Site icon Vistara News

CM Siddaramaiah: ಜಾತಿ ಗಣತಿ ಆರಂಭಿಸಿದ್ದೇ ನಾನು: ಸಿಎಂ ಸಿದ್ದರಾಮಯ್ಯ

cm siddaramaiah

ಬೆಂಗಳೂರು: ಜಾತಿ ಗಣತಿ (Caste census) ಆರಂಭಿಸಿದ್ದೇ ನಾನು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಹೇಳಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಸಂತ ಶ್ರೇಷ್ಠ ಕನಕದಾಸ ಜಯಂತಿಯನ್ನು (Kanakadasa jayanthi) ಉದ್ಘಾಟಿಸಿ ಅವರು ಮಾತನಾಡಿದರು. ಪ್ರತಿಯೊಂದು ಜಾತಿ ಸಮುದಾಯಗಳ ಆರ್ಥಿಕ, ಸಾಮಾಜಿಕ ಸ್ಥಿತಿ ಗತಿ ತಿಳಿಯುವುದಕ್ಕೆ, ಸಂವಿಧಾನದ ಆಶಯಗಳನ್ನು ಕಾರ್ಯಕ್ರಮಗಳ ಮೂಲಕ ಎಲ್ಲಾ ಸಮುದಾಯಗಳಿಗೂ ತಲುಪಿಸುವುದಕ್ಕಾಗಿ ನಾನೇ ಜಾತಿಗಣತಿ ಆರಂಭಿಸಿದೆ ಎಂದು ಅವರು ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ಸಮಾಜ ಸೇವಕ ದಿವಂಗತ ಲಿಂಗಪ್ಪ ಅವರಿಗೆ ಮರಣೋತ್ತರ ಕನಕಶ್ರೀ ಪ್ರಶಸ್ತಿಯನ್ನು ಸಿಎಂ ವಿತರಿಸಿದರು. ಕನಕದಾಸರು ಆಕಸ್ಮಿಕವಾಗಿ ಕುರುಬರಾಗಿ ಹುಟ್ಟಿದ ವಿಶ್ವಶ್ರೇಷ್ಠ ಮಾನವೀಯ ಚೈತನ್ಯರಾಗಿದ್ದರು. ದಾಸಪಂಥಕ್ಕೆ ಪ್ರವೇಶಿಸುವ ಮೊದಲು ಕನಕರು ಪಾಳೇಗಾರರಾಗಿದ್ದರು. ಆದಿಕೇಶವನ ಭಕ್ತರಾಗಿ ದಾಸರಾಗಿ, ದಾಸಶ್ರೇಷ್ಠರೂ ಆದರು. ಆದರೆ ಕನಕದಾಸರ ಕೀರ್ತನೆಗಳಲ್ಲಿ ಅತ್ಯುನ್ನತ ಮಾನವೀಯ ಮೌಲ್ಯಗಳಿವೆ ಎಂದು ವಿವರಿಸಿದರು.

ನಾನು ಕುರುಬನಾಗಿ ಜನಿಸಿದ್ದೇನೆ. ನೀವುಗಳೂ ಕುರುಬ ಸಮುದಾಯದಲ್ಲಿ ಜನಿಸಿರಬಹುದು. ಹಾಗಂದ ಮಾತ್ರಕ್ಕೆ ಕುರುಬರಾಗೇ ಸಾಯಬೇಕಾ? ಅಪ್ಪಟ ಮನುಷ್ಯರಾಗಿ ಸಾಯಬೇಕು. ಕನಕದಾಸರನ್ನು ಶೂದ್ರ ಜಾತಿಯವ ಎನ್ನುವ ಕಾರಣಕ್ಕೆ ಕೃಷ್ಣನ ದರ್ಶನಕ್ಕೆ ಬಿಡಲಿಲ್ಲ. ಕುವೆಂಪು ಅವರು ಹೇಳಿದಂತೆ ನಾವೆಲ್ಲಾ ವಿಶ್ವ ಮಾನವರಾಗಲು ಸಾಧ್ಯವಾಗದಿದ್ದರೂ, ವಿಶ್ವ ಮಾನವರಾಗುವ ಮಾರ್ಗದಲ್ಲಿ ಸಾಗಬೇಕು ಎಂದರು.

ಅಂಬೇಡ್ಕರ್ ಅವರು ಹೇಳಿದ್ದ ಎಚ್ಚರಿಕೆ ಮಾತುಗಳನ್ನು ನಾವು ಮರೆಯಬಾರದು. ಸಾಮಾಜಿಕ ಸಮಾನತೆಯ ಆಶಯದಿಂದ ಜಾತಿ ಗಣತಿಗೆ ಕಾಂಗ್ರೆಸ್ ಬದ್ಧವಾಗಿದೆ. ಇಡೀ ದೇಶದಲ್ಲಿ ಜಾರಿ ಮಾಡಲು ಕಾಂಗ್ರೆಸ್ ಬದ್ಧವಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಇದನ್ನೂ ಓದಿ: CM Siddaramaiah : ಮೋದಿಗೆ ಸೋಲಿನ ಭಯ; ಅದಕ್ಕೇ ನಮ್ಮ ಸಾಧನೆಯ ಪ್ರಚಾರ ತಡೆದರು: ಸಿದ್ದರಾಮಯ್ಯ

Exit mobile version