Site icon Vistara News

Caste Census : ಜಾತಿ ಗಣತಿ ವರದಿ ಮೂಲ ಪ್ರತಿ ಕಾಣೆ ಬಗ್ಗೆ ಗೊತ್ತಿಲ್ಲವೆಂದ ಸಿಎಂ ಸಿದ್ದರಾಮಯ್ಯ!

CM Siddaramaiah on caste census

ಬೆಂಗಳೂರು: ಎಚ್‌. ಕಾಂತರಾಜು ನೇತೃತ್ವದ ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಸಿದ್ಧಪಡಿಸಿರುವ ‘ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ -2015’ ವರದಿಯ (ಜಾತಿ ಗಣತಿ – Caste Census) ಮೂಲ ಪ್ರತಿ ಕಾಣೆಯಾದ ಬಗ್ಗೆ ನನಗೆ ಗೊತ್ತಿಲ್ಲ. ನಾನು ಆಯೋಗದ ಅಧ್ಯಕ್ಷ ಅಲ್ಲ. ಆಯೋಗದ ಕಾರ್ಯದರ್ಶಿಯೂ ಅಲ್ಲ. ಅದು ನಾಪತ್ತೆಯಾಗಿದೆ ಎಂಬುದು ನಿಮಗೆ ಗೊತ್ತಾ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಪ್ರಶ್ನೆ ಮಾಡಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮೂಲ ಕಡತ ನಾಪತ್ತೆಯಾಗಿದೆ ಎಂದು ಜಯಪ್ರಕಾಶ್ ಹೆಗ್ಡೆ ಹೇಳಿದ್ದರೆ ನನಗೆ ಗೊತ್ತಿಲ್ಲ. ಅವರನ್ನೇ ಕೇಳಿ. ಯಾರು ಅದಕ್ಕೆ ಕಾರಣ? ಯಾಕೆ ಹಾಗೆ ಆಯಿತು? ಎಂಬುದರ ಬಗ್ಗೆ ಆಯೋಗದ ಅಧ್ಯಕ್ಷರನ್ನು ಕೇಳಿ. ನನಗೆ ಅದರ ಬಗ್ಗೆ ಗೊತ್ತಿಲ್ಲ ಎಂದು ಹೇಳಿದರು.

ವರದಿ ಮಿಸ್‌ ಬಗ್ಗೆ ಸಿಎಂ ಹೇಳಿದ್ದೇನು? ಇಲ್ಲಿದೆ ವಿಡಿಯೊ!

ಇದನ್ನೂ ಓದಿ: Caste Census : ಜಾತಿ ಗಣತಿ ಮೂಲ ವರದಿ ಇಲ್ಲ, ಸಹಿಯನ್ನೂ ಹಾಕಿಲ್ಲ; ಸರ್ಕಾರಕ್ಕೆ ಜಯಪ್ರಕಾಶ್‌ ಹೆಗ್ಡೆ ಪತ್ರ

ಜಾತಿ ಗಣತಿ ಕೊಡುವವರೆಗೆ ಹೆಗ್ಡೆ ಅವಧಿ ಮುಂದುವರಿಕೆ

ಜಾತಿಗಣತಿ ವರದಿಯಲ್ಲಿ ಏನಿದೆ ಎಂದು ನಾನು ನೋಡಿಲ್ಲ. ಜಾತಿಗಣತಿ ವರದಿಯು ಮೊದಲು ನಮ್ಮ ಕೈ ಸೇರಲಿ. ಆಮೇಲೆ ಅದನ್ನು ನೋಡಿ ಪರಿಶೀಲನೆ ಮಾಡುತ್ತೇವೆ. ಜಯಪ್ರಕಾಶ್ ಹೆಗ್ಡೆ ಅವಧಿ ಈ ತಿಂಗಳು ಮುಗಿಯುತ್ತದೆ. ಜಾತಿಗಣತಿ ವರದಿ ಕೊಡುವವರೆಗೆ ಮುಂದುವರಿಯಲು ಹೇಳಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಜಾತಿಗಣತಿ ವರದಿಯನ್ನು ಸ್ವೀಕಾರ ಮಾಡುತ್ತೀರಾ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ಕಮಿಷನ್ ಮಾಡಿರೋದು ಯಾಕೆ? ವರದಿಯನ್ನು ನೋಡಬೇಕಲ್ಲವಾ? 162 ಕೋಟಿ ರೂಪಾಯಿ ಖರ್ಚು ಮಾಡಿ ವರದಿ ತಯಾರಿಸಲಾಗಿದೆ. ವರದಿ ಬಂದ ನಂತರ ಅವರ ಸಂಶಯಗಳ ನಿವಾರಣೆಯಾಗಲಿದೆಯೋ ಇಲ್ಲವೋ ನೋಡೋಣ. ವರದಿಯಲ್ಲಿ ಏನಿದೆ ಎಂದು ತಿಳಿದಿಲ್ಲ. ಡಿಸೆಂಬರ್‌ನಲ್ಲಿ ವರದಿ ಸಲ್ಲಿಸುವ ನಿರೀಕ್ಷೆ ಇದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಡಿಕೆಶಿ ವಿರೋಧದ ಬಗ್ಗೆ ಸಿಎಂ ಹೇಳಿದ್ದೇನು? ಇಲ್ಲಿದೆ ವಿಡಿಯೊ

ಡಿಕೆಶಿ ನನ್ನೊಂದಿಗೆ ಮಾತನಾಡಿಲ್ಲ

‌ಒಕ್ಕಲಿಗರ ವಿರೋಧದ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ನನ್ನೊಂದಿಗೆ ಈ ಬಗ್ಗೆ ಏನನ್ನೂ ಮಾತನಾಡಿಲ್ಲ ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ನಿಗಮ ಮಂಡಳಿಗಳ ನೇಮಕಾತಿಗೆ ಸಂಬಂಧಿಸಿದಂತೆ ಪೂರ್ವಭಾವಿ ಚರ್ಚೆಯಾಗಿದ್ದು ಯಾರನ್ನು ಮಾಡಬೇಕೆಂಬ ಬಗ್ಗೆ ಅಂತಿಮಗೊಳಿಸಿಲ್ಲ ಎಂದರು.

ಇದನ್ನೂ ಓದಿ: Caste Census : ಜಾತಿ ಗಣತಿ ವಿರೋಧ ಮನವಿ ಪತ್ರಕ್ಕೆ ನಾನು ಸಹಿ ಮಾಡಬಾರದೇ? ಡಿಕೆಶಿ ಸಮರ್ಥನೆ

ಕೊಡುವ ಮುನ್ನವೇ ವಿರೋಧ ಏಕೆ?

ಜಾತಿ ಜನಗಣತಿ ವರದಿ ಪಡೆಯದಿರುವಂತೆ ಒಕ್ಕಲಿಗರ ಸಂಘ ಮನವಿ ಸಲ್ಲಿಸಿದ್ದು, ವರದಿ ಕೊಡುವ ಮುನ್ನವೇ ಏಕೆ ವಿರೋಧಿಸುತ್ತಿದ್ದೀರಿ ಎಂದು ಹೇಳಿದ್ದೇನೆ. ಜಾತಿ ಜನಗಣತಿ ವರದಿ ಇನ್ನೂ ನಮ್ಮ ಕೈ ಸೇರಿಲ್ಲ. ಕೊಟ್ಟ ಮೇಲೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

Exit mobile version