Site icon Vistara News

Siddaramaiah: ರಾಯಚೂರಿನಲ್ಲಿ ಏಮ್ಸ್‌ ಸ್ಥಾಪಿಸಿ; ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಆಗ್ರಹ

CM Siddaramaih

#image_title

ಬೆಂಗಳೂರು: ರಾಯಚೂರಿನಲ್ಲಿ ಏಮ್ಸ್‌ (All India Institute of Medical Sciences) ಸ್ಥಾಪಿಸುವಂತೆ ಒತ್ತಾಯಿಸಿ ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್‌ ಮಾಂಡವೀಯ ಅವರಿಗೆ ಸಿಎಂ ಸಿದ್ದರಾಮಯ್ಯ ಅವರು ಪತ್ರ ಬರೆದಿದ್ದಾರೆ. ರಾಯಚೂರಿನಲ್ಲಿ ಆರೋಗ್ಯ, ಶಿಕ್ಷಣದ ಮಟ್ಟ ಮತ್ತು ತಲಾ ಆದಾಯವು ಇತರ ಪ್ರದೇಶಗಳಿಗಿಂತ ಕಡಿಮೆ ಇದೆ. ಹವಾಗುಣ ಹಾಗೂ ಭೌಗೋಳಿಕವಾಗಿಯೂ ಪ್ರತಿಕೂಲ ವಾತಾವರಣವಿದೆ. ಈ ಎಲ್ಲ ಕಾರಣಗಳಿಂದಾಗಿ ಜಿಲ್ಲೆಯಲ್ಲಿ ಅತ್ಯಾಧುನಿಕ ವೈದ್ಯಕೀಯ ಸೌಲಭ್ಯ ಅಗತ್ಯವಿದ್ದು, ಇದಕ್ಕಾಗಿ ಏಮ್ಸ್‌ ಸ್ಥಾಪಿಸಬೇಕು ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಒತ್ತಾಯಿಸಿದ್ದಾರೆ.

ಏಮ್ಸ್‌ ಸ್ಥಾಪನೆಯಿಂದ ರಾಯಚೂರು ಭಾಗದಲ್ಲಿ ವಿಶ್ವದರ್ಜೆಯ ವೈದ್ಯಕೀಯ ಸೌಲಭ್ಯ ಒದಗಿಸಿದಂತಾಗುತ್ತದೆ ಎಂದು ಪತ್ರದಲ್ಲಿ ತಿಳಿಸಿರುವ ಸಿಎಂ, ಏಮ್ಸ್‌ ಸ್ಥಾಪನೆಗೆ ಈ ಭಾಗದ ಜನತೆ ಹಾಗೂ ಜನಪ್ರತಿನಿಧಿಗಳ ಬೇಡಿಕೆ ಹೆಚ್ಚುತ್ತಿದೆ. ಕಲ್ಯಾಣ ಕರ್ನಾಟಕದ ಅಭಿವೃದ್ಧಿ ನಮ್ಮ ಅತ್ಯಾದ್ಯತೆಯ ವಿಷಯವಾಗಿದೆ. ಆದ್ದರಿಂದ ಸಂಬಂಧಿಸಿದವರಿಗೆ ಈ ಕುರಿತು ಕ್ರಮ ವಹಿಸಲು ಸೂಚನೆ ನೀಡಬೇಕು ಎಂದು ಕೋರಿದ್ದಾರೆ.

ಇದನ್ನೂ ಓದಿ | Rice Politics: ತೆಲಂಗಾಣದಲ್ಲೂ ಅಕ್ಕಿ ಇಲ್ವಂತೆ; 7-8 ಕೆಜಿಗೆ ಇಳಿಯುತ್ತಾ ಅನ್ನಭಾಗ್ಯ?

ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರೂ ಆದ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಎಸ್. ಭೋಸರಾಜು ಅವರು ರಾಯಚೂರಿನಲ್ಲಿ ಏಮ್ಸ್‌ ಸ್ಥಾಪಿಸುವ ಬಗ್ಗೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಇತ್ತೀಚೆಗೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದರು. ಅದರಂತೆ ಮುಖ್ಯಮಂತ್ರಿಯವರು ಕೇಂದ್ರ ಸಚಿವರಿಗೆ ಪತ್ರ ಬರೆದಿದ್ದಾರೆ.

Exit mobile version