CM's Bengaluru City Rounds: ರಾಜಕಾಲುವೆ ಒತ್ತುವರಿ ಯಾರೇ ಮಾಡಿದ್ರೂ ಮುಲಾಜಿಲ್ಲದೆ ತೆರವು: ಸಿಎಂ ಎಚ್ಚರಿಕೆ - Vistara News

ಕರ್ನಾಟಕ

CM’s Bengaluru City Rounds: ರಾಜಕಾಲುವೆ ಒತ್ತುವರಿ ಯಾರೇ ಮಾಡಿದ್ರೂ ಮುಲಾಜಿಲ್ಲದೆ ತೆರವು: ಸಿಎಂ ಎಚ್ಚರಿಕೆ

CM’s Bengaluru City Rounds: ಬೆಂಗಳೂರಿನ ವಿವಿಧೆಡೆ ಸಿಎಂ ಸಿದ್ದರಾಮಯ್ಯ ಅವರು ಬುಧವಾರ ಭೇಟಿ ನೀಡಿ, ಅಭಿವೃದ್ಧಿ ಕಾಮಗಾರಿ ಮತ್ತು ಮಳೆಯಿಂದ ಸಮಸ್ಯೆಗಳಿಗೆ ಒಳಗಾದ ಪ್ರದೇಶಗಳನ್ನು ಪರಿಶೀಲನೆ ನಡೆಸಿದರು.

VISTARANEWS.COM


on

Hike in Seed Price
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ರಾಜಧಾನಿಯಲ್ಲಿ ಈ ಹಿಂದೆ ಸುಮಾರು 400 ಕೆರೆಗಳು ಇದ್ದವು. ಆದರೆ, ಒತ್ತುವರಿಯಿಂದ ಅನೇಕ ಕೆರೆಗಳು ಕಣ್ಮರೆಯಾಗಿವೆ. ಅವುಗಳನ್ನು ತೆರವು ಮಾಡಲು ಸೂಚನೆ ಕೊಟ್ಟಿದ್ದೇವೆ. ರಾಜಕಾಲುವೆ ತೆರವುಗೊಳಿಸುವಲ್ಲಿ ಯಾವುದೇ ರಾಜಿ ಇಲ್ಲ. ಯಾವ ಪ್ರಬಲ ರಾಜಕಾರಣಿಯೇ ಇರಲಿ, ಬೇರೆ ಯಾರೇ ಇರಲಿ ಮುಲಾಜಿಲ್ಲದೆ ತೆರವುಗೊಳಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ (CM’s Bengaluru City Rounds) ಖಡಕ್‌ ಎಚ್ಚರಿಕೆ ನೀಡಿದರು.

ನಗರದ ವಿವಿಧೆಡೆ ಸಿಎಂ ಸಿದ್ದರಾಮಯ್ಯ ಅವರು ಭೇಟಿ ನೀಡಿ, ಅಭಿವೃದ್ಧಿ ಕಾಮಗಾರಿ ಮತ್ತು ಮಳೆಯಿಂದ ಸಮಸ್ಯೆಗಳಿಗೆ ಒಳಗಾದ ಪ್ರದೇಶಗಳನ್ನು ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಅವರು, ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ರಾಮಲಿಂಗಾರೆಡ್ಡಿ ಬಿಡಿಎ ಅಧ್ಯಕ್ಷರು, ಆಯುಕ್ತರು ಸೇರಿ ಅಧಿಕಾರಿಗಳ ತಂಡದ ಜೊತೆ ಅನೇಕ ಪ್ರದೇಶಗಳಿಗೆ ಭೇಟಿ ನೀಡಿದೆವು. ಜೂನ್ ತಿಂಗಳಿನಿಂದ ಮುಂಗಾರು ಪ್ರಾರಂಭವಾಗಲಿದೆ. ವಾಡಿಕೆ ಮಳೆಗಿಂತ ಹೆಚ್ಚು ಮಳೆಯಾಗಿ ಪ್ರವಾಹ ಉಂಟಾಗಿದೆ ಎಂದು ವರದಿಯಾಗಿರುವ ಹಿನ್ನೆಲೆಯಲ್ಲಿ ಸಿಟಿ ರೌಂಡ್ಸ್ ನಡೆಸಿ, ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಿದ್ದೇವೆ ಎಂದು ಹೇಳಿದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರೂ ಯಲಹಂಕಕ್ಕೆ ಭೇಟಿ ನೀಡಿದ್ದಾರೆ. ಅಲ್ಲಿ 20 ಮನೆಗಳಿಗೆ ನೀರು ನುಗ್ಗಿದೆ ಎಂದು ವರದಿಯಾಗಿತ್ತು. ಯಲಹಂಕ ಕೆರೆಗೆ ನೀರು ಹೋಗುವಂತೆ ಮಾಡಲು ಅರಣ್ಯ ಇಲಾಖೆಯ ಅಧಿಕಾರಿಗಳು ಬಿಬಿಎಂಪಿಗೆ ನೀರು ಹೋಗಲು ಅನುವು ಮಾಡಿಕೊಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಗಾಳಿ ಆಂಜನೇಯ ದೇವಾಲಯದ ಬಳಿ ಮಳೆ ಜಾಸ್ತಿಯಾದಾಗ ನೀರು ಹರಿಯಲು ಎತ್ತರ ಸಾಲಲ್ಲ, ಹೂಳು ತುಂಬಿತ್ತು. ಪರ್ಯಾಯವಾಗಿ ಇನ್ನೊಂದು ಮೋರಿ ನಿರ್ಮಿಸಲು. ಸೂಚನೆ ನೀಡಲಾಗಿದೆ. ಬೆಂಗಳೂರು ನಗರದಲ್ಲಿ 860 ಕಿಮೀ ರಾಜಕಾಲುವೆ ಇದೆ. ನಾನು ಹಿಂದೆ ಮುಖ್ಯಮಂತ್ರಿಯಾಗಿದ್ದಾಗ 491 ಕಿಮೀ ರಾಜಕಾಲುವೆಯನ್ನು ತೆರವು ಮಾಡಲಾಗಿತ್ತು ಎಂದು ಹೇಳಿದರು.

ಇದನ್ನೂ ಓದಿ | Phone tapping: ಗೃಹ ಸಚಿವರಿಗೆ ಅಶೋಕ್‌ ರೈಟಿಂಗ್‌ನಲ್ಲಿ ಕಂಪ್ಲೇಂಟ್‌ ಕೊಡಲಿ; ಫೋನ್‌ ಕದ್ದಾಲಿಕೆ ಆರೋಪಕ್ಕೆ ಡಿಕೆಶಿ ತಿರುಗೇಟು

ಹಿಂದಿನ ಸರ್ಕಾರ ಜನವರಿ 2023 ರಲ್ಲಿ 193 ಕಿಮೀ ತೆರವು ಮಾಡಲು ಕ್ರಮ ತೆಗೆದುಕೊಂಡರು. ಮೊದಲೇ ಈ ಕೆಲಸ ಮಾಡಿದ್ದರೆ ಸಮಸ್ಯೆ ಇರುತ್ತಿರಲಿಲ್ಲ. 1800 ಕೋಟಿ ರೋ. ಇದಕ್ಕೆ ವೆಚ್ಚವಾಗುತ್ತಿದೆ. 174 ಕಿಮೀ ಉಳಿದಿದೆ. ವಿಶ್ವ ಬ್ಯಾಂಕ್ ಸುಮಾರು 2000 ಕೋಟಿ ರೂಪಾಯಿ ನೀಡಲಿದೆ. 12 ಪ್ರಕರಣ ಸಿವಿಲ್ ನ್ಯಾಯಾಲಯದಲ್ಲಿವೆ. ವಕೀಲರು ಇದಕ್ಕೆ ಹಾಜರಾಗುತ್ತಿದ್ದು, ಅಗತ್ಯ ಬಿದ್ದರೆ ವಿಶೇಷ ವಕೀಲರನ್ನು ನೇಮಿಸಿ ಪ್ರಕರಣ ಇತ್ಯರ್ಥ ಗೊಳಿಸಲಾಗುವುದು. 12.15 ಕಿಮೀ ನ್ಯಾಯಾಲಯದಲ್ಲಿ ಪ್ರಕರಣವಿದೆ ಎಂದು ತಿಳಿಸಿದರು.

ವಿಳಂಬವಾಗಿರುವ ಕಾಮಗಾರಿಗಳನ್ನು ತ್ವರಿತಗೊಳಿಸಬೇಕು, ಹೂಳೆತ್ತಬೇಕು, ಒಣಗಿರುವ ಕೊಂಬೆಗಳನ್ನು ಕತ್ತರಿಸಲು ಸೂಚನೆ ನೀಡಲಾಗಿದೆ. ಪಾದಚಾರಿ ಮಾರ್ಗಗಳನ್ನು ಸರಿಪಡಿಸಬೇಕು. ರಾಜಕಾಲುವೆಗೆ ಕಸ ಹಾಕುವುದನ್ನು ತಡೆಗಟ್ಟಲು ಸೂಚನೆ ನೀಡಲಾಗಿದೆ. ಮುಂಗಾರು ಪ್ರಾರಂಭವಾಗುವ ಮುಂಚಿತವಾಗಿ ರಾಜಕಾಲುವೆಗಳ ಹೂಳು ತೆಗೆಯಬೇಕು ಎಂದು ತಿಳಿಸಿದರು.

ಒಂದು ತಿಂಗಳಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಿ

ಬೆಂಗಳೂರು ನಗರದಲ್ಲಿ ವಾರ್ಡ್ ರಸ್ತೆಗಳಲ್ಲಿ 5500 ಗುಂಡಿಗಳು ಬಿದ್ದಿದ್ದು, ಅವುಗಳನ್ನು ಮುಚ್ಚಬೇಕು, ಆರ್ಟೀರಿಯಲ್ ಮತ್ತು ಸಬ್ ಆರ್ಟೀರಿಯಲ್ ರಸ್ತೆಗಳಲ್ಲಿ 557 ಗುಂಡಿಗಳಿವೆ. ಈ ತಿಂಗಳಲ್ಲಿ ಭರ್ತಿ ಮಾಡಬೇಕು ಎಂದು ಸೂಚಿಸಲಾಗಿದೆ. ಸಿಲ್ಕ್ ಬೋರ್ಡ್ ಬಳಿ ಮೆಟ್ರೋ ನಿರ್ಮಿಸಿರುವ ರಸ್ತೆಯನ್ನು ಅಗಲೀಕರಿಸಲು ಸೂಚನೆ ನೀಡಲಾಗಿದೆ. ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಮಡಿವಾಳ ಕೆರೆಯ ಬಳಿ ಇನ್ನೊಂದು ಚರಂಡಿ ನಿರ್ಮಿಸಲು ಸೂಚಿಸಲಾಗಿದೆ ಎಂದು ಸಿಎಂ ತಿಳಿಸಿದರು.

ಈಜಿಪುರದಲ್ಲಿ ಬಿಬಿಎಂಪಿ ವತಿಯಿಂದ ಮೇಲ್ಸೇತುವೆ ನಿರ್ಮಾಣ ನನೆಗುದಿಗೆ ಬಿದ್ದಿದ್ದು, ಗುತ್ತಿಗೆದಾರರು ವಿಳಂಬ ಮಾಡುತ್ತಿದ್ದಾರೆ. ಇವರ ಗುತ್ತಿಗೆ ರದ್ದು ಮಾಡಿ ಹೊಸಬರಿಗೆ ಕೊಡಲು ಸೂಚನೆ ನೀಡಲಾಗಿದೆ. ಮುಂಗಾರು ಮಳೆಗೂ ಮುನ್ನ ಪ್ರವಾಹ ಉಂಟಾಗಬಾರದೆಂದು ಚುನಾವಣಾ ಆಯೋಗದಿಂದ ಅನುಮತಿ ಪಡೆದು 7-8 ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಲಾಗಿದೆ.

ರಸ್ತೆ ಹಾಗೂ ಗುಂಡಿಗಳನ್ನು ನಿರ್ವಹಿಸಲು ಒಂದು ಶಾಶ್ವತ ನಿರ್ವಹಣಾ ವ್ಯವಸ್ಥೆ ರೂಪಿಸಲು ಸೂಚನೆ ನೀಡಲಾಗಿದೆ. ಗುಂಡಿಗಳು ಬಿದ್ದ ಹಾಗೆಯೇ ಕೂಡಲೇ ದುರಸ್ತಿ ಮಾಡಬೇಕು ಎಂದು ಸೂಚನೆ ನೀಡಲಾಗಿದೆ. ಬಿಡಿಎನಲ್ಲಿಯೂ ಈ ರೀತಿ ವ್ಯವಸ್ಥೆ ರೂಪಿಸಲು ಸೂಚಿಸಲಾಗಿದೆ ಎಂದು ಸಿಎಂ ಹೇಳಿದರು.

ಮಳೆಗಾಲ ನಿರ್ವಹಣೆಗೆ ಸಜ್ಜಾಗಲು ಸೂಚನೆ

ಮಳೆಗಾಲ ನಿರ್ವಹಣೆಗೆ ಎಲ್ಲಾ ರೀತಿಯಲ್ಲಿಯೂ ಸಜ್ಜಾಗಬೇಕು ಎಂದು ಸೂಚಿಸಲಾಗಿದೆ. ಯಾವುದೇ ಕಾರಣಕ್ಕೂ ಮಳೆ ಬಂದಾಗ ನೀರು ನುಗ್ಗಿದರೆ ಎಂಜಿನಿಯರ್‌ಗಳನ್ನೇ ಹೊಣೆಗಾರರನ್ನಾಗಿಸಲಾಗುವುದು ಎಂದು ಸಿಎಂ ಎಚ್ಚರಿಕೆ ನೀಡಿದರು.

ರಾಜಕಾಲುವೆ ತೆರವು

ರಾಜಕಾಲುವೆ ಒತ್ತುವರಿಯಾಗಿದ್ದರೆ ಎಷ್ಟೇ ಪ್ರಭಾವಿಗಳಾಗಿದ್ದರೂ ತೆರವು ಗೊಳಿಸಲು ಸೂಚಿಸಲಾಗಿದೆ. ಬೆಂಗಳೂರಿನಲ್ಲಿ 400 ಕೆರೆಗಳಿದ್ದವು. ಅನೇಕ ಕೆರೆಗಳು ಹೂಳಿನಿಂದ ತುಂಬಿದೆ ಹಾಗೂ ಒತ್ತುವರಿಯಾಗಿವೆ. ಒತ್ತುವರಿ ತೆರವು ಮಾಡಿ ನೀರು ಹರಿಯಲು ಕಾಲುವೆ ನಿರ್ಮಾಣ ಮಾಡಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಜೂನ್‌ಗೆ ಮುಂಚೆಯೇ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಪ್ರವಾಹ ಸಂಬಂಧಿ ಸ್ಥಳಗಳನ್ನು ಮಾತ್ರ ಪರಿಶೀಲಿಸಲು ಚುನಾವಣಾ ಆಯೋಗ ಅನುಮತಿ ನೀಡಿದೆ, ಅದರಂತೆ ಪರಿಶೀಲಿಸಲಾಗಿದೆ. ಕೆರೆಗಳಿಂದ ತೆಗೆಯಲಾಗುವ ಹೂಳನ್ನು ಗುರುತು ಮಾಡಿರುವ ಸ್ಥಳಗಳಲ್ಲಿ (ಕ್ವಾರಿಗಳಿಗೆ) ಹಾಕಲಾಗುತ್ತಿದೆ ಎಂದರು. ಇನ್ನು ಬಿಬಿಎಂಪಿ ಚುನಾವಣೆ ಬಗ್ಗೆ ಲೋಕಸಭೆ ಫಲಿತಾಂಶದ ನಂತರ ಚಿಂತಿಸಲಾಗುವುದು ಎಂದರು.

ಸುಳ್ಳು ಹೇಳುತ್ತಾರೆ

ಸಿಎಂ , ಡಿಸಿಎಂ ಫೋಟೋ ಶೂಟ್ ಮಾಡಿಸಿಕೊಂಡಿದ್ದಾರೆ ಎಂದು ಬಿಜೆಪಿಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಆರ್. ಅಶೋಕ್ ಕೇವಲ ಸುಳ್ಳು ಹೇಳುತ್ತಾರೆ ಎಂದರು.

ಇದನ್ನೂ ಓದಿ | CM City Rounds: ವಿಜಯನಗರ ರಾಜಕಾಲುವೆ; ಈ ವರ್ಷದೊಳಗೆ ಪರಿಹರಿಸದಿದ್ದರೆ ಮುಖ್ಯ ಎಂಜಿನಿಯರ್‌ ಸಸ್ಪೆಂಡ್‌: ಸಿಎಂ ವಾರ್ನಿಂಗ್

ಫೋನ್ ಟ್ಯಾಪಿಂಗ್ ಮಾಡಿಲ್ಲ, ಮಾಡುವುದೂ ಇಲ್ಲ

ನಮ್ಮ ರಾಜಕೀಯ ಜೀವನದಲ್ಲಿ ಫೋನ್ ಟ್ಯಾಪಿಂಗ್ ಮಾಡಿಲ್ಲ, ಮಾಡುವುದೂ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿ ಅವರ ಹೇಳಿಕೆಗೆ ಮುಖ್ಯಮಂತ್ರಿಗಳು ಪ್ರತಿಕ್ರಿಯೆ ನೀಡಿದರು. ಪ್ರಜ್ವಲ್ ರೇವಣ್ಣ ಅವರ ಪ್ರಕರಣವನ್ನು ಮರೆಮಾಚಲು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ ಎಂದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

ಪ್ರಮುಖ ಸುದ್ದಿ

ಕರ್ನಾಟಕ ಸೇರಿ 16 ರಾಜ್ಯ, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌

VISTARANEWS.COM


on


ಕೇಂದ್ರ ಚುನಾವಣಾ ಆಯೋಗ 3 ನೇ ಹಂತದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ( ಎಸ್‌ಐಆರ್‌) ಘೋಷಣೆ ಮಾಡಿದೆ. ಇದರಲ್ಲಿ ಕರ್ನಾಟಕ ಸೇರಿದಂತೆ 16 ರಾಜ್ಯಗಳು ಮತ್ತು 3 ಕೇಂದ್ರಾಡಳಿತ ಪ್ರದೇಶಗಳು ಸೇರಿದ್ದು, ಮೇ 30ರಿಂದ ಎಸ್‌ಐಆರ್‌ ನಡೆಯಲಿದೆ.
ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ದೆಹಲಿ, ಹರಿಯಾಣ, ಪಂಜಾಬ್‌, ಚಂಡೀಗಢ, ಒಡಿಶಾ, ಮಿಜೋರಾಂ, ಸಿಕ್ಕಿಂ, ಮಣಿಪುರ, ಉತ್ತರಾಖಂಡ, ಅರುಣಾಚಲ ಪ್ರದೇಶ, ಮೇಘಾಲಯ, ಜಾರ್ಜಂಡ್‌, ನಾಗಾಲ್ಯಾಂಡ್‌, ತ್ರಿಪುರ, ದಾದರ್‌ ಮತ್ತು ನಗರ ಹವೇಲಿ, ದಮನ್‌ ಮತ್ತು ದಿಯುಗಳಲ್ಲಿ 3 ನೇ ಹಂತದಲ್ಲಿ ಎಸ್‌ಐಆರ್‌ ನಡೆಯಲಿದೆ.
3ನೇ ಹಂತದ ಎಸ್‌ಐಆರ್‌ನಲ್ಲಿ 3.94 ಲಕ್ಷಕ್ಕೂ ಅಧಿಕ ಬೂತ್‌ ಮಟ್ಟದ ಅಧಿಕಾರಿಗಳು 36.73ಕೋಟಿ ಮತದಾರರ ಮನೆಗಳಿಗೆ ತೆರಳಿ ಪರಿಶೀಲನೆ ನಡೆಸಲಿದ್ದಾರೆ.
ಈಗಾಗಲೇ ದೇಶದ 10 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌ ನಡೆಸಲಾಗಿದೆ. ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ತಮಿಳುನಾಡು, ರಾಜಸ್ಥಾನ, ಛತ್ತೀಸಗಢ, ಕೇರಳಂ, ಪುದುಚೇರಿ, ಅಂಡಮಾನ್‌ ಮತ್ತು ನಿಕೋಬಾರ್‌, ಲಕ್ಷದ್ವೀಪ, ಗುಜರಾತ್‌, ಮಧ್ಯಪ್ರದೇಶ, ಗೋವಾ ಮತ್ತು ಬಿಹಾರದಲ್ಲಿ ಈಗಾಗಲೇ ಎಸ್‌ಐಆರ್‌ ಕಾರ್ಯ ಮುಗಿದಿದೆ.
ಹಿಮಾಚಲ ಪ್ರದೇಶ, ಜಮ್ಮು ಕಾಶ್ಮೀರ ಹಾಗೂ ಲಡಾಖ್‌ನಲ್ಲಿ ಎಸ್‌ಐಆರ್‌ ಬಾಕಿ ಇದ್ದು, ಸ್ಥಳೀಯ ಹವಾಮಾನ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ವೇಳಾಪಟ್ಟಿ ಘೋಷಿಸುವುದಾಗಿ ಚುನಾವಣಾ ಆಯೋಗ ತಿಳಿಸಿದೆ.

Continue Reading

ಚಿತ್ರದುರ್ಗ

ಡಿ. ಸುಧಾಕರ್‌ ನಿಧನ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟ: ಸಿಎಂ ಸಿದ್ದರಾಮಯ್ಯ

VISTARANEWS.COM


on

ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಡಿ. ಸುಧಾಕರ್‌ ಅವರ ಅಗಲಿಕೆಯಿಂದ ರಾಜ್ಯ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟ ಉಂಟಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿ. ಸುಧಾಕರ್‌ ಅವರ ನಿವಾಸದಲ್ಲಿ ಅಂತಿಮ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, “ಸುಧಾಕರ್‌ ಅವರು ಜನಪರ ನಾಯಕನಾಗಿ ಗುರುತಿಸಿಕೊಂಡಿದ್ದರು. ಅವರ ನಿಧನದಿಂದ ರಾಜ್ಯಕ್ಕೆ ಅಪಾರ ನಷ್ಟವಾಗಿದೆ” ಎಂದು ಹೇಳಿದರು.

ಸುಧಾಕರ್‌ ಅವರು ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧುಗಳು ಹಾಗೂ ಅಭಿಮಾನಿಗಳನ್ನು ಅಗಲಿದ್ದಾರೆ. “ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ” ಎಂದು ಸಿಎಂ ಪ್ರಾರ್ಥಿಸಿದರು.

ಡಿ. ಸುಧಾಕರ್‌ ಅವರು ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು. ಅವರ ನಿಧನ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಮೂರು ದಿನಗಳ ಶೋಕಾಚರಣೆ ಘೋಷಿಸಲಾಗಿದ್ದು, ಸೋಮವಾರ ಸರ್ಕಾರಿ ರಜೆ ಘೋಷಿಸಲಾಗಿದೆ.

ನಾಳೆ ಸಂಜೆ 4 ಗಂಟೆಗೆ ಚಳ್ಳಕೆರೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ.

Continue Reading

ಕರ್ನಾಟಕ

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್‌, ಮತದಾನ ಯಾವತ್ತು ಗೊತ್ತಾ?

VISTARANEWS.COM


on

ಬೆಂಗಳೂರು: ಜಿಬಿಎ ಚುನಾವಣೆ ದಿನಾಂಕ ನಿಗದಿಗೆ ದಿನಗಣನೆ ಆರಂಭವಾಗಿದೆ. ಈ ಸಂಬಂಧ ರಾಜ್ಯ ಚುನಾವಣಾ ಆಯೋಗ ಮಹತ್ವದ ಸಭೆ ನಡೆಸಿದೆ. ಸಭೆ ಬಳಿಕ ಮಾತಾಡಿದ ರಾಜ್ಯ ಚುನಾವಣಾ ಆಯೋಗದ ಆಯಕ್ತ ಸಂಗ್ರೇಶಿ, ʼʼಚುನಾವಣೆಯ ಎಲ್ಲಾ ಪ್ರಕ್ರಿಯೆ ಮುಗಿಸಲಾಗಿದೆ. ಕೇವಲ ದಿನಾಂಕ ನಿಗದಿ ಮಾತ್ರ ಬಾಕಿ ಉಳಿದಿದೆ. ಶಾಲೆ, ಕಾಲೇಜು, ವಿಧಾನಸಭಾ ಅಧಿವೇಶನ ಇತ್ಯಾದಿ ಗಮನದಲ್ಲಿಟ್ಟುಕೊಂಡು ಡೇಟ್‌ ಫಿಕ್ಸ್‌ ಮಾಡಬೇಕು. ಜೂನ್‌ ೩೦ರ ಒಳಗಾಗಿ ಚುನಾವಣೆ ಮುಗಿಸುವಂತೆ ಸುಪ್ರೀಂ ಕೋರ್ಟ್‌ ಹೇಳಿದೆ. ಜೂನ್‌ ೧೪ರಿಂದ ಜೂನ್‌ ೨೪ರ ಒಳಗೆ ಒಂದು ಡೇಟ್‌ ಹೇಳಿದ್ದೇವೆ. ಕೆಲವೇ ದಿನಗಳಲ್ಲಿ ಅಂತಿಮ ದಿನಾಂಕ ಘೋಷಣೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಚುನಾವಣೆ ಮುಂದೂಡುವ ಅಧಿಕಾರ ರಾಜ್ಯ ಚುನಾವಣಾ ಆಯೋಗಕ್ಕೆ ಇಲ್ಲ, ಅದು ಸುಪ್ರೀಂ ಕೋರ್ಟ್‌ ಪರಮಾಧಿಕಾರ ಎಂದು ಸಂಗ್ರೇಶಿ ಹೇಳಿದ್ದಾರೆ.

Continue Reading

Latest

ದಾವಣಗೆರೆ ದಕ್ಷಿಣ ʼಕೈʼ ವಶ, ಸಮರ್ಥ್‌ಗೆ ವಿಜಯಮಾಲೆ

VISTARANEWS.COM


on

ಕಾಂಗ್ರೆಸ್‌ ಪಕ್ಷಕ್ಕೆ ಪ್ರತಿಷ್ಠೆಯ ಕಣವಾಗಿದ್ದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌‌‌ ಅಭ್ಯರ್ಥಿ ಸಮರ್ಥ್​ ಮಲ್ಲಿಕಾರ್ಜುನ್‌‌‌‌‌‌ ವಿಜಯ ಪತಾಕೆ ಹಾರಿಸಿದ್ದಾರೆ. ದಿವಂಗತ ಶಾಮನೂರು ಶಿವಶಂಕರಪ್ಪ ಮೊಮ್ಮಗ ಹಾಗೂ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್‌, ಸಂಸದೆ ಪ್ರಭಾ ಮಲ್ಲಿಕಾರ್ಜುನ್‌ ಅವರ ಪುತ್ರ ಸಮರ್ಥ್‌ ಉಪಸಮರದಲ್ಲಿ ಗೆದ್ದು ಬೀಗಿದ್ದಾರೆ. ಇವರಿಗೆ ಪ್ರಬಲ ಪೈಪೋಟಿ ನೀಡಿದ್ದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸ ಕರಿಯಪ್ಪ ಸೋಲನುಭವಿಸಿದ್ದಾರೆ. ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಕ್ಷೇತ್ರಕ್ಕೆ ಏ.9ರಂದು ಉಪಚುನಾವಣೆ ನಡೆದಿತ್ತು.

Continue Reading
Advertisement
ಪ್ರಮುಖ ಸುದ್ದಿ15 hours ago

ವಿಜಯ್‌ ಸಿಎಂ ಆಗಿದ್ದಕ್ಕೆ ನನಗೆ ಅಸೂಯೆ ಇಲ್ಲ – ರಜನೀಕಾಂತ್‌

Latest15 hours ago

ಕೇರಳಂ ಮುಖ್ಯಮಂತ್ರಿಯಾಗಿ ನಾಳೆ ವಿ.ಡಿ. ಸತೀಶನ್ ಪ್ರಮಾಣವಚನ

Latest2 days ago

ಅಬುಧಾಬಿಯಲ್ಲಿ ಮೋದಿ: ಯುಎಇ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ

Latest3 days ago

ವಾಹನ ಸವಾರರಿಗೆ ಶಾಕ್! ಪೆಟ್ರೋಲ್, ಡೀಸೆಲ್ ತಲಾ ₹3 ಏರಿಕೆ.

Latest3 days ago

ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್ ಶಾಕ್‌, ಜಾಮೀನು ಅರ್ಜಿ ವಜಾ

Latest3 days ago

ಚೀನಾದಲ್ಲಿ ಟ್ರಂಪ್‌, ಶಿ ಜಿನ್‌‌ಪಿಂಗ್‌ ಹೈವೋಲ್ಟೇಜ್‌ ಮೀಟಿಂಗ್‌‌

Latest3 days ago

ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿ; ನಿಯಮ ಉಲ್ಲಂಘಿಸಿದ್ರೆ ಜೈಲು ಶಿಕ್ಷೆ, ದಂಡ

ಪ್ರಮುಖ ಸುದ್ದಿ3 days ago

ಕರ್ನಾಟಕ ಸೇರಿ 16 ರಾಜ್ಯ, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌

Latest3 days ago

ಹಿಜಾಬ್‌ ಓಕೆ, ಕೇಸರಿ ಶಾಲುಗೆ ನೋ: ಪರ- ವಿರೋಧ ಚರ್ಚೆ ಶುರು

Latest4 days ago

ವಿ.ಡಿ. ಸತೀಶನ್‌ ಸಿಎಂ ಆಗಿ ಆಯ್ಕೆ ಹಿಂದಿನ ರಿಯಲ್ ಸ್ಟೋರಿ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌