CM Siddaramaiah : ಶೆಟ್ಟರ್‌ ಕಾಂಗ್ರೆಸ್‌ ಬಿಡಲ್ಲ, ಬಿಡಲ್ಲ, ಬಿಡಲ್ಲ: ಸಿದ್ದರಾಮಯ್ಯ ಮತ್ತೆ ಸ್ಪಷ್ಟೋಕ್ತಿ - Vistara News

ಕರ್ನಾಟಕ

CM Siddaramaiah : ಶೆಟ್ಟರ್‌ ಕಾಂಗ್ರೆಸ್‌ ಬಿಡಲ್ಲ, ಬಿಡಲ್ಲ, ಬಿಡಲ್ಲ: ಸಿದ್ದರಾಮಯ್ಯ ಮತ್ತೆ ಸ್ಪಷ್ಟೋಕ್ತಿ

CM Siddaramaiah : ಇತ್ತ ಜಗದೀಶ್‌ ಶೆಟ್ಟರ್‌ ಅವರು ದೆಹಲಿಯಲ್ಲಿ ಬಿಜೆಪಿ ನಾಯಕ ಅಮಿತ್‌ ಶಾ ಅವರನ್ನು ಭೇಟಿಯಾಗಿದ್ದಾರೆ. ಆದರೆ, ಸಿಎಂ ಸಿದ್ದರಾಮಯ್ಯ ಅವರು ಶೆಟ್ಟರ್‌ ಕಾಂಗ್ರೆಸ್‌ ಬಿಡಲ್ಲ ಎಂದು ಮತ್ತೆ ಹೇಳಿದ್ದಾರೆ.

VISTARANEWS.COM


on

Jagadish Shettar CM Siddaramaiah
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೈಸೂರು: ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ (Former CM Jagadish Shettar) ಅವರು ಯಾವ ಕಾರಣಕ್ಕೂ ಕಾಂಗ್ರೆಸ್‌ ಬಿಟ್ಟು ಮರಳಿ ಬಿಜೆಪಿಗೆ ಹೋಗುವುದಿಲ್ಲ (Shettar will not go to BJP) ಎಂಬ ಮಾತನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಪುನರುಚ್ಚರಿಸಿದ್ದಾರೆ. ಅವರು ಬಿಜೆಪಿಗೆ ಹೋಗುವ ವದಂತಿ ಸುಳ್ಳು ಎಂದು ಮೈಸೂರಿನಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಸಿದ್ದರಾಮಯ್ಯ ಹೇಳಿದರು. ಬುಧವಾರವೂ ಅವರು ಇದೇ ಮಾತನ್ನು ಆಡಿದ್ದರು. ಈ ನಡುವೆ, ಜಗದೀಶ್‌ ಶೆಟ್ಟರ್‌ ಅವರು ದೆಹಲಿಯಲ್ಲಿ ಬಿಜೆಪಿ ನಾಯಕ ಅಮಿತ್‌ ಶಾ ಅವರನ್ನು ಭೇಟಿಯಾಗಿದ್ದಾರೆ.

ಜಗದೀಶ್‌ ಶೆಟ್ಟರ್‌ ಅವರನ್ನು ಮರಳಿ ಕರೆಸಿಕೊಳ್ಳುವ ವಿಚಾರದಲ್ಲಿ ಬಿಜೆಪಿ ತೀವ್ರ ಪ್ರಯತ್ನ ನಡೆಸುತ್ತಿದೆ. ಹೈಕಮಾಂಡ್‌ ಕೂಡಾ ಉತ್ಸುಕತೆ ತೋರಿಸಿದೆ. ಜಗದೀಶ್‌ ಶೆಟ್ಟರ್‌ ಅವರು ಸದ್ಯವೇ ದಿಲ್ಲಿಗೆ ತೆರಳಿ ಅಮಿತ್‌ ಶಾ ಅವರ ಜತೆಗೆ ಮಾತುಕತೆ ನಡೆಸಲಿದ್ದಾರೆ. ಅವರಿಗೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್‌ ಕೊಡಲಿದೆ ಎಂಬ ಸುದ್ದಿಗಳಿಗೆ ಸಿದ್ದರಾಮಯ್ಯ ಸ್ಪಷ್ಟೀಕರಣ ನೀಡಿದರು.

ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿಗೆ ಎಂಬ ವಿಚಾರ ಸುಳ್ಳು. ನನಗೆ ಅವಮಾನವಾಗಿರುವ ಪಕ್ಷಕ್ಕೆ ಹೋಗಲ್ಲ ಎಂದು ಸ್ವತಃ ಈಗಾಗಲೇ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಬಿಜೆಪಿಯ ಎಲ್ಲ ಹೇಳಿಕೆಗೆ ಅಲ್ಲೇ ಉತ್ತರ ಇದೆ ಅಲ್ವ ಎಂದು ಪ್ರಶ್ನಿಸಿದ ಸಿದ್ದರಾಮಯ್ಯ ಅವರು, ಯಾರು ಎಷ್ಟೇ ಪ್ರಯತ್ನ ಮಾಡಿದರೂ ಜಗದೀಶ್ ಶೆಟ್ಟರ್ ಬಿಜೆಪಿಗೆ ಹೋಗಲ್ಲ ಎಂದರು.

ಲಾಭ ಪಡೆಯಲೆಂದೇ ರಾಮ ಮಂದಿರ ತರಾತುರಿಯ ಉದ್ಘಾಟನೆ

ʻʻರಾಮ ಮಂದಿರ ಉದ್ಘಾಟನೆಯಿಂದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಲಾಭ ಆಗಲಿದೆ ಎಂಬ ಮಾತುಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, ರಾಜಕೀಯವಾಗಿ ಅನುಕೂಲ ಆಗುತ್ತೆ ಅಂತಲೇ ಆತುರವಾಗಿ ರಾಮ ಮಂದಿರ ಉದ್ಘಾಟನೆ ಮಾಡಿದ್ದಾರೆ. ಮಂದಿರ ಪೂರ್ಣವಾಗಿ ನಿರ್ಮಾಣವಾಗಿಲ್ಲ. ಆದರೆ, ರಾಮ ಮಂದಿರದಿಂದ ರಾಜಕೀಯ ಲಾಭ ಆಗುತ್ತೆ ಅಂತ ಹೇಳುವುದು ಸಾಧ್ಯವಿಲ್ಲ. ನಮ್ಮ ದೇಶದ ಜನ ಪ್ರಜಾಪ್ರಭುತ್ವವನ್ನು ಒಪ್ಪಿಕೊಂಡಿದ್ದಾರೆ. ಅದೇ ಮುಖ್ಯವಾಗುತ್ತದೆ. ಜನ ಎಲ್ಲವನ್ನೂ ಗಮನಿಸುತ್ತಿದ್ದಾರೆʼʼ ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದರು.

ಜಾತಿ ಗಣತಿ ವರದಿ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?

ಕೆ. ಜಯಪ್ರಕಾಶ್‌ ಹೆಗ್ಡೆ ನೇತೃತ್ವದ ಹಿಂದುಳಿದ ವರ್ಗಗಳ ಆಯೋಗದ ವರದಿ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು, ಜಾತಿಗಣತಿ ವರದಿ ನನಗೆ ಗೊತ್ತಿಲ್ಲ. ವರದಿ ಸಲ್ಲಿಸಲು ಅವರು ಸಮಯಕ್ಕೆ ಕೇಳಿಲ್ಲ. ಕೇಳಿದ್ರೆ ಸಮಯ ಕೊಡುತ್ತೇವೆ. ನಂತರ ವರದಿ ಪಡೆಯುತ್ತೇವೆʼʼ ಎಂದರು. ಯಾರೂ ಆ ವರದಿಯನ್ನು ನೋಡಿಲ್ಲ. ಹೀಗಾಗಿ ಅದರ ಬಗ್ಗೆ ಏನು ಮಾತನಾಡಲಿಕ್ಕೆ ಸಾಧ್ಯವಾಗಿಲ್ಲ. ವರದಿ ಕೊಟ್ಟ ನಂತರ ಪರಿಶೀಲನೆ ಕೂಡ ಇರುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು.

ಒಂದು ದೇಶ ಒಂದು ಚುನಾವಣೆ ಸಾಧ್ಯವಿಲ್ಲ ಎಂದ ಸಿಎಂ

ರಾಷ್ಟ್ರಾದ್ಯಂತ ಲೋಕಸಭೆ ಮತ್ತು ವಿಧಾನಸಭೆಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ಒನ್ ನೇಷನ್, ಒನ್ ಎಲೆಕ್ಷನ್ ವಿಚಾರ ಕಾರ್ಯಸಾಧುವಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

ʻʻಅದು ಪ್ರಾಕ್ಟಿಕಲ್ ಆಗಿ ಸಾಧ್ಯವೇ ಅನ್ನೋದನ್ನು ಮನಗಾಣಬೇಕು. ಅದು ಸಂವಿಧಾನದ ಪರವಾಗಿರುತ್ತದೆಯೇ ಎಂದು ಗಮನಿಸಬೇಕು. ಸಂವಿಧಾನ ರಕ್ಷಣೆ ಮಾಡುವ ಕೆಲಸ ಮಾಡಬೇಕು. ಅದರ ಬದಲು ಸಂವಿಧಾನಕ್ಕೆ ಧಕ್ಕೆ ತರುವಂಥ ಕೆಲಸ ಆಗುತ್ತಿದೆ. ಸಂವಿಧಾನಕ್ಕೆ ವಿರುದ್ಧವಾಗಿ ನಡೆಯುತ್ತಿದ್ದಾರೆ. ಇದನ್ನೆಲ್ಲಾ ಯುವಕರು ಗಮನಿಸಬೇಕಾಗುತ್ತದೆ.”ʼ ಎಂದು ಸಿದ್ದರಾಮಯ್ಯ ನುಡಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ತುಮಕೂರು

Koratagere News: ವೀರಶೈವ ಮಹಾಸಭಾದಿಂದ ಧಾರ್ಮಿಕ ನೆಲೆಗಟ್ಟು ಭದ್ರ; ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ

Koratagere News: ಕೊರಟಗೆರೆ ಪಟ್ಟಣದ ಕನ್ನಿಕಾ ಕಲ್ಯಾಣ ಮಂಟಪದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಘಟಕದಿಂದ ಘಟಕದ ನೂತನ ಅಧ್ಯಕ್ಷ ಹಾಗೂ ನಿರ್ದೇಶಕರ ಪದಗ್ರಹಣ ಸಮಾರಂಭ ಜರುಗಿತು.

VISTARANEWS.COM


on

Akhila bharat Veerashaiva Mahasabha taluk unit new president and directors padagrahana programme in koratagere
Koo

ಕೊರಟಗೆರೆ: ವೀರಶೈವ ಸಮುದಾಯದವರಿಗೆ ಆಚಾರ, ವಿಚಾರ, ಸಂಪ್ರದಾಯ ಮತ್ತು ಪರಂಪರೆಗಳ ಮಹತ್ವದ ಬಗ್ಗೆ ಪ್ರಜ್ಞೆ ಮೂಡಿಸಿ, ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡುವ ಧ್ಯೇಯದಿಂದ ಹಾನಗಲ್ ಕುಮಾರಸ್ವಾಮಿರವರು 1902ರಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾವನ್ನು ಸ್ಥಾಪಿಸಿದರು ಎಂದು ಶ್ರೀ ಕ್ಷೇತ್ರ ಸಿದ್ದರಬೆಟ್ಟ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ (Koratagere News) ತಿಳಿಸಿದರು.

ಪಟ್ಟಣದ ಕನ್ನಿಕಾ ಕಲ್ಯಾಣ ಮಂಟಪದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಘಟಕದಿಂದ ಘಟಕದ ನೂತನ ಅಧ್ಯಕ್ಷ ಹಾಗೂ ನಿರ್ದೇಶಕರ ಪದಗ್ರಹಣ ಸಮಾರಂಭದ ದಿವ್ಯ ಸಾನ್ನಿಧ್ಯ ವಹಿಸಿ ಶ್ರೀಗಳು ಮಾತನಾಡಿದರು.

ವೀರಶೈವ ಮಹಾಸಭಾ ರಾಜ್ಯದಲ್ಲಿ ಧಾರ್ಮಿಕ ನೆಲಗಟ್ಟನ್ನು ಗಟ್ಟಿಗೊಳಿಸುವ ಕೆಲಸ ಮಾಡುತ್ತಿದೆ. ಇತ್ತೀಚಿನ ದಿನಗಳಲ್ಲಿ ವೈಜ್ಞಾನಿಕತೆಯ ಆಧುನಿಕ ತಂತ್ರಜ್ಞಾನದ ಜಗತ್ತಿನಲ್ಲಿ ಯುವ ಪೀಳಿಗೆಯಲ್ಲಿ ಸಂಸ್ಕಾರ, ಸಂಸ್ಕೃತಿ ಹಾಗೂ ಗುರು ಹಿರಿಯರಲ್ಲಿ ಗೌರವ ಭಾವನೆ ಕಡಿಮೆಯಾಗುತ್ತಿದೆ. ಧಾರ್ಮಿಕ ಕಾರ್ಯವನ್ನೇ ಮರೆಯುತ್ತಿದ್ದಾರೆ. ವೀರಶೈವ ಮಹಾಸಭಾ ಇಂತಹ ಸಂಪ್ರದಾಯಗಳ ಅರಿವು ಮೂಡಿಸಬೇಕು. ಮೊದಲು ತಾಲೂಕಿನಲ್ಲಿ ವಿದ್ಯಾರ್ಥಿಗಳಿಗೆ ವಸತಿ ನಿಲಯ ಹಾಗೂ ಸಮುದಾಯ ಭವನ ಕಟ್ಟಬೇಕು. ತಾಲೂಕಿನಲ್ಲಿ ಕುಂಠಿತವಾಗಿರುವ ವೀರಶೈವ ಬಂಧು ಪತ್ತಿನ ಸಹಕಾರ ಬ್ಯಾಂಕ್ ಪುನಶ್ಚೇತನ ಗೊಳಿಸಬೇಕು ಎಂದು ತಿಳಿಸಿದರು.

ಇದನ್ನೂ ಓದಿ: Union Budget 2024: ಹೊಸ ತೆರಿಗೆ ಸ್ಲ್ಯಾಬ್‌ನಿಂದ 17,500 ರೂ. ತೆರಿಗೆ ಉಳಿತಾಯ ಹೇಗೆ? ಇಲ್ಲಿದೆ ಮಾಹಿತಿ

ಜಿಲ್ಲಾ ಘಟಕದ ನೂತನ ಅಧ್ಯಕ್ಷ ಡಾ. ಪರಮೇಶ್ ಮಾತನಾಡಿ, ಜಿಲ್ಲೆಯಲ್ಲಿ ಸಂಘಗಳನ್ನು ಶಕ್ತಿಯುತಗೊಳಿಸಲು ಶ್ರಮಿಸಲಾಗುವುದು. ತಾಲೂಕಿನಲ್ಲಿ ನಿರ್ಮಿಸುವ ಸಮುದಾಯ ಭವನಕ್ಕೆ ಒಂದು ಲಕ್ಷ ದೇಣಿಗೆ ನೀಡುವುದಾಗಿ ತಿಳಿಸಿದರು.

ತಾಲೂಕು ನೂತನ ಅಧ್ಯಕ್ಷ ಪಿ.ಎ. ವೀರಭದ್ರಯ್ಯ ಮಾತನಾಡಿ ವೀರಶೈವ ಸಮುದಾಯದ ಅಭಿವೃದ್ಧಿಗೆ ಸಂಘದ ಪ್ರತಿಯೊಬ್ಬರು ಅಧ್ಯಕ್ಷರೆಂದು ಭಾವಿಸಬೇಕು .ಎಲ್ಲರೂ ಒಟ್ಟಾಗಿ ಶ್ರಮಿಸಬೇಕು ತಾಲೂಕಿನಲ್ಲಿ ನೂತನವಾಗಿ ನಿರ್ಮಿಸುವ ಸಮುದಾಯ ಭವನಕ್ಕೆ 5 ಲಕ್ಷ ದೇಣಿಗೆಯನ್ನು ನೀಡುವುದಾಗಿ ಘೋಷಿಸಿದರು.

ಇದೇ ವೇಳೆ ನಿರ್ದೇಶಕರುಗಳಾದ ಈಶ ಪ್ರಸಾದ್, ಜಿಎಂ ಶಿವಾನಂದ್, ಉಮಾಶಂಕರಾಧ್ಯ, ಚನ್ನಬಸವರಾದ್ಯ, ಚನ್ನಂಜ್ಜಯ್ಯ, ಎಸ್.ಎಸ್. ಪವನ್ ಕುಮಾರ್, ಜ್ಯೋತಿ ಪ್ರಕಾಶ್, ಪುಟ್ಟರಾಜು, ಪಾಲನೇತ್ರಯ್ಯ, ವಿನಯ್ ಕುಮಾರ್, ಶಿವಕುಮಾರ್, ಕಿರಣ್ ಕುಮಾರ್, ಚಿದಾನಂದ, ಪುಷ್ಪಲತಾ, ಭಾರತಿ, ಶುಭ, ಶಕುಂತಲಾ, ಶಾಂತಮ್ಮ ಅವರನ್ನು ಗೌರವಿಸಲಾಯಿತು.

ಇದನ್ನೂ ಓದಿ: Karnataka Rain : ಹಾವೇರಿಯಲ್ಲಿ ಮಳೆಯಾರ್ಭಟಕ್ಕೆ ಮರ ಬಿದ್ದು ಬಲಿಯಾದ ಹಸು; ಮಹಾರಾಷ್ಟ್ರ- ಕರ್ನಾಟಕ‌ ಸಂಪರ್ಕ‌ ಸೇತುವೆ ಬಂದ್

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರಕೆರೆ ಶಂಕರ್, ಬಿಜೆಪಿ ತಾಲೂಕು ಅಧ್ಯಕ್ಷ ದರ್ಶನ್, ಸರ್ಕಾರಿ ನೌಕರ ಸಂಘದ ಅಧ್ಯಕ್ಷ ರುದ್ರೇಶ್, ಮುಖಂಡರುಗಳಾದ ಎಲ್ ರಾಜಣ್ಣ, ಪರ್ವತಯ್ಯ, ಆರ್.ಎಸ್ ರಾಜಣ್ಣ, ಮಂಜುಳಾ , ಶಂಭುಲಿಂಗರಾಧ್ಯ, ದ್ರಾಕ್ಷಾಯಿಣಿ, ಮಮತಾ, ತೀತಾ ಮಂಜುನಾಥ್, ಕೆ.ಬಿ ಲೋಕೇಶ್, ಆರ್.ಆರ್. ರಾಜಣ್ಣ, ಕೆ.ಎಂ ಸುರೇಶ್, ಮಲ್ಲಣ್ಣ, ಕಾಳಪ್ಪ, ತ್ರಿಯಂಭಕಾರಾಧ್ಯ ಸೇರಿದಂತೆ ಇತರರು ಇದ್ದರು.

Continue Reading

ಕರ್ನಾಟಕ

Congress Protest: ಇಡಿ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ; ದ್ವೇಷ ರಾಜಕೀಯವನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದ ಸಿಎಂ

Congress Protest: ರಾಜಕೀಯ ಸೇಡು, ದ್ವೇಷದಿಂದ ಕೂಡಿದ ನಡೆಯನ್ನು ನಮ್ಮ ಸರ್ಕಾರ ತೀವ್ರವಾಗಿ ಖಂಡಿಸುತ್ತದೆ. ಜಾಪ್ರಭುತ್ವದಲ್ಲಿ ಯಾವುದೇ ತನಿಖೆಯನ್ನು ಕಾನೂನುಬಾಹಿರವಾಗಿ ಮಾಡುವಂತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ.

VISTARANEWS.COM


on

Congress Protest
Koo

ಬೆಂಗಳೂರು: ವಾಲ್ಮೀಕಿ ನಿಗಮ ಹಗರಣದಲ್ಲಿ ಮುಖ್ಯಮಂತ್ರಿಗಳು, ಸಚಿವರ ಹೆಸರು ಹೇಳಲು ಇಡಿ ಅಧಿಕಾರಿಗಳು ಒತ್ತಾಯ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ (Congress Protest) ಕಾಂಗ್ರೆಸ್ ಶಾಸಕರು, ಸಚಿವರು ಮಂಗಳವಾರ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಸಾಂಕೇತಿಕ ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ರಾಜಕೀಯ ಸೇಡು, ದ್ವೇಷದಿಂದ ಕೂಡಿದ ನಡೆಯನ್ನು ನಮ್ಮ ಸರ್ಕಾರ ತೀವ್ರವಾಗಿ ಖಂಡಿಸುತ್ತದೆ. ಇದನ್ನು ನಾವು ಪ್ರತಿಭಟಿಸುತ್ತೇವೆ. ಪ್ರಜಾಪ್ರಭುತ್ವದಲ್ಲಿ ಯಾವುದೇ ತನಿಖೆಯನ್ನು ಕಾನೂನುಬಾಹಿರವಾಗಿ ಮಾಡುವಂತಿಲ್ಲ ಎಂದು ಕಿಡಿಕಾರಿದರು.

ಸಂಸತ್‌ನಲ್ಲಿ ಪ್ರಸ್ತಾಪ ಮಾಡಲಾಗುವುದು

ಸಂಸತ್‌ನಲ್ಲಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ವಾಲ್ಮೀಕಿ ನಿಗಮದ ಬಗ್ಗೆ ಪ್ರಸ್ತಾಪಿಸಿರುವ ಬಗ್ಗೆ ಮಾತನಾಡಿ, ಈ ಬಗ್ಗೆ ನಮ್ಮ ಪಕ್ಷದ ವರಿಷ್ಠರೊಂದಿಗೆ ಮಾತನಾಡಿದ್ದು, ಇಡಿ ದುರೂಪಯೋಗ ಮಾಡಿಕೊಳ್ಳುತ್ತಿರುವ ಬಗ್ಗೆ ಪಕ್ಷದ ವರಿಷ್ಠರು ಕೂಡ ಈ ವಿಷಯವನ್ನು ಸಂಸತ್ತಿನಲ್ಲಿ ಪ್ರಸ್ತಾಪಿಸಲಿದ್ದಾರೆ ಎಂದು ತಿಳಿಸಿದರು.

ಕಾನೂನು ಹೋರಾಟಕೆ ಸಿದ್ಧ

ನಾವು ಕೂಡ ಕಾನೂನಿನ ಪ್ರಕಾರ ಹೋರಾಟ ಮಾಡಲು ಸಿದ್ಧರಿದ್ದೇವೆ. ಇಡಿ, ಸಿಬಿಐ ಏನು ಮಾಡುತ್ತಾರೆ ಎಂದು ನಮಗೆ ತಿಳಿದಿಲ್ಲ. ಆದರೆ ಎಸ್‌ಐಟಿ ತನಿಖೆ ಮುಗಿದಿದೆ. ಸದನದಿಂದ ಹೊರಗೆ ಹೋರಾಟ ಮಾಡುವ ಬಗ್ಗೆ ಪಕ್ಷದಲ್ಲಿ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದರು.

ಇದನ್ನೂ ಓದಿ | Lakshmi Hebbalkar: ಇ.ಡಿ ಮೂಲಕ ಸಿದ್ದರಾಮಯ್ಯ ಹೆಸರು ಕೆಡಿಸಲು ಹುನ್ನಾರ; ಹೆಬ್ಬಾಳಕರ್ ಆರೋಪ

ತಪ್ಪಿತಸ್ಥರಿಗೆ ಶಿಕ್ಷೆ

ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಯಾರೇ ತಪ್ಪು ಮಾಡಿದ್ದರೂ ಮುಲಾಜಿಗೆ ಒಳಗಾಗುವುದಿಲ್ಲ. ಯಾರನ್ನೂ ರಕ್ಷಣೆ ಮಾಡುವುದಿಲ್ಲ. ನಾವು ತಪ್ಪಿತಸ್ಥರಿಗೆ ಶಿಕ್ಷೆ ಕೊಟ್ಟೆ ಕೊಡುತ್ತೇವೆ. ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

Minister Lakshmi Hebbalkar has alleged that the Central Government intention is to destabilize non BJP governments in the country

ಒಂದೇ ಪ್ರಕರಣ; 3 ಸಂಸ್ಥೆಗಳಿಂದ ತನಿಖೆ

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮದಲ್ಲಿ ಮೂರು ತನಿಖಾ ಸಂಸ್ಥೆಗಳು ವಿಚಾರಣೆ ಮಾಡುತ್ತಿವೆ. ಮೇ 31ರಂದು ಎಸ್.ಐ.ಟಿಯನ್ನು ರಚಿಸಲಾಗಿದೆ. ಜೂನ್ 3‌ರಂದು ಸಿಬಿಐಗೆ ಬ್ಯಾಂಕ್ ವತಿಯಿಂದ ದೂರು ನೀಡಲಾಗಿದೆ. ಅದರಲ್ಲಿ ಶುಚಿ ಸ್ಮಿತಾ ರಾವುಲ್, ದೀಪಾ ಹಾಗೂ ಕೃಷ್ಣಮೂರ್ತಿ ಅವರ ಮೇಲೆ ದೂರು ನೀಡಲಾಗಿದೆ. ಜಾರಿ ನಿರ್ದೇಶನಾಲಯ ಸ್ವಯಂ ಪ್ರೇರಣೆಯಿಂದ ಕೆಲಸ ಮಾಡುತ್ತಿದೆ. ಒಂದೇ ಹಗರಣದಲ್ಲಿ ಮೂರು ತನಿಖಾ ಸಂಸ್ಥೆಗಳು ವಿಚಾರಣೆ ಮಾಡುತ್ತಿರುವುದು ವಿಶೇಷ. ಮೂರು ತನಿಖಾ ಸಂಸ್ಥೆಗಳು ಒಂದೇ ಪ್ರಕರಣದ ಬಗ್ಗೆ ತನಿಖೆ ಮಾಡುವುದು ಈವರೆಗೆ ನನ್ನ ಅನುಭವಕ್ಕೆ ಬಂದಿರಲಿಲ್ಲ ಎಂದರು.

ತ್ವರಿತ ತನಿಖೆ

ನಾವು ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ನಡೆದಿಲ್ಲ ಎಂದು ಹೇಳಿಲ್ಲ. ವಿರೋಧ ಪಕ್ಷದವರು ಪದೇ ಪದೇ 187.33 ಕೋಟಿ ರೂ.ಗಳ ದುರುಪಯೋಗವಾಗಿದೆ ಎಂದು ಆರೋಪಿಸಿದ್ದಾರೆ. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಎಂ.ಜಿ ರಸ್ತೆ ಶಾಖೆಯಿಂದ ತೆಲಂಗಾಣಕ್ಕೆ ಹೋಗಿರುವುದು 89.63 ಕೋಟಿ ರೂ.ಗಳು. ಎಸ್. ಐ.ಟಿ ರಚನೆಯಾದ ಮೇಲೆ ತ್ವರಿತವಾಗಿ ತನಿಖೆ ಕೈಗೊಂಡಿದ್ದಾರೆ. ಈಗಾಗಲೇ 12 ಜನರನ್ನು ಬಂಧಿಸಿದ್ದು, ಬೇರೆ ಬೇರೆ ಜನರು ಹಂಚಿಕೊಂಡಿದ್ದ ಮೊತ್ತದಲ್ಲಿ 34 ಕೋಟಿ ರೂಪಾಯಿ ನಗದನ್ನು ಹಿಂಪಡೆದಿದ್ದಾರೆ. 89.63 ಕೋಟಿ . 46 ಕೋಟಿ ರೂ.ಗಳನ್ನು ಫಸ್ಟ್‌ ಫೈನಾನ್ಸ್ ಕೋ ಆಪರೇಟಿವ್ ಬ್ಯಾಂಕ್, ರತ್ನಾಕರ ಬ್ಯಾಂಕ್ ಲೀ., ನಲ್ಲಿ 46 ಕೋಟಿ ರೂಪಾಯಿ ಗಳನ್ನೂ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಒತ್ತು 85.25 ಕೋಟಿ ಹಿಂಪಡೆದು ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಒಟ್ಟು ಅಕ್ರಮವಾಗಿರುವುದು 85.63 ಕೋಟಿಗಳು. ಎಸ್. ಐ ಟಿ ಅವರು ಶೇ.95% ತನಿಖೆಯನ್ನು ಪೂರ್ಣಗೊಳಿಸಿದ್ದಾರೆ ಎಂದರು.

ಮುಖ್ಯಮಂತ್ರಿ, ಇತರೆ ಸಚಿವರ ಹೆಸರನ್ನು ಬರೆದು ಕೊಡುವಂತೆ ಇಡಿ ಒತ್ತಾಯ

ಅಕ್ರಮವಾಗಲು ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕ, ಉಪವ್ಯವಸ್ಥಾಪಕರು, ಕ್ರೆಡಿಟ್ ಅಧಿಕಾರಿಗಳು ಕಾರಣ ಎಂದು ಬ್ಯಾಂಕಿನಿಂದ ಸೂರು ನೀಡಲಾಗಿದ್ದು, ಸಿಬಿಐ ತನಿಖೆ ಮಾಡುತ್ತಿದೆ. ಅವರೇನು ಮಾಡಿದ್ದಾರೆಂದು ತಿಳಿದಿಲ್ಲ. ಇಡಿಯವರು ಸ್ವಯಂ ಪ್ರೇರಿತವಾಗಿ ತನಿಖೆ ಪ್ರಾರಂಭ ಮಾಡಿದ್ದು, ನಾಗೇಂದ್ರ ಹಾಗೂ ದದ್ದಲ್ ಅವರ ಮನೆ ಮೇಲೆ ದಾಳಿ ಮಾಡಿದ್ದಾರೆ. ನಾಗೇಂದ್ರ ಅವರನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನದಲ್ಲಿದ್ದಾರೆ. ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ, ಹೆಚ್ಚುವರಿ ನಿರ್ದೇಶಕ ಕಲ್ಲೇಶ್ ಎಂಬುವರು ಹೇಳಿಕೆಯನ್ನು ಕೊಟ್ಟಿದ್ದರೂ ಇವರೇ ಆದೇಶ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಹಾಗೂ ಇತರೆ ಸಚಿವರ ಹೆಸರನ್ನು ಬರೆದು ಕೊಡುವಂತೆ ಒತ್ತಾಯ ಮಾಡಿದ್ದಾರೆ. 187.33 ಕೋಟಿಗಳಲ್ಲಿ 43.33 ಕೋಟಿ ರೂಪಾಯಿ ಖಜಾನೆಯಿಂದ ಹೋಗಿದೆ. ಅದಕ್ಕೂ ನಮಗೂ ಸಂಬಂಧವಿಲ್ಲ. ನಮ್ಮ ಹಾಗೂ ಆರ್ಥಿಕ ಇಲಾಖೆ ಪಾತ್ರ ಇದರಲ್ಲಿ ಇರುವುದಿಲ್ಲ. ಬಜೆಟ್ ಒಮ್ಮೆ ಅನುಮೋದನೆಯಾದ ಮೇಲೆ ಅನುದಾನ ಕಾರ್ಯದರ್ಶಿಗಳಿಗೆ, ಅಲ್ಲಿಂದ ಅದನ್ನು ನಿರ್ದೇಶಕರಿಗೆ ಹಾಗೂ ನಿರ್ದೇಶಕರು ಅನುದಾನವನ್ನು ವ್ಯವಸ್ಥಾಪಕ ನಿರ್ದೇಶಕರಿಗೆ ಕೊಡುತ್ತಾರೆ. ಇದು ಪ್ರಕ್ರಿಯೆ ಎಂದು ವಿವರಿಸಿದರು

ಕಲ್ಲೇಶ್‌ಗೆ ಜೀವ ಬೆದರಿಕೆ

ಜಾರಿ ನಿರ್ದೇನಾಲಯದವರು ಕಲ್ಲೇಶ್ ಅವರಿಗೆ ಹೆದರಿಸಿ, ಬೆದರಿಸಿ, ಜೀವ ಭಯ ಉಂಟು ಮಾಡಿ ಅನಗತ್ಯವಾಗಿ ನನ್ನ ಹೆಸರು ಹೇಳುವಂತೆ ಬೆದರಿಸಿದ್ದಾರೆ. ಪ್ರಕರಣದಲ್ಲಿ ಕಾನೂನಿನ ಪ್ರಕಾರ ನನ್ನ ಮೇಲೆ ಆರೋಪ ಬರುವಂತೆ ಮಾಡಲು ಒತ್ತಾಯಿಸಿದ್ದಾರೆ. ಕಲ್ಲೇಶ್ ದೂರು ನೀಡಿ ಪ್ರಕರಣ ದಾಖಲಾಗಿದೆ. ದೂರಿನಲ್ಲಿ ಏನೇನು ನಡೆಯಿತು ಎಂದು ಹೇಳಿದ್ದಾರೆ ಎಂದರು.

ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನ

ಒಟ್ಟಾರೆಯಾಗಿ ಕೇಂದ್ರ ಸರ್ಕಾರ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಹಾಗೂ ಮುಖ್ಯಮಂತ್ರಿಗಳನ್ನು ಗುರಿಯಾಗಿಸಬೇಕು ಹಾಗೂ ನನ್ನ ಮತ್ತು ಸರ್ಕಾರದ ವರ್ಚಸ್ಸನ್ನು ಹಾಳು ಮಾಡಬೇಕು. ನಮ್ಮ ಸರ್ಕಾರದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿರುದ್ಧ ಇದ್ದೇವೆ ಎಂದು ರಾಜ್ಯದ ಜನರಿಗೆ ಹೇಳಬೇಕೆಂದು ಹೀಗೆ ಮಾಡುತ್ತಿದ್ದಾರೆ. ನಾವು ಎಂದಿಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು, ದುರ್ಬಲ ವರ್ಗದವರ, ಬಡವರ, ರೈತರ , ಕಾರ್ಮಿಕರ ಪರವಾಗಿ ಇದ್ದೇವೆ. ಆದರೂ ಹೇಗಾದರೂ ಮಾಡಿ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವಿರಬಾರದು, ದುರ್ಬಲಗೊಳಿಸಬೇಕೆಂಬ ಉದ್ದೇಶದಿಂದ ವಾಮ ಮಾರ್ಗವನ್ನು ಅನುಸರಿಸುತ್ತಿದ್ದಾರೆ. ಆರ್ಥಿಕ ಇಲಾಖೆಯಾಗಲಿ, ಮುಖ್ಯಮಂತ್ರಿಯಾಗಲಿ ಈ ಹಗರಣಕ್ಕೆ ಸಂಬಂಧಪಟ್ಟಿಲ್ಲ ಎಂದು ಸ್ಪಷ್ಟಪಡಿಸಿದ ಮುಖ್ಯಮಂತ್ರಿಗಳು , ಹಗರಣ ಆಗಿದೆ ಎಂದು ತನಿಖೆ ಮಾಡಿಸುತ್ತಿದ್ದೇವೆ ಎಂದರು.

ಮೃತ ಚಂದ್ರಶೇಖರ್ ಅವರ ಪತ್ನಿ ಕವಿತಾ ಅವರು ನೀಡಿರುವ ದೂರು, ಪದ್ಮನಾಭ ಅವರ ದೂರಿನನ್ವಯ ತನಿಖೆ ಸರಿಯಾದ ದಾರಿಯಲ್ಲಿ ಸಾಗಿದೆ ಎಂದರು.

ಇದನ್ನೂ ಓದಿ | Union Budget 2024 : ಬಜೆಟ್​ನಲ್ಲಿ ದೊಡ್ಡ ಮೊತ್ತ ಮೀಸಲಾಗಿರುವುದು ಸಾಲದ ಬಡ್ಡಿ ಕಟ್ಟಲು!

ಬಿಜೆಪಿ ಅವಧಿಯ ಹಗರಣಗಳ ತನಿಖೆಗೆ ಇಡಿ ಬರಲಿಲ್ಲ

ಬಿಜೆಪಿ ಅಧಿಕಾರದ ಅವಧಿಯಲ್ಲಿ ನಡೆದಿರುವ ಭೋವಿ ಅಭಿವೃದ್ಧಿ ನಿಗಮ, ದೇವರಾಜ ಅರಸು ಟ್ರಕ್ ಟರ್ಮಿನಲ್, ಎ.ಪಿ.ಎಂ.ಸಿ ಹಾಗೂ ಕೋವಿಡ್ ಹಗರಣಗಳಲ್ಲಿ ಇಡಿ ಬರಲೇ ಇಲ್ಲ. ಬಿಜೆಪಿ ಸಿಬಿಐಗೆ ವಹಿಸಲು ಹೇಳುತ್ತಾರೆ. ಅವರು ವಿರೋಧಪಕ್ಷದಲ್ಲಿದ್ದಾಗ ಚೋರ್ ಬಚಾವ್ ಸಂಸ್ಥೆ ಎನ್ನುತ್ತಿದ್ದರು. ಅವರ ಸರ್ಕಾರ ಕೇಂದ್ರದಲ್ಲಿರುವುದರಿಂದ ಸಿಬಿಐಗೆ ವಹಿಸುವಂತೆ ಒತ್ತಾಯಿಸುತ್ತಿದ್ದಾರೆ. ನಾವು ಅನೇಕ ಪ್ರಕರಣಗಳನ್ನು ಸಿಬಿಐಗೆ ವಹಿಸಿದ್ದೇವೆ. ರಾಘವೇಂದ್ರ ಕೋ-ಆಪರೇಟಿವ್ ಬ್ಯಾಂಕಿನ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿದೆ. ಪರೇಶ್ ಮೆಹ್ತಾ, ರವಿ, ಗಣಪತಿ, ಲಾಟರಿ ಪ್ರಕರಣಗಳನ್ನು ಸಿಬಿಐಗೆ ವಹಿಸಲಾಗಿದೆ. ಸರ್ಕಾರ ವಿವೇಚನೆಯನ್ನು ಆಧರಿಸಿ ಪ್ರಕರಣಗಳನ್ನು ವಹಿಸುತ್ತದೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಮಾರ್ಗಸೂಚಿಗಳು ಪ್ರಕಾರ 25 ಕೋಟಿ ರೂಪಾಯಿಗಿಂತ ಹೆಚ್ಚಿನ ಮೊತ್ತವಿದ್ದರೆ ಸಿಬಿಐ ತನಿಖೆ ಮಾಡಬಹುದು. ತನಿಖೆಗೆ ನಮ್ಮ ತಕರಾರಿಲ್ಲ. ಆದರೆ ಕಾನೂನು ಬಾಹಿರವಾಗಿ ತನಿಖೆ ಮಾಡುವುದನ್ನು ಖಂಡಿಸುತ್ತೇವೆ. ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸುವ ಕೆಲಸವನ್ನು ಮಾಡುತ್ತಿದ್ದು ಇದನ್ನು ಖಂಡಿಸಲು ಸಾಂಕೇತಿಕವಾಗಿ ಪ್ರತಿಭಟನೆ ಮಾಡುತ್ತಿದ್ದೇವೆ. ವಿಧಾನಸಭೆ ಹಾಗೂ ವಿಧಾನ ಪರಿಷತ್ತಿನಲ್ಲಿಯೂ ಇದನ್ನು ನಾವು ಪ್ರಸ್ತಾಪಿಸಲಿದ್ದೇವೆ ಎಂದರು.

Continue Reading

ಬೆಳಗಾವಿ

Murder case : ಭೂ ವಿವಾದಕ್ಕಾಗಿ ಪರಸ್ಪರ ಹೊಡೆದಾಡಿಕೊಂಡ ಅಣ್ಣ-ತಮ್ಮ ಮೃತ್ಯು

Murder case : ಭೂ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣ-ತಮ್ಮಂದಿರು ಕಿತ್ತಾಡಿಕೊಂಡಿದ್ದಾರೆ. ಗಲಾಟೆಯು ವಿಕೋಪಕ್ಕೆ ತಿರುಗಿದ್ದು ಒಬ್ಬರಿಗೊಬ್ಬರು ಹೊಡೆದಾಡಿಕೊಂಡಿದ್ದಾರೆ. ಹೊಡೆದಾಟದಲ್ಲಿ ಗಂಭೀರ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

VISTARANEWS.COM


on

By

murder case
Koo

ಚಿಕ್ಕೋಡಿ: ದಾಯಾದಿಗಳ ಕಲಹವು ಸಾವಿನಲ್ಲಿ (Murder case) ಅಂತ್ಯವಾಗಿದೆ. ಅಣ್ಣ-ತಮ್ಮಂದಿರು ಪರಸ್ಪರ ಹೊಡೆದಾಡಿಕೊಂಡು ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಖೋತವಾಡಿ ಗ್ರಾಮದಲ್ಲಿ ಘಟನೆ ನಡೆದಿದೆ.

ತಡರಾತ್ರಿ ಭೂ ವಿವಾದ ಹಿನ್ನೆಲೆಯಲ್ಲಿ ಸಹೋದರ ಸಂಬಂಧಿಕರ ಮಕ್ಕಳ ನಡುವೆ ಗಲಾಟೆ ನಡೆದಿದೆ. ಈ ವೇಳೆ ಒಬ್ಬರಿಗೊಬ್ಬರು ಮಾರಕಾಸ್ತ್ರಗಳಿಂದ ಹೊಡೆದಾಡಿಕೊಂಡಿದ್ದಾರೆ. ಈ ಹೊಡೆದಾಟದಲ್ಲಿ ಹಣಮಂತ ರಾಮಚಂದ್ರ ಖೋತ (35) ಹಾಗೂ ಖಂಡೋಭಾ ತಾನಾಜಿ ಖೋತ (30) ಇಬ್ಬರು ಗಂಭೀರ ಗಾಯಗೊಂಡಿದ್ದರು.

ಕುಟುಂಬಸ್ಥರು ಇಬ್ಬರನ್ನು ಮಹಾರಾಷ್ಟ್ರ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರೂ ಕೂಡ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಬೆಳಗಾವಿ ಎಸ್‌ಪಿ ಭೀಮಶಂಕರ್ ಗುಳೇದ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಥಣಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Road Accident : ಕಲಬುರಗಿಯಲ್ಲಿ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಹಾರಿ ಬಿದ್ದ ಬೈಕ್‌ ಸವಾರ ಸ್ಥಳದಲ್ಲೇ ಸಾವು

ಕೋಲಾರ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷರ ಫೈಟಿಂಗ್‌

ಕೋಲಾರ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷರು ಕಾಲೇಜು ಆವರಣದಲ್ಲೇ ಶಿಕ್ಷಕರು, ವಿದ್ಯಾರ್ಥಿಗಳ ಎದುರಿಗೆ ಕಿತ್ತಾಡಿಕೊಂಡಿದ್ದಾರೆ. ಮಾಜಿ ಅಧ್ಯಕ್ಷ ಜೆ.ಜಿ.ನಾಗರಾಜ್‌ಗೆ ನಾಗಾನಂದ ಕೆಂಪರಾಜು ಎಂಬುವವರು ಕಪಾಳ ಮೋಕ್ಷ ಮಾಡಿದ್ದಾರೆ.

ಕಳೆದ ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಯಿಂದ ಇವರಿಬ್ಬರ ನಡುವೆ ಮನಸ್ತಾಪಗಳು ಆರಂಭವಾಗಿತ್ತು. ಸ್ನೇಹಿತರಾಗಿದ್ದ ನಾಗನಂದ ಕೆಂಪರಾಜು ಹಾಗೂ ಜೆ.ಜಿ.ನಾಗರಾಜ ಇಂದು ಗಲಾಟೆ ಮಾಡಿಕೊಂಡಿದ್ದಾರೆ. ಕೋಲಾರ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಾಗರಾಜ್ ಮೇಲೆ ನಾಗಾನಂದ ಕೆಂಪರಾಜು ಹಲ್ಲೆ ಮಾಡಿದ್ದಾರೆ.

ಜೆ.ಜಿ.ನಾಗರಾಜ್ ಹಾಲಿ ಕಸಾಪ ಅಧ್ಯಕ್ಷ ಗೋಪಾಲ ಗೌಡ ಪರವಾಗಿ ಕೆಲಸ ಮಾಡಿದ್ದಾರೆ ಎನ್ನುವ ಸಿಟ್ಟು, ದ್ವೇಷಕ್ಕೆ ಹಲ್ಲೆ ಮಾಡಿರುವ ಆರೋಪವಿದೆ. ಗಾಯಾಳು ಜೆ.ಜಿ.ನಾಗರಾಜ್ ಅವರನ್ನು ಕೋಲಾರ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೋಲಾರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕೊಟ್ಟಿಗೆ ವಿಚಾರಕ್ಕೆ ಚಿಕ್ಕಮಗಳೂರಿನಲ್ಲಿ ಮಾರಾಮಾರಿ

ಚಿಕ್ಕಮಗಳೂರಿನಲ್ಲಿ ಕೊಟ್ಟಿಗೆ ವಿಚಾರಕ್ಕೆ ಮಾರಾಮಾರಿಯೇ ನಡೆದಿದೆ. ಕಟ್ಟಿದ ಕೊಟ್ಟಿಗೆಯನ್ನು ಕೆಡವಿದ್ದಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ. ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಹೊಸಮನೆ ಹಳ್ಳಿಯಲ್ಲಿ ಕೊಡಲಿ, ಕತ್ತಿ, ಕೊಡಗೋಲು, ಬಡಿಗೆ ಹಿಡಿದು ಮಾರಾಮಾರಿ ನಡೆದಿದೆ. ರಾಜು ಹಾಗೂ ಯು.ಬಿ ಮಂಜಯ್ಯ ಕುಟುಂಬಗಳ ನಡುವಿನ ವ್ಯಾಜ್ಯ ಗಲಾಟೆ ನಡೆದಿದೆ. ಎರಡು ಗುಂಪುಗಳ ವಿರುದ್ಧ ಪ್ರತ್ಯೇಕ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Suraj Revanna Case: ಸಲಿಂಗ ಕಾಮ ಪ್ರಕರಣ; ಸೂರಜ್‌ ರೇವಣ್ಣ ಜೈಲಿನಿಂದ ರಿಲೀಸ್‌

Suraj Revanna Case: ಅಸಹಜ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿ ದಾಖಲಾಗಿದ್ದ ಎರಡು ಪ್ರಕರಣದಲ್ಲೂ ಎಂಎಲ್‌ಸಿ ಸೂರಜ್‌ ರೇವಣ್ಣಗೆ ಒಂದು ತಿಂಗಳ ಜೈಲು ವಾಸದ ಬಳಿಕ ಮುಕ್ತಿ ಲಭಿಸಿದೆ. ಇಂದು ಅಪರಾಹ್ನ ಅವರು ಪರಪ್ಪನ ಅಗ್ರಹಾರ ಜೈಲಿನಿಂದ ಹೊರ ಬಂದಿದ್ದಾರೆ.

VISTARANEWS.COM


on

Suraj Revanna Case
Koo

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿ ದಾಖಲಾಗಿದ್ದ ಎರಡು ಪ್ರಕರಣದಲ್ಲೂ ಎಂಎಲ್‌ಸಿ ಸೂರಜ್‌ ರೇವಣ್ಣಗೆ (Suraj Revanna Case) ನಿರೀಕ್ಷಣಾ ಜಾಮೀನು ಮಂಜೂರಾಗಿದ್ದು, ಒಂದು ತಿಂಗಳ ಜೈಲು ವಾಸದ ಬಳಿಕ ರಿಲೀಸ್‌ ಆಗಿದ್ದಾರೆ. ತನ್ನ ವಿರುದ್ಧ ಷಡ್ಯಂತ್ರ ರೂಪಿಸಲಾಗಿದೆ, ಶೀಘ್ರ ಸತ್ಯ ಹೊರ ಬರಲಿದೆ. ಎಲ್ಲದಕ್ಕೂ ಎರಡು-ಮೂರು ದಿನಗಳಲ್ಲಿ ಉತ್ತರ ನೀಡುವುದಾಗಿ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

ಮಂಗಳವಾರ ಅಪರಾಹ್ನ ಅವರು ಪರಪ್ಪನ ಅಗ್ರಹಾರ ಜೈಲಿನಿಂದ ಹೊರ ಬಂದಿದ್ದಾರೆ. ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ಸೂರಜ್‌ ರೇವಣ್ಣ ವಿರುದ್ಧ 2 ಪ್ರತ್ಯೇಕ ಪ್ರಕರಣ ದಾಖಲಾಗಿದ್ದವು. ಹೊಳೆನರಸೀಪುರ ಟೌನ್‌ನಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಮೊದಲಿಗೆ ಸೂರಜ್‌ ರೇವಣ್ಣಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಜಾಮೀನು‌ ಮಂಜೂರು ಮಾಡಿತ್ತು. ಬಳಿಕ ಸೋಮವಾರ ಎರಡನೇ ಪ್ರಕರಣದಲ್ಲೂ ನಿರೀಕ್ಷಣಾ ಜಾಮೀನು ನೀಡಿತ್ತು.

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನವಾಗಿರುವ ಸೂರಜ್ ರೇವಣ್ಣಗೆ ಜುಲೈ 3ರಂದು ಕೋರ್ಟ್‌ ನ್ಯಾಯಾಂಗ ಬಂಧನ ವಿಧಿಸಿತ್ತು. ಸಿಐಡಿ ಕಸ್ಟಡಿ ಮುಕ್ತಾಯಗೊಂಡ ನಂತರ 42ನೇ ಎಸಿಎಂಎಂ ಕೋರ್ಟ್‌ಗೆ ಹಾಜರುಪಡಿಸಿದಾಗ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಸೂಚಿಸಲಾಗಿತ್ತು. ಇದರಿಂದ ಸೂರಜ್‌ ರೇವಣ್ಣ ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದರು. ಜೂನ್‌ 23ರಂದು ಬಂಧನವಾಗಿದ್ದ ಸೂರಜ್‌ ರೇವಣ್ಣ ಪರಪ್ಪನ ಅಗ್ರಹಾರ ಸೇರಿದ್ದರು. ಪ್ರಕರಣ ನಡೆದು 30 ದಿನಗಳ ನಂತರ ಈಗ ಸೂರಜ್‌ ಹೊರ ಬಂದಿದ್ದಾರೆ.

ಏನಿದು ಪ್ರಕರಣ?

ಸಹಜ ಲೈಂಗಿಕ ಕ್ರಿಯೆಗೆ ಒತ್ತಾಯಿಸಿ ದೌರ್ಜನ್ಯ ಎಸಗಿದ್ದು, ನನ್ನ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂದು ಸೂರಜ್‌ ರೇವಣ್ಣ ವಿರುದ್ಧ ಅರಕಲಗೂಡಿನ ಜೆಡಿಎಸ್ ಕಾರ್ಯಕರ್ತರೊಬ್ಬರು ಆರೋಪ ಮಾಡಿದ್ದರು. ಈ ಬಗ್ಗೆ ಡಿಜಿಪಿ, ಹಾಸನದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಮುಖ್ಯಮಂತ್ರಿ ಹಾಗೂ ಗೃಹಮಂತ್ರಿಗಳಿಗೆ ದೂರು ಸಲ್ಲಿಸಿದ್ದರು. ಬಳಿಕ ಜೂನ್‌ 22ರಂದು ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ಸೂರಜ್‌ ರೇವಣ್ಣ ವಿರುದ್ಧ ಎಫ್‌ಐಆರ್‌ ದಾಖಲಾಗಿತ್ತು.

ದೌರ್ಜನ್ಯದ ಆರೋಪ

ಖಾಸಗಿ ಫೈನಾನ್ಸ್‌ ಕಂಪನಿಯಲ್ಲಿ ಉದ್ಯೋಗಿಯಾದ ಜೆಡಿಎಸ್ ಕಾರ್ಯಕರ್ತ, ಜೂನ್ 16ರಂದು ಸೂರಜ್ ತನಗೆ ವಾಟ್ಸ್‌ಆ್ಯಪ್ ಮೂಲಕ ಸಂದೇಶ ಕಳುಹಿಸಿ, ಗನ್ನಿಕಡ ತೋಟದ ಮನೆಗೆ ಆಹ್ವಾನಿಸಿದ್ದರು. ಉದ್ಯೋಗ ನೀಡುವ ಭರವಸೆ ನೀಡಿ ತನ್ನನ್ನು ಕರೆಸಿಕೊಂಡು, ಸಲಿಂಗಕಾಮಕ್ಕೆ ಒತ್ತಾಯಿಸಿ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದರು. ಇದರಿಂದ ನನ್ನ ದೇಹದ ಮೇಲೆ ಗಾಯಗಳಾಗಿದ್ದು, ಈ ಬಗ್ಗೆ ಎಲ್ಲಾದರೂ ಬಹಿರಂಗಪಡಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಕೂಡ ಹಾಕಿದ್ದಾರೆ ಎಂದು ಸಂತ್ರಸ್ತ ಆರೋಪಿಸಿದ್ದರು.

ಐದು ಕೋಟಿ ರೂ. ಬ್ಲ್ಯಾಕ್‌ಮೇಲ್ ಕೇಸ್‌ನಲ್ಲಿ ಸಂತ್ರಸ್ತನ ವಿರುದ್ಧ ಸಾಕ್ಷ್ಯ ನೀಡಲು ಸೂರಜ್, ಹೊಳೆನರಸೀಪುರ ಗ್ರಾಮಾಂತರ ಠಾಣೆಗೆ ತೆರಳಿದ್ದಾಗ ಸುದೀರ್ಘ ವಿಚಾರಣೆ ಬಳಿಕ ಪೊಲೀಸರು ಬಂಧಿಸಿದ್ದರು.

ಇದನ್ನೂ ಓದಿ: Suraj Revanna Case: ಅಸಹಜ ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಸೂರಜ್ ರೇವಣ್ಣಗೆ ಜಾಮೀನು ಮಂಜೂರು

Continue Reading
Advertisement
Union Budget 2024
ದೇಶ2 mins ago

Union Budget 2024: ಸ್ಮಾರ್ಟ್‌ಫೋನ್‌ ಬಳಕೆದಾರರಿಗೆ ಗುಡ್‌ನ್ಯೂಸ್‌! ಮೊಬೈಲ್‌ ಫೋನ್‌, ಚಾರ್ಜರ್‌ ಬೆಲೆ ಅಗ್ಗ

Rahul Dravid
ಕ್ರೀಡೆ2 mins ago

Rahul Dravid: ಆರ್​ಸಿಬಿ ಅಲ್ಲ ಈ ತಂಡದ ಕೋಚ್​ ಆಗಲಿದ್ದಾರೆ ರಾಹುಲ್​ ದ್ರಾವಿಡ್

Akhila bharat Veerashaiva Mahasabha taluk unit new president and directors padagrahana programme in koratagere
ತುಮಕೂರು7 mins ago

Koratagere News: ವೀರಶೈವ ಮಹಾಸಭಾದಿಂದ ಧಾರ್ಮಿಕ ನೆಲೆಗಟ್ಟು ಭದ್ರ; ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ

IBPS
ಉದ್ಯೋಗ22 mins ago

IBPS: ರಾಷ್ಟ್ರೀಕೃತ ಬ್ಯಾಂಕ್‌ಗಳ 6,128 ಹುದ್ದೆಗೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ; ಇಲ್ಲಿದೆ ಹೊಸ ಟೈಮ್‌ ಟೇಬಲ್‌

Congress Protest
ಕರ್ನಾಟಕ27 mins ago

Congress Protest: ಇಡಿ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ; ದ್ವೇಷ ರಾಜಕೀಯವನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದ ಸಿಎಂ

Tharun Sudhir sonal monteiro age differnce
ಸ್ಯಾಂಡಲ್ ವುಡ್30 mins ago

Tharun Sudhir: ತರುಣ್-ಸೋನಲ್‌ ನಡುವಿನ ವಯಸ್ಸಿನ ಅಂತರ ಎಷ್ಟು?

murder case
ಬೆಳಗಾವಿ31 mins ago

Murder case : ಭೂ ವಿವಾದಕ್ಕಾಗಿ ಪರಸ್ಪರ ಹೊಡೆದಾಡಿಕೊಂಡ ಅಣ್ಣ-ತಮ್ಮ ಮೃತ್ಯು

Paris Olympic 2024
ಕ್ರೀಡೆ44 mins ago

Paris Olympic 2024:’ಆ್ಯಂಟಿ-ಸೆಕ್ಸ್ ಬೆಡ್’ನ ಸಾಮರ್ಥ್ಯ ಪರೀಕ್ಷೆ ನಡೆಸಿದ ಆಸ್ಟ್ರೇಲಿಯಾದ ಟೆನಿಸ್​ ಆಟಗಾರ್ತಿಯರು; ವಿಡಿಯೊ ವೈರಲ್​

Suraj Revanna Case
ಕ್ರೈಂ50 mins ago

Suraj Revanna Case: ಸಲಿಂಗ ಕಾಮ ಪ್ರಕರಣ; ಸೂರಜ್‌ ರೇವಣ್ಣ ಜೈಲಿನಿಂದ ರಿಲೀಸ್‌

IND vs SL
ಕ್ರೀಡೆ1 hour ago

IND vs SL: ಭಾರತ ವಿರುದ್ಧದ ಟಿ20 ಸರಣಿಗೆ ತಂಡ ಪ್ರಕಟಿಸಿದ ಶ್ರೀಲಂಕಾ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ3 days ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ4 days ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ4 days ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ5 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ5 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ1 week ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ1 week ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ1 week ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

ಟ್ರೆಂಡಿಂಗ್‌