದುವರಿಸಿದ್ದಾರೆ.

3 ದಿನದಿಂದ ಕುಟುಂಬಸ್ಥರನ್ನು ಭೇಟಿಯಾಗದೆ ಜೈಲಲ್ಲಿ ರೇವಣ್ಣ ಪರದಾಟ; ಪತ್ರಿಕೆಯೇ ಸಂಗಾತಿ!

ಮೈಸೂರಿನ ಕೆ.ಆರ್. ನಗರದ ಸಂತ್ರಸ್ತೆಯ ಅಪಹರಣಕ್ಕೆ ಸಂಬಂಧಿಸಿದಂತೆ ಜೈಲುಪಾಲಾಗಿರುವ ಜೆಡಿಎಸ್‌ ಶಾಸಕ ಎಚ್‌.ಡಿ.ರೇವಣ್ಣ (HD Revanna) ಅವರು ಕಳೆದ ಮೂರು ದಿನಗಳಿಂದಲೂ ಕುಟುಂಬಸ್ಥರನ್ನು ಭೇಟಿಯಾಗದೆ ಪರದಾಡುತ್ತಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಭಾನುವಾರ (ಮೇ 12) ಬೆಳಗ್ಗೆ ವೆಜ್‌ ಪಲಾವ್‌ ಸೇವಿಸಿದ ರೇವಣ್ಣ, ಕಾಫಿ ಕುಡಿದು, ಪೇಪರ್‌ ಓದಿದ್ದಾರೆ. ಕುಟುಂಬಸ್ಥರು, ಆಪ್ತರನ್ನು ಭೇಟಿಯಾಗದ ಕಾರಣ ಪತ್ರಿಕೆಯೇ ಅವರಿಗೆ ಸಂಗಾತಿಯಾದಂತಾಗಿದೆ. ಇದರ ಮಧ್ಯೆಯೇ, ರೇವಣ್ಣ ಅವರಿಗೆ ಮತ್ತೆ ಹೊಟ್ಟೆ ನೋವು ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ.

ಶುಕ್ರವಾರ, ಶನಿವಾರ ಹಾಗೂ ಭಾನುವಾರ ಸರ್ಕಾರಿ ರಜೆ ಹಿನ್ನೆಲೆಯಲ್ಲಿ ಎಚ್‌.ಡಿ.ರೇವಣ್ಣ ಅವರು ಯಾರನ್ನೂ ಭೇಟಿಯಾಗಲು ಸಾಧ್ಯವಾಗಿಲ್ಲ. ಇದರಿಂದಾಗಿ ಅವರು ಮಾನಸಿಕವಾಗಿ ಕುಗ್ಗಿಹೋಗಿದ್ದಾರೆ. ಜೈಲಿನ ಬ್ಯಾರಕ್‌ನಲ್ಲಿ ಕೆಲ ಹೊತ್ತು ವಾಕ್‌ ಮಾಡಿದ ರೇವಣ್ಣ, ಬಳಿಕ ದೀರ್ಘ ಅವಧಿಗೆ ಪೇಪರ್‌ ಓದುತ್ತಲೇ ಕುಳಿತಿದ್ದರು ಎಂದು ಜೈಲಿನ ಮೂಲಗಳು ಮಾಹಿತಿ ನೀಡಿವೆ. ರೇವಣ್ಣ ಅವರು ಸೋಮವಾರ (ಮೇ 13) ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಅವರು ಪರಪ್ಪನ ಅಗ್ರಹಾರದಲ್ಲೇ ಇದ್ದಾರೆ.

ಲೈಂಗಿಕ ದೌರ್ಜನಕ್ಕೀಡಾದ ಸಂತ್ರಸ್ತೆಯನ್ನು ಅಪಹರಣ ಮಾಡಿದ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಎಚ್‌.ಡಿ.ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಅವರು ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯವು ತಿರಸ್ಕರಿಸಿತ್ತು. ಇದಾದ ಬಳಿಕ ಅವರು ಸಲ್ಲಿಸಿದ ರೆಗ್ಯುಲರ್ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ್ದ ಕೋರ್ಟ್‌, ಜಾಮೀನು ನೀಡದೆ ಮೇ 13ಕ್ಕೆ ವಿಚಾರಣೆ ಮುಂದೂಡಿತ್ತು. ಹಾಗಾಗಿ, ಸೋಮವಾರ ಮತ್ತೆ ವಿಚಾರಣೆ ನಡೆಯಲಿದ್ದು, ರೇವಣ್ಣ ಜಾಮೀನಿನ ನಿರೀಕ್ಷೆಯಲ್ಲಿದ್ದಾರೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್ ರೇವಣ್ಣ ಹುಡುಕಿ ಕೊಟ್ಟವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ!

ಭವಾನಿ ರೇವಣ್ಣಗೆ 2ನೇ ನೋಟಿಸ್‌

ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಎಚ್‌.ಡಿ.ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರಿಗೂ ಸಂಕಷ್ಟ ಎದುರಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ಎರಡನೇ ನೋಟಿಸ್‌ ಜಾರಿ ಮಾಡಿದೆ. ಮೊದಲ ನೋಟಿಸ್ ಉತ್ತರಿಸದ ಹಿನ್ನೆಲೆಯಲ್ಲಿ ಎರಡನೇ ನೋಟಿಸ್ ಜಾರಿ ಮಾಡಲಾಗಿದೆ. ರೇವಣ್ಣ ಮೇಲೆ ಕೇಳಿ ಬಂದಿರುವ ಅಪಹರಣ ಪ್ರಕರಣದಲ್ಲಿ ಕೇಸ್‌ನಲ್ಲಿ ಕುಮ್ಮಕ್ಕು ಕೊಟ್ಟ ಆರೋಪವನ್ನು ಭವಾನಿ ರೇವಣ್ಣ ಹೊತ್ತಿದ್ದಾರೆ. ಈ ಸಂಬಂಧ ಹಲವಾರು ಪ್ರಶ್ನೆಗಳನ್ನು ಕೇಳಲು ಎಸ್‌ಐಟಿ ಸಿದ್ಧವಾಗಿದೆ. ಆದರೆ, ಭವಾನಿ ವಿಚಾರಣೆಗೆ ಹಾಜರಾಗದೆ ತಪ್ಪಿಸಿಕೊಳ್ಳುತ್ತಿದ್ದಾರೆ. ಈ ಬಾರಿಯೂ ಭವಾನಿ ವಿಚಾರಣೆಗೆ ಹಾಜರಾಗದಿದ್ದರೆ ಎಸ್‌ಐಟಿ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಲು ಸಿದ್ಧತೆ ನಡೆಸಿದೆ.

Continue Reading

ಮಳೆ

Karnataka Rain: ಸಿಡಿಲಾಘಾತಕ್ಕೆ ಕುರಿಗಳು ಬಲಿ; ಮೇವಿನ ಬಣವೆ ಭಸ್ಮ, ಮನೆಗಳಿಗೆ ಹಾನಿ

Karnataka Rain: ಸಿಡಿಲಾಘಾತಕ್ಕೆ ಜನರು ಬೆಚ್ಚಿ ಬಿದ್ದಿದ್ದಾರೆ. ಹಲವೆಡೆ ಸಿಡಿಲು ಸಹಿತ ಮಳೆಗೆ (Rain News) ಅನಾಹುತಗಳು ಸಂಭವಿಸಿದೆ. ಸಿಡಿಲು ಬಡಿದು ಕುರಿಗಳು ಬಲಿಯಾದರೆ, ಮೇವಿನ ಬಣವೆ, ತೆಂಗಿನ ಮರ ಸೇರಿ ಮನೆಯು ಹಾನಿಯಾಗಿದೆ. ಗಾಳಿ ಮಳೆಗೆ ಬೆಳೆಗಳು ನಾಶವಾಗಿವೆ.

VISTARANEWS.COM


on

By

karnataka Rain Effected
Koo

ವಿಜಯಪುರ/ಹಾವೇರಿ: ರಾಜ್ಯದ ಹಲವೆಡೆ ಗುಡುಗು, ಸಿಡಿಲು ಸಹಿತ ಭಾರಿ ಗಾಳಿಯೊಂದಿಗೆ (Karnataka Rain) ಮಳೆಯಾಗುತ್ತಿದೆ. ಮಳೆ ಅನಾಹುತ (Rain News) ಒಂದು ಕಡೆಯಾದರೆ, ಮತ್ತೊಂದು ಕಡೆ ಸಿಡಿಲಾಘಾತಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ವಿಜಯಪುರದಲ್ಲಿ ಸಿಡಿಲು ಬಡಿದು ಕುರಿಗಳು ಮೃತಪಟ್ಟರೆ, ಹಾವೇರಿಯಲ್ಲಿ ಮೇವಿನ ಬಣವೆ ಸುಟ್ಟು ಕರಕಲಾಗಿದೆ. ಕೊಡಗಿನಲ್ಲಿ ಸಿಡಿಲಿಗೆ ಮನೆಗೆ ಹಾನಿಯಾಗಿದ್ದು ಚಾವಣಿ ಕಿತ್ತುಬಂದಿದೆ. ಕೊಪ್ಪಳದಲ್ಲಿ ಗಾಳಿ ಮಳೆಗೆ ಮನೆಯ ಶೀಟ್‌ಗಳು ಹಾರಿ ಹೋದರೆ, ವಿಜಯಪುರ, ವಿಜಯನಗರದಲ್ಲಿ ಬೆಳೆಗಳಿಗೆ ಹಾನಿಯಾಗಿವೆ.

ವಿಜಯಪುರದಲ್ಲಿ ಸಿಡಿಲಿಗೆ ಕುರಿಗಳು ಬಲಿ

ಸಿಡಿಲು ಬಡಿದು ಎರಡು ಕುರಿಗಳು ಮೃತಪಟ್ಟಿವೆ. ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಹಾಲಿಹಾಳ ಗ್ರಾಮದಲ್ಲಿ ಘಟನೆ ನಡೆದಿದೆ. ಸಾಬಣ್ಣ ಬಸನಗೌಡ ಬಿರಾದಾರ ಎಂಬುವವರ ಕುರಿಗಳು ಮೃತಪಟ್ಟಿವೆ. ಇತ್ತ ಶಿವಸಂಗಪ್ಪ ರಾಯಪ್ಪ ಬೇವಿನಮಟ್ಟಿ ಎಂಬುವವರಿಗೆ ಸಿಡಿಲು ಬಡಿದು ಗಾಯಗೊಂಡಿದ್ದಾರೆ. ಗಾಯಾಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Karnataka Rain

ಹಾವೇರಿಯಲ್ಲಿ ಸಿಡಿಲಿಗೆ ಸುಟ್ಟು ಕರಕಲಾದ ಮೇವಿನ ಬಣವೆ

ಸಿಡಿಲು ಬಡಿದು ಮೇವಿನ ಬಣವೆ ಸುಟ್ಟು ಕರಕಲಾದ ಘಟನೆ ಹಾವೇರಿ ಜಿಲ್ಲೆ ಹಾನಗಲ ತಾಲೂಕಿನ ವರ್ದಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಪರಶುರಾಮ ಬಾರ್ಕಿ ಎಂಬ ರೈತ ಧನಕರುಗಳಿಗೆ ಮೇವಿನ ಬಣವೆ ಸಂಗ್ರಹಿಸಿಟ್ಟಿದ್ದರು. ಆದರೆ ಬೆಂಕಿ ಎಲ್ಲವೂ ಸುಟ್ಟು ಕರಲಾಗಿದೆ. ಆಡೂರು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇತ್ತ ಸಿಡಿಲು ಬಡಿದು ತೆಂಗಿನಮರ ಸುಟ್ಟು ಭಸ್ಮವಾಗಿದೆ. ಹನುಮಂತಪ್ಪ ದೇಸೂರ ಮನೆಯ ಆವರಣದಲ್ಲಿದ್ದ ತೆಂಗಿನ ಮರಕ್ಕೆ ಸಿಡಿಲು ಬಡಿದು ಹೊತ್ತಿ ಉರಿದಿದೆ. ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ‌ ಹಿರೇಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ಕೊಡಗಿನಲ್ಲಿ ಸಿಡಿಲಿಗೆ ಮನೆಗೆ ಹಾನಿ

ಕೊಡಗಿನಲ್ಲಿ ರಾತ್ರಿ ಸಿಡಿಲು ಬಡಿದು ಮನೆಯೊಂದಕ್ಕೆ ಹಾನಿಯಾಗಿದೆ. ಮಡಿಕೇರಿ ಸಮೀಪದ ಕಾಲೂರು ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ಎನ್.ಟಿ.ಲಿಂಗಮ್ಮ ಎಂಬವರಿಗೆ ಸೇರಿದ ಮನೆ ಸಂಪೂರ್ಣ ಜಖಂಗೊಂಡಿದೆ. ಸಿಡಿಲಿಗೆ ಮನೆಯ ಚಾವಣಿ ಕುಸಿದು ಬಿದ್ದಿದೆ. ಸಿಡಿಲಿನಾಘಾತಕ್ಕೆ ಮನೆ ಮಂದಿ ಕಂಗಾಲಾಗಿದ್ದಾರೆ. ಜಿಲ್ಲೆಯ ಹಲವೆಡೆ ರಾತ್ರಿಯೆಲ್ಲ ಗುಡುಗು ಸಹಿತ ಮಳೆಯಾಗಿದೆ.

Karnataka Rain

ಇದನ್ನೂ ಓದಿ: POSCO Case : ತುಮಕೂರಿನಲ್ಲಿ ಪೈಶಾಚಿಕ ಕೃತ್ಯ; ತಂದೆಯಿಂದಲೇ ಮಗಳ ಮಾನಭಂಗ!

ಕೊಪ್ಪಳದಲ್ಲಿ ಭಾರಿ ಗಾಳಿ ಮಳೆಗೆ ಹಾರಿ ಹೋದ ಚಾವಣಿ

ಶನಿವಾರ ರಾತ್ರಿ ಕೊಪ್ಪಳ ಸೇರಿದಂತೆ ಹಲವು ಭಾಗದಲ್ಲಿ ಬಿರುಗಾಳಿ ಸಹಿತ ಮಳೆಯಾಗಿದೆ. ಭಾರಿ ಮಳೆಗೆ ಮನೆ ಚಾವಣಿಯ ಶೀಟ್‌ಗಳು ಹಾರಿಹೋಗಿವೆ. ಮರಗಳು ಉರುಳಿ ಬಿದ್ದಿವೆ. ಕೊಪ್ಪಳ ತಾಲೂಕಿನ ನರೇಗಲ್ ಗ್ರಾಮದಲ್ಲಿ ವೀರೇಶಪ್ಪ ಯಲಬುರ್ಗಿ ಎಂಬುವವರ ಮನೆಯಲ್ಲಿ ಬಿರುಗಾಳಿಗೆ ಶೀಟ್‌ಗಳು ಹಾರಿ ಹೋಗಿವೆ.

ವಿಜಯನಗರದಲ್ಲಿ ಭಾರಿ ಮಳೆಗೆ ಬಾಳೆ ಗಿಡಗಳು ನಾಶ

ಭಾರಿ ಮಳೆಗೆ ನೂರಾರು ಎಕರೆ ಬಾಳೆ ಗಿಡಗಳು ನೆಲಕ್ಕೆ ಬಾಗಿವೆ. ವಿಜಯನಗರದ ಹೊಸಪೇಟೆ ತಾಲೂಕಿನ ಹೊಸೂರು ಮಾಗಾಣಿ, ನಾಗೇನಹಳ್ಳಿ ಹಾಗೂ ಚಿತ್ತವಾಡ್ಗಿ, ಹಾನಗಲ್, ಇಪ್ಪತೇರಿ, ಕರೆಕಲ್ ಮಾಗಾಣಿ, ನರಸಾಪುರ ಸೇರಿದಂತೆ ಹತ್ತಾರು ಗ್ರಾಮಗಳಲ್ಲಿ ಸುಗಂಧಿ, ಯಾಲಕ್ಕಿ, ಬಾಳೆಗಿಡಗಳು ನೆಲಕ್ಕುರುಳಿವೆ. ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎಂದು ಅನ್ನದಾತರು ಕಂಗಾಲಾಗಿದ್ದಾರೆ.

karnataka Rain

ವಿಜಯಪುರದಲ್ಲಿ ನಿಂಬೆ ಬೆಳೆ ನಾಶ

ಶನಿವಾರ ತಡರಾತ್ರಿ ಬೀಸಿದ ಮಳೆ ಗಾಳಿಗೆ ನಿಂಬೆ ಬೆಳೆ ನಾಶವಾಗಿದೆ. ವಿಜಯಪುರ ಜಿಲ್ಲೆ ಇಂಡಿ ಪಟ್ಟಣದ ಹೊರ ಭಾಗದಲ್ಲಿನ ನಿಂಬೆ ತೋಟಕ್ಕೆ ಹಾನಿಯಾಗಿದೆ. ಇಂಡಿ ಅಹಿರಸಂಗ ರಸ್ತೆಯಲ್ಲಿನ ಸಂಜು ವಾಘಮೋಡೆ ಎಂಬುವವರ ನಿಂಬೆ ತೋಟದಲ್ಲಿನ‌ ನಿಂಬೆ ಗಿಡಗಳು ಹಾನಿಯಾಗಿದೆ.

ಬರಗಾಲ ಹಾಗೂ ಬೇಸಿಗೆಯಲ್ಲಿ ಕಷ್ಟಪಟ್ಟು ಉಳಿಸಿಕೊಂಡಿದ್ದ ನಿಂಬೆ ಬೆಳೆ, ನಿನ್ನೆ ತಡರಾತ್ರಿ ಮಳೆಯ ಗಾಳಿಗೆ ಬುಡ ಸಮೇತ ಕಿತ್ತು ಬಿದ್ದಿವೆ. ಎರಡು ಎಕರೆ ಪ್ರದೇಶದಲ್ಲಿ ಬೆಳೆದ ಬೆಳೆಯು ನಾಶವಾಗಿವೆ. ತೋಟಗಾರಿಕಾ ಇಲಾಖೆಯಿಂದ ಸೂಕ್ತ ಪರಿಹಾರಕ್ಕೆ ಒತ್ತಾಯಿಸಿದ್ದಾರೆ.

ಚಿಕ್ಕೋಡಿಯಲ್ಲಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು

ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯಲ್ಲಿ ಮಳೆ ಅವಾಂತರ ಮುಂದುವರಿದಿದೆ. ನಿನ್ನೆ ಶನಿವಾರ ರಾತ್ರಿ ಸುರಿದ ಬಿರುಗಾಳಿ ಸಹಿತ ಮಳೆಗೆ ವಿಧ್ಯುತ್ ಕಂಬಗಳು ಧರೆಗುರುಳಿವೆ. ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಅಮ್ಮಣಗಿ ಗ್ರಾಮದ ಹೊರ ವಲಯದಲ್ಲಿ ಘಟನೆ ನಡೆದಿದೆ.

Karnataka Rain

ಬಿರುಗಾಳಿ ಸಹಿತ ಸುರಿದ ಭಾರಿ ಮಳೆಗೆ ವಿದ್ಯುತ್ ಪರಿವರ್ತಕ ಸಹಿತ ವಿದ್ಯುತ್ ಕಂಬಗಳು ಧರೆಗುರುಳಿವೆ. ಏಳು ಕಂಬಗಳು ಧರೆಗುರುಳಿದ ಪರಿಣಾಮ ಕರೆಂಟ್‌ ಇಲ್ಲದ ಗ್ರಾಮಸ್ಥರು ಪರದಾಡುತ್ತಿದ್ದಾರೆ. ಚಿಕ್ಕೋಡಿ, ನಿಪ್ಪಾಣಿ, ಹುಕ್ಕೇರಿ ತಾಲೂಕುಗಳಲ್ಲಿ ರಾತ್ರಿ ಇಡಿ ಸುರಿದ ಬಿರುಗಾಳಿ ಸಹಿತ ಮಳೆಗೆ ವಾತಾವರಣ ತಂಪಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ರಾಜಕೀಯ

Karnataka Legislative Council: ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಐದಲ್ಲ 4 ಕ್ಷೇತ್ರ; ಜೆಡಿಎಸ್‌ಗೆ 2 ಕ್ಷೇತ್ರ ಬಿಟ್ಟುಕೊಡಲು ತೀರ್ಮಾನ?

Karnataka Legislative Council: ಬಿಜೆಪಿಯಿಂದ ಈಶಾನ್ಯ ಪದವೀಧರರ ಕ್ಷೇತ್ರದಲ್ಲಿ ಅಮರನಾಥ ಪಾಟೀಲ್, ನೈಋತ್ಯ ಪದವೀಧರರ ಕ್ಷೇತ್ರದಲ್ಲಿ ಡಾ. ಧನಂಜಯ ಸರ್ಜಿ, ಬೆಂಗಳೂರು ಪದವೀಧರರ ಕ್ಷೇತ್ರದಲ್ಲಿ ಅ. ದೇವೇಗೌಡ, ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ವೈ.ಎ. ನಾರಾಯಣಸ್ವಾಮಿ, ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಇ.ಸಿ. ನಿಂಗರಾಜು ಹೆಸರುಗಳನ್ನು ಪ್ರಕಟಿಸಲಾಗಿದೆ. ನೈಋತ್ಯ ಶಿಕ್ಷಕರ ಕ್ಷೇತ್ರವು ಜೆಡಿಎಸ್ ಪಾಲಾಗಿದ್ದು, ಎಸ್.ಎಲ್ ಭೋಜೆಗೌಡ ಕಣಕ್ಕೆ ಇಳಿದಿದ್ದಾರೆ. ಆದರೆ, ಈಗ ದಕ್ಷಿಣ ಶಿಕ್ಷಕರ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡುವ ತೀರ್ಮಾನಕ್ಕೆ ಬರಲಾಗಿದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಅಂತಿಮ ನಿರ್ಧಾರ ಹೊರಬರಬೇಕಿದೆ. ಮೇ 16 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.

VISTARANEWS.COM


on

six seats of Karnataka Legislative Council Elections to be held on June 3
Koo

ಬೆಂಗಳೂರು: ಸಂಸದ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪ್ರಕರಣದಿಂದಾಗಿ ಬಿಜೆಪಿ – ಜೆಡಿಎಸ್‌ ಮೈತ್ರಿ ಮುಗಿದೇ ಹೋಯಿತು ಎಂದೇ ಹೇಳಲಾಗುತ್ತಿತ್ತು. ಆದರೆ, ಮುಂಬರುವ ವಿಧಾನ ಪರಿಷತ್‌ ಚುನಾವಣೆಯಲ್ಲಿ (Karnataka Legislative Council Election) ಮೈತ್ರಿ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಬಿಜೆಪಿ ತೀರ್ಮಾನ ಮಾಡಿದ್ದು, ಆರು ಕ್ಷೇತ್ರಗಳ ಪೈಕಿ 5 ಕ್ಷೇತ್ರವನ್ನು ತಾನಿಟ್ಟುಕೊಂಡು ಇನ್ನೊಂದನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿತ್ತು. ಆದರೆ, ಈಗ ಈ ಸೀಟು ಹಂಚಿಕೆಯಲ್ಲಿಯೂ ಬದಲಾವಣೆ ಮಾತುಗಳು ಕೇಳಿಬಂದಿದ್ದು, ದಕ್ಷಿಣ ಶಿಕ್ಷಕರ‌ ಕ್ಷೇತ್ರದ ಅಭ್ಯರ್ಥಿಯನ್ನು ಬದಲಾವಣೆ ಮಾಡುವ ತೀರ್ಮಾನಕ್ಕೆ ಬಿಜೆಪಿ ಬಂದಿದೆ ಎನ್ನಲಾಗಿದೆ.

ಹೀಗಾಗಿ ಕರ್ನಾಟಕ ವಿಧಾನ ಪರಿಷತ್‌ ಚುನಾವಣೆಯಲ್ಲೂ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿ ಮಾಡಿಕೊಂಡಿದ್ದು, ಆರು ಕ್ಷೇತ್ರಗಳ ಪೈಕಿ ಈ ಮೊದಲು ಐದು ಕ್ಷೇತ್ರಗಳನ್ನು ಬಿಜೆಪಿ (BJP) ಇಟ್ಟುಕೊಂಡರೆ, ಒಂದು ಕ್ಷೇತ್ರವನ್ನು ಜೆಡಿಎಸ್‌ಗೆ (JDS Karnataka) ಬಿಟ್ಟುಕೊಟ್ಟಿತ್ತು. ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿದ್ದ ಉಭಯ ಪಕ್ಷಗಳು ವಿಧಾನ ಪರಿಷತ್‌ ಚುನಾವಣೆಯಲ್ಲೂ ಜಂಟಿ ಹೋರಾಟ ನಡೆಸಲಿದೆ. ಜೂನ್‌ 3ರಂದು ಮೇಲ್ಮನೆಗೆ ಚುನಾವಣೆ ನಡೆಯಲಿದೆ. ಈಗ 4+2 ಮೈತ್ರಿ ಸೂತ್ರಕ್ಕೆ ಬಿಜೆಪಿ ಹೈಕಮಾಂಡ್ ಒಪ್ಪಿಗೆ ಸೂಚಿಸಿದೆ ಎಂದು ತಿಳಿದುಬಂದಿದೆ.

ಬಿಜೆಪಿಯಿಂದ ಈಶಾನ್ಯ ಪದವೀಧರರ ಕ್ಷೇತ್ರದಲ್ಲಿ ಅಮರನಾಥ ಪಾಟೀಲ್, ನೈಋತ್ಯ ಪದವೀಧರರ ಕ್ಷೇತ್ರದಲ್ಲಿ ಡಾ. ಧನಂಜಯ ಸರ್ಜಿ, ಬೆಂಗಳೂರು ಪದವೀಧರರ ಕ್ಷೇತ್ರದಲ್ಲಿ ಅ. ದೇವೇಗೌಡ, ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ವೈ.ಎ. ನಾರಾಯಣಸ್ವಾಮಿ, ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಇ.ಸಿ. ನಿಂಗರಾಜು ಹೆಸರುಗಳನ್ನು ಪ್ರಕಟಿಸಲಾಗಿದೆ. ನೈಋತ್ಯ ಶಿಕ್ಷಕರ ಕ್ಷೇತ್ರವು ಜೆಡಿಎಸ್ ಪಾಲಾಗಿದ್ದು, ಎಸ್.ಎಲ್ ಭೋಜೆಗೌಡ ಕಣಕ್ಕೆ ಇಳಿದಿದ್ದಾರೆ. ಆದರೆ, ಈಗ ದಕ್ಷಿಣ ಶಿಕ್ಷಕರ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡುವ ತೀರ್ಮಾನಕ್ಕೆ ಬರಲಾಗಿದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಅಂತಿಮ ನಿರ್ಧಾರ ಹೊರಬರಬೇಕಿದೆ. ಮೇ 16 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.

ಬಿಜೆಪಿಗೆ ನಾಲ್ಕು ಕ್ಷೇತ್ರ ಎಂದಿದ್ದ ಬಿಎಸ್‌ವೈ; ಆ ಮಾತೇ ನಿಜವಾಯ್ತು

ವಿಧಾನ ಪರಿಷತ್‌ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿ ಕುರಿತು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಸ್ಪಷ್ಟನೆ ನೀಡಿದ್ದರು. ಬಿಜೆಪಿ ನಾಲ್ಕು ಹಾಗೂ ಜೆಡಿಎಸ್‌ ಎರಡು ಕ್ಷೇತ್ರದಲ್ಲಿ ಸ್ಪರ್ಧೆ ಎಂದಿದ್ದರು. ಮೈಸೂರಿನಲ್ಲಿ ಮಾತನಾಡಿದ್ದ ಅವರು, “ಕರ್ನಾಟಕದಲ್ಲಿ ಯಾವುದೇ ಕಾರಣಕ್ಕೂ ಬಿಜೆಪಿ ಹಾಗೂ ಜೆಡಿಎಸ್‌ ನಡುವಿನ ಹೊಂದಾಣಿಕೆಯ ಮೈತ್ರಿಗೆ ಧಕ್ಕೆ ಬರುವುದಿಲ್ಲ. ಮುಂದೆಯೂ ಎರಡೂ ಪಕ್ಷಗಳ ನಡುವಿನ ಮೈತ್ರಿ ಮುಂದುವರಿಯುತ್ತದೆ. ವಿಧಾನ ಪರಿಷತ್‌ ಚುನಾವಣೆಯಲ್ಲೂ ಮೈತ್ರಿ ಇರುತ್ತದೆ. ಪರಿಷತ್‌ನ 6 ಸ್ಥಾನಗಳ ಪೈಕಿ ಜೆಡಿಎಸ್‌ಗೆ 2 ಹಾಗೂ ನಾವು 4 ಸ್ಥಾನಗಳಿಗೆ ಸ್ಪರ್ಧಿಸುತ್ತೇವೆ. ಎಲ್ಲಿ ಬಿಟ್ಟುಕೊಡಬೇಕು ಎಂಬುದರ ಬಗ್ಗೆ ತೀರ್ಮಾನ ಆಗಿಲ್ಲ” ಎಂದಿದ್ದರು.

ಇದಾದ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಸಭೆಯೂ ನಡೆದಿತ್ತು. ವಿಧಾನ ಪರಿಷತ್‌ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಸಂಬಂಧ ನಾಯಕರ ಜತೆ ವಿಜಯೇಂದ್ರ ಚರ್ಚೆ ಮಾಡಿದ್ದರು. ಆದರೆ, ಬಿಜೆಪಿ ಹೈಕಮಾಂಡ್‌ ಐವರು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಆದರೆ, ಈಗ ಇಲ್ಲಿ ಕೊಂಚ ಬದಲಾವಣೆಗೆ ಬಿಜೆಪಿ ಹೈಕಮಾಂಡ್‌ ಮುಂದಾಗಿದೆ ಎನ್ನಲಾಗಿದೆ. ಒಂದು ವೇಳೆ ಬದಲಾವಣೆಯಾದರೆ, ಬಿ.ಎಸ್.‌ ಯಡಿಯೂರಪ್ಪ ಅವರ ಮಾತು ನಿಜವಾದಂತೆ ಆಗುತ್ತದೆ.

ಇದನ್ನೂ ಓದಿ: HD Revanna: 3 ದಿನದಿಂದ ಕುಟುಂಬಸ್ಥರನ್ನು ಭೇಟಿಯಾಗದೆ ಜೈಲಲ್ಲಿ ರೇವಣ್ಣ ಪರದಾಟ; ಪತ್ರಿಕೆಯೇ ಸಂಗಾತಿ!

ದಕ್ಷಿಣ ಶಿಕ್ಷಕರ‌ ಕ್ಷೇತ್ರದ ಅಭ್ಯರ್ಥಿ ಬದಲಾವಣೆ?

ದಕ್ಷಿಣ ಶಿಕ್ಷಕರ‌ ಕ್ಷೇತ್ರದ ಅಭ್ಯರ್ಥಿಯನ್ನು ಬದಲಾವಣೆ ಮಾಡಲು ಚಿಂತನೆ ನಡೆಸಲಾಗಿದೆ. ಈಗಾಗಲೇ ಇ.ಸಿ ನಿಂಗರಾಜು ಅವರ ಹೆಸರನ್ನು ಬಿಜೆಪಿ ಘೋಷಣೆ ಮಾಡಿತ್ತು. ಆದರೆ, ಈ ನಿರ್ಧಾರದಿಂದ ಬಿಜೆಪಿ ಹಿಂದೆ ಸರಿಯುತ್ತಿದ್ದು, ಜೆಡಿಎಸ್‌ಗೆ ಬಿಟ್ಟು‌ ಕೊಡುವ ಸಾಧ್ಯತೆ ಹೆಚ್ಚಿದೆ. ಗೆಲ್ಲುವ ಮಾನದಂಡದ ಆಧಾರದ ಮೇಲೆ ಜೆಡಿಎಸ್‌‌ಗೆ ಬಿಟ್ಟು ಕೊಡಲು ನಿರ್ಧಾರ ಮಾಡಲಾಗಿದೆ ಎನ್ನಲಾಗಿದೆ.

Continue Reading

ತುಮಕೂರು

POSCO Case : ತುಮಕೂರಿನಲ್ಲಿ ಪೈಶಾಚಿಕ ಕೃತ್ಯ; ತಂದೆಯಿಂದಲೇ ಮಗಳ ಮಾನಭಂಗ!

Physical Abuse : ಮಗಳ ಮೇಲೆ ಕಣ್ಣಾಕಿದ ಕಾಮುಕ ತಂದೆಯೊಬ್ಬ ಅತ್ಯಾಚಾರವೆಸಗಿ ಪರಾರಿ ಆಗಿದ್ದಾನೆ. ತುಮಕೂರಿನಲ್ಲಿ ಇಂತಹದೊಂದು ಪೈಶಾಚಿಕ ಕೃತ್ಯ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ‌ದುಷ್ಟ ಪತಿ ವಿರುದ್ಧ ಪತ್ನಿಯೇ ದೂರು
(POSCO Case) ನೀಡಿದ್ದಾರೆ.

VISTARANEWS.COM


on

By

POSCO Case in Tumkur
ಸಾಂದರ್ಭಿಕ ಚಿತ್ರ
Koo

ತುಮಕೂರು: ತುಮಕೂರಿನಲ್ಲಿ ಪಾಪಿ ತಂದೆಯೊಬ್ಬ ಮಗಳ ಮೇಲೆ ಪೈಶಾಚಿಕ ಕೃತ್ಯ (Physical Abuse) ನಡೆಸಿದ್ದಾನೆ. ಮಗಳ‌ ಮೇಲೆಯೇ ಎರಗಿದ ದುಷ್ಟ ಅತ್ಯಾಚಾರ ನಡೆಸಿದ್ದಾನೆ. ಲೈಂಗಿಕ ಕಿರುಕುಳ (POSCO Case) ನೀಡಿರುವ ಪ್ರಕರಣವು ತಡವಾಗಿ ಬೆಳಕಿಗೆ ಬಂದಿದೆ.

13 ವರ್ಷದ ಅಪ್ರಾಪ್ತೆ ಮಗಳ ಮೇಲೆ ಅತ್ಯಾಚಾರ ನಡೆಸಿ ಕಾಮುಕ ತಂದೆ ಪರಾರಿಯಾಗಿದ್ದಾನೆ. ಈ ಹಿಂದೆಯೂ ಒಮ್ಮೆ ಮಗಳ‌ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಎನ್ನಲಾಗಿದೆ. ಬಾಲಕಿ ತಾಯಿ ಕೂಲಿ ಕೆಲಸಕ್ಕೆಂದು ಹೋದಾಗ ಮಗಳು ಒಬ್ಬಳೇ ಇದ್ದಾಗ ಅತ್ಯಾಚಾರ ಎಸಗಿದ್ದಾನೆ.

ಸದ್ಯ ಘಟನೆ ಸಂಬಂಧ ಬಾಲಕಿ ತಾಯಿಯೇ ತಿಪಟೂರು ನಗರ ಠಾಣೆಗೆ ದೂರು ನೀಡಿದ್ದಾರೆ. ಸಂತ್ರಸ್ತೆ ತಾಯಿಯ ದೂರಿನನ್ವಯ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಾಪತ್ತೆಯಾಗಿರುವ ಆರೋಪಿ ತಂದೆಯ ಪತ್ತೆಗಾಗಿ ತಿಪಟೂರು ‌ನಗರ ಪೊಲೀಸರು ಕಾರ್ಯಚರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: SSLC Student Death : ಎಸ್‌ಎಸ್‌ಎಲ್‌ಸಿ ಎಕ್ಸಾಂನಲ್ಲಿ 4 ಸಬ್ಜೆಕ್ಟ್‌ ಫೇಲ್‌; ವಿದ್ಯಾರ್ಥಿನಿ ಸೂಸೈಡ್‌

ಮಹಿಳೆಯ ಕುತ್ತಿಗೆಗೆ ಬೆಲ್ಟ್‌ನಿಂದ ಬಿಗಿದು, ರಸ್ತೆ ಬದಿಯೇ ಅತ್ಯಾಚಾರ ಎಸಗಿದ ದುಷ್ಟ; ಭೀಕರ ವಿಡಿಯೊ ಇಲ್ಲಿದೆ

ವಾಷಿಂಗ್ಟನ್‌: ಅಮೆರಿಕದ ನ್ಯೂಯಾರ್ಕ್‌ ಸಿಟಿಯಲ್ಲಿ (New York City) ದುಷ್ಟನೊಬ್ಬ ಮಹಿಳೆಯ ಕುತ್ತಿಗೆಗೆ ಬೆಲ್ಟ್‌ ಬಿಗಿದು, ಆಕೆಯನ್ನು ದರದರನೆ ಎಳೆದುಕೊಂಡು ಹೋಗಿ, ರಸ್ತೆಯ ಬದಿಯೇ ಅತ್ಯಾಚಾರ ಎಸಗಿದ್ದಾನೆ. ಮಹಿಳೆಯ ಮೇಲೆ ಮೃಗೀಯವಾಗಿ ದೌರ್ಜನ್ಯ ಎಸಗುವ ವಿಡಿಯೊ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ (Viral Video) ಆಗಿದ್ದು, ಜನರಿಂದ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ.

ನ್ಯೂಯಾರ್ಕ್‌ ಸಿಟಿಯ ಸೌತ್‌ ಬ್ರಾಂಕ್ಸ್‌ನ ಈಸ್ಟ್‌ 152ನೇ ಸ್ಟ್ರೀಟ್‌ನಲ್ಲಿ ಮೇ 1ರಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ಮನೆಗೆ ನಡೆದುಕೊಂಡು ಹೋಗುವಾಗ ದುರುಳನು ಕೃತ್ಯ ಎಸಗಿದ್ದಾನೆ. ಸುಮಾರು 45 ವರ್ಷದ ಮಹಿಳೆಯು ನಡೆದುಕೊಂಡು ಹೋಗುವಾಗ ಮುಸುಕುಧಾರಿ ವ್ಯಕ್ತಿಯು ಆಕೆಯ ಕುತ್ತಿಗೆಗೆ ಬೆಲ್ಟ್‌ನಿಂದ ಬಿಗಿದಿದ್ದಾನೆ. ರಸ್ತೆ ಬದಿ ನಿಂತಿದ್ದ ಎರಡು ಕಾರುಗಳ ಮಧ್ಯದ ಜಾಗದವರೆಗೆ ಆಕೆಯನ್ನು ಎಳೆದುಕೊಂಡು ಹೋಗಿದ್ದಾನೆ. ಅಲ್ಲಿ, ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಮಹಿಳೆಯ ಕುತ್ತಿಗೆಗೆ ಹಿಂದಿನಿಂದ ಬೆಲ್ಟ್‌ ಮೂಲಕ ಬಿಗಿಯುವ, ಆಕೆಯನ್ನು ಎಳೆಯುವ, ಆಕೆಯನ್ನು ಪ್ರಜ್ಞೆತಪ್ಪಿಸಿದ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಾರಿನ ಮಧ್ಯೆಯೇ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂಬುದಾಗಿ ಪೊಲೀಸರು ತಿಳಿಸಿದ್ದಾರೆ. ಮಹಿಳೆಯನ್ನು ಪ್ರಜ್ಞೆ ತಪ್ಪಿಸಿದ ಬಳಿಕ ಅತ್ಯಾಚಾರ ಎಸಗಿದ ದುಷ್ಟನು, ಆಕೆಯನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ ಎಂದು ತಿಳಿದುಬಂದಿದೆ.

ಪ್ರಜ್ಞೆ ತಪ್ಪಿಸಿ, ಅತ್ಯಾಚಾರ ಎಸಗಿದ ಬಳಿಕ ದುಷ್ಟನು ಮಹಿಳೆಯನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾನೆ. ರಸ್ತೆ ಬದಿ ಬಿದ್ದಿದ್ದ ಮಹಿಳೆಯನ್ನು ಬೆಳಗ್ಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ, ಮಹಿಳೆಯು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕಳೆದ ತಿಂಗಳಷ್ಟೇ ಮ್ಯಾನ್ಹಟನ್‌ನಲ್ಲಿ ಯುವತಿಯೊಬ್ಬರಿಗೆ ದುಷ್ಟನೊಬ್ಬ ರಾತ್ರಿ ಲೈಂಗಿಕ ಕಿರುಕುಳ ನೀಡಿದ್ದ. ಇದಾದ ಬಳಿಕವೂ ದುಷ್ಕರ್ಮಿಯ ಸುಳಿವು ಪೊಲೀಸರಿಗೆ ಸಿಕ್ಕಿರಲಿಲ್ಲ. ಹಾಗಾಗಿ, ಅಮೆರಿಕದಲ್ಲಿ ಹೆಣ್ಣುಮಕ್ಕಳ ಸುರಕ್ಷತೆ ಕುರಿತು ಸಾರ್ವಜನಿಕವಾಗಿ ಆಕ್ರೋಶ ವ್ಯಕ್ತವಾಗುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Mother's Day
ಮಹಿಳೆ1 min ago

Mother’s Day: ಆಕೆಗಾಗಿ ಕೊಂಚ ಸಮಯ ನೀಡೋಣ; ತಾಯಂದಿರ ದಿನ ಅರ್ಥಪೂರ್ಣವಾಗಿ ಆಚರಿಸೋಣ

Prajwal Revanna Case Two people of pen drive allottees arrested
ಕ್ರೈಂ15 mins ago

Prajwal Revanna Case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಕೇಸ್‌; ಇಬ್ಬರು ಪೆನ್‌ಡ್ರೈವ್‌ ಹಂಚಿಕೆದಾರರ ಅರೆಸ್ಟ್‌

karnataka Rain Effected
ಮಳೆ15 mins ago

Karnataka Rain: ಸಿಡಿಲಾಘಾತಕ್ಕೆ ಕುರಿಗಳು ಬಲಿ; ಮೇವಿನ ಬಣವೆ ಭಸ್ಮ, ಮನೆಗಳಿಗೆ ಹಾನಿ

Pavithra Jayaram Trinayani serial Fame No More
ಕಿರುತೆರೆ18 mins ago

Pavithra Jayaram: ತೆಲುಗಿನ ‘ತ್ರಿನಯನಿ’ ಧಾರಾವಾಹಿ ನಟಿ, ಕನ್ನಡತಿ ಪವಿತ್ರ ಜಯರಾಂ ಅಪಘಾತದಲ್ಲಿ ನಿಧನ

six seats of Karnataka Legislative Council Elections to be held on June 3
ರಾಜಕೀಯ46 mins ago

Karnataka Legislative Council: ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಐದಲ್ಲ 4 ಕ್ಷೇತ್ರ; ಜೆಡಿಎಸ್‌ಗೆ 2 ಕ್ಷೇತ್ರ ಬಿಟ್ಟುಕೊಡಲು ತೀರ್ಮಾನ?

IPL 2024
ಕ್ರಿಕೆಟ್46 mins ago

IPL 2024: ಬೆಂಗಳೂರಲ್ಲಿಂದು ಆರ್‌ಸಿಬಿ, ಡೆಲ್ಲಿ ನಿರ್ಣಾಯಕ ಪಂದ್ಯ; ಮಳೆ ಅಡ್ಡಿ ಆಗತ್ತಾ ? ಇಲ್ಲಿದೆ ರಿಪೋರ್ಟ್

Shekhar Suman Says Sex Workers Keep Society
ಬಾಲಿವುಡ್54 mins ago

Shekhar Suman: ಲೈಂಗಿಕ ಕಾರ್ಯಕರ್ತರು, ವೇಶ್ಯೆಯರ ನಡುವೆ ವ್ಯತ್ಯಾಸಗಳಿವೆ ಎಂದ ʻಹೀರಾಮಂಡಿʼನಟ!

Tirupathi Temple
ದೇಶ55 mins ago

Tirupati Temple: ತಿರುಪತಿಯ ಆಗಸ್ಟ್ ತಿಂಗಳ ಟಿಕೆಟ್ ವೇಳಾಪಟ್ಟಿ ಬಿಡುಗಡೆ: ಹೀಗೆ ಬುಕ್‌ ಮಾಡಿ

POSCO Case in Tumkur
ತುಮಕೂರು1 hour ago

POSCO Case : ತುಮಕೂರಿನಲ್ಲಿ ಪೈಶಾಚಿಕ ಕೃತ್ಯ; ತಂದೆಯಿಂದಲೇ ಮಗಳ ಮಾನಭಂಗ!

Mamitha Baiju
ಚಿನ್ನದ ದರ2 hours ago

Gold Rate Today: ಭಾರಿ ಏರಿಕೆ ಬಳಿಕ ಇಂದು ಚಿನ್ನದ ಬೆಲೆ ಯಥಾಸ್ಥಿತಿ; ಇಷ್ಟಿದೆ ದರ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case Two people of pen drive allottees arrested
ಕ್ರೈಂ15 mins ago

Prajwal Revanna Case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಕೇಸ್‌; ಇಬ್ಬರು ಪೆನ್‌ಡ್ರೈವ್‌ ಹಂಚಿಕೆದಾರರ ಅರೆಸ್ಟ್‌

Dina Bhavishya
ಭವಿಷ್ಯ8 hours ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

Bengaluru News
ಬೆಂಗಳೂರು22 hours ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Dina Bhavishya
ಭವಿಷ್ಯ1 day ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ2 days ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ2 days ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ2 days ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ2 days ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ3 days ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ3 days ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

ಟ್ರೆಂಡಿಂಗ್‌