Site icon Vistara News

CM Siddaramaiah: ಪಂಚರಾಜ್ಯ ಚುನಾವಣಾ ಕಣಕ್ಕೆ ಸಿದ್ದರಾಮಯ್ಯ ಎಂಟ್ರಿ, ಇಂದು ತೆಲಂಗಾಣದಲ್ಲಿ ಪ್ರಚಾರ

CM Siddaramaiah

ಬೆಂಗಳೂರು: ಪಂಚ ರಾಜ್ಯ ವಿಧಾನಸಭೆ ಚುನಾವಣಾ (Assembly election 2023) ಪ್ರಚಾರ ಕಣಕ್ಕೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಎಂಟ್ರಿ ಕೊಟ್ಟಿದ್ದಾರೆ. ಇಂದು ತೆಲಂಗಾಣದಲ್ಲಿ ʼಗ್ಯಾರಂಟಿ ಸಿಎಂ ಸಿದ್ದರಾಮಯ್ಯʼ ಅವರ ಚುನಾವಣಾ ಪ್ರಚಾರ (Telangana assembly election) ಆರಂಭವಾಗಲಿದೆ.

ಇಂದು ಇಡೀ ದಿನ ಸಿಎಂ ಸಿದ್ದರಾಮಯ್ಯ ತೆಲಂಗಾಣದಲ್ಲಿ ಕಾಂಗ್ರೆಸ್ (congress) ಅಭ್ಯರ್ಥಿಗಳ ಪರವಾಗಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ತೆಲಂಗಾಣದ ನಂತರ ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ರಾಜಸ್ಥಾನಗಳಲ್ಲಿ ಪ್ರಚಾರಕ್ಕೆ ಸಿದ್ದರಾಮಯ್ಯ ತೆರಳಲಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಸಿದ್ದರಾಮಯ್ಯ ಅವರಿಗೆ ಪಂಚ ರಾಜ್ಯ ಚುನಾವಣೆಯಲ್ಲಿ ಕೈ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಬರುವಂತೆ ಭಾರಿ ಬೇಡಿಕೆ ಇತ್ತು. ಈಗಾಗಲೇ ಸಿಎಂ ಸಿದ್ದರಾಮಯ್ಯಗೆ ರಾಜ್ಯ ಕಾಂಗ್ರೆಸ್ ಘಟಕಗಳು ಆಹ್ವಾನ ನೀಡಿವೆ.

ಅಹಿಂದ ನಾಯಕರಾಗಿರುವ ಸಿದ್ದರಾಮಯ್ಯ ಪ್ರಚಾರ ಮಾಡಿದರೆ OBC ಮತಗಳನ್ನು ಸೆಳೆಯಲು ಸಹಾಯವಾಗಲಿದೆ ಎಂಬುದು ಲೆಕ್ಕಾಚಾರ. ಜೊತೆಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ನೇರವಾಗಿ ಟೀಕೆ ಮಾಡುವ ಸಿದ್ದರಾಮಯ್ಯ ಸಾಕಷ್ಟು ಚಪ್ಪಾಳೆ ಗಿಟ್ಟಿಸುತ್ತಾರೆ.

ಈ ತಿಂಗಳಲ್ಲಿ ಸಾಧ್ಯವಾದಷ್ಟು ರಾಜ್ಯಗಳ ಚುನಾವಣಾ ಪ್ರಚಾರದಲ್ಲಿ ಸಿದ್ದರಾಮಯ್ಯ ಪಾಲ್ಗೊಳ್ಳಲಿದ್ದಾರೆ. ಅದರಲ್ಲೂ ಛತ್ತೀಸ್‌ಗಢ ಮತ್ತು ರಾಜಸ್ಥಾನಗಳಲ್ಲಿ ಒಬಿಸಿ ಮತಗಳು ಹೆಚ್ಚು ಇರುವುದರಿಂದ ಸಿಎಂಗೆ ಪ್ರಚಾರಕ್ಕೆ ಆಹ್ವಾನ ನೀಡಲಾಗಿದೆ. ಈಗಾಗಲೇ ಮಿಜೋರಾಂನಲ್ಲಿ ಮತದಾನ ಮುಗಿದಿದ್ದು, ಇನ್ನುಳಿದ ನಾಲ್ಕು ರಾಜ್ಯಗಳಲ್ಲಿ ಪ್ರಚಾರ ನಡೆಯುತ್ತಿದೆ.

ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಅಭೂತಪೂರ್ವವಾಗಿ ಕಾಂಗ್ರೆಸ್ ಜಯ ಗಳಿಸಿ ಅಧಿಕಾರದ ಚುಕ್ಕಾಣಿ ಹಿಡಿದಿತ್ತು. ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿ ರಾಷ್ಟ್ರೀಯ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದ ಸಿದ್ದರಾಮಯ್ಯ ಬಿಜೆಪಿಯ ಗೆಲುವಿನ ರಥವನ್ನು ಅಡ್ಡಗಟ್ಟಿದ ಹಿಂದುಳಿದ ಸಮುದಾಯದ ನಾಯಕ ಎನಿಸಿಕೊಂಡಿದ್ದಾರೆ. ಸ್ಟಾಲಿನ್‌, ಕೆಸಿಆರ್‌ ಮುಂತಾದ ದಕ್ಷಿಣ ಭಾರತದ ಬಿಜೆಪಿಯೇತರ ಸ್ಟಾರ್‌ ನಾಯಕರ ಸಾಲಿಗೆ ಸೇರಿದ್ದಾರೆ. ಹೀಗಾಗಿ ಸಿದ್ದರಾಮಯ್ಯನವರನ್ನು ತಮ್ಮ ತಮ್ಮ ರಾಜ್ಯಗಳಲ್ಲೂ ಬಳಸಿಕೊಂಡು ಮತಗಳಿಸಲು ಕಾಂಗ್ರೆಸ್ ಪ್ಲಾನ್ ಹಾಕಿದೆ.

ಇದನ್ನೂ ಓದಿ: Congress Guarantee : ಜನರ ಕೊಳ್ಳುವ ಶಕ್ತಿ ಹೆಚ್ಚಾದರೆ ಆರ್ಥಿಕತೆ-ಜಿಡಿಪಿ ಬೆಳವಣಿಗೆ: ಸಿಎಂ ಸಿದ್ದರಾಮಯ್ಯ

Exit mobile version