Comedian Chandraprabha : ಅಪಘಾತ ಆದ್ಮೆಲೆ ಭಯಪಟ್ಟು ಹೊರಟು ಹೋಗಿಬಿಟ್ಟೆ ತಪ್ಪಾಯ್ತು; ಗಿಚ್ಚಿ ಗಿಲಿಗಿಲಿ ಚಂದ್ರಪ್ರಭ - Vistara News

ಕರ್ನಾಟಕ

Comedian Chandraprabha : ಅಪಘಾತ ಆದ್ಮೆಲೆ ಭಯಪಟ್ಟು ಹೊರಟು ಹೋಗಿಬಿಟ್ಟೆ ತಪ್ಪಾಯ್ತು; ಗಿಚ್ಚಿ ಗಿಲಿಗಿಲಿ ಚಂದ್ರಪ್ರಭ

Hit and Run Case : ಹಿಟ್‌ ಆ್ಯಂಡ್‌ ರನ್‌ ಕೇಸ್‌ ಎದುರಿಸುತ್ತಿರುವ ಗಿಚ್ಚಿ ಗಿಲಿಗಿಲಿಯ ಕಲಾವಿದ ಚಂದ್ರಪ್ರಭ (Comedian Chandraprabha) ಕ್ಷಮೆ ಕೇಳಿದ್ದಾರೆ. ಅಪಘಾತ ಮಾಡಿ (Road Accident) ಗಾಯಾಳನ್ನು ಆಸ್ಪತ್ರೆಗೆ ಸೇರಿಸದೇ ಬಿಟ್ಟು ಹೋಗಿದ್ದು ತಪ್ಪಾಯ್ತು ಎಂದು ತಪ್ಪೊಪ್ಪಿಕೊಂಡಿದ್ದಾರೆ.

VISTARANEWS.COM


on

Comedian Chandraprabha Facing hit and run case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿಕ್ಕಮಗಳೂರು: ಕಳೆದ ಮೂರು ದಿನದ ಹಿಂದೆ ಅಪಘಾತ (Road Accident) ಮಾಡಿ ಪರಾರಿ ಆಗಿದ್ದ ಹಾಸ್ಯನಟ ಚಂದ್ರಪ್ರಭ (Comedian Chandraprabha) ತಪ್ಪೊಪ್ಪಿಕೊಂಡಿದ್ದಾರೆ. ಚಂದ್ರಪ್ರಭ ಪೊಲೀಸ್ ವಿಚಾರಣೆ ಎದುರಿಸುತ್ತಿದ್ದು, ಶುಕ್ರವಾರ ಅವರ ಕಾರನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಸೆ. 8ರಂದು ಕಾಮಿಡಿ ನಟ ಚಂದ್ರಪ್ರಭಾ ಚಿಕ್ಕಮಗಳೂರು ನಗರ ಸಂಚಾರಿ ಠಾಣೆಗೆ ವಿಚಾರಣೆಗೆ ಹಾಜರಾದರು.

ಒತ್ತಡಕ್ಕೆ ಹೀಗೆ ಮಾಡಿಬಿಟ್ಟೆ ಎಂದು ಕಣ್ಣೀರು

ಠಾಣೆಯಲ್ಲಿ ವಿಚಾರಣೆ ಮುಗಿಸಿ ಹೊರಬಂದ ಹಾಸ್ಯನಟ ಚಂದ್ರಪ್ರಭಾ ಮಾಧ್ಯಮಗಳ ಮುಂದೆ ಕಣ್ಣೀರು ಹಾಕಿದರು. ಆ ದಿನ ಕಾರ್ಯಕ್ರಮದ ನಿಮಿತ್ತ ನಾನು ನನ್ನ ಸ್ನೇಹಿತ ಕಾರಿನಲ್ಲಿ ಹೊರಟಿದ್ದವಿ. ಈ ವೇಳೆ ಬೈಕ್‌ಗೆ ಕಾರು ಡಿಕ್ಕಿಯಾಗಿತ್ತು. ಬಳಿಕ ಭಯಕ್ಕೆ ಆತನನ್ನು ನನ್ನ ಸ್ನೇಹಿತ ಆಟೋದಲ್ಲಿ ಆಸ್ಪತ್ರೆಗೆ ಕರೆದುಹೋದರು. ಆದರೆ ನಾವು ಆಸ್ಪತ್ರೆಗೆ ದಾಖಲು ಮಾಡಲಿಲ್ಲ. ಅಪಘಾತ ಬಳಿಕ ಭಯಕ್ಕೆ, ಕಾರ್ಯಕ್ರಮವೊಂದರ ಒತ್ತಡಕ್ಕೆ ಹೊರಟು ಹೋದೆ. ನಾನು ಮಾಡಿದ್ದು ತಪ್ಪು, ಎಲ್ಲರಿಗೂ ಕ್ಷಮೆ ಕೇಳುತ್ತೇನೆ.

Comedian Chandraprabha Facing hit and run case
ಠಾಣೆಗೆ ಹಾಜರಾದ ಹಾಸ್ಯ ನಟ ಚಂದ್ರಪ್ರಭ

ಗಾಯಾಳು ಕುಡಿದಿದ್ದ ಎಂದಿದ್ದೆ ಕ್ಷಮಿಸಿ, ಆತ ಕುಡಿದಿರಲಿಲ್ಲ. ಅಪಘಾತವಾದ ಯುವಕನ ಯೋಗಕ್ಷೇಮದ ಬಗ್ಗೆ ವಿಚಾರಿಸಬೇಕಿತ್ತು. ಆಸ್ಪತ್ರೆಗೆ ಹೋಗಿ ಅವರ ಯೋಗ ಕ್ಷೇಮ ವಿಚಾರಿ, ನನ್ನ ಕೈಯಲ್ಲಿ ಆಗುವ ಸಹಾಯ ಮಾಡುತ್ತೇನೆ. ನಾನು ಬಡವ ನನ್ನ ತಂದೆ ಮೃತಪಟ್ಟು 11 ವರ್ಷವಾಗಿದೆ. ನಾವಿಬ್ಬರೂ ದಲಿತರು ಕ್ಷಮಿಸಿಬಿಡಿ ಎಂದು ಚಿಕ್ಕಮಗಳೂರು ಸಂಚಾರಿ ಠಾಣೆ ಮುಂಭಾಗ ಪ್ರತಿಕ್ರಿಯಿಸಿದರು.

ಸಾವು ಬದುಕಿನ ಮಧ್ಯೆ ಗಾಯಾಳು ಹೋರಾಟ

ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಗಾಯಾಳು ಮಾಲ್ತೇಶ್‌ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತವಾಗಿ ಮೂರು ದಿನವಾದರೂ ತಿರುಗಿ ನೋಡಿಲ್ಲ ಎಂದು ಚಂದ್ರಪ್ರಭಾ ವಿರುದ್ಧ ಮಾಲ್ತೇಶ್ ಪೋಷಕರು ಆಕ್ರೋಶ ಹೊರಹಾಕಿದ್ದಾರೆ. ನಮ್ಮ ಕುಟುಂಬಕ್ಕೆ ನಮ್ಮ ಮಗನೇ ಆಧಾರವಾಗಿದ್ದ, ಈಗ ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದಾನೆ. ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ. ಪೊಲೀಸರು ಸೂಕ್ತ ತನಿಖೆ ನಡೆಸಿ, ನ್ಯಾಯ ಕೊಡಿಸಬೇಕು ಎಂದು ಪೋಷಕರು ಕಣ್ಣೀರಿಟ್ಟು ಮನವಿ ಮಾಡಿದ್ದಾರೆ.

ಗಾಯಾಳು ಮಾಲ್ತೇಶ್ ಅಣ್ಣ ರಘು ಪ್ರತಿಕ್ರಿಯಿಸಿದ್ದು, ನನ್ನ ತಮ್ಮನಿಗೆ ಕುಡಿಯುವ ಅಭ್ಯಾಸವೇ ಇಲ್ಲ. ಆದರೆ ಅವನ್ಯಾರೋ ಚಂದ್ರಪ್ರಭಾ ಕುಡಿದು ಗಾಡಿ ಓಡಿಸಿರಬೇಕು ಎಂದು ಹೇಳಿಕೆ ನೀಡಿದ್ದಾನೆ. ರಸ್ತೆ ಅಪಘಾತ ಮಾಡಿ ಪರಾರಿಯಾಗಿದ್ದಾರೆ. ಆಸ್ಪತ್ರೆಗೆ ಸೇರಿಸಿದ್ದರೆ ನಾವು ಬರುವವರೆಗೆ ಇರಬಹುದಿತ್ತು, ಯಾಕೆ ಓಡಿಹೋದರು. ಆಸ್ಪತ್ರೆಗೆ ಸೇರಿಸಿದ್ದು ಅವರಲ್ಲ, ಸ್ಥಳೀಯರು ಸೇರಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

BJP-JDS Padayatra: ಬಿಜೆಪಿ-ಜೆಡಿಎಸ್‌ ಪಾದಯಾತ್ರೆಗೆ ಅನುಮತಿ ಕೊಡಲ್ಲ: ಗೃಹ ಸಚಿವ ಪರಮೇಶ್ವರ್‌

BJP-JDS Padayatra: ಈ ಹಿಂದೆ ನಮಗೂ ಅನುಮತಿ ಕೊಟ್ಟಿರಲಿಲ್ಲ, ಆದರೂ ನಾವು ಪಾದಯಾತ್ರೆ ಮಾಡಿದ್ದೆವು. ಅವರು ಪ್ರತಿಭಟನೆ ಮಾಡಲಿ, ತಡೆ ಹಾಕಲು ಹೋಗುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

VISTARANEWS.COM


on

BJP-JDS Padayatra
Koo

ಬೆಂಗಳೂರು: ಬಿಜೆಪಿ, ಜೆಡಿಎಸ್ ಪಾದಯಾತ್ರೆಗೆ (BJP-JDS Padayatra) ನಾವು ಅನುಮತಿ ಕೊಡುವುದಿಲ್ಲ, ಬೇಕಿದ್ದರೆ ಪ್ರತಿಭಟನೆ ಮಾಡಿಕೊಳ್ಳಲಿ. ಈ ಹಿಂದೆ ನಮಗೂ ಅನುಮತಿ ಕೊಟ್ಟಿರಲಿಲ್ಲ, ಆದರೂ ನಾವು ಪಾದಯಾತ್ರೆ ಮಾಡಿದ್ದೆವು. ಅವರು ಪ್ರತಿಭಟನೆ ಮಾಡಲಿ, ತಡೆ ಹಾಕಲು ಹೋಗುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಪಕ್ಷದ ವತಿಯಿಂದ ರಾಜಕೀಯ ಮಾಡುತ್ತೇವೆ. ಆದರೆ ಸರ್ಕಾರ ಉಪಯೋಗಿಸಿ ರಾಜಕೀಯ ಮಾಡಲ್ಲ. ಅವರು ರಾಜಕೀಯ ಮಾಡುತ್ತಿದ್ದಾರೆ, ನಾವೂ ರಾಜಕೀಯ ಮಾಡಬೇಕಾಗುತ್ತದೆ. ಮುಡಾ ಹಗರಣ ತನಿಖೆಗೆ ಆಯೋಗ ರಚನೆ ಮಾಡಿದ್ದೇವೆ. ವರದಿಯಲ್ಲಿ ತಪ್ಪು ಅಂತ ಬಂದರೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.

ಕಾಂಗ್ರೆಸ್‌ನಿಂದ ಕೌಂಟರ್ ಪಾದಯಾತ್ರೆ ಬಗ್ಗೆ ಪ್ರತಿಕ್ರಿಯಿಸಿ, ಆ ಬಗ್ಗೆ ಪಕ್ಷದ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ರಣನೀತಿ ಮಾಡುತ್ತಿದ್ದಾರೆ.

ಇದನ್ನೂ ಓದಿ | OBC Reservation: ಒಬಿಸಿ ಮೀಸಲಾತಿ ಹೆಚ್ಚಳಕ್ಕೆ ಸುಪ್ರೀಂ ಕೋರ್ಟ್‌ ತಡೆ; ನಿತೀಶ್‌ ಕುಮಾರ್‌ಗೆ ಮುಖಭಂಗ!ಇದನ್ನೂ ಓದಿ |

ರಾಜ್ಯದಲ್ಲಿ ಭಯದ ವಾತವರಣದ ಕಾರಣ ಬಂಡವಾಳ ಬರುತ್ತಿಲ್ಲ ಎಂಬ ನಿರ್ಮಲಾ ಸೀತಾರಾಮನ್ ಹೇಳಿಕೆಗೆ ಪ್ರತಿಕ್ರಿಯಿಸಿ, ಅನೇಕ ಕಾರಣಗಳಿಂದ ಕಂಪನಿಗಳು, ಆಯ್ಕೆಗಳನ್ನು ಇಟ್ಟುಕೊಂಡೇ ಬರುತ್ತವೆ. ಚೆನ್ನೈ, ಕರ್ನಾಟಕ, ಮಹಾರಾಷ್ಟ್ರ ಅಂತ ಆಯ್ಕೆ ಇರುತ್ತವೆ. ಅವರಿಗೆ ಎಲ್ಲಿ ಹೆಚ್ಚು ಸೌಲಭ್ಯಗಳು ಸಿಗುತ್ತವೋ ಅದರ ಪ್ರಕಾರ ತೀರ್ಮಾನ ಮಾಡುತ್ತಾರೆ. ಇಲ್ಲಿಯವರೆಗೆ ಯಾರು ಬಂದು ಹೊರಗೆ ಹೋಗುತ್ತೇವೆ ಎಂದು ಹೇಳಿಲ್ಲ. ಸುಮ್ಮನೆ ಇಲ್ಲಸಲ್ಲದ ಆಪಾದನೆ ಮಾಡುವುದು ಸರಿಯಲ್ಲ ಎಂದರು.

ಬಜೆಟ್‌ನಲ್ಲಿ ಆಂಧ್ರ ಸಿಎಂ ಚಂದ್ರಬಾಬು ನಾಯ್ಡುಗೆ 15 ಸಾವಿರ ಕೋಟಿ ಕೊಟ್ಟಿದ್ದಾರೆ. ಕೊಡಬೇಡಿ ಎನ್ನಲ್ಲ, ಆದರೆ ಎಲ್ಲರಿಗೂ ಸರಿ ಸಮಾನವಾಗಿ ಕೊಡಬೇಕು. ನಮ್ಮ ಪಾಲನ್ನು ನಮಗೆ ಕೊಡಿ ಅಂತ ದೆಹಲಿ, ಸುಪ್ರೀಂ ಕೋರ್ಟ್‌ವರೆಗೆ ತಲುಪಿದ್ದೇವೆ. ಕೊಟ್ಟಿದ್ದೀವಿ, ಕೊಟ್ಟಿದ್ದೀವಿ ಎನ್ನುತ್ತಾರೆ. ಏನು ಕೊಟ್ಟಿದ್ದೀವಿ ಅಂತ ಹೇಳಬೇಕಲ್ಲವೇ? ಭದ್ರಾ ಯೋಜನೆಗೆ ಹಣಕೊಡಬೇಕಿತ್ತು, ಕೊಟ್ಟಿಲ್ಲ. ಈ ರೀತಿ ಮಲತಾಯಿ ದೋರಣೆ ತೋರಿಸಿ, ಬೆಂಗಳೂರಿಗೆ ಬಂದು ಎಲ್ಲಾ ಕೊಟ್ಟಿದ್ದೀವಿ ಎಂದರೆ ಹೇಗೆ ಎಂದು ಪ್ರಶ್ನಿಸಿದರು.

ಬೆಂಗಳೂರು ದೇಶದ ಪ್ರತಿಷ್ಠಿತ ನಗರ, ಇದನ್ನ ಪ್ರಪಂಚಕ್ಕೆ ತೋರಿಸಬೇಕಲ್ವಾ? ನೀತಿ ಆಯೋಗಕ್ಕೆ ಮಮತಾ ಹೋಗಿ ವಾಕ್ ಔಟ್ ಮಾಡಿ ಬಂದಿದ್ದಾರೆ. ನಾವು ಹೋಗಿ ವಾಕ್ ಔಟ್ ಮಾಡಬೇಕಿತ್ತಾ? ರಾಜ್ಯ-ಕೇಂದ್ರದ ನಡುವಿನ ಸಂಬಂಧ ಚೆನ್ನಾಗಿರಬೇಕು. ಅದಕ್ಕೆ ರಾಜ್ಯವನ್ನು ಚೆನ್ನಾಗಿ ನಡೆಸಿಕೊಳ್ಳಬೇಕಲ್ವಾ ಎಂದರು.

ಬೆಂಗಳೂರಿನಲ್ಲಿ ನಾಯಿ ಮಾಂಸ ದಂಧೆ ಆರೋಪದ ಬಗ್ಗೆ ಪ್ರತಿಕ್ರಿಯಿಸಿ, ರೈಲ್ವೆ ನಿಲ್ದಾಣದಲ್ಲಿ ಗಲಾಟೆ ಆಗಿದೆ. ಇದಾದ ಮೇಲೆ ಆರೋಗ್ಯ ಇಲಾಖೆಯವರು, ಪೊಲೀಸರು ಸ್ಯಾಂಪಲ್‌ ಅನ್ನು ಲ್ಯಾಬ್‌ಗೆ ಕಳುಹಿಸಿದ್ದರು. ವರದಿಯಲ್ಲಿ ಮೇಕೆ ಮಾಂಸ ಎಂದು ಬಂದಿದೆ. ಸುಳ್ಳು ಆರೋಪ ಮಾಡಿದ್ದ ಪುನೀತ್ ಕೆರೆಹಳ್ಳಿ ಮತ್ತು ತಂಡದ ಮೇಲೆ ಕ್ರಮ ತೆಗೆದುಕೊಂಡಿದ್ದೇವೆ. ಗೊಂದಲ ಸೃಷ್ಟಿ ಮಾಡಬಾರದು ಎಂದು ಕ್ರಮ ಆಗಿದೆ. ಹೊರ ರಾಜ್ಯದಿಂದ ಮಾಂಸ ತಂದು ಮಾರೋದು ಹೊಸದಲ್ಲ, ಜನರಿಗೆ ಗೊಂದಲ ಬೇಡ, ಬಂದಿದ್ದು ಮೇಕೆ ಮಾಂಸ ಎಂದು ಸ್ಪಷ್ಟನೆ ನೀಡಿದರು.

Continue Reading

ಹಾಸನ

Train services: ಎಡಕುಮೇರಿಯಲ್ಲಿ ಭೂಕುಸಿತ; ಆಗಸ್ಟ್‌ 4ರವರೆಗೆ 14 ರೈಲುಗಳ ಸಂಚಾರ ರದ್ದು

Train services: ಯಡಕುಮೇರಿ ನಡುವೆ ಭೂಕುಸಿತ (landslide) ಸಂಭವಿಸಿದ ಕಾರಣ ಸುಮಾರು 14 ರೈಲುಗಳ ಸಂಚಾರವನ್ನು ಆಗಸ್ಟ್‌ 4ರವರೆಗೆ ರದ್ದುಪಡಿಸಲಾಗಿದೆ. ಈ ಕುರಿತು ನೈರುತ್ಯ ರೈಲ್ವೆಯ ಮೈಸೂರು ವಿಭಾಗದ ಕಡಗರವಳ್ಳಿ ವಿಭಾಗದ ಅಧಿಕಾರಿಗಳು (trains are Cancelled) ತಿಳಿಸಿದ್ದಾರೆ.

VISTARANEWS.COM


on

By

train service
Koo

ಹಾಸನ/ಮೈಸೂರು: ಕಳೆದ ಜು.27ರಂದು ಹಾಸನ ಜಿಲ್ಲೆಯ (Hassan news) ಮಲೆನಾಡು ‌ಭಾಗದಲ್ಲಿ ಮಳೆಯ ಆರ್ಭಟಕ್ಕೆ (Karnataka Rain News) ಶಿರಾಡಿ ಘಾಟಿಯ (Shiradi Ghat) ರೈಲ್ವೆ ಹಳಿಯ (Railway Track) ಮೇಲೆ ಮಣ್ಣು (landslide) ಕುಸಿದಿತ್ತು. ಸಕಲೇಶಪುರ (Sakaleshpur) ತಾಲ್ಲೂಕಿನ ಕಡಗರವಳ್ಳಿ-ಎಡಕುಮೇರಿ ಮಧ್ಯೆ ರೈಲ್ವೆ ಹಳಿಯ ಮೇಲೆ ಮಣ್ಣು ಕುಸಿದ ಪರಿಣಾಮ ರೈಲು ಓಡಾಟ ಬಂದ್‌ (Train services) ಆಗಿದೆ.

Train Services
train services

ನೈರುತ್ಯ ರೈಲ್ವೆಯ ಮೈಸೂರು ವಿಭಾಗದ ಯಡಕುಮೇರಿ ಮತ್ತು ಕಡಗರವಳ್ಳಿ ವಿಭಾಗದ ನಡುವೆ ಭೂಕುಸಿತ ಸಂಭವಿಸಿದ ಕಾರಣಕ್ಕೆ ಆ.4ರವರೆಗೆ 14 ರೈಲುಗಳ ಓಡಾಟ (trains are Cancelled) ರದ್ದುಪಡಿಸಲಾಗಿದೆ. ಯಾವ್ಯಾವ ರೈಲುಗಳ ಓಡಾಟ ಸ್ಥಗಿತವಾಗಿದೆ ಎಂಬುದರ ಮಾಹಿತಿ ಇಲ್ಲಿದೆ..

train services
train services

ಇದನ್ನೂ ಓದಿ: Shiradi Landslide: ಹಳಿ ಮೇಲೆ ಭೂಕುಸಿತ, ಬೆಂಗಳೂರು- ಮಂಗಳೂರು ರೈಲುಗಳು 15 ದಿನ ಬಂದ್, 400 ಕಾರ್ಮಿಕರಿಂದ ತೆರವು ಕಾರ್ಯಾಚರಣೆ

  1. ರೈಲು ಸಂಖ್ಯೆ 16511 ಕೆಎಸ್ಆರ್ ಬೆಂಗಳೂರು – ಕಣ್ಣೂರು ರೈಲು ಜು. 29 ರಿಂದ ಆ.03ರವರೆಗೆ ರದ್ದು
  2. ರೈಲು ಸಂಖ್ಯೆ 16512 ಕಣ್ಣೂರು – ಕೆಎಸ್ಆರ್ ಬೆಂಗಳೂರು 30.07.2024 ರಿಂದ 04.08.2024 ರದ್ದು
  3. ರೈಲು ಸಂಖ್ಯೆ 16595 ಕೆಎಸ್ಆರ್ ಬೆಂಗಳೂರು – ಕಾರವಾರ 29.07.2024 ರಿಂದ 03.08.2024 ರದ್ದು
  4. ರೈಲು ಸಂಖ್ಯೆ 16596 ಕಾರವಾರ – ಕೆಎಸ್ಆರ್ ಬೆಂಗಳೂರು 30.07.2024 ರಿಂದ 04.08.2024 ರದ್ದು
  5. ರೈಲು ಸಂಖ್ಯೆ 16585 SMVT ಬೆಂಗಳೂರು – ಮುರ್ಡೇಶ್ವರ 29.07.2024 ರಿಂದ 03.08.2024 ರದ್ದು
  6. ರೈಲು ಸಂಖ್ಯೆ 16586 ಮುರ್ಡೇಶ್ವರ – SMVT ಬೆಂಗಳೂರು 30.07.2024 ರಿಂದ 04.08.2024 ರದ್ದು
  7. ರೈಲು ಸಂಖ್ಯೆ 07377 ವಿಜಯಪುರ – ಮಂಗಳೂರು ಕೇಂದ್ರ 29.07.2024 ರಿಂದ 03.08.2024 ರದ್ದು
Train services
train services
  1. ರೈಲು ಸಂಖ್ಯೆ 07378 ಮಂಗಳೂರು ಸೆಂಟ್ರಲ್ – ವಿಜಯಪುರ 30.07.2024 ರಿಂದ 04.08.2024 ರದ್ದು
  2. ರೈಲು ಸಂಖ್ಯೆ 16515 ಯಶವಂತಪುರ – ಕಾರವಾರ 29.07.2024, 31.07.2024 & 02.08.2024 ರದ್ದುಗೊಂಡಿದೆ
  3. ರೈಲು ಸಂಖ್ಯೆ 16516 ಕಾರವಾರ – ಯಶವಂತಪುರ 30.07.2024, 01.08.2024 &03.08.2024 ರದ್ದುಗೊಂಡಿದೆ
  4. ರೈಲು ಸಂಖ್ಯೆ 16575 ಯಶವಂತಪುರ – ಮಂಗಳೂರು ಜಂಕ್ಷನ್ 30.07.2024 ಮತ್ತು 01.08.2024 ರದ್ದು
  5. ರೈಲು ಸಂಖ್ಯೆ 16576 ಮಂಗಳೂರು ಜಂಕ್ಷನ್ – ಯಶವಂತಪುರ 31.07.2024 ಮತ್ತು 02.08.2024 ರದ್ದು
  6. ರೈಲು ಸಂಖ್ಯೆ 16539 ಯಶವಂತಪುರ – ಮಂಗಳೂರು ಜಂಕ್ಷನ್ 03.08.2024 ರದ್ದು
  7. ರೈಲು ಸಂಖ್ಯೆ 16540 ಮಂಗಳೂರು ಜಂಕ್ಷನ್ – ಯಶವಂತಪುರ 04.08.2024 ರದ್ದು
train services
train services

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ವೈರಲ್ ನ್ಯೂಸ್

Viral video: ರಸ್ತೆಯಿಂದ ರಾಶಿಗಟ್ಟಲೆ ಮೊಳೆ ಹೆಕ್ಕಿ ತೆಗೆದ ಟ್ರಾಫಿಕ್‌ ಪೊಲೀಸರು; ಪಂಕ್ಚರ್‌ ಮಾಫಿಯಾ ಸಕ್ರಿಯ?

Viral Video: ನಿನ್ನೆ ಕುವೆಂಪು ವೃತ್ತದ ಅಂಡರ್‌ಪಾಸ್‌ನಲ್ಲಿ ರಾಶಿಗಟ್ಟಲೆ ಲೋಹದ ಮೊಳೆಗಳನ್ನು ಪತ್ತೆಹಚ್ಚಿದ ಬೆಂಗಳೂರು ಟ್ರಾಫಿಕ್‌ ಪೊಲೀಸರು ಅವುಗಳನ್ನು ಸ್ವಚ್ಛಗೊಳಿಸಿದರು. ಬೆಂಗಳೂರು ಟ್ರಾಫಿಕ್ ಪೊಲೀಸ್ ಅಧಿಕಾರಿಗಳು ಕುವೆಂಪು ಸರ್ಕಲ್ ಅಂಡರ್‌ಪಾಸ್‌ನಲ್ಲಿ ರಸ್ತೆಯನ್ನು ಗುಡಿಸುವ ವೀಡಿಯೊವನ್ನು ಎಕ್ಸ್‌ನಲ್ಲಿ ಅಪ್‌ಲೋಡ್‌ ಮಾಡಲಾಗಿದ್ದು, ಅದೀಗ ವೈರಲ್‌ ಆಗಿದೆ.

VISTARANEWS.COM


on

puncture mafia viral video
Koo

ಬೆಂಗಳೂರು: ಬೆಂಗಳೂರಿನ ಬೀದಿ ಬೀದಿಗಳಲ್ಲಿ ರಾಶಿಗಟ್ಟಲೆ ಮೊಳೆ (Nails) ಬಿಸಾಡಿ ವಾಹನಗಳ ಟಯರ್‌ ಪಂಕ್ಚರ್‌ (Puncture) ಆಗುವಂತೆ ಮಾಡಿ ದುಡ್ಡ ಮಾಡುವ ಮಾಫಿಯಾ (Mafia) ಕಾರ್ಯಪ್ರವೃತ್ತವಾಗಿದೆಯಾ ಎಂಬ ಅನುಮಾನ ಹೆಡೆಯೆತ್ತಿದೆ. ಜಾಲಹಳ್ಳಿಯ ಕುವೆಂಪು ವೃತ್ತದ (Kuvempu Circle) ಕೆಳಸೇತುವೆಯಲ್ಲಿ ಮುಷ್ಟಿಗಟ್ಟಲೆ ಮೊಳೆಗಳು ಒಂದೆಡೆಯೇ ಪತ್ತೆಯಾಗಿದ್ದು, ಸ್ವತಃ ಟ್ರಾಫಿಕ್‌ ಪೊಲೀಸರೇ (Traffic Police) ಇವುಗಳನ್ನು ಸ್ಥಳದಿಂದ ತೆಗೆದು ಕ್ಲೀನ್‌ ಮಾಡುವ ಅಭಿಯಾನ ನಡೆಸಿದ್ದಾರೆ. ಅದೀಗ ವೈರಲ್‌ (Viral Video) ಆಗಿದೆ.

ರಸ್ತೆ ಮಧ್ಯದಲ್ಲಿ ಮೊಳೆಗಳನ್ನು ಎಸೆದು ವಾಹನಗಳ ಪಂಕ್ಚರ್ ಮಾಡಿಸಲಾಗುತ್ತಿದೆ ಎಂಬ ವದಂತಿ ಮೊದಲಿನಿಂದಲೂ ಇದೆ. ಇದೀಗ ಸ್ವತಃ ಟ್ರಾಫಿಕ್ ಪೊಲೀಸರಿಂದಲೇ ರಾಶಿಗಟ್ಟಲೆ ಮೊಳೆಗಳ ಸಂಗ್ರಹ ನಡೆದಿದ್ದು, ಅನುಮಾನ ರುಜುವಾತು ಆದಂತಾಗಿದೆ. ನಗರದಲ್ಲಿ ಎಲ್ಲೆಂದರಲ್ಲಿ ವಾಹನಗಳು ಪಂಕ್ಚರ್ ಆಗುತ್ತಿದ್ದು, ಸಮೀಪದಲ್ಲಿರುವ ಪಂಕ್ಚರ್ ಅಂಗಡಿಗಳಿಗೆ ಸಾಕಷ್ಟು ವ್ಯಾಪಾರವಂತೂ ಆಗುತ್ತಿದೆ.

ನಿನ್ನೆ ಕುವೆಂಪು ವೃತ್ತದ ಅಂಡರ್‌ಪಾಸ್‌ನಲ್ಲಿ ರಾಶಿಗಟ್ಟಲೆ ಲೋಹದ ಮೊಳೆಗಳನ್ನು ಪತ್ತೆಹಚ್ಚಿದ ಬೆಂಗಳೂರು ಟ್ರಾಫಿಕ್‌ ಪೊಲೀಸರು ಅವುಗಳನ್ನು ಸ್ವಚ್ಛಗೊಳಿಸಿದರು. ಬೆಂಗಳೂರು ಟ್ರಾಫಿಕ್ ಪೊಲೀಸ್ ಅಧಿಕಾರಿಗಳು ಕುವೆಂಪು ಸರ್ಕಲ್ ಅಂಡರ್‌ಪಾಸ್‌ನಲ್ಲಿ ರಸ್ತೆಯನ್ನು ಗುಡಿಸುವ ವೀಡಿಯೊವನ್ನು ಎಕ್ಸ್‌ನಲ್ಲಿ ಅಪ್‌ಲೋಡ್‌ ಮಾಡಲಾಗಿದ್ದು, ಅದೀಗ ವೈರಲ್‌ ಆಗಿದೆ.

ರಸ್ತೆ ಸುರಕ್ಷತೆಯನ್ನು ಖಚಿತಪಡಿಸಲು ಪೊಲೀಸರು ಆಕ್ಷನ್‌ಗೆ ಇಳಿದಿದ್ದರು. ವಾಹನಗಳನ್ನು ಪಂಕ್ಚರ್ ಮಾಡುವ ಉದ್ದೇಶದಿಂದಲೇ ಮೊಳೆಗಳನ್ನು ರಸ್ತೆಯಲ್ಲಿ ಎಸೆಯಲಾಗಿದೆ ಎಂದು ತಿಳಿದುಬಂದಿದೆ. ಪೊಲೀಸ್‌ ಅಧಿಕಾರಿಗಳು ಹೆಚ್ಚಿನ ಮೊಳೆಗಳನ್ನು ಸಂಗ್ರಹಿಸಿ ಜಾಗವನ್ನು ಪ್ರಯಾಣಕ್ಕೆ ಸುರಕ್ಷಿತಗೊಳಿಸಿದ್ದಾರೆ. ಇನ್ನೂ ಇರಬಹುದಾದ ಮೊಳೆಗಳ ಬಗ್ಗೆ ಹುಷಾರಾಗಿರುವಂತೆ ಎಚ್ಚರಿಕೆ ನೀಡಿದ್ದಾರೆ.

ವೈರಲ್‌ ವಿಡಿಯೋ ಪೋಸ್ಟ್‌ಗೆ ನೆಟಿಜನ್‌ಗಳು ಪ್ರತಿಕ್ರಿಯಿಸಿದ್ದಾರೆ. ಪೊಲೀಸರು ಮಾಡಿದ ಕೆಲಸವನ್ನು ಶ್ಲಾಘಿಸಿದ್ದಾರೆ. ಜೊತೆಗೆ ತೊಂದರೆ ಸೃಷ್ಟಿಸಲು ಮೊಳೆ ಎಸೆದ ಅಪರಾಧಿಗಳನ್ನು ಖಂಡಿಸಿದ್ದಾರೆ. ಹೆಚ್ಚಿನ ವ್ಯಾಪಾರಕ್ಕಾಗಿ ಹತ್ತಿರದ ಪಂಕ್ಚರ್‌ವಾಲಾಗಳು ಈ ಕೆಲಸ ಮಾಡಿರಬಹುದು ಎಂದು ಕೆಲವು ಸೂಚಿಸಿದ್ದಾರೆ. ಪೊಲೀಸರು ಈ ನಿಟ್ಟಿನಲ್ಲಿಯೂ ತನಿಖೆ ನಡೆಸುತ್ತಿದ್ದಾರೆ.

ನಾನು ಹೋದದ್ದು ಸಂಧಾನಕ್ಕಲ್ಲ: ವಿನೋದ್‌ ರಾಜ್

ಬೆಂಗಳೂರು: ಈ ಹಿಂದೆ ದರ್ಶನ್ ಅವರನ್ನ ಭೇಟಿಯಾಗಲು ಪರಪ್ಪನ ಅಗ್ರಹಾರ ಜೈಲಿಗೆ ವಿನೋದ್‌ ರಾಜ್‌ ಆಗಮಿಸಿದ್ದರು. ಜುಲೈ 26ರಂದು ಚಿತ್ರದುರ್ಗಕ್ಕೆ ಹೋಗಿ ಸಂತ್ರಸ್ತ ರೇಣುಕಾ ಸ್ವಾಮಿ ಕುಟುಂಬವನ್ನು ಭೇಟಿ ಮಾಡಿ ಸಾಂತ್ವನ ಹೇಳುವ ಜತೆಗೆ 1 ಲಕ್ಷ ರೂಪಾಯಿ ಹಣ ಸಹಾಯವನ್ನು ಸಹ ಮಾಡಿದ್ದರು. ಆದರೆ ಮಾಧ್ಯಮಗಳಲ್ಲಿ ರಾಜಿ ಸಂಧಾನಕ್ಕಾಗಿ ಹೋಗಿದ್ದರು ಎಂಬಂತೆ ಬಿಂಬಿತವಾಗಿದೆ ಎಂದು ಇದೀಗ ವಿನೋದ್‌ ರಾಜ್‌ ಬೇಸರ ಹೊರ ಹಾಕಿದ್ದಾರೆ.

ಈ ಬಗ್ಗೆ ವಿನೋದ್‌ ರಾಜ್‌ ವಿಡಿಯೊ ಮೂಲಕ ಮಾತನಾಡಿ ʻʻದರ್ಶನ್ ಅವರನ್ನ ಒಬ್ಬ ಕಲಾವಿದ ಎನ್ನುವ ಕಾರಣಕ್ಕೆ ಭೇಟಿ ಮಾಡಿ ಬಂದೆ. ಮೊನ್ನೆ ನಾನು ದರ್ಶನ್‌ ಅವರನ್ನು ನೋಡೋಕೆ ಹೋಗಿದ್ದೆ. ಬಳಿಕ ರೇಣುಕಾ ಸ್ವಾಮಿ ಮನೆಗೆ ಹೋಗಿ ಬಂದೆ. ವಾಹಿನಿಗಳ ಮೂಲಕ ನನಗೆ ಅರ್ಥವಾಗಿದ್ದು ಏನೆಂದರೆ ರಾಜಿ ಸಂಧಾನಕ್ಕೋ ಅಥವಾ ಇನ್ಯಾವುದೋ ಕಾರಣಕ್ಕೋ ಅಲ್ಲಿ ಹೋಗಿದ್ದೆ ಎಂದು ಸುದ್ದಿಗಳು ವೈರಲ್‌ ಆಯ್ತು. ಖಂಡತ ಅದು ಅಲ್ವೇ ಅಲ್ಲ. ಕಲಾವಿದರು ಎನ್ನುವ ದೃಷ್ಟಿಯಿಂದ ನಾನು ಹೋಗಿದ್ದೆ. ರೇಣುಕಾ ಸ್ವಾಮಿ ಅವರ ಶ್ರೀಮಿತಿ ಅವರು ಗರ್ಭಿಣಿ. ಹುಟ್ಟುವ ಮಗುಗೆ ಒಳ್ಳಯದ್ದೇನಾದರೂ ಮಾಡಲಿಕ್ಕೆ ಆಗುತ್ತಾ ಎನ್ನುವ ದೃಷ್ಟಿಯಿಂದ ನಾನು ಸಹಾಯ ಮಾಡಿ ಬಂದೆ. ನಮ್ಮಿಂದ ಆದ ಸಣ್ಣ ಕಾಣಿಕೆ ಅದು. ಯಾವುದೇ ರಾಜಿ ಸಂಧಾನ ಅಲ್ಲ. ಆ ತರ ಕೆಲಸ ಕೂಡ ನಾವು ಮಾಡಲ್ಲʼʼಎಂದು ಬೇಸರ ಹೊರ ಹಾಕಿದರು.

ಇದನ್ನೂ ಓದಿ: Actor Darshan: ರೇಣುಕಾಸ್ವಾಮಿ ಕುಟುಂಬಕ್ಕೆ ಹಣ ಸಹಾಯ ಮಾಡಿ, ದರ್ಶನ್‌ ಪರವಾಗಿ ವಾದ ಮಾಡಿದ ನಟ ಗಣೇಶ್ ರಾವ್!

Continue Reading

ಪ್ರಮುಖ ಸುದ್ದಿ

CM Siddaramaiah: ನಾಳೆ ದಿಲ್ಲಿಗೆ ಸಿಎಂ- ಡಿಸಿಎಂ ದೌಡು; ಸಚಿವ ಸಂಪುಟದಲ್ಲಿ ಬದಲಾವಣೆ ಫಿಕ್ಸ್?

CM Siddaramaiah: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ನೇತೃತ್ವದಲ್ಲಿ ಮೀಟಿಂಗ್‌ ನಡೆಯಲಿದ್ದು, ಮೈತ್ರಿ ಪಕ್ಷಗಳು ಮಾಡುತ್ತಿರುವ ಆರೋಪದ ಬಗ್ಗೆ ಚರ್ಚೆ ನಡೆಸಿ ಮೈತ್ರಿ ಪಕ್ಷಗಳ ವಿರುದ್ಧ ಹೋರಾಟದ ರೂಪುರೇಷೆ ರೂಪಿಸಲಿದ್ದಾರೆ.

VISTARANEWS.COM


on

cm siddaramaiah mallikarjun kharge dk shivakumar
Koo

ಹೊಸದಿಲ್ಲಿ: ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ (DCM DK Shivakumar) ಇಬ್ಬರಿಗೆ ಕಾಂಗ್ರೆಸ್‌ ಹೈಕಮಾಂಡ್‌ (Congress high command) ಬುಲಾವ್‌ ನೀಡಿದ್ದು, ನಾಳೆ ಅವರು ದಿಲ್ಲಿಗೆ ಪ್ರಯಾಣ ಬೆಳೆಸಲಿದ್ದಾರೆ. ರಾಜ್ಯ ಸಚಿವ ಸಂಪುಟದಲ್ಲಿ (State cabinet) ಮೇಜರ್‌ ಬದಲಾವಣೆ, ಮೈತ್ರಿ ಪಕ್ಷಗಳ ಪಾದಯಾತ್ರೆಗೆ ಸಡ್ಡು ಹೊಡೆಯುವ ಬಗ್ಗೆ ಚಿಂತನೆ ಇತ್ಯಾದಿಗಳ ಬಗ್ಗೆ ಹೈಕಮಾಂಡ್‌ ಚರ್ಚಿಸಲು ಉದ್ದೇಶಿಸಿದೆ.

ಒಂದೆಡೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ- ಜೆಡಿಎಸ್‌ (BJP- JDS) ಮೈತ್ರಿ ಪಕ್ಷಗಳು ರಣಕಹಳೆ ಮೊಳಗಿಸಿವೆ. ಸರ್ಕಾರದ ವಿರುದ್ಧ ವಿಧಾನಮಂಡಲ ಅಧಿವೇಶನದ (Assembly Session) ಒಳಗೆ ಮುಗಿಬಿದ್ದಿದ್ದ ವಿಪಕ್ಷಗಳು ಅಧಿವೇಶನದ ಹೊರಗೂ ಇದರ ಲಾಭ ಪಡೆಯಲು ಪ್ಲಾನ್ ಮಾಡಿವೆ. ಹೀಗಾಗಿ ಪಾದಯಾತ್ರೆ ಪಾಲಿಟಿಕ್ಸ್ ಮಾಡಲು ಮುಂದಾಗಿವೆ. ವಾಲ್ಮೀಕಿ ನಿಗಮದ ಅವ್ಯವಹಾರ (Valmiki Corporation Scam) ಪ್ರಕರಣ ಹಾಗೂ ಸಿಎಂ ವಿರುದ್ಧ ಕೇಳಿ ಬಂದಿರುವ ಮುಡಾ ಹಗರಣವನ್ನು (MUDA Scam) ಗಂಭೀರವಾಗಿ ಪರಿಗಣಿಸಿದ ಮೈತ್ರಿ ಪಕ್ಷಗಳು ಇತ್ತ ರಾಜ್ಯದಲ್ಲೂ ಅತ್ತ ದೆಹಲಿಯಲ್ಲೂ ಸರ್ಕಾರದ ವಿರುದ್ಧ ಹೋರಾಟ ಜೋರು ಮಾಡಿವೆ. ಮೈತ್ರಿ ಪಕ್ಷಗಳ ನಡೆಯಿಂದ ಹೈಕಮಾಂಡ್ ವಿಚಲಿತಗೊಂಡಿದೆ.

ಹೀಗಾಗಿ ಸಿಎಂ, ಡಿಸಿಎಂ ಸೇರಿದಂತೆ ಆಯ್ದ ಸಚಿವರಿಗೆ ಹೈಕಮಾಂಡ್‌ ಬುಲಾವ್ ನೀಡಿದೆ. ಇಬ್ಬರೂ ಮಂಗಳವಾರ ದಿಲ್ಲಿಗೆ ತೆರಳಿ ಬುಧವಾರ ಸಂಜೆ ವಾಪಸು ಆಗಲಿದ್ದಾರೆ. ಕೆಲ ಸಚಿವರು ಇಂದೇ ದೆಹಲಿಗೆ ದೌಡಾಯಿಸಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ನೇತೃತ್ವದಲ್ಲಿ ಮೀಟಿಂಗ್‌ ನಡೆಯಲಿದ್ದು, ಮೈತ್ರಿ ಪಕ್ಷಗಳು ಮಾಡುತ್ತಿರುವ ಆರೋಪದ ಬಗ್ಗೆ ಚರ್ಚೆ ನಡೆಸಿ ಮೈತ್ರಿ ಪಕ್ಷಗಳ ವಿರುದ್ಧ ಹೋರಾಟದ ರೂಪುರೇಷೆ ರೂಪಿಸಲಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಸಂಘಟನೆ ಚುರುಕುಗೊಳಿಸುವುದು, ಮುಂದೆ ಬರುತ್ತಿರುವ ಚುನಾವಣೆಗಳಿಗೆ ಸಿದ್ಧತೆ, ಉಪಚುನಾವಣೆ ಸೇರಿದಂತೆ ಇತರೆ ಚುನಾವಣೆಗಳ ಬಗ್ಗೆ ಚರ್ಚೆ, ಸರ್ಕಾರದಲ್ಲಿ ಇರುವ ಸಮಸ್ಯೆಗಳನ್ನು ಬಗೆಹರಿಸುವುದು, ಬಣ ಬಡಿದಾಟಕ್ಕೆ ಬ್ರೇಕ್ ಹಾಕುವ ಬಗ್ಗೆ ಚರ್ಚೆ ಮಾಡುವುದು, ಮಹಿಳಾ ಘಟಕದ ಅಧ್ಯಕ್ಷೆ ನೇಮಕದ ಬಗ್ಗೆ ಒಪಿನಿಯನ್ ಕಲೆಕ್ಟ್ ಮಾಡುವುದು ಹೈಕಮಾಂಡ್ ಉದ್ದೇಶವಾಗಿದೆ.

ಸಚಿವ ಸಂಪುಟ ಪುನಾರಚನೆ

ರಾಜ್ಯ ಸಚಿವ ಸಂಪುಟ, ಕೆಪಿಸಿಸಿ ಪುನಾರಚನೆ ಕುರಿತು ಪ್ರಾಥಮಿಕ ಹಂತದ ಮಾತುಕತೆಯ ಸಾಧ್ಯತೆ ಇದೆ ಎನ್ನಲಾಗಿದೆ. ಈ ಕುರಿತು ಕಾಂಗ್ರೆಸ್ ಪಾಳಯದಲ್ಲಿ ಗುಸುಗುಸು ಟಾಕ್ ಶುರುವಾಗಿದೆ. ಸಚಿವ ಸಂಪುಟದಲ್ಲಿ ಒಂದಷ್ಟು ಬದಲಾವಣೆಗೆ, ಸಚಿವರ ಖಾತೆ ಅದಲು ಬದಲು ಮಾಡುವ ಬಗ್ಗೆ ಹೈಕಮಾಂಡ್ ಮಟ್ಟದಲ್ಲಿ ಚಿಂತನೆ ನಡೆಸಲಾಗುತ್ತಿದ್ದು, ಕೆಲವು ಹಿರಿಯ ಸಚಿವರಿಂದಲೂ ಖಾತೆ ಬದಲಾವಣೆಗೆ ಸಲಹೆ ಬಂದಿದೆ.

ಲೋಕಸಭೆ ಫಲಿತಾಂಶ ಗಮನದಲ್ಲಿರಿಸಿಕೊಂಡು ಬದಲಾವಣೆ ಮಾಡುವ ಬಗ್ಗೆ ಅಭಿಪ್ರಾಯ ಪಡೆಯಲಾಗಿದೆ. 6-7 ಸಚಿವರ ಖಾತೆಗಳ ಅದಲು ಬದಲು ಬಗ್ಗೆ ಹೈಕಮಾಂಡ್ ಮಟ್ಟದಲ್ಲಿ ಚಿಂತನೆ‌ ನಡೆದಿದೆ. ಈ ಬಗ್ಗೆ ಸಿಎಂ, ಡಿಸಿಎಂ ದೆಹಲಿ ಭೇಟಿ ಬಳಿಕವೇ ಸ್ಪಷ್ಟನೆ ಸಿಗಲಿದೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಕೂಗೂ ಕೆಲವರಿಂದ ಕೇಳಿ ಬಂದಿದೆ. ಕೆಪಿಸಿಸಿ ನೂತನ ಅಧ್ಯಕ್ಷರಾಗಬೇಕು ಎಂದು ಹಲವು ಮುಖಂಡರು ಈಗಾಗಲೇ ಪ್ರಭಾವ ಬಳಸುತ್ತಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಕೆಲವು ಸಚಿವರ ಸ್ವಕ್ಷೇತ್ರಗಳಲ್ಲಿ ಲೀಡ್ ಕಡಿಮೆ ಆಗಿದೆ. ಲೀಡ್ ಕಡಿಮೆ ಕೊಟ್ಟ ಸಚಿವರ ತಲೆದಂಡಕ್ಕೆ ಸಚಿವ ಸ್ಥಾನ ಆಕಾಂಕ್ಷಿಗಳಿಂದ ಒತ್ತಡವಿದೆ. ಕೊಟ್ಟ ಖಾತೆಯನ್ನು ಸಮರ್ಥವಾಗಿ ನಿಭಾಯಿಸಿಲ್ಲ ಎಂಬ ಅಭಿಪ್ರಾಯ ಮೂಡಿದ್ದು, ಅಂತಹ ಸಚಿವರಿಂದ ಸರ್ಕಾರದ ಇಮೇಜ್ ಹೆಚ್ಚಾಗಿಲ್ಲ. ಜೊತೆಗೆ ಪಕ್ಷಕ್ಕೂ ಯಾವುದೇ ಲಾಭವಿಲ್ಲ. ಹಾಗಾಗಿ ಕೆಲ ಸಚಿವರನ್ನು ಕೈ ಬಿಡಬೇಕು ಎಂದು ಶಾಸಕರು ಒತ್ತಾಯ‌ ಮಾಡಿದ್ದರು.

ಇದನ್ನೂ ಓದಿ: HD Kumaraswamy: ರಾಜ್ಯದಲ್ಲಿ ನಾಳೆ ಚುನಾವಣೆ ನಡೆದ್ರೂ ಕಾಂಗ್ರೆಸ್‌ ಮನೆಗೆ; ಭವಿಷ್ಯ ನುಡಿದ ಕುಮಾರಸ್ವಾಮಿ

Continue Reading
Advertisement
BJP-JDS Padayatra
ಕರ್ನಾಟಕ9 seconds ago

BJP-JDS Padayatra: ಬಿಜೆಪಿ-ಜೆಡಿಎಸ್‌ ಪಾದಯಾತ್ರೆಗೆ ಅನುಮತಿ ಕೊಡಲ್ಲ: ಗೃಹ ಸಚಿವ ಪರಮೇಶ್ವರ್‌

Physical Abuse
ದೇಶ3 mins ago

Physical Abuse: ತಂಗಿ ಮೇಲೆ 13 ವರ್ಷದ ಬಾಲಕನಿಂದ ಅತ್ಯಾಚಾರ, ಕೊಲೆ; ಕೇಸ್‌ ಮುಚ್ಚಲು ತಾಯಿಯೇ ಸಾಥ್!

train service
ಹಾಸನ5 mins ago

Train services: ಎಡಕುಮೇರಿಯಲ್ಲಿ ಭೂಕುಸಿತ; ಆಗಸ್ಟ್‌ 4ರವರೆಗೆ 14 ರೈಲುಗಳ ಸಂಚಾರ ರದ್ದು

International Tiger Day 2024
ಪರಿಸರ6 mins ago

International Tiger Day 2024: 150 ವರ್ಷಗಳಲ್ಲಿ ಹುಲಿಗಳ ಸಂಖ್ಯೆ ಶೇ. 95ರಷ್ಟು ಕುಸಿತ!

puncture mafia viral video
ವೈರಲ್ ನ್ಯೂಸ್9 mins ago

Viral video: ರಸ್ತೆಯಿಂದ ರಾಶಿಗಟ್ಟಲೆ ಮೊಳೆ ಹೆಕ್ಕಿ ತೆಗೆದ ಟ್ರಾಫಿಕ್‌ ಪೊಲೀಸರು; ಪಂಕ್ಚರ್‌ ಮಾಫಿಯಾ ಸಕ್ರಿಯ?

Fraud Case
Latest18 mins ago

Fraud Case: ಪತ್ನಿಗೆ ಮಕ್ಕಳಾಗಿಲ್ಲ ಎಂದು ಮಾವನ ಕುಟುಂಬದವರ ವಿರುದ್ಧ ಪ್ರಕರಣ ದಾಖಲಿಸಿದ!

Shraddha Srinath Love tattoo on chest What does that mean
ಸ್ಯಾಂಡಲ್ ವುಡ್19 mins ago

Shraddha Srinath: ಶ್ರದ್ಧಾ ಶ್ರೀನಾಥ್‌ ಎದೆ ಮೇಲೆ ʻLove’ ಟ್ಯಾಟೂ ; ಏನಿದರ ಅರ್ಥ?

OBC Reservation
ದೇಶ42 mins ago

OBC Reservation: ಒಬಿಸಿ ಮೀಸಲಾತಿ ಹೆಚ್ಚಳಕ್ಕೆ ಸುಪ್ರೀಂ ಕೋರ್ಟ್‌ ತಡೆ; ನಿತೀಶ್‌ ಕುಮಾರ್‌ಗೆ ಮುಖಭಂಗ!

Rajendra Nagar Tragedy
ದೇಶ44 mins ago

Rajendra Nagar Tragedy: ದೆಹಲಿ ಕೋಚಿಂಗ್‌ ಸೆಂಟರ್‌ನಲ್ಲಿ ವಿದ್ಯಾರ್ಥಿಗಳ ಸಾವಿನ ಪ್ರಕರಣ; 7 ಮಂದಿಯ ಬಂಧನ

cm siddaramaiah mallikarjun kharge dk shivakumar
ಪ್ರಮುಖ ಸುದ್ದಿ56 mins ago

CM Siddaramaiah: ನಾಳೆ ದಿಲ್ಲಿಗೆ ಸಿಎಂ- ಡಿಸಿಎಂ ದೌಡು; ಸಚಿವ ಸಂಪುಟದಲ್ಲಿ ಬದಲಾವಣೆ ಫಿಕ್ಸ್?

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Tungabhadra Dam
ಕೊಪ್ಪಳ19 hours ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ21 hours ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ23 hours ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ1 day ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

Karnataka weather Forecast
ಮಳೆ2 days ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ2 days ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ2 days ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ3 days ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ3 days ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ3 days ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

ಟ್ರೆಂಡಿಂಗ್‌