ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಎರಡನೇ ಅವಧಿಯ ಸಿಎಂ ಆದ ಬಳಿಕ ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ (CM Home office) ಏರ್ಪಡಿಸಲಾಗಿದ್ದ ಮೊದಲ ಜನತಾ ದರ್ಶನಕ್ಕೆ (Janatha Darshan) ಸಾವಿರಾರು ಮಂದಿ ಆಗಮಿಸಿದ್ದರು. ಈ ವೇಳೆ ರೈತರು ಸಹ ಆಗಮಿಸಿದ್ದು, ಸ್ಥಳದಲ್ಲಿಯೇ ಸಮಸ್ಯೆಯನ್ನು ಪರಿಹರಿಸುವ ಭರವಸೆಯನ್ನು ಸಿಎಂ ನೀಡಿದರು. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿ ಸೂಕ್ತ ಕ್ರಮವಹಿಸುವಂತೆ ಆದೇಶಿಸಿದರು. ರೈತರೊಬ್ಬರು ಜಮೀನಿನ ಮಾರ್ಗದ ಸಮಸ್ಯೆಯನ್ನು ಗಮನಕ್ಕೆ ತಂದಿದ್ದರು. ಮತ್ತೊಬ್ಬ ರೈತರು ಖಾತೆ ಮಾಡಿಕೊಡಲು ಆಗುತ್ತಿರುವ ಅಲೆದಾಟವನ್ನು ಸಿಎಂ ಗಮನಕ್ಕೆ ತಂದಿದ್ದರು. ಎರಡನ್ನೂ ಬಗೆಹರಿಸುವಂತೆ ಸಿಎಂ ಸೂಚಿಸಿದ್ದಾರೆ.
ರಸ್ತೆ ತೊಡಕು ನಿವಾರಣೆಯ ಭರವಸೆ
ಚನ್ನಪಟ್ಟಣ ತಾಲ್ಲೂಕು ಮಳೂರು ಗ್ರಾಮದ ಜಮೀನುಗಳಿಗೆ ರಸ್ತೆ ನಿರ್ಮಾಣ ಕಾರ್ಯವನ್ನು ಗ್ರಾಮ ಪಂಚಾಯಿತಿಯವರು ಅರ್ಧಕ್ಕೆ ಸ್ಥಗಿತಗೊಳಿಸಿರುವುದರಿಂದ, ಎತ್ತಿನಗಾಡಿ ಹೊಡೆದುಕೊಂಡು ಹೋಗಿ ಕೃಷಿ ಚಟುವಟಿಕೆ ನಡೆಸಲು ತೊಂದರೆಯಾಗಿದೆ ಎಂದು ರೈತರೊಬ್ಬರು ಜನತಾ ದರ್ಶನದಲ್ಲಿ ದೂರು ಸಲ್ಲಿಸಿದರು.
ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ಆನ್‌ಲೈನ್ ಮೂಲಕ ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಿ ಅಗತ್ಯ ಕ್ರಮ ಕೈಗೊಂಡು, ಆದ್ಯತೆ ಮೇರೆಗೆ ಅನ್ನದಾತನ ಸಮಸ್ಯೆ ಬಗೆಹರಿಸುವಂತೆ ಸೂಚನೆ ನೀಡಿದರು.
ಚನ್ನಪಟ್ಟಣ ತಾಲ್ಲೂಕು ಮಳೂರು ಗ್ರಾಮದ ಜಮೀನುಗಳಿಗೆ ರಸ್ತೆ ನಿರ್ಮಾಣ ಕಾರ್ಯವನ್ನು ಗ್ರಾಮಪಂಚಾಯಿತಿಯವರು ಅರ್ಧಕ್ಕೆ ಸ್ಥಗಿತಗೊಳಿಸಿರುವುದರಿಂದ, ಎತ್ತಿನಗಾಡಿ ಹೊಡೆದುಕೊಂಡು ಹೋಗಿ ಕೃಷಿ ಚಟುವಟಿಕೆ ನಡೆಸಲು ತೊಂದರೆಯಾಗಿದೆ ಎಂದು ರೈತರೊಬ್ಬರು ಜನತಾ ದರ್ಶನದಲ್ಲಿ ದೂರು ಸಲ್ಲಿಸಿದರು.
— CM of Karnataka (@CMofKarnataka) November 27, 2023
ಮುಖ್ಯಮಂತ್ರಿ @siddaramaiah ಅವರು ಕೂಡಲೇ ಆನ್ ಲೈನ್ ಮೂಲಕ… pic.twitter.com/36fvQYLQoo
ಜಮೀನಿಗೆ ಖಾತೆ ಮಾಡಿಸಿಕೊಟ್ಟಿಲ್ಲ ಎಂದು ದೂರು; ಸಿಎಂ ನೆರವು
ನರಸಿಂಹಮೂರ್ತಿ ಎಂಬುವವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬನವತಿ ಗ್ರಾಮದಲ್ಲಿ ಕಳೆದ 20 ವರ್ಷಗಳಿಂದ ಸಾಗುವಳಿ ಮಾಡುತ್ತಿದ್ದು, ಜೀವನ ನಿರ್ವಹಣೆಗಾಗಿ ನಂಬಿರುವ ಜಮೀನಿಗೆ ಖಾತೆ ಮಾಡಿಕೊಟ್ಟಿಲ್ಲ ಎಂದು ಇಂದಿನ ಜನತಾ ದರ್ಶನದಲ್ಲಿ ಮನವಿ ಸಲ್ಲಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳಿಗೆ ಕೂಡಲೇ ಕ್ರಮ ವಹಿಸುವಂತೆ ಸೂಚಿಸಿ, ವಯೋವೃದ್ಧ ರೈತನ ಸಂಕಷ್ಟಕ್ಕೆ ನೆರವಾದರು.
ನರಸಿಂಹಮೂರ್ತಿ ಎಂಬುವವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬನವತಿ ಗ್ರಾಮದಲ್ಲಿ ಕಳೆದ 20 ವರ್ಷಗಳಿಂದ ಸಾಗುವಳಿ ಮಾಡುತ್ತಿದ್ದು, ಜೀವನ ನಿರ್ವಹಣೆಗಾಗಿ ನಂಬಿರುವ ಜಮೀನಿಗೆ ಖಾತೆ ಮಾಡಿಕೊಟ್ಟಿಲ್ಲ ಎಂದು ಇಂದಿನ ಜನತಾ ದರ್ಶನದಲ್ಲಿ ಮನವಿ ಸಲ್ಲಿಸಿದರು.
— CM of Karnataka (@CMofKarnataka) November 27, 2023
ಮುಖ್ಯಮಂತ್ರಿ @siddaramaiah ಅವರು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳಿಗೆ ಕೂಡಲೇ… pic.twitter.com/BeSIlKYUXU
ಒತ್ತುವರಿ ಸಮಸ್ಯೆ ಬಗೆಹರಿಸಲು ಸೂಚನೆ
ಮಂಡ್ಯ ಜಿಲ್ಲೆಯ 96 ವರ್ಷದ ಪರಂಧಾಮಯ್ಯ ಅವರು ನಾಗಮಂಗಲದಿಂದ ತಾಳವಾಡಿಯ ಮಾರ್ಗ ಮಧ್ಯದಲ್ಲಿ ಜಮೀನು ಹೊಂದಿದ್ದು, ವ್ಯವಸಾಯ ಮಾಡುವ ಜಮೀನನ್ನು ಬೈಪಾಸ್‌ಗಾಗಿ ಒತ್ತುವರಿ ಮಾಡಿಕೊಳ್ಳಲಾಗಿದೆ ಎಂದು ಜನತಾ ದರ್ಶನದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ದೂರು ನೀಡಿದರು.
"ಜನತಾ ದರ್ಶನ"
— CM of Karnataka (@CMofKarnataka) November 27, 2023
– ಜನರ ಬಳಿಗೆ ಸರ್ಕಾರ
ಮಂಡ್ಯ ಜಿಲ್ಲೆಯ 96 ವರ್ಷದ ಪರಂಧಾಮಯ್ಯ ಅವರು ನಾಗಮಂಗಲದಿಂದ ತಾಳವಾಡಿಯ ಮಾರ್ಗ ಮಧ್ಯದಲ್ಲಿ ಜಮೀನು ಹೊಂದಿದ್ದು, ವ್ಯವಸಾಯ ಮಾಡುವ ಜಮೀನನ್ನು ಬೈಪಾಸ್ ಗಾಗಿ ಒತ್ತುವರಿ ಮಾಡಿಕೊಳ್ಳಲಾಗಿದೆ ಎಂದು ಜನತಾ ದರ್ಶನದಲ್ಲಿ ದೂರು ನೀಡಿದರು.
ಮಂಡ್ಯ ಜಿಲ್ಲಾಧಿಕಾರಿಗಳಿಗೆ ಆನ್ ಲೈನ್ ಮೂಲಕ ಮಾತನಾಡಿದ… pic.twitter.com/6OHhgmJeUR
ಇದನ್ನೂ ಓದಿ: Janatha Darshan : ಮಾಲೀಕನ ಮನೆ ಹರಾಜು; ಲೀಸ್ ದುಡ್ಡಿಗೆ ಯಾರು ಗ್ಯಾರಂಟಿ? ಕಂಗೆಟ್ಟ ಕುಟುಂಬಕ್ಕೆ ಸಿಎಂ ರಕ್ಷಣೆ!
ಆಗ ಮಂಡ್ಯ ಜಿಲ್ಲಾಧಿಕಾರಿಗಳಿಗೆ ವಿಡಿಯೋ ಕಾಲ್ ಮೂಲಕ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೂಡಲೇ ಸೂಕ್ತ ಕ್ರಮ ವಹಿಸುವಂತೆ ಸೂಚಿಸಿದರು. 96 ವರ್ಷದ ಪರಂಧಾಮಯ್ಯ ಅವರ ಜೀವನೋತ್ಸಾಹಕ್ಕೆ ಮೆಚ್ಚುಗೆ ಸೂಚಿಸಿದ ಮುಖ್ಯಮಂತ್ರಿಗಳು ಇನ್ನಷ್ಟು ಕಾಲ ಹೀಗೆಯೇ ಆರೋಗ್ಯವಾಗಿರಿ ಎಂದು ಶುಭ ಕೋರಿದರು.