Site icon Vistara News

NSE Exam: ಎನ್‌ಎಸ್‌ಇ ಪರೀಕ್ಷೆ ಕನ್ನಡದಲ್ಲಿ ನಡೆಸಲು ಕ್ರಮ ಕೈಗೊಳ್ಳಿ; ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ

PM Narendra Modi and Siddaramaiah

ಬೆಂಗಳೂರು: ರಾಷ್ಟ್ರ ಮಟ್ಟದ ಪರೀಕ್ಷೆಗಳಲ್ಲಿ ಕನ್ನಡ ಸೇರ್ಪಡೆಯಿಂದ ಕರ್ನಾಟಕದ ವಿದ್ಯಾರ್ಥಿಗಳಿಗೆ ಹೆಚ್ಚಿನ ಪರೀಕ್ಷೆಗಳನ್ನು ತೆಗೆದುಕೊಳ್ಳಲು ಅನುಕೂಲವಾಗಲಿದೆ. ಇದರಿಂದ ವೈಜ್ಞಾನಿಕ ಅನ್ವೇಷಣೆಗಳಲ್ಲಿ ತೊಡಗಲು ಹೆಚ್ಚಿನ ಅವಕಾಶಗಳು ಸಿಗುತ್ತವೆ. ಹೀಗಾಗಿ ದೇಶದ ಅತ್ಯಂತ ಪ್ರತಿಷ್ಠಿತ ಪರೀಕ್ಷೆಗಳಲ್ಲಿ ಒಂದಾದ ರಾಷ್ಟ್ರೀಯ ಪ್ರಮಾಣಿತ ಪರೀಕ್ಷೆಯನ್ನು (National Standard Examination (NSE)) ಕನ್ನಡದಲ್ಲಿ ಬರೆಯಲು ಅವಕಾಶ ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ಸಿಎಂ ಸಿದ್ದರಾಮಯ್ಯ ಅವರು, ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯ, ಇಸ್ರೋ ಮತ್ತು ಇತರ ಪ್ರತಿನಿಧಿಗಳೊಂದಿಗೆ ಪರಮಾಣು ಶಕ್ತಿ ಇಲಾಖೆಯಿಂದ ರಚಿಸಲಾದ ಸ್ಟೀರಿಂಗ್ ಕಮಿಟಿ ಮೇಲ್ವಿಚಾರಣೆಯಲ್ಲಿ ಭಾರತೀಯ ಭೌತಶಾಸ್ತ್ರ ಶಿಕ್ಷಕರ ಸಂಘವು (IAPT) ರಾಷ್ಟ್ರೀಯ ಪ್ರಮಾಣಿತ ಪರೀಕ್ಷೆ (NSE) ನಡೆಸಿದೆ.

ಅಂತಾರಾಷ್ಟ್ರೀಯ ಒಲಿಂಪಿಯಾಡ್‌ಗಳಲ್ಲಿ ದೇಶವನ್ನು ಪ್ರತಿನಿಧಿಸಲು ಪ್ರತಿಭಾನ್ವಿತರನ್ನು ಆಯ್ಕೆ ಮಾಡುವ ಎನ್‌ಎಸ್‌ಇ ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರ ಮತ್ತು ಖಗೋಳಶಾಸ್ತ್ರ ವಿಷಯ ಪರೀಕ್ಷೆಗಳಲ್ಲಿ ಕನ್ನಡವನ್ನು ಸೇರ್ಪಡೆ ಮಾಡದಿರುವುದು ನಿರಾಶಾದಾಯಕವಾಗಿದೆ. ನಮ್ಮ ಸಂವಿಧಾನದ ಎಂಟನೇ ಶೆಡ್ಯೂಲ್‌ನಲ್ಲಿ ಪಟ್ಟಿ ಮಾಡಲಾದ ಆರು ಶಾಸ್ತ್ರೀಯ ಭಾಷೆಗಳಲ್ಲಿ ಕನ್ನಡವೂ ಒಂದು. ಹೀಗಾಗಿ ರಾಷ್ಟ್ರೀಯ ಪ್ರಮಾಣಿತ ಪರೀಕ್ಷೆಯನ್ನು (ಎನ್‌ಎಸ್‌ಇ) ಕನ್ನಡದಲ್ಲಿ ನಡೆಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕೋರಿದ್ದಾರೆ.

ಇದನ್ನೂ ಓದಿ | Rain News : ಬರ ತಾಲೂಕು ಘೋಷಣೆ 1 ವಾರ ಮುಂದಕ್ಕೆ; 134 ತಾಲೂಕಲ್ಲಿ ಮತ್ತೆ ಜಂಟಿ ಸಮೀಕ್ಷೆ!

ಸರ್ಕಾರಿ ಬಸ್‌ ಮೆಟ್ಟಿಲಿಗೆ ನಮಸ್ಕರಿಸಿದ್ದ ಮಹಿಳೆಯ ಜತೆ ಸಿದ್ದರಾಮಯ್ಯ ಅನಿರೀಕ್ಷಿತ ಭೇಟಿ

ಬೆಂಗಳೂರು: ಮಹಿಳೆಯರಿಗೆ ಉಚಿತ ಪ್ರಯಾಣ (Free Bus Service) ಸೌಲಭ್ಯ ನೀಡುವ “ಶಕ್ತಿ” ಯೋಜನೆಗೆ ಜೂನ್‌ 11ರಂದು ಚಾಲನೆ ಸಿಕ್ಕಿತ್ತು. ಅಂದು ಬೆಳಗಾವಿಯಲ್ಲಿ “ಶಕ್ತಿ” ಯೋಜನೆಯ ಪ್ರಯೋಜನ ಪಡೆಯಲು ಉತ್ಸುಕರಾಗಿದ್ದ ಮಹಿಳೆಯೊಬ್ಬರು ಕೆಎಸ್‌ಆರ್‌ಟಿಸಿ (KSRTC Bus) ಬಸ್‌ನ ಮೆಟ್ಟಿಲಿಗೆ ನಮಸ್ಕರಿಸಿ ಪ್ರಯಾಣ ಬೆಳೆಸಿದ್ದರು. ಈಗ ಆಕೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮವೊಂದರಲ್ಲಿ ಭೇಟಿಯಾಗಿದ್ದಾರೆ. ಅದರ ಖುಷಿಯನ್ನು ಸೋಷಿಯಲ್‌ ಮೀಡಿಯಾ (Social Media X) “ಎಕ್ಸ್”‌ ನಲ್ಲಿ ಪೋಸ್ಟ್‌ ಮಾಡಿ ಹಂಚಿಕೊಂಡಿದ್ದಾರೆ.

ಜೂನ್‌ 11ರಂದು ರಾಜ್ಯಾದ್ಯಂತ ಶಕ್ತಿ ಯೋಜನೆಗೆ ಚಾಲನೆ ಸಿಗುತ್ತಿದ್ದಂತೆ ಮಹಿಳೆಯರು ಉತ್ಸಾಹದಿಂದ ಸಂಚಾರ ಮಾಡಿದ್ದರು. ಈ ವೇಳೆ ಬೆಳಗಾವಿ ಜಿಲ್ಲೆಯ ಸಂಗೊಳ್ಳಿಯ ಸಂಗವ್ವ ಎಂಬ ಮಹಿಳೆಯು ಕೆಎಸ್‌ಆರ್‌ಟಿಸಿ ಬಸ್‌ನ ಮೆಟ್ಟಿಲುಗಳಿಗೆ ನಮಸ್ಕರಿಸಿ ಒಳಗೆ ಕಾಲಿಟ್ಟಿದ್ದರು. ಇದು ಸೋಷಿಯಲ್‌ ಮೀಡಿಯಾದಲ್ಲಿ ಸಾಕಷ್ಟು ವೈರಲ್‌ ಆಗಿತ್ತು. ಅಲ್ಲದೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನವನ್ನೂ ಸೆಳೆದಿತ್ತು.

ಇದನ್ನೂ ಓದಿ | Ramesh Jarakiholi : ಆಪರೇಷನ್‌ ಹಸ್ತ ಮಹಾನಾಯಕನ ಬೋಗಸ್‌ ಕಥೆ; ಡಿಕೆಶಿ ಮೇಲೆ ಸಾಹುಕಾರ್‌ ಪ್ರಹಾರ, ಸಿದ್ದು ಮೇಲೆ ಅಕ್ಕರೆ

“ಎಕ್ಸ್‌”ನಲ್ಲಿ ಪೋಸ್ಟ್‌ ಮಾಡಿ ಸಂತಸ ಹಂಚಿಕೊಂಡ ಸಿಎಂ

ಸಂಗವ್ವ ಅವರನ್ನು ಕಲರ್ಸ್‌ ಕನ್ನಡ ವಾಹಿನಿಯಲ್ಲಿ ಭೇಟಿಯಾದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತಸವನ್ನು ಹಂಚಿಕೊಂಡಿದ್ದಾರೆ. ಅಲ್ಲದೆ, ಈ ಬಗ್ಗೆ ಅವರು ಪೋಸ್ಟ್‌ ಮಾಡಿ, ಮೊದಲ ದಿನ ಸಂಗವ್ವ ಅವರು ಪ್ರೀತಿಪೂರ್ವಕವಾಗಿ ನಡೆದುಕೊಂಡ ನಡೆಯಿಂದ “ಶಕ್ತಿ” ಯೋಜನೆಯ ಯಶಸ್ಸು ಕಾಣಲಿದೆ ಎಂಬುದು ಗೊತ್ತಾಗಿ ಹೋಗಿತ್ತು ಎಂದು ಸಹ ಹೇಳಿಕೊಂಡಿದ್ದಾರೆ.

ಸಿಎಂ ಪೋಸ್ಟ್‌ನಲ್ಲೇನಿದೆ?

“ಶಕ್ತಿ ಯೋಜನೆ ಜಾರಿಯಾದ ದಿನ ಅತ್ಯಂತ ಸಂತಸದಿಂದ ಸರ್ಕಾರಿ ಬಸ್ಸಿನ ಮೆಟ್ಟಿಲುಗಳಿಗೆ ನಮಸ್ಕರಿಸಿ ಪ್ರಯಾಣ ಬೆಳೆಸಿದ್ದ ಬೆಳಗಾವಿ ಜಿಲ್ಲೆಯ ಸಂಗೊಳ್ಳಿಯ ಸಂಗವ್ವ ಅವರನ್ನು ಇಂದು ಕಲರ್ಸ್ ಕನ್ನಡದ ಅನುಬಂಧ ಅವಾರ್ಡ್ ಕಾರ್ಯಕ್ರಮದಲ್ಲಿ ಭೇಟಿಯಾದದ್ದು ನನ್ನಲ್ಲಿ ಅಚ್ಚರಿ ಮತ್ತು ಖುಷಿಯ ಜತೆಗೆ ಸಾರ್ಥಕ್ಯದ ಭಾವ ಮೂಡಿಸಿತು.

ಇದನ್ನೂ ಓದಿ: Gold Rate Today: ಚಿನ್ನದ ಬೆಲೆ ತುಸು ಏರಿಕೆ, ಬೆಂಗಳೂರಿನಲ್ಲಿ ದರ ಹೀಗಿದೆ

ಮಹಿಳೆಯರ ಸಬಲೀಕರಣಕ್ಕೆ ನಾವು ಬೆಂಬಲವಾಗಿ ನಿಲ್ಲಬೇಕು ಎನ್ನುವ ಕಾಳಜಿಯಿಂದ ಜಾರಿಗೆ ತಂದಿರುವ ಶಕ್ತಿ ಯೋಜನೆಯ ಮೊದಲ ದಿನವೇ ಸಂಗವ್ವ ಅವರಿಂದ ದೊರೆತ ಪ್ರತಿಕ್ರಿಯೆ ಕಂಡು ನಮ್ಮ ಯೋಜನೆ ನೂರಕ್ಕೆ ನೂರರಷ್ಟು ಯಶಸ್ವಿಯಾಗಲಿದೆ ಎಂಬ ಭರವಸೆ ನನ್ನಲ್ಲಿ ಮೂಡಿತ್ತು. ಈ ದಿನ ಇಂಥದ್ದೊಂದು ಭೇಟಿಯ ಅವಕಾಶ ಕಲ್ಪಿಸಿದ ಕಲರ್ಸ್‌ ಕನ್ನಡ (@ColorsKannada) ವಾಹಿನಿಗೆ ಧನ್ಯವಾದಗಳು” ಎಂದು ಸಿಎಂ ಸಿದ್ದರಾಮಯ್ಯ ಬರೆದುಕೊಂಡಿದ್ದಾರೆ.

Exit mobile version