Site icon Vistara News

Yogi Adityanath | ಸೆ.1ರಂದು ಕರ್ನಾಟಕಕ್ಕೆ ಆಗಮಿಸಲಿರುವ ಯೋಗಿ ಆದಿತ್ಯನಾಥ್‌, ಕಾರಣ ಏನು?

Yogi Adityanath waves to media in Mandya

ಬೆಂಗಳೂರು: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ (Yogi Adityanath) ಅವರು ಸೆಪ್ಟಂಬರ್‌ ೧ರಂದು ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ಗುರುವಾರ ಬೆಳಗ್ಗೆ ೧೧.೩೦ಕ್ಕೆ ಬೆಂಗಳೂರಿನ ಎಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ಆಗಮಿಸುವ ಅವರು, ಕೆಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.

ಬೆಳಗ್ಗೆ ೧೧.೪೫ಕ್ಕೆ ನೆಲಮಂಗಲ ಹೆಲಿಪ್ಯಾಡ್‌ಗೆ ಆಗಮಿಸುವ ಯೋಗಿ, ೧೧.೫೫ಕ್ಕೆ ಕಾರಿನ ಮೂಲಕ ಎಸ್‌ಡಿಎಂ ಇನ್‌ಸ್ಟಿಟ್ಯೂಟ್‌ ಆಫ್‌ ನ್ಯಾಚುರೋಪತಿ & ಯೋಗಿಕ್‌ ಸೈನ್ಸಸ್‌ ಕ್ಯಾಪಸ್‌ಗೆ ತೆರಳಲಿದ್ದಾರೆ. ಸುಮಾರು ೧೫ ನಿಮಿಷ ಕ್ಯಾಂಪಸ್‌ ವೀಕ್ಷಿಸಲಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ, ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರ ಜತೆ ಮಾತುಕತೆ ನಡೆಸಲಿದ್ದಾರೆ.

ಅಲ್ಲದೆ, ನೂತನವಾಗಿ ನಿರ್ಮಿಸಿರುವ ಪ್ರಕೃತಿ ಚಿಕಿತ್ಸಾ ಕೇಂದ್ರ “ಕ್ಷೇಮವನ”ದ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗವಹಿಸಲಿದ್ದಾರೆ. ಇದಾದ ಬಳಿಕ ಯೋಗಿ ಅವರು ಎಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ಆಗಮಿಸಿ ಉತ್ತರ ಪ್ರದೇಶಕ್ಕೆ ವಾಪಸಾಗಲಿದ್ದಾರೆ.

ಇದನ್ನೂ ಓದಿ | Gorakhpur Riots | ಯೋಗಿ ಆದಿತ್ಯನಾಥ್‌ಗೆ ಸುಪ್ರೀಂ ಕೋರ್ಟ್ ಬಿಗ್‌ ರಿಲೀಫ್‌, ಯಾವುದಿದು ಪ್ರಕರಣ?

Exit mobile version