ಬೆಳಗಾವಿ: ರಾಜ್ಯದ ನೀರಾವರಿ ಯೋಜನೆಗಳಿಗೆ (Irrigation Projects) ಕೇಂದ್ರ ಸರ್ಕಾರದ ಅನುದಾನ ಮತ್ತು ತೀರುವಳಿಗಳನ್ನು ಪಡೆಯಲು ಸರ್ವ ಪಕ್ಷ ನಿಯೋಗ (All party delegation) ಕೊಂಡೊಯ್ಯಲು ಸರ್ಕಾರ ಸಿದ್ಧವಿದೆ. ಕೇಂದ್ರದ ಮೇಲೆ ಒತ್ತಡ ಹಾಕಿ ತೀರುವಳಿಗಳನ್ನು ಕೊಡಿಸಿದರೆ ತಕ್ಷಣವೇ ಕಾಮಗಾರಿಗಳ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ವಿಧಾನಮಂಡಲದಲ್ಲಿ ಶುಕ್ರವಾರ ಉತ್ತರ ಕರ್ನಾಟಕದ ಮೇಲಿನ ಚರ್ಚೆಗೆ ಉತ್ತರ ನೀಡಿದ ಸಂದರ್ಭದಲ್ಲಿ ಈ ವಿಷಯ ತಿಳಿಸಿದರು.
ಇದನ್ನೂ ಓದಿ: Raichur News: ಲಿಂಗಸುಗೂರಿನಲ್ಲಿ ಡಿ.29, 30ರಂದು ರಾಜ್ಯಮಟ್ಟದ 3ನೇ ವೈಜ್ಞಾನಿಕ ಸಮ್ಮೇಳನ: ಹುಲಿಕಲ್ ನಟರಾಜ್
ನೀರಾವರಿ ಕೃಷ್ಣಾ ಭಾಗ್ಯ ಜಲ ನಿಗಮ 3ನೇ ಹಂತದಲ್ಲಿ 130 ಟಿಎಂಸಿ ನೀರು ಬಳಸಬೇಕು ಎಂಬ ಆದೇಶವಿದ್ದರೂ, ಅಫಿಡವಿಟ್ ಹಾಕಿಲ್ಲ. 2 ನೇ ಟ್ರಿಬ್ಯುನಲ್ ಬ್ರಿಜೇಶ್ ಕುಮಾರ್ ವರದಿ ಕೊಟ್ಟು 13 ವರ್ಷಗಳಾಯಿತು. 13 ವರ್ಷಗಳಿಂದ ಗೆಜೆಟ್ ಅಧಿಸೂಚನೆ ಆಗಿಲ್ಲ. ಇದು ಆಗದೇ ಆಲಮಟ್ಟಿ ಜಲಾಶಯದ ಎತ್ತರವನ್ನು 524 ಮೀಟರ್‌ಗೆ ಏರಿಸಲಾಗುವುದಿಲ್ಲ. ಈ ಬಗ್ಗೆ ಒತ್ತಾಯಿಸಲು ಸರ್ವ ಪಕ್ಷ ನಿಯೋಗ ಕರೆದೊಯ್ಯಲು ನಾವು ಸಿದ್ದರಿದ್ದೇವೆ. ಆದರೆ ಪ್ರಧಾನಿಗಳು ಭೇಟಿಗೆ ಅವಕಾಶವನ್ನೇ ನೀಡುವುದಿಲ್ಲ. ಮಹದಾಯಿ ಕುಡಿಯುವ ನೀರಿನ ಯೋಜನೆಗೆ ಅರಣ್ಯ ಮತ್ತು ಪರಿಸರದ ತೀರುವಳಿಯಾಗಬೇಕು. ಅವರು ಕೊಟ್ಟ ತಕ್ಷಣ ನಾವು ಕೆಲಸ ಪ್ರಾರಂಭ ಮಾಡುತ್ತೇವೆ. ಮಹದಾಯಿ, ಕೃಷ್ಣಾ ಮೇಲ್ದಂಡೆಗೂ ಸರ್ವ ಪಕ್ಷ ನಿಯೋಗ ಕರೆದೊಯ್ಯಲು ನಾವು ಸಿದ್ದರಿದ್ದೇವೆ ಎಂದರು.
ಇದನ್ನೂ ಓದಿ: Uttara Kannada News: ಯಲ್ಲಾಪುರದಲ್ಲಿ ಡಿ.16ರಂದು ʼವಿಶ್ವದರ್ಶನ ಸಂಭ್ರಮʼ ಕಾರ್ಯಕ್ರಮ
ಕೃಷ್ಣಾ ಮೇಲ್ದಂಡೆಗೆ 21 ಕೋಟಿ ರೂ.ಗಳ ಪರಿಷ್ಕೃತ ಅಂದಾಜು ಪಟ್ಟಿ. 5300 ಕೋಟಿ ರೂ.ಗಳನ್ನು ಕೇಂದ್ರ ಸರ್ಕಾರದ ಬಜೆಟ್‌ನಲ್ಲಿ ಘೋಷಣೆಯಾಗಿದೆ. ಇವತ್ತಿನವರೆಗೆ ಒಂದು ರೂ.ಬಿಡುಗಡೆಯಾಗಿಲ್ಲ. ಆದರೆ ಮತ್ತೊಂದೆಡೆ ಕೇಂದ್ರ ಹಣಕಾಸು ಮಂತ್ರಿಗಳು ಕರ್ನಾಟಕಕ್ಕೆ ಯಾವುದೇ ಅನುದಾನ ಬಾಕಿ ಇಲ್ಲ ಎನ್ನುತ್ತಾರೆ. ನಾವು ಅಧಿಸೂಚನೆ ಆಗುವವರೆಗೆ ಪುನರ್ವಸತಿ ಮತ್ತು ಪುನಶ್ಚೇತನ ಕಾರ್ಯವನ್ನು ಕೈಗೊಳ್ಳುತ್ತೇವೆ. ನಾವು ಅತಿ, ಅತ್ಯಂತ, ಹಿಂದುಳಿದ ತಾಲೂಕುಗಳನ್ನು ಅಭಿವೃದ್ಧಿ ಮಾಡಲು ಬದ್ಧರಿದ್ದೇವೆ ಎಂದರು.