Site icon Vistara News

Sangolli Rayanna Statue: ನಮ್ಮವರೇ ರಾಯಣ್ಣನನ್ನು ಬ್ರಿಟೀಷರಿಗೆ ಹಿಡಿದುಕೊಟ್ಟರು; ಸಿದ್ದರಾಮಯ್ಯ

Sangolli Rayanna Statue

ಗೋಕಾಕ: ಗೆರಿಲ್ಲಾ ಹೋರಾಟಗಾರ ಸಂಗೊಳ್ಳಿ ರಾಯಣ್ಣ (Sangolli Rayanna Statue) ಬ್ರಿಟೀಷರಿಗೆ ಸಿಂಹಸ್ವಪ್ನ ಆಗಿದ್ದ. ಈಗ ಇನ್ನಷ್ಟು ಕಾಲ ಬದುಕಿದ್ದರೆ ಕಿತ್ತೂರಿನ ಮೇಲೆ ಬ್ರಿಟೀಷರ ಕಣ್ಣುಬೀಳಲು ಸಾಧ್ಯವಾಗುತ್ತಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು.

ಗೋಕಾಕದ ಕಳ್ಳಿಗುದ್ದಿ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ನಮ್ಮವರೇ ರಾಯಣ್ಣನನ್ನು ಬ್ರಿಟೀಷರಿಗೆ ಹಿಡಿದುಕೊಟ್ಟರು. ಇಲ್ಲದೇ ಹೋಗಿದ್ದರೆ ಇನ್ನಷ್ಟು ಕಾಲ ಕ್ರಾಂತಿಕಾರಿ ಗೆರಿಲ್ಲಾ ಹೋರಾಟ ಮುಂದುವರೆದು ಬ್ರಿಟೀಷರಿಗೆ ನೀರು ಕುಡಿಸುತ್ತಿದ್ದರು ಎಂದರು.

ಇದನ್ನೂ ಓದಿ: SSLC Exam 3 Result 2024: ಎಸ್‌ಎಸ್‌ಎಲ್‌ಸಿ ಪರೀಕ್ಷೆ 3ರ ಫಲಿತಾಂಶ ಪ್ರಕಟ; ಮರುಎಣಿಕೆ, ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಆನ್‌ಲೈನ್‌ನಲ್ಲಷ್ಟೆ ಅವಕಾಶ

ರಾಯಣ್ಣನ ದೇಶಪ್ರೇಮ, ಜನಪ್ರೇಮವನ್ನು ಶಾಶ್ವತಗೊಳಿಸುವ ಉದ್ದೇಶದಿಂದ ರಾಯಣ್ಣನ ಜನ್ಮಸ್ಥಳ ಸಂಗೊಳ್ಳಿಯಲ್ಲಿ ಸೈನಿಕ ಶಾಲೆ ಆರಂಭಿಸಿದ್ದೇವೆ. ನೀವೆಲ್ಲಾ ಸಂಗೊಳ್ಳಿಗೆ ಭೇಟಿ ನೀಡಿ ಎಂದು ಕರೆ ನೀಡಿದರು.

ಇದನ್ನೂ ಓದಿ: Job Alert: ಭಾರತ್‌ ಅರ್ಥ್‌ ಮೂವರ್ಸ್‌ ಲಿಮಿಟೆಡ್‌ನಲ್ಲಿದೆ ಉದ್ಯೋಗಾವಕಾಶ; ಐಟಿಐ, ಡಿಪ್ಲೋಮಾ ಪಾಸಾದವರು ಅರ್ಜಿ ಸಲ್ಲಿಸಿ

ಈ ಸಂದರ್ಭದಲ್ಲಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ಸತೀಶ್ ಜಾರಕಿಹೊಳಿ, ಮುಖ್ಯಸಚೇತಕ ಅಶೋಕ್ ಪಟ್ಟಣ್, ಕರ್ನಾಟಕ ಪ್ರದೇಶ ಕುರುಬರ ಸಂಘದ ಮಾಜಿ ರಾಜ್ಯಾಧ್ಯಕ್ಷ ಡಾ. ಸಣ್ಣಕ್ಕಿ ಉಪಸ್ಥಿತರಿದ್ದರು.

Exit mobile version