Co-Operative week : ಸರ್ಕಾರಿ ಹಣ ಸಹಕಾರ ಬ್ಯಾಂಕ್‌ನಲ್ಲೇ ಠೇವಣಿಗೆ ಚಿಂತನೆ; ಸಿದ್ದರಾಮಯ್ಯ - Vistara News

ಕರ್ನಾಟಕ

Co-Operative week : ಸರ್ಕಾರಿ ಹಣ ಸಹಕಾರ ಬ್ಯಾಂಕ್‌ನಲ್ಲೇ ಠೇವಣಿಗೆ ಚಿಂತನೆ; ಸಿದ್ದರಾಮಯ್ಯ

Co-Operative Week : ರಾಜ್ಯ ಸರ್ಕಾರದ ಹಣವನ್ನು ರಾಷ್ಟ್ರೀಕೃತ ಬ್ಯಾಂಕ್‌ ಬದಲು ಸಹಕಾರಿ ಬ್ಯಾಂಕ್‌ಗಳಲ್ಲಿ ಠೇವಣಿ ಇಡುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

VISTARANEWS.COM


on

Co-operative week Siddaramaiah
ಸಹಕಾರ ಸಪ್ತಾಹದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಚಿತ್ರ ಅರ್ಪಣೆ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಿಜಯಪುರ: ಸರ್ಕಾರ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ (Nationalized Banks) ಇಡುವ ಠೇವಣಿ ಹಣವನ್ನು ಸಹಕಾರಿ ಬ್ಯಾಂಕುಗಳಲ್ಲಿಯೇ (Co-Operative Bank) ತೊಡಗಿಸುವ ಬಗ್ಗೆ ಪರಿಶೀಲನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು. ಅವರು ಸೋಮವಾರ ಅಖಿಲ ಬಾರತ ಸಹಕಾರಿ ಸಪ್ತಾಹದ (Co-Operative Week) ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.

ʻʻಸಹಕಾರ ಬ್ಯಾಂಕುಗಳು ಸುಸ್ಥಿರವಾಗಿರಬೇಕು. ಸುಸ್ಥಿರವಾಗಿದ್ದರೇ ಮಾತ್ರ ಅವು ರೈತರಿಗೆ ಸಾಲ ನೀಡಲು ಸಾಧ್ಯ. ರೈತರಿಗೆ ವ್ಯವಸಾಯ ಮಾಡಲು ಸಕಾಲದಲ್ಲಿ ಸಾಲ ಸಿಕ್ಕರೆ ವ್ಯವಸಾಯ ಮಾಡಲು ಅನುಕೂಲವಾಗಿ ಉತ್ಪಾದನೆಯೂ ಹೆಚ್ಚಾಗಲಿದೆʼʼ ಎಂದು ಸಿದ್ದರಾಮಯ್ಯ ಹೇಳಿದರು.

ʻʻಸರ್ಕಾರ ಕ್ಷೀರ ಭಾಗ್ಯ ಕಾರ್ಯಕ್ರಮಕ್ಕೆ ಒಂದು ವರ್ಷದಲ್ಲಿ 1200 ಕೋಟಿ ರೂ. ಖರ್ಚು ಮಾಡುತ್ತಿದೆʼʼ ಎಂದು ಹೇಳಿದ ಸಿದ್ದರಾಮಯ್ಯ ಅವರು, ಹಿಂದಿನ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಸಹಕಾರ ಸಂಘಗಳಲ್ಲಿ ರೈತರು ಪಡೆದ ಸಾಲವನ್ನು ಮನ್ನಾ ಮಾಡಲು 50 ಸಾವಿರದವರಗೆ ಸಂಪೂರ್ಣ ಮನ್ನಾ ಮಾಡಲಾಯಿತು. ಹೀಗೆ ಮನ್ನಾ ಮಾಡದ್ದರಿಂದ ಸಹಕಾರಿ ಸಂಘಗಳು ಹಾಗೂ ಸಹಕಾರ ಬ್ಯಾಂಕುಗಳಿಗೆ ಶಕ್ತಿ ಬರಲು ಸಾಧ್ಯವಾಯಿತು ಎಂದರು.

 Siddaramaiah  in Co-operative week  programme

ಐದು ಲಕ್ಷ ರೂ.ವರೆಗೆ ಝೀರೋ ಪರ್ಸೆಂಟ್‌ ಬಡ್ಡಿಯಲ್ಲಿ ಸಾಲ

ನಮ್ಮ ಸರ್ಕಾರ ಬಜೆಟ್ ಮಂಡಿಸಿದಾಗ ಜೀರೋ ಪರ್ಸೆಂಟ್ ಸಾಲವನ್ನು 3 ರಿಂದ 5 ಲಕ್ಷದವರೆಗೆ ಏರಿಸುವ ಕೆಲಸ ಮಾಡಿದ್ದೇವೆ. ಹಿಂದೆ ತಾವು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿಯೇ 3 ಲಕ್ಷದವರೆಗೆ ಶೇ. 3 ರಷ್ಟು ಬಡ್ಡಿ ದರದಲ್ಲಿ ಸಾಲ ನೀಡಲಾಗುತ್ತಿತ್ತು. ಈಗ ಅದನ್ನು ಬಡ್ಡಿ ರಹಿತವಾಗಿ 3-5 ಲಕ್ಷದವರೆಗೆ ಸಾಲ ನೀಡುವ ಕೆಲಸ ಮಾಡಲಾಗಿದೆ ಎಂದರು.

ಸ್ವಾರ್ಥ ಬಿಟ್ಟು ಸೇವೆ ಮಾಡಿದರೆ ಮಾತ್ರ ಸಹಕಾರ ಕ್ಷೇತ್ರ ಉದ್ಧಾರ

ನಿಸ್ವಾರ್ಥವಾಗಿ ಕೆಲಸ ಮಾಡಿದರೆ ಮಾತ್ರ ಬ್ಯಾಂಕುಗಳು ಲಾಭದಾಯಕವಾಗಿ ನಡೆಯುತ್ತವೆ
ಯಾವುದೇ ಬ್ಯಾಂಕಿನಲ್ಲಿ ಎಲ್ಲರೂ ನಿಸ್ವಾರ್ಥವಾಗಿ ಕೆಲಸ ಮಾಡಿದರೆ ಮಾತ್ರ ಅದು ಲಾಭದಾಯಕವಾಗಿ ನಡೆಯುತ್ತದೆ. ಸ್ವಾರ್ಥ ಬಿಟ್ಟು ಸೇವೆ ಮಾಡುವ ಕ್ಷೇತ್ರವಿದು ಎಂದರು. ಆ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಒಳ್ಳೆಯ ನಾಯಕತ್ವ ಬೆಳೆಸಿಕೊಳ್ಳುವ ಅವಕಾಶ ದೊರಯುತ್ತದೆ ಎಂದರು.

 Siddaramaiah  in Co-operative week  programme

ಸಹಕಾರಿ ತತ್ವದ ಮೇಲೆ ಜಾಗೃತಿ, ಸಮಾಜದಲ್ಲಿನ ಬಡ ಬಡತನ, ಅಸಮಾನತೆ ಹೋಗಲಾಡಿಸುವ ಪ್ರಯತ್ನ ಮಾಡಬೇಕು ನಮ್ಮ ಸರ್ಕಾರ ಅಸಮಾನತೆ ತೊಲಗಿಸಲು ಅನೇಕ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದೇವೆ. ಶಕ್ತಿ ಯೋಜನೆಯಡಿ 1 ಕೋಟಿ ಮಹಿಳೆಯರು ಉಚಿತವಾಗಿ ಬಸ್ಸುಗಳಲ್ಲಿ ಪ್ರಯಾಣ ಮಾಡಿದ್ದಾರೆ. ಸಣ್ಣ ಪುಟ್ಟ ದೋಷಗಳ ಹೊರತಾಗಿಯೂ ನೂರಕ್ಕೆ 90 ಭಾಗ ಬಡವರಿಗೆ, ಮಹಿಳೆಯರಿಗೆ, ದಲಿತರಿಗೆ, ಅಲ್ಪಸಂಖ್ಯಾತರಿಗೆ ಈ ಕಾರ್ಯಕ್ರಮ ರೂಪಿಸಿ ಆರ್ಥಿಕ ಶಕ್ತಿಯನ್ನು ತುಂಬಲಾಗಿದೆ. ಸಹಕಾರ ಕ್ಷೇತ್ರ ಹೇಗೆ ಜಾತಿ ಧರ್ಮಗಳಿಂದ ಹೊರತಾಗಿದೆಯೋ ಅದೇ ರೀತಿ ನಮ್ಮ ಕಾರ್ಯಕ್ರಮಗಳು ಎಲ್ಲಾ ಜಾರಿ ಧರ್ಮಗಳ ಜನರಿಗೆ, ಮೇಲ್ವರ್ಗದ ಬಡವರಿಗೂ ಕಾರ್ಯಕ್ರಮಗಳನ್ನು ಕೊಟ್ಟಿದ್ದೇವೆ ಎಂದು ಸಿದ್ದರಾಮಯ್ಯ ವಿವರಿಸಿದರು.

ಬರಗಾಲವನ್ನು ಸಮರ್ಥವಾಗಿ ನಿಭಾಯಿಸುತ್ತೇವೆ

12 ರಾಜ್ಯಗಳಲ್ಲಿ ಬರಗಾಲವಿದ್ದು, ಕರ್ನಾಟಕದಲ್ಲಿಯೂ ಕೂಡ 236 ತಾಲ್ಲೂಕುಗಳ ಪೈಕಿ 223 ತಾಲ್ಲೂಕುಗಳಲ್ಲಿ ಬರ ಘೋಷಣೆ ಮಾಡಲಾಗಿದೆ. ಬರ ಪರಿಹಾರವನ್ನು ಕೇಂದ್ರ ಸರ್ಕಾರದಿಂದ ಬಿಡುಗಡೆ ಮಾಡಿಸುವ ಕೆಲಸವನ್ನು ನಮ್ಮ ಸಂಸದರು ಮಾಡಬೇಕು. ಕುಡಿಯುವ ನೀರಿಗೆ ಸಮಸ್ಯೆಯಾಗಬಾರದೆಂದ ಡಿಸಿ, ಸಿಇಒಗಳಿಗೆ ಸೂಚನೆ ನೀಡಲಾಗಿದ್ದು, ಜಿಲ್ಲಾಧಿಕಾರಿಗಳ ಬಳಿ 800 ಕೋಟಿ ರೂ.ಗಳು ಲಭ್ಯವಿದೆ. ಮೇವಿಗೆ, ಉದ್ಯೋಗ ನೀಡಲು, ಕುಡಿಯುವ ನೀರಿಗೆ ರಾಜ್ಯ ಸರ್ಕಾರ ಈಗಾಗಲೇ 800 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ. ಬರಗಾಲವನ್ನು ನಮ್ಮ ಸರ್ಕಾರ ಸಮರ್ಥವಾಗಿ ನಿಭಾಯಿಸುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.

ಸಹಕಾರಿ ರಂಗ ಜಾತಿ ಧರ್ಮರಹಿತ ಕ್ಷೇತ್ರ

ಸ್ವಾತಂತ್ರ್ಯಪೂರ್ವದಿಂದಲೂ ಸಹಕಾರಿ ಕ್ಷೇತ್ರ ಬೆಳೆಯುತ್ತಾ ಬಂದಿದೆ. ಸಿದ್ದನಗೌಡ ಸಣ್ಣರಾಮನಗೌಡ ಪಾಟೀಲರು ಸಹಕಾರ ಸಂಘ ಪ್ರಾರಂಭಿಸಿದರು, ಇಂದು ರಾಜ್ಯದಲ್ಲಿ 45600 ಸಹಕಾರ ಸಂಘಗಳಿದ್ದು, ಭಾರತದಲ್ಲಿ ಸುಮಾರು 8.50 ಲಕ್ಷ ಸಹಕಾರ ಸಂಘಗಳಿದ್ದು, 31 ಕೋಟಿ ಸದಸ್ಯರಿದ್ದಾರೆ. ಸಹಕಾರಿ ಕ್ಷೇತ್ರದ ದೇಶದಾದ್ಯಂತ ವ್ಯಾಪಕವಾಗಿ ಬೆಳೆದಿರುವುದಕ್ಕೆ ಇದೇ ಸಾಕ್ಷಿ. ಈ ಬೆಳವಣಿಗೆ ದೇಶದ ಆರ್ಥಿಕ ಹಾಗೂ ಸಾಮಾಜಿಕ ಬೆಳವಣಿಗೆಯನ್ನೂ ಬಿಂಬಿಸುತ್ತದೆ. ಸಹಕಾರಿ ರಂಗ ಒಂದು ಕ್ಷೇತ್ರಕ್ಕೆ ಸೀಮಿತವಾಗಿಲ್ಲ. ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ಬದುಕಿನ ಎಲ್ಲ ಕ್ಷೇತ್ರಗಳಲ್ಲಿ ಸಹಕಾರ ರಂಗ ವ್ಯಾಪಿಸಿಕೊಂಡಿದೆ. ಸಹಕಾರಿ ರಂಗದ ಅಭಿವೃದ್ಧಿ , ರಾಜ್ಯ ಮತ್ತು ದೇಶದ ಜಿಡಿಪಿಯ ಬೆಳವಣಿಗೆಯ ಮೇಲೂ ಪರಿಣಾಮವನ್ನು ಬೀರುತ್ತದೆ. ದೇಶದ ಆಂತರಿಕ ಕೊಡುಗೆಯ ಹೆಚ್ಚಳದಲ್ಲಿ ಸಹಕಾರಿ ಕ್ಷೇತ್ರದ ಕೊಡುಗೆ ಅಪಾರವಾಗಿದೆ. ದೇಶದಲ್ಲಿ ಅನೇಕ ಜಾತಿ ಧರ್ಮಗಳಿವೆ. ಆದರೆ ಸಹಕಾರಿ ರಂಗಕ್ಕೆ ಯಾವ ಜಾತಿ ಧರ್ಮಗಳ ಸೋಂಕು ಇಲ್ಲ. ಜಾತಿ ರಹಿತವಾದ ಧರ್ಮರಹಿತವಾದ ಕ್ಷೇತ್ರವೆಂದರೆ ಸಹಕಾರಿ ಕ್ಷೇತ್ರ ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು.

ಇದನ್ನೂ ಓದಿ : KN Rajanna : ಅಮಿತ್‌ ಶಾ ನಿಜವಾದ ಸಹಕಾರಿ; ಬಾಯ್ತುಂಬಾ ಹೊಗಳಿದ ಸಹಕಾರ ಸಚಿವ ಕೆ.ಎನ್‌ ರಾಜಣ್ಣ

70 people felicitated in Co-operative week  programme

ದಲಿತರು, ಮಹಿಳೆಯರು ಸಹಕಾರಿ ಸದಸ್ಯರಾಗಲು ಪ್ರೋತ್ಸಾಹ

ನಾನು ಹಿಂದೆ ಮುಖ್ಯಮಂತ್ರಿಯಾಗಿದ್ದಾಗ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಮಹಿಳೆಯರನ್ನು ಸಹಕಾರ ಸಂಘದ ಸದಸ್ಯರಾಗಲು ಸರ್ಕಾರವೇ ಜನರ ಪರವಾಗಿ ಶೇರು ಮೊತ್ತವನ್ನು ಭರಿಸಲಾಗಿತ್ತು. ಈ ಕಾರ್ಯಕ್ರಮ ಇಂದಿಗೂ ಮುಂದುವರೆಯುತ್ತಿದೆ. ಎಲ್ಲ ದಲಿತರು ಹಾಗೂ ಮಹಿಳೆಯರು ಸಹಕಾರ ಸಂಘದ ಸದಸ್ಯರಾಗಬೇಕು. ಸರ್ಕಾರದ ಸಹಾಯದಿಂದಾಗಿ ದಲಿತರು ಹಾಗೂ ಮಹಿಳೆಯರು ಹಾಲು ಸಹಕಾರ ಸಂಘದಲ್ಲಿ ಸದಸ್ಯರಾಗುತ್ತಿದ್ದಾರೆ. ನಮ್ಮ ಸರ್ಕಾರ ಹಾಲಿನ ಪ್ರತಿ ಲೀ.ಗೆ ರೂ. 5 ಗಳ ಪ್ರೋತ್ಸಾಹಧನ ನೀಡಲಾಗುತ್ತಿದೆ. ಈಗ ಪ್ರೋತ್ಸಾಹ ಧನವನ್ನು ಪ್ರತಿ ಲೀ.ಗೆ 5 ರೂ. ನಿಂದ ಹಿಡಿದು 8 ರೂ.ಗೆ ಹೆಚ್ಚಳ ಮಾಡಿ ನೀಡಲಾಗುತ್ತಿದ್ದು, ಈ ಮೊತ್ತ ರೈತರಿಗೆ ನೇರವಾಗಿ ತಲುಪುತ್ತಿದೆ ಎಂದರು.

ಸಹಕಾರ ಸಚಿವ ಕೆ.ಎನ್‌. ರಾಜಣ್ಣ, ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್‌ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ 70 ಮಂದಿ ಸಹಕಾರಿ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Prajwal Revanna Case: ಪ್ರಜ್ವಲ್ ರೇವಣ್ಣಗೆ ಸಂಕಷ್ಟ; ಅರೆಸ್ಟ್ ವಾರಂಟ್ ನೀಡಿದ ಕೋರ್ಟ್‌

ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್‌, ಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್‌ ವಾರಂಟ್‌ ಜಾರಿ ಮಾಡಿದೆ. ಜತೆಗೆ ಪಾಸ್‌ಪೋರ್ಟ್ ಕ್ಯಾನ್ಸಲ್ ಮಾಡಲು ಅನುಮತಿ ನೀಡಲಾಗಿದೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಪ್ರಜ್ವಲ್ ರೇವಣ್ಣಗೆ ಅಸಲಿ ಸಂಕಷ್ಟ ಶುರುವಾಗಿದೆ. ವಿದೇಶದಲ್ಲಿರುವ ಪ್ರಜ್ವಲ್‌ ಸೆರೆಗೆ ಎಸ್‌ಐಟಿ ಸರ್ಜಿಕಲ್ ಸ್ಟ್ರೈಕ್‌ ಆರಂಭಿಸಿದ್ದು, ಇದೀಗ ಹೊಳೆನರಸೀಪುರ ಕೇಸ್‌ನಲ್ಲಿ (Prajwal Revanna Case) ಪ್ರಜ್ವಲ್‌ ಬಂಧನಕ್ಕೆ ಅರೆಸ್ಟ್ ವಾರಂಟ್ ಪಡೆದಿದೆ. ಜತೆಗೆ ಪಾಸ್‌ಪೋರ್ಟ್ ಕ್ಯಾನ್ಸಲ್ ಮಾಡಲು ಕೂಡ ಕೋರ್ಟ್ ಅನುಮತಿ ನೀಡಿದೆ.

ನಗರದ 42ನೇ ಎಸಿಎಂಎಂ ಕೋರ್ಟ್‌, ಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್‌ ವಾರಂಟ್‌ ಜಾರಿ ಮಾಡಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ಹೊರಡಿಸಿದ್ದ ನೋಟಿಸ್‌ಗಳ ಬಗ್ಗೆ ಕೋರ್ಟ್‌ ಮಾಹಿತಿ ಕೇಳಿತ್ತು. ಈ ವೇಳೆ ಲುಕ್‌ ಔಟ್ ನೋಟಿಸ್, ಬ್ಲೂ ಕಾರ್ನರ್ ನೋಟಿಸ್ ನೀಡಿರುವ ಬಗ್ಗೆ ಮಾಹಿತಿ ನೀಡಿದ್ದ ಎಸ್‌ಐಟಿ, ಬಂಧನಕ್ಕೆ ಚಾರ್ಜ್ ಶೀಟ್ ಅವಶ್ಯಕತೆ ಇಲ್ಲ ಎಂದು ಕೋರ್ಟ್‌ಗೆ ಮನವರಿಕೆ ಮಾಡಿತ್ತು. ಹೀಗಾಗಿ ಕೋರ್ಟ್‌ ಅರೆಸ್ಟ್‌ ವಾರಂಟ್‌ ಜಾರಿ ಮಾಡಿದೆ.

ಸಿಬಿಐ ಮೂಲಕ ರೆಡ್ ಕಾರ್ನರ್ ನೋಟಿಸ್

ವಿದೇಶದಲ್ಲಿರುವ ಪ್ರಜ್ವಲ್‌ ರೇವಣ್ಣಗೆ ವಿಚಾರಣೆಗೆ ಹಾಜರಾಗಲು ಈಗಾಗಲೇ ಎಸ್‌ಐಟಿ ಲುಕ್‌ ಔಟ್‌ ನೋಟಿಸ್‌ ಹಾಗೂ ಬ್ಲೂ ಕಾರ್ನರ್‌ ನೋಟಿಸ್‌ ನೀಡಿತ್ತು. ಇದೀಗ ಅರೆಸ್ಟ್‌ ವಾರಂಟ್‌ ಲಭಿಸಿರುವುದರಿಂದ ಸಿಬಿಐ ಮೂಲಕ ರೆಡ್ ಕಾರ್ನರ್ ನೋಟಿಸ್ ಹೊರಡಿಸಲು ಎಸ್‌ಐಟಿ ಸಿದ್ಧತೆ ನಡೆಸುತ್ತಿದೆ. ರೆಡ್‌ ಕಾರ್ನರ್‌ ನೋಟಿಸ್‌ ಬಳಿಕ ಪ್ರಜ್ವಲ್‌ ಪಾಸ್‌ಪೋರ್ಟ್‌ ಆಗಲಿದ್ದು, ಇದರಿಂದ ಬಂಧನಕ್ಕೆ ಸಹಕಾರಿಯಾಗಲಿದೆ.

ರೆಡ್ ಕಾರ್ನರ್ ನೋಟಿಸ್ ಎನ್ನುವುದು ಹಸ್ತಾಂತರ, ಶರಣಾಗತಿ ಅಥವಾ ಅಂತಹುದ್ದೇ ಕಾನೂನು ಕ್ರಮಕ್ಕೆ ಬಾಕಿ ಇರುವ ವ್ಯಕ್ತಿಯನ್ನು ಪತ್ತೆಹಚ್ಚಲು ಮತ್ತು ತಾತ್ಕಾಲಿಕವಾಗಿ ಬಂಧಿಸುವುದಕ್ಕೆ ವಿಶ್ವಾದ್ಯಂತ ಕಾನೂನು ಜಾರಿಗೊಳಿಸಲು ಮಾಡುವ ವಿನಂತಿಯಾಗಿದೆ.

ಅಶ್ಲೀಲ ವಿಡಿಯೊ ವೈರಲ್ ಕೇಸ್‌; ವಕೀಲ ದೇವರಾಜೇಗೌಡ ಎಸ್‌ಐಟಿ ಕಸ್ಟಡಿ ಅವಧಿ 2 ವಿಸ್ತರಣೆ

Prajwal Revanna Case obscene video goes viral Advocate Devarajegowda SIT custody extended by 2 days

ಹಾಸನ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೊ ವೈರಲ್ ಪ್ರಕರಣದಲ್ಲಿ (Prajwal Revanna Case) ಎಂಟನೇ ಆರೋಪಿಯಾಗಿರುವ ವಕೀಲ ದೇವರಾಜೇಗೌಡ (Devarajegowda) ಅವರನ್ನೂ ಮತ್ತೂ ಎರಡು ದಿನ ಪೊಲೀಸ್‌ ಕಸ್ಟಡಿಗೆ ನೀಡಿ 5ನೇ ಅಧಿಕ ಸಿವಿಲ್ ನ್ಯಾಯಾಲಯ ಮತ್ತು ಜೆಎಂಎಫ್‌ಸಿ ನ್ಯಾಯಾಲಯವು ಆದೇಶಿಸಿದೆ.

ಏಪ್ರಿಲ್ 23 ರಂದು ಹಾಸನ ನಗರದ ಸೈಬರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್‌ಐಆರ್‌ನಲ್ಲಿ 8ನೇ ಆರೋಪಿಯಾಗಿ ದೇವರಾಜೇಗೌಡ ಅವರ ಹೆಸರು ಸೇರ್ಪಡೆ ಮಾಡಲಾಗಿದೆ. ಹೀಗಾಗಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ದೇವರಾಜೇಗೌಡ ಅವರನ್ನು ವಿಚಾರಣೆಗಾಗಿ ಶುಕ್ರವಾರ ಒಂದು ದಿನದ ಮಟ್ಟಿಗೆ ಎಸ್‌ಐಟಿ ವಶಕ್ಕೆ ಪಡೆಯಲಾಗಿತ್ತು.

ದೇವರಾಜೇಗೌಡ ಅವರ ಕಸ್ಟಡಿ ಅವಧಿ ಮುಕ್ತಾಯವಾಗಿದ್ದರಿಂದ ಪುನಃ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದ ಎಸ್‌ಐಟಿ ಅಧಿಕಾರಿಗಳು ಮತ್ತೆ ಎರಡು ದಿನ ಕಸ್ಟಡಿಗೆ ಕೇಳಿದ್ದರು. ಹೀಗಾಗಿ ಮೇ 20ರ ಸಂಜೆ ಐದು ಗಂಟೆಗೆ ಕೋರ್ಟ್ ಮುಂದೆ ಹಾಜರು ಪಡಿಸುವಂತೆ ನ್ಯಾಯಾಲಯ ಸೂಚಿಸಿ, ಎರಡು ದಿನ ಕಸ್ಟಡಿಯನ್ನು ಮುಂದುವರಿಸಿ ಆದೇಶಿಸಿದೆ.
ಎರಡೆರಡು ಕೇಸ್‌

ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ (physical Abuse) ಕೇಸ್‌ ಆರೋಪಿ ವಕೀಲ ದೇವರಾಜೇಗೌಡ (Devarajegowda) ಅವರ ಪೊಲೀಸ್ ಕಸ್ಟಡಿ ಅಂತ್ಯವಾಗಿದ್ದರಿಂದ ಅವರನ್ನು ಶುಕ್ರವಾರ ನ್ಯಾಯಾಂಗ ಬಂಧನಕ್ಕೆ ನೀಡಲಾಗಿತ್ತು. ಮೇ 14 ರಂದು ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದ ಹೊಳೆನರಸೀಪುರ ನಗರ ಪೊಲೀಸರು, ಗುರುವಾರವೂ ಒಂದು ದಿನ ಕಸ್ಟಡಿಗೆ ಪಡೆದುಕೊಂಡಿದ್ದರು. ಶುಕ್ರವಾರ ಕೋರ್ಟ್‌ ಮುಂದೆ ಹಾಜರುಪಡಿಸಿದ ಹಿನ್ನೆಲೆಯಲ್ಲಿ ಅವರಿಗೆ ನ್ಯಾಯಾಂಗ ಬಂಧನವಿರಿಸಿ ಆದೇಶಿಸಲಾಗಿತ್ತು. ಸದ್ಯ ನ್ಯಾಯಾಂಗ ಬಂಧನದಲ್ಲಿದ್ದ ವಕೀಲರನ್ನು ಪೆನ್‌ಡ್ರೈವ್‌ ಪ್ರಕರಣದಲ್ಲಿ ಶುಕ್ರವಾರ ಎಸ್‌ಐಟಿ ಕಸ್ಟಡಿಗೆ ಪಡೆದುಕೊಂಡಿತ್ತು. ಈಗ ಮತ್ತೆ ಎರಡು ದಿನ ಕಸ್ಟಡಿ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ.

ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ ಸಾಕ್ಷ್ಯ ಬಿಡುಗಡೆಗೆ ಮುಂದಾಗಿದ್ದ ದೇವರಾಜೇಗೌಡ ಅವರು ಬೇರೆ ಕೇಸ್‌ನಲ್ಲಿ ಬಂಧನವಾಗಿದ್ದಾರೆ. ಒಟ್ಟು ನಾಲ್ಕು ದಿನ ಪೊಲೀಸ್ ಕಸ್ಟಡಿಯಲ್ಲಿದ್ದ ದೇವರಾಜೇಗೌಡ ಅವರನ್ನು ಮತ್ತೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿತ್ತು.

ದೇವರಾಜೇಗೌಡ ಮೇ 11ರಂದು ಬಂಧನಕ್ಕೆ ಒಳಗಾಗಿದ್ದರು. ಇವರ ಮೇಲೆ ಲೈಂಗಿಕ ದೌರ್ಜನ್ಯ, ಕಿರುಕುಳ ಆರೋಪಗಳನ್ನು ಹೊರಿಸಲಾಗಿದೆ. ಹೀಗಾಗಿ ಹೆಚ್ಚಿನ ವಿಚಾರಣೆಗಾಗಿ ಹೊಳೆನರಸೀಪುರ ನಗರ ಠಾಣೆ ಪೊಲೀಸರು ಅವರನ್ನು ಕಸ್ಟಡಿಗೆ ಪಡೆದುಕೊಂಡಿದ್ದರು. ಹೊಳೆನರಸೀಪುರ, ಹಾಸನ ಸೇರಿ ಇತರ ಅಗತ್ಯ ಸ್ಥಳಗಳಿಗೆ ಕರೆದೊಯ್ದು ವಿಚಾರಣೆಯನ್ನು ಕೈಗೊಂಡಿದ್ದರು.
ಸರ್ಕಾರದ ವಿರುದ್ಧ ತೊಡೆ ತಟ್ಟಿದ್ದ ದೇವರಾಜೇಗೌಡ

ವಕೀಲ ದೇವರಾಜೇಗೌಡ ಬಂಧನವಾಗಿರುವುದು ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಾದರೂ ಹಾಸನ ಪೆನ್ ಡ್ರೈವ್ ಪ್ರಕರಣಕ್ಕೇ ತಳುಕು ಹಾಕಿಕೊಂಡಿದೆ. ಈಗಾಗಲೇ ಮಾಜಿ ಸಂಸದ ಶಿವರಾಮೇಗೌಡ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ವಿರುದ್ಧ ಗಂಭೀರ ಆರೋಪ ಮಾಡಿದ್ದಲ್ಲದೆ, ಅವರ ಜತೆಗಿನ ಮಾತುಕತೆ ಎನ್ನಲಾದ ಆಡಿಯೊವನ್ನು ಬಿಡುಗಡೆ ಮಾಡಿದ್ದರು. ಇದಲ್ಲದೆ, ಸಾಕಷ್ಟು ವಿಡಿಯೊಗಳು, ಸಾಕ್ಷಿಗಳು ಸಹ ತಮ್ಮ ಬಳಿ ಇದೆ ಎಂದು ಹೇಳಿಕೊಂಡಿದ್ದರು. ಸಾಕ್ಷ್ಯಗಳನ್ನು ಮುಂದಿನ ದಿನಗಳಲ್ಲಿ ಸಿಬಿಐ ಮುಂದೆ ಇಡುತ್ತೇನೆ ಎಂದು ಸಹ ಸುದ್ದಿಗೋಷ್ಠಿ ನಡೆಸಿ ನೇರವಾಗಿ ರಾಜ್ಯ ಸರ್ಕಾರದ ವಿರುದ್ಧ ಸವಾಲು ಹಾಕಿದ್ದರು. ಆದರೆ, ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಅವರನ್ನು ಬಂಧಿಸಲಾಗಿದೆ.

Continue Reading

ಕರ್ನಾಟಕ

Anjali Murder Case: ನನ್ನ ಮಗ ಮಾಡಿದ್ದು ತಪ್ಪು, ಕೋರ್ಟ್ ಅವನಿಗೆ ಯಾವ ಶಿಕ್ಷೆಯಾದ್ರೂ ಕೊಡಲಿ: ಆರೋಪಿ ಗಿರೀಶ್ ತಾಯಿ

Anjali Murder Case: ಈ ಹಿಂದೆ ಕಳ್ಳತನ ಮಾಡಿದಾಗ ಬುದ್ಧಿವಾದ ಹೇಳಿದ್ದೆ. ಈಗ ಇಂತಹ ಕೆಲಸ ಮಾಡುತ್ತಾನೆ ಎಂದು ಊಹಿಸಿರಲಿಲ್ಲ ಎಂದು ಅಂಜಲಿ ಕೊಲೆ ಪ್ರಕರಣದ ಬಗ್ಗೆ ಆರೋಪಿ ಗಿರೀಶ್‌ ತಾಯಿ ಸವಿತಾ ಸಾವಂತ್ ಹೇಳಿದ್ದಾರೆ.

VISTARANEWS.COM


on

Girish's mother
Koo

ಹುಬ್ಬಳ್ಳಿ: ನನ್ನ ಮಗ ಗಿರೀಶ್ ಮಾಡಿದ್ದು ತಪ್ಪು, ಆತನಿಗೆ ಕೋರ್ಟ್ ಏನು ಶಿಕ್ಷೆ ಕೊಡುತ್ತೆ ಕೊಡಲಿ. ಅಂಜಲಿ (Anjali Murder Case) ನನ್ನನ್ನು ಮಮ್ಮಿ ಅಂತ ಕರೆಯುತ್ತಿದ್ದಳು, ಅಂಜಲಿ ಮತ್ತು ಗಿರೀಶ್ ಪರಸ್ಪರ ಪ್ರೀತಿಸುತ್ತಿದ್ದರು. ನನ್ನ ಮಗ ಅಂಜಲಿ ಜತೆ ಮದುವೆಯಾಗುತ್ತೇನೆ ಅಂದಿದ್ದ. ಆದರೆ, ಇತ್ತೀಚೆಗೆ ಇಬ್ಬರ ನಡುವೆ ಹೊಂದಾಣಿಕೆ ಇರಲಿಲ್ಲ. ಅವನು ಈ ಹಂತಕ್ಕೆ ಹೋಗುತ್ತಾನೆ ಅಂತ ಗೊತ್ತಿರಲಿಲ್ಲ ಎಂದು ಆರೋಪಿ ಗಿರೀಶ್ ತಾಯಿ ಸವಿತಾ ಸಾವಂತ್ ಹೇಳಿದ್ದಾರೆ.

ಅಂಜಲಿ ಹತ್ಯೆ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಇಬ್ಬರೂ ಹೇಗಾದರೂ ಚೆನ್ನಾಗಿರಿ ಅಂತ ಹೇಳಿದ್ದೆ. ಕಳೆದ ಆರು ತಿಂಗಳಿಂದ ಮಗ ಮನೆಗೆ ಬಂದಿಲ್ಲ. ಅಂಜಲಿ ಫೋನ್‌ನಲ್ಲಿ ಬೇರೆಯವರ ಜತೆ ಮಾತನಾಡುತ್ತಾಳೆ ಮಮ್ಮಿ ಅಂತ ಹೇಳಿದ್ದ. ಆಕೆಗೆ ಇಷ್ಟ ಇಲ್ಲದಿದ್ದರೆ ಬಿಟ್ಟು ಬಿಡು ಅಂದಿದ್ದೆ. ಆದರೆ ಈ ರೀತಿ ಮಾಡುತ್ತಾನೆ ಅಂತ ಗೊತ್ತಿರಲಿಲ್ಲ ಎಂದರು ತಿಳಿಸಿದ್ದಾರೆ.

ಇದನ್ನೂ ಓದಿ | Anjali Murder Case: ರೈಲಿನಲ್ಲಿ ಮತ್ತೊಬ್ಬ ಮಹಿಳೆ ಕೊಲೆಗೆ ಯತ್ನಿಸಿದ ಅಂಜಲಿ ಹಂತಕ!

ಅವನು ನನಗೆ ಒಂದು ಪೈಸೆಯೂ ಮನೆ ಖರ್ಚಿಗೆ ಕೊಡುತ್ತಿರಲಿಲ್ಲ. ಈ ಹಿಂದೆ ಕಳ್ಳತನ ಮಾಡಿದಾಗ ಬುದ್ಧಿವಾದ ಹೇಳಿದ್ದೆ. ನನಗೆ ಯಾರೂ ಇಲ್ಲ, ನಾನು ಕೆಲಸ ಮಾಡದೆ ಮನೆ ನಡೆಯಲ್ಲ. ಬಾಡಿಗೆ ಮನೆಯವರು ಮನೆ ಖಾಲಿ ಮಾಡು ಅಂತಿದ್ದಾರೆ. ಯಾವ ಸಂಬಂಧಿಕರೂ ನನ್ನ ಸಹಾಯಕ್ಕೆ ಬಂದಿಲ್ಲ. ನಾನು ಮಗನನ್ನ ನೋಡಲು ಕಿಮ್ಸ್‌ಗೆ ಹೋಗಲ್ಲ. ಅವನಿಗೆ ಬೇಲ್ ಸೇರಿದಂತೆ, ಯಾವುದೇ ಸಹಾಯವನ್ನು ಮಾಡಲ್ಲ. ನ್ಯಾಯಾಲಯ ಏನು ತೀರ್ಮಾನ ತೆಗೆದುಕೊಳ್ಳುತ್ತದೆ ತೆಗೆದುಕೊಳ್ಳಲಿ ಎಂದು ಹೇಳಿದ್ದಾರೆ.

ಅಂಜಲಿ ಕೊಂದವನ ಎನ್‌ಕೌಂಟರ್ ಮಾಡಿ: ಸಹೋದರಿ ಪೂಜಾ ಆಗ್ರಹ

Anjali Murder Case

ಧಾರವಾಡ: ಅಂಜಲಿ ಹತ್ಯೆ ಪ್ರಕರಣದ (Anjali Murder Case) ಆರೋಪಿ ಗಿರೀಶ್‌ನನ್ನು ಎನ್‌ಕೌಂಟರ್ ಮಾಡಬೇಕು. ಯಾವುದೇ ಕಾರಣಕ್ಕೂ ಆರೋಪಿಗೆ ಚಿಕಿತ್ಸೆ ಕೊಡಬಾರದು, ಅವನನ್ನು ಆದಷ್ಟು ಬೇಗ ಎನ್ ಕೌಂಟರ್ ಮಾಡಬೇಕು. ನಮ್ಮ ಅಕ್ಕ ಹೇಗೆ ರಕ್ತ ಸುರಿದು ಪ್ರಾಣ ಬಿಟ್ಟಳೋ ಅದೇ ರೀತಿ ಅವನು ಸಾಯಬೇಕು ಎಂದು ಅಂಜಲಿ ಸಹೋದರಿ ಪೂಜಾ ಆಗ್ರಹಿಸಿದ್ದಾರೆ.

ವಿಸ್ತಾರ ನ್ಯೂಸ್‌ ಜತೆ ಶುಕ್ರವಾರ ಮಾತನಾಡಿರುವ ಅಂಜಲಿ ಸಹೋದರಿ ಪೂಜಾ, ನಮ್ಮ ಅಕ್ಕನಿಗೂ ಅವನಿಗೂ ಯಾವುದೇ ಸಂಬಂಧ ಇಲ್ಲ. ಏನೇನೋ ಹೇಳಿ ದಿಕ್ಕು ತಪ್ಪಿಸುತ್ತಿದ್ದಾರೆ. ಪೊಲೀಸರು ಹೇಗೆ ಬೇಕೋ ಹಾಗೆ ಮಾಡುವ ವಿಚಾರದಲ್ಲಿದ್ದಾರೆ. ಇದನ್ನು ಆದಷ್ಟು ಬೇಗ ತನಿಖೆ ಮಾಡಬೇಕು. ಬೆಳಗ್ಗೆ ಮಾತನಾಡಲು ಬಂದವನು ಚಾಕು ಹಾಕಿದ. ನಾವು ನಮ್ಮ ಅಕ್ಕನ ಜತೆ ಮಾತನಾಡಲು ಸಹ ಆಗಲಿಲ್ಲ. ಕೊನೆ ಗಳಿಗೆಯಲ್ಲಿ ಪೊಲೀಸರು ಬಂದು ಡಾಕ್ಟರ್ ಸಹ ಕರೆಯಲಿಲ್ಲ. ಕೇವಲ ಪೋಟೋ ತೆಗೆದುಕೊಂಡು ಹೋದರು. ಅವನಿಗೆ ಅದೇ ರೀತಿ ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿದರು.

ನಮ್ಮ ಅಕ್ಕನ ಜತೆಗೆ ಏನೇನೋ ಸಂಬಂಧ ಕಲ್ಪಿಸುತ್ತಿದ್ದಾರೆ. ಹಾಗಾದರೆ ನೆನ್ನೆಯೂ ಸಹ ಅವನು ಯಾರದೋ ಜೊತೆ ಜಗಳ ಮಾಡಿದ್ದ. ಅವರಿಗೂ ಸಂಬಂಧ ಇದೆಯಾ ಎಂದು ಸಹೋದರಿ ಪ್ರಶ್ನೆ ಮಾಡಿದ್ದಾರೆ.

ಹಲ್ಲೇ ಮಾಡಿ ಓಡಿ ಹೋದ

ದಾವಣಗೆರೆ: ಮಹಿಳೆಗೆ ಅಂಜಲಿ ಹಂತಕನಿಂದ ಚಾಕು ಇರಿತ ಪ್ರಕರಣದ ಬಗ್ಗೆ ಗಾಯಾಳು ಮಹಿಳೆಯ ಪತಿ ಪ್ರತಿಕ್ರಿಯಿಸಿದ್ದಾರೆ. ನಾವು ಟ್ರೈನ್‌ನಲ್ಲಿ ಇರುವಾಗ ಅರೋಪಿ ಗಿರೀಶ್ ಹಿಂದೆ ಹಿಂದೆಯೇ ಬರುತ್ತಿದ್ದ. ರೆಸ್ಟ್ ರೂಂನ ಡೋರ್ ಓಪನ್ ಮಾಡಿ ಒಳ ನುಗ್ಗಲು ಯತ್ನಿಸಿದ. ಹೊಟ್ಟೆಗೆ ಚಾಕು ಚುಚ್ಚಲು ಮುಂದಾದಾಗ ನಾನು ಕೈ ಅಡ್ಡ ಹಿಡಿದೆ. ಕೈಗೆ ಗಾಯವಾಗುತ್ತಿದ್ದಂತೆ ಕೂಗಿಕೊಂಡೆ, ಆತ ಓಡಿಹೋದ ಎಂದು ಗದಗ ಮೂಲದ ಲಕ್ಷ್ಮೀ ಪತಿ ಮಹಾಂತೇಶ್ ತಿಳಿಸಿದ್ದಾರೆ. ಸದ್ಯ ದಾವಣಗೆರೆಯ ಖಾಸಗಿ ಆಸ್ಪತ್ರೆಯಲ್ಲಿ ಮಹಿಳೆ ಚಿಕಿತ್ಸೆ ಪಡೆಯುತ್ತಿದ್ದಾರೆ.

5 ಸಾವಿರ ಅಡ್ವಾನ್ಸ್ ತೆಗೆದುಕೊಂಡು ಹೋದವನು ಮತ್ತೆ ಬಂದಿಲ್ಲ

ಅಂಜಲಿ ಹತ್ಯೆ ಕೊಲೆ ಪ್ರಕರಣದ ಆರೋಪಿ ಗಿರೀಶ್ ಕಳೆದ ನಾಲ್ಕು ತಿಂಗಳಿನಿಂದ ಮೈಸೂರಿನ ಮಹಾರಾಜ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದ ಎಂಬುವುದು ತಿಳಿದುಬಂದಿದೆ. ಈ ಬಗ್ಗೆ ಮಹಾರಾಜ ಹೋಟೆಲ್ ಮಾಲೀಕ ಗೋವರ್ಧನ್ ಪ್ರತಿಕ್ರಿಯಿಸಿ, ವಿನಾಯಕ ನರ್ಸಿಂಗ್ ಕೇರ್ ಏಜೆನ್ಸಿ ಮೂಲಕ ನಮ್ಮ ತಂದೆ ನೋಡಿಕೊಳ್ಳಲು ಆರೋಪಿ ಗಿರೀಶ್‌ ಬಂದಿದ್ದ. ರೂಂ ಬಾಯ್, ಸಪ್ಲೈಯರ್ ಆಗಿ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | Prajwal Revanna Case: ದೇವರಾಜೇಗೌಡರಿಗೆ ಮೆಂಟಲ್‌ ಟ್ರೀಟ್ಮೆಂಟ್‌ ಕೊಡಿಸಬೇಕಿದೆ: ಕಾಂಗ್ರೆಸ್‌ ವ್ಯಂಗ್ಯ

ಗಿರೀಶ್ ಸರಿಯಾಗಿ ಕೆಲಸಕ್ಕೆ ಬರುತ್ತಿರಲಿಲ್ಲ. ಒಮ್ಮೆ 10 ದಿನ, 5‌ ದಿನ ಹೀಗೆ ರಜಾ ತೆಗೆದುಕೊಳ್ಳುತ್ತಿದ್ದ. ಏಜೆನ್ಸಿ ಮೂಲಕ ಬಂದ ಕಾರಣ ಹೆಚ್ಚು ರಜಾ ತೆಗೆದುಕೊಂಡರೂ ನಾನು ಅವನ ಬಗ್ಗೆ ಕೇಳುತ್ತಿರಲಿಲ್ಲ. ಮಂಗಳವಾರ ಸಂಜೆ 5 ಸಾವಿರ ರೂ. ಹಣ ಅಡ್ವಾನ್ಸ್ ತೆಗೆದುಕೊಂಡು ಹೋದವನು ಮತ್ತೆ ವಾಪಸ್ ಬಂದಿಲ್ಲ ಎಂದು ಹೇಳಿದ್ದಾರೆ.

ಮರುದಿನ ಪೊಲೀಸರು ನನಗೆ ಕರೆ ಮಾಡಿದಾಗಲೇ ಗಿರೀಶ್‌ ಕೊಲೆ ಮಾಡಿದ್ದಾನೆ ಎಂಬುದು ತಿಳಿಯಿತು. ನಮ್ಮ ಹೋಟೆಲ್‌ನಲ್ಲಿ ಕೆಲಸ ಮಾಡುವ ಸಿಬ್ಬಂದಿ, ಮೊಬೈಲ್‌ನಲ್ಲಿ ಹೆಚ್ಚು ಮಾತನಾಡುತ್ತಿದ್ದ ಎಂದು ಅವನ ಬಗ್ಗೆ ಹೇಳಿದ್ದರು. ಜತೆಗೆ ಕಂಪನಿಯ ಫೋನ್‌ನಿಂದ ಹೆಚ್ಚು ದಿನ ಮಾತನಾಡಿದ್ದಾನೆ. ಘಟನೆ ನಡೆಯುವ ಹಿಂದಿನ ದಿನ ಜೋರಾಗಿ ಕೂಗಾಡಿ ಮೊಬೈಲ್‌ನಲ್ಲಿ ಮಾತನಾಡುತ್ತಿದ್ದನಂತೆ. ನಮ್ಮ ಹೋಟೆಲ್‌ಗೆ ಏಳು ಪೊಲೀಸರು ಬಂದಿದ್ದರು. ನೆನ್ನೆ ರಾತ್ರಿಯವರೆಗೂ ಪೊಲೀಸರಿ ನಮ್ಮ ಹೋಟೆಲ್‌ನಲ್ಲಿ ಇದ್ದರು. ಆತ ದಾವಣಗೆರೆಯಲ್ಲಿ ಸಿಕ್ಕ ಬಳಿಕ ಮಧ್ಯರಾತ್ರಿ ಪೊಲೀಸರು ಇಲ್ಲಿಂದ ತೆರಳಿದರು ಎಂದು ತಿಳಿಸಿದ್ದಾರೆ.

Continue Reading

ಕರ್ನಾಟಕ

ಮೋದಿಯವರೇ, 3ನೇ ಬಾರಿ ಪ್ರಧಾನಿಯಾಗಿ ದೇಶ ಮುನ್ನಡೆಸಿ; ಜನುಮ ದಿನದ ಶುಭಾಶಯ ಕೋರಿದ ಪ್ರಧಾನಿಗೆ ದೇವೇಗೌಡರ ಕೃತಜ್ಞತೆ

HD Deve Gowda: ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರು ಶನಿವಾರ ತಮ್ಮ ಹುಟ್ಟುಹಬ್ಬವನ್ನು ದೇವಾಲಯ ಭೇಟಿಯೊಂದಿಗೆ ಸರಳವಾಗಿ ಆಚರಿಸಿಕೊಂಡಿದ್ದಾರೆ. ಮೊಮ್ಮಗ ನೀಡಿದ ಏಟಿನಿಂದ ಇನ್ನೂ ಪೂರ್ಣವಾಗಿ ಚೇತರಿಸಿಕೊಳ್ಳದ ದೇವೇಗೌಡರು, ದೇವರ ಮುಂದೆ ಈ ಅವಮಾನದಿಂದ ಪಾರು ಮಾಡೆಂದು ಮೌನವಾಗಿ ಪ್ರಾರ್ಥಿಸಿದರು. ಮೋದಿ ಅವರು ಕೂಡ ದೇವೇಗೌಡರಿಗೆ ಶುಭಾಶಯ ತಿಳಿಸಿದರು. ಇದಕ್ಕೆ ಗೌಡರು ಧನ್ಯವಾದ ತಿಳಿಸಿದ್ದಾರೆ.

VISTARANEWS.COM


on

HD Deve Gowda
Koo

ಬೆಂಗಳೂರು: ಮಾಜಿ ಪ್ರಧಾನಿ, ಮಣ್ಣಿನ ಮಗ, ಕರ್ನಾಟಕದ ಹಿರಿಯ ರಾಜಕಾರಣಿ ಎಚ್‌.ಡಿ.ದೇವೇಗೌಡ (HD Deve Gowda) ಅವರು ಶನಿವಾರ (ಮೇ 18) 93ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ದೇವೇಗೌಡರ ಜನ್ಮದಿನದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಂದ ಹಿಡಿದು ನೂರಾರು ನಾಯಕರು ಅವರಿಗೆ ಜನ್ಮದಿನದ ಶುಭಾಶಯ ಕೋರಿದ್ದಾರೆ. ಇನ್ನು, ಬರ್ತ್‌ಡೇಗೆ ವಿಶ್‌ ಮಾಡಿದ ಹಿನ್ನೆಲೆಯಲ್ಲಿ ಮೋದಿ ಅವರಿಗೆ ದೇವೇಗೌಡರು ಥ್ಯಾಂಕ್ಸ್‌ ಹೇಳಿದ್ದಾರೆ. ಹಾಗೆಯೇ, “ಮೂರನೇ ಬಾರಿಗೆ ಗೆದ್ದು, ನೀವು ದೇಶವನ್ನು ಮುನ್ನಡೆಸಿ” ಎಂಬುದಾಗಿಯೂ ಗೌಡರು ಆಶೀರ್ವಾದ ಮಾಡಿದ್ದಾರೆ.

“ನನ್ನ ಜನ್ಮದಿನದಂದು ಶುಭ ಕೋರಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು. ನಿಮ್ಮ ಶುಭ ಹಾರೈಕೆಗಳು ನನ್ನ ಮನಸ್ಸನ್ನು ಮತ್ತಷ್ಟು ಉಲ್ಲಾಸಗೊಳಿಸಿವೆ. ನೀವು ಶೀಘ್ರದಲ್ಲೇ ಮೂರನೇ ಬಾರಿಗೆ ದೇಶವನ್ನು ಮುನ್ನಡೆಸುವಂತಾಗಲಿ ಎಂಬುದಾಗಿ ಶುಭ ಕೋರುತ್ತೇನೆ” ಎಂದು ದೇವೇಗೌಡರು ಎಕ್ಸ್‌ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ.

ಎಚ್‌.ಡಿ. ದೇವೇಗೌಡರ ಹುಟ್ಟುಹಬ್ಬಕ್ಕೆ ಶನಿವಾರ ಬೆಳಗ್ಗೆ ಸೋಷಿಯಲ್‌ ಮೀಡಿಯಾ ಎಕ್ಸ್‌ ನರೇಂದ್ರ ಮೋದಿ ಶುಭಾಶಯ ತಿಳಿಸಿದರು. ದೇಶಕ್ಕೆ ದೇವೇಗೌಡ ಸೇವೆ ಗಣನೀಯವಾಗಿದ್ದು, ರಾಜಕೀಯ ವಲಯದಲ್ಲಿ ಅವರನ್ನು ಗೌರವದಿಂದ ಕಾಣಲಾಗುತ್ತದೆ. ಕೃಷಿ ಮತ್ತು ಗ್ರಾಮೀಣಾಭಿವೃದ್ಧಿಯಲ್ಲಿ ಅವರ ಆಸಕ್ತಿ ಗಮನಾರ್ಹವಾಗಿದೆ. ಅವರ ದೀರ್ಘ ಮತ್ತು ಆರೋಗ್ಯಕರ ಜೀವನಕ್ಕಾಗಿ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಪೋಸ್ಟ್‌ ಮಾಡಿದ್ದರು.

ಹಲಸಿನ ಹಣ್ಣು ಕೊಟ್ಟ ಕಾರ್ಯಕರ್ತ

ಕಟ್ಟಾ ಅಭಿಮಾನಿಯೊಬ್ಬ ದೇವೇಗೌಡರಿಗೆ ಹಲಸಿನ ಹಣ್ಣನ್ನು ಉಡುಗೊರೆಯಾಗಿ ನೀಡಿದ್ದಾನೆ. ಅದನ್ನು ಅಷ್ಟೇ ಪ್ರೀತಿಪೂರ್ವಕವಾಗಿ, ಖುಷಿ ಖುಷಿಯಿಂದ ದೇವೇಗೌಡ ಅವರು ಸ್ವೀಕರಿಸಿದರು. ಅಲ್ಲದೆ, ಆ ಹಲಸಿನ ಹಣ್ಣಿನ ಬಳಿಗೆ ತಮ್ಮ ಮೂಗನ್ನು ಇಟ್ಟು ಅದರ ಪರಿಮಳವನ್ನು ಆಸ್ವಾದಿಸಿದರು. ಕಾರ್ಯಕರ್ತನ ಗಿಫ್ಟ್‌ ಬಗ್ಗೆ ಬಹಳವೇ ಖುಷಿಪಟ್ಟರು.

ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರು ಶನಿವಾರ ತಮ್ಮ ಹುಟ್ಟುಹಬ್ಬವನ್ನು ದೇವಾಲಯ ಭೇಟಿಯೊಂದಿಗೆ ಸರಳವಾಗಿ ಆಚರಿಸಿಕೊಂಡಿದ್ದಾರೆ. ಮೊಮ್ಮಗ ನೀಡಿದ ಏಟಿನಿಂದ ಇನ್ನೂ ಪೂರ್ಣವಾಗಿ ಚೇತರಿಸಿಕೊಳ್ಳದ ದೇವೇಗೌಡರು, ದೇವರ ಮುಂದೆ ಈ ಅವಮಾನದಿಂದ ಪಾರು ಮಾಡೆಂದು ಮೌನವಾಗಿ ಪ್ರಾರ್ಥಿಸಿದರು.

ಮೊಮ್ಮಗ ಪ್ರಜ್ವಲ್‌ ಪ್ರಕರಣ ತಂದಿಟ್ಟ ಸಂಕಷ್ಟದಿಂದ ನೊಂದಿರುವ ಗೌಡರು 92 ವರ್ಷದಲ್ಲಿ ಮೊದಲ ಬಾರಿಗೆ ಗಡ್ಡಧಾರಿಯಾಗಿದ್ದರು. ಇಂದು ಮನೆಯಿಂದ ಹೊರಗೆ ಬಂದು ದೇವಾಲಯಕ್ಕೆ ಹೊರಟ ಸಂದರ್ಭದಲ್ಲಿ ಮತ್ತೆ ನೀಟ್‌ ಶೇವ್‌ ಮಾಡಿಕೊಂಡಿದ್ದಾರೆ. ಇಂದು ಮುಂಜಾನೆ ಅವರು ಬೆಂಗಳೂರಿನ ಜೆಪಿ ನಗರ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನಕ್ಕೆ ತೆರೆಳಿ ವಿಶೇಷ ಪೂಜೆ ಸಲ್ಲಿಸಿದರು. ಪೂಜೆಯ ಬಳಿಕ ಅವರು ಮತ್ತೆ ಮನೆ ಸೇರಿಕೊಂಡರು.

ಇದನ್ನೂ ಓದಿ: Mallikarjun Kharge: ಬುಲ್ಡೋಜರ್‌ ಹೇಳಿಕೆ ನೀಡಿದ ಮೋದಿ ವಿರುದ್ಧ ಕ್ರಮ ಕೈಗೊಳ್ಳಿ; ಚುನಾವಣಾ ಆಯೋಗಕ್ಕೆ ಖರ್ಗೆ

Continue Reading

ಹಾಸನ

Prajwal Revanna Case: ಅಶ್ಲೀಲ ವಿಡಿಯೊ ವೈರಲ್ ಕೇಸ್‌; ವಕೀಲ ದೇವರಾಜೇಗೌಡ ಎಸ್‌ಐಟಿ ಕಸ್ಟಡಿ ಅವಧಿ 2 ವಿಸ್ತರಣೆ

Prajwal Revanna Case: ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊಗಳುಳ್ಳ ಪೆನ್‌ಡ್ರೈವ್‌ ವೈರಲ್‌ ಕೇಸ್‌ಗೆ ಸಂಬಂಧಪಟ್ಟಂತೆ ದೇವರಾಜೇಗೌಡ ಅವರ ಕಸ್ಟಡಿ ಅವಧಿ ಮುಕ್ತಾಯವಾಗಿತ್ತು. ಹೀಗಾಗಿ ಅವರನ್ನು ಇಂದು ಪುನಃ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದ ಎಸ್‌ಐಟಿ ಅಧಿಕಾರಿಗಳು ಮತ್ತೆ ಎರಡು ದಿನ ಕಸ್ಟಡಿಗೆ ಕೇಳಿದ್ದರು. ಹೀಗಾಗಿ ಮೇ 20ರ ಸಂಜೆ ಐದು ಗಂಟೆಗೆ ಕೋರ್ಟ್ ಮುಂದೆ ಹಾಜರು ಪಡಿಸುವಂತೆ ನ್ಯಾಯಾಲಯ ಸೂಚಿಸಿ, ಎರಡು ದಿನ ಕಸ್ಟಡಿಯನ್ನು ಮುಂದುವರಿಸಿ ಆದೇಶಿಸಿದೆ.

VISTARANEWS.COM


on

Prajwal Revanna Case obscene video goes viral Advocate Devarajegowda SIT custody extended by 2 days
Koo

ಹಾಸನ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೊ ವೈರಲ್ ಪ್ರಕರಣದಲ್ಲಿ (Prajwal Revanna Case) ಎಂಟನೇ ಆರೋಪಿಯಾಗಿರುವ ವಕೀಲ ದೇವರಾಜೇಗೌಡ (Devarajegowda) ಅವರನ್ನೂ ಮತ್ತೂ ಎರಡು ದಿನ ಪೊಲೀಸ್‌ ಕಸ್ಟಡಿಗೆ ನೀಡಿ 5ನೇ ಅಧಿಕ ಸಿವಿಲ್ ನ್ಯಾಯಾಲಯ ಮತ್ತು ಜೆಎಂಎಫ್‌ಸಿ ನ್ಯಾಯಾಲಯವು ಆದೇಶಿಸಿದೆ.

ಏಪ್ರಿಲ್ 23 ರಂದು ಹಾಸನ ನಗರದ ಸೈಬರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್‌ಐಆರ್‌ನಲ್ಲಿ 8ನೇ ಆರೋಪಿಯಾಗಿ ದೇವರಾಜೇಗೌಡ ಅವರ ಹೆಸರು ಸೇರ್ಪಡೆ ಮಾಡಲಾಗಿದೆ. ಹೀಗಾಗಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ದೇವರಾಜೇಗೌಡ ಅವರನ್ನು ವಿಚಾರಣೆಗಾಗಿ ಶುಕ್ರವಾರ ಒಂದು ದಿನದ ಮಟ್ಟಿಗೆ ಎಸ್‌ಐಟಿ ವಶಕ್ಕೆ ಪಡೆಯಲಾಗಿತ್ತು.

ದೇವರಾಜೇಗೌಡ ಅವರ ಕಸ್ಟಡಿ ಅವಧಿ ಮುಕ್ತಾಯವಾಗಿದ್ದರಿಂದ ಪುನಃ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದ ಎಸ್‌ಐಟಿ ಅಧಿಕಾರಿಗಳು ಮತ್ತೆ ಎರಡು ದಿನ ಕಸ್ಟಡಿಗೆ ಕೇಳಿದ್ದರು. ಹೀಗಾಗಿ ಮೇ 20ರ ಸಂಜೆ ಐದು ಗಂಟೆಗೆ ಕೋರ್ಟ್ ಮುಂದೆ ಹಾಜರು ಪಡಿಸುವಂತೆ ನ್ಯಾಯಾಲಯ ಸೂಚಿಸಿ, ಎರಡು ದಿನ ಕಸ್ಟಡಿಯನ್ನು ಮುಂದುವರಿಸಿ ಆದೇಶಿಸಿದೆ.

ಎರಡೆರಡು ಕೇಸ್‌

ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ (physical Abuse) ಕೇಸ್‌ ಆರೋಪಿ ವಕೀಲ ದೇವರಾಜೇಗೌಡ (Devarajegowda) ಅವರ ಪೊಲೀಸ್ ಕಸ್ಟಡಿ ಅಂತ್ಯವಾಗಿದ್ದರಿಂದ ಅವರನ್ನು ಶುಕ್ರವಾರ ನ್ಯಾಯಾಂಗ ಬಂಧನಕ್ಕೆ ನೀಡಲಾಗಿತ್ತು. ಮೇ 14 ರಂದು ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದ ಹೊಳೆನರಸೀಪುರ ನಗರ ಪೊಲೀಸರು, ಗುರುವಾರವೂ ಒಂದು ದಿನ ಕಸ್ಟಡಿಗೆ ಪಡೆದುಕೊಂಡಿದ್ದರು. ಶುಕ್ರವಾರ ಕೋರ್ಟ್‌ ಮುಂದೆ ಹಾಜರುಪಡಿಸಿದ ಹಿನ್ನೆಲೆಯಲ್ಲಿ ಅವರಿಗೆ ನ್ಯಾಯಾಂಗ ಬಂಧನವಿರಿಸಿ ಆದೇಶಿಸಲಾಗಿತ್ತು. ಸದ್ಯ ನ್ಯಾಯಾಂಗ ಬಂಧನದಲ್ಲಿದ್ದ ವಕೀಲರನ್ನು ಪೆನ್‌ಡ್ರೈವ್‌ ಪ್ರಕರಣದಲ್ಲಿ ಶುಕ್ರವಾರ ಎಸ್‌ಐಟಿ ಕಸ್ಟಡಿಗೆ ಪಡೆದುಕೊಂಡಿತ್ತು. ಈಗ ಮತ್ತೆ ಎರಡು ದಿನ ಕಸ್ಟಡಿ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ.

ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ ಸಾಕ್ಷ್ಯ ಬಿಡುಗಡೆಗೆ ಮುಂದಾಗಿದ್ದ ದೇವರಾಜೇಗೌಡ ಅವರು ಬೇರೆ ಕೇಸ್‌ನಲ್ಲಿ ಬಂಧನವಾಗಿದ್ದಾರೆ. ಒಟ್ಟು ನಾಲ್ಕು ದಿನ ಪೊಲೀಸ್ ಕಸ್ಟಡಿಯಲ್ಲಿದ್ದ ದೇವರಾಜೇಗೌಡ ಅವರನ್ನು ಮತ್ತೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿತ್ತು.

ದೇವರಾಜೇಗೌಡ ಮೇ 11ರಂದು ಬಂಧನಕ್ಕೆ ಒಳಗಾಗಿದ್ದರು. ಇವರ ಮೇಲೆ ಲೈಂಗಿಕ ದೌರ್ಜನ್ಯ, ಕಿರುಕುಳ ಆರೋಪಗಳನ್ನು ಹೊರಿಸಲಾಗಿದೆ. ಹೀಗಾಗಿ ಹೆಚ್ಚಿನ ವಿಚಾರಣೆಗಾಗಿ ಹೊಳೆನರಸೀಪುರ ನಗರ ಠಾಣೆ ಪೊಲೀಸರು ಅವರನ್ನು ಕಸ್ಟಡಿಗೆ ಪಡೆದುಕೊಂಡಿದ್ದರು. ಹೊಳೆನರಸೀಪುರ, ಹಾಸನ ಸೇರಿ ಇತರ ಅಗತ್ಯ ಸ್ಥಳಗಳಿಗೆ ಕರೆದೊಯ್ದು ವಿಚಾರಣೆಯನ್ನು ಕೈಗೊಂಡಿದ್ದರು.

ಸರ್ಕಾರದ ವಿರುದ್ಧ ತೊಡೆ ತಟ್ಟಿದ್ದ ದೇವರಾಜೇಗೌಡ

ವಕೀಲ ದೇವರಾಜೇಗೌಡ ಬಂಧನವಾಗಿರುವುದು ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಾದರೂ ಹಾಸನ ಪೆನ್ ಡ್ರೈವ್ ಪ್ರಕರಣಕ್ಕೇ ತಳುಕು ಹಾಕಿಕೊಂಡಿದೆ. ಈಗಾಗಲೇ ಮಾಜಿ ಸಂಸದ ಶಿವರಾಮೇಗೌಡ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ವಿರುದ್ಧ ಗಂಭೀರ ಆರೋಪ ಮಾಡಿದ್ದಲ್ಲದೆ, ಅವರ ಜತೆಗಿನ ಮಾತುಕತೆ ಎನ್ನಲಾದ ಆಡಿಯೊವನ್ನು ಬಿಡುಗಡೆ ಮಾಡಿದ್ದರು. ಇದಲ್ಲದೆ, ಸಾಕಷ್ಟು ವಿಡಿಯೊಗಳು, ಸಾಕ್ಷಿಗಳು ಸಹ ತಮ್ಮ ಬಳಿ ಇದೆ ಎಂದು ಹೇಳಿಕೊಂಡಿದ್ದರು. ಸಾಕ್ಷ್ಯಗಳನ್ನು ಮುಂದಿನ ದಿನಗಳಲ್ಲಿ ಸಿಬಿಐ ಮುಂದೆ ಇಡುತ್ತೇನೆ ಎಂದು ಸಹ ಸುದ್ದಿಗೋಷ್ಠಿ ನಡೆಸಿ ನೇರವಾಗಿ ರಾಜ್ಯ ಸರ್ಕಾರದ ವಿರುದ್ಧ ಸವಾಲು ಹಾಕಿದ್ದರು. ಆದರೆ, ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಅವರನ್ನು ಬಂಧಿಸಲಾಗಿದೆ.

ಇದನ್ನೂ ಓದಿ: DK Shivakumar: ದೇವರಾಜೇಗೌಡ ಮೆಂಟಲ್‌ ಕೇಸ್‌; 100 ಕೋಟಿ ರೂ. ಆಫರ್‌ ಮಾಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಲಿ ಎಂದ ಡಿಕೆಶಿ

ಪತಿಯು ಮಾಲೀಕತ್ವದ ಸೈಟ್ ವಿಚಾರವಾಗಿ ದೇವರಾಜೇಗೌಡ ಅವರನ್ನು ಮಹಿಳೆಯೊಬ್ಬರು ಭೇಟಿಯಾಗಿದ್ದರು. ಆ ಪರಿಚಯವನ್ನು ದುರ್ಬಳಕೆ ಮಾಡಿಕೊಂಡು ಲೈಂಗಿಕವಾಗಿ ಬಳಸಿಕೊಂಡಿರುವ ಆರೋಪ ದೇವರಾಜೇಗೌಡ ವಿರುದ್ಧ ಕೇಳಿ ಬಂದಿದೆ.

Continue Reading
Advertisement
Prajwal Revanna Case
ಪ್ರಮುಖ ಸುದ್ದಿ4 mins ago

Prajwal Revanna Case: ಪ್ರಜ್ವಲ್ ರೇವಣ್ಣಗೆ ಸಂಕಷ್ಟ; ಅರೆಸ್ಟ್ ವಾರಂಟ್ ನೀಡಿದ ಕೋರ್ಟ್‌

Virat Kohli
ಕ್ರೀಡೆ26 mins ago

Virat Kohli: ಚೆನ್ನೈ ವಿರುದ್ಧದ ಪಂದ್ಯಕ್ಕೂ ಮುನ್ನ ಐಪಿಎಲ್​ ನಿಯಮದ ಬಗ್ಗೆ ಅಸಮಾಧಾನ ಹೊರಹಾಕಿದ ಕೊಹ್ಲಿ

Girish's mother
ಕರ್ನಾಟಕ40 mins ago

Anjali Murder Case: ನನ್ನ ಮಗ ಮಾಡಿದ್ದು ತಪ್ಪು, ಕೋರ್ಟ್ ಅವನಿಗೆ ಯಾವ ಶಿಕ್ಷೆಯಾದ್ರೂ ಕೊಡಲಿ: ಆರೋಪಿ ಗಿರೀಶ್ ತಾಯಿ

HD Deve Gowda
ಕರ್ನಾಟಕ46 mins ago

ಮೋದಿಯವರೇ, 3ನೇ ಬಾರಿ ಪ್ರಧಾನಿಯಾಗಿ ದೇಶ ಮುನ್ನಡೆಸಿ; ಜನುಮ ದಿನದ ಶುಭಾಶಯ ಕೋರಿದ ಪ್ರಧಾನಿಗೆ ದೇವೇಗೌಡರ ಕೃತಜ್ಞತೆ

Viral Video
ದೇಶ48 mins ago

Viral Video: ಐಸ್ ಕ್ರೀಮ್‌ನಲ್ಲಿ ಚಿನ್ನದ ಉಂಗುರ ಅಡಗಿಸಿಕೊಟ್ಟ ಪ್ರಿಯತಮ! ಮುಂದೇನಾಯ್ತು?

Prajwal Revanna Case obscene video goes viral Advocate Devarajegowda SIT custody extended by 2 days
ಹಾಸನ48 mins ago

Prajwal Revanna Case: ಅಶ್ಲೀಲ ವಿಡಿಯೊ ವೈರಲ್ ಕೇಸ್‌; ವಕೀಲ ದೇವರಾಜೇಗೌಡ ಎಸ್‌ಐಟಿ ಕಸ್ಟಡಿ ಅವಧಿ 2 ವಿಸ್ತರಣೆ

RCB vs CSK:
ಕ್ರೀಡೆ55 mins ago

RCB vs CSK: ಗೆದ್ದರೂ ಆರ್​ಸಿಬಿಗೆ ಪ್ಲೇ ಆಫ್​ ಖಚಿತವಲ್ಲ; ಹೀಗಿದೆ ರನ್​ರೇಟ್​ ಲೆಕ್ಕಾಚಾರ!

Karnataka Weather Forecast Rain alert
ಮಳೆ1 hour ago

Karnataka Weather : ಮಲೆನಾಡಿನಲ್ಲಿ ಮಳೆ ಮೋಡಿ; ಭಾನುವಾರವೂ ಅಬ್ಬರ ಇರಲಿದೆ ನೋಡಿ

Koppal tragedy
ಕೊಪ್ಪಳ2 hours ago

Koppal Tragedy : ಶೌಚಾಲಯದ ಗೋಡೆ ಕುಸಿದು ಮಹಿಳೆಯರಿಬ್ಬರು ಸಾವು; ಈಜಲು ಹೋದ ಯುವಕ ನೀರುಪಾಲು

Prajwal Revanna case Devaraje Gowda should be given mental treatment says Congress
ರಾಜಕೀಯ2 hours ago

Prajwal Revanna Case: ದೇವರಾಜೇಗೌಡರಿಗೆ ಮೆಂಟಲ್‌ ಟ್ರೀಟ್ಮೆಂಟ್‌ ಕೊಡಿಸಬೇಕಿದೆ: ಕಾಂಗ್ರೆಸ್‌ ವ್ಯಂಗ್ಯ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ22 hours ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ2 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ2 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು2 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ3 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ4 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ4 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20244 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌