ನವದೆಹಲಿ: ವಾಣಿಜ್ಯ ಬಳಕೆಯ ಎಲ್‌ಪಿಜಿ (LPG) ಸಿಲಿಂಡರ್ ದರದಲ್ಲಿ 135 ರೂ. ಇಳಿಕೆ ಮಾಡಲಾಗಿದೆ. ಬೆಂಗಳೂರಿನಲ್ಲಿ 19 ಕೆಜಿ ಸಿಲಿಂಡರ್ ಬೆಲೆ 2,300 ರೂಪಾಯಿಗೆ ಇಳಿಕೆಯಾಗಿದೆ.
ಇನ್ನು ದೆಹಲಿಯಲ್ಲಿ 2,219 ರೂ., ಕೋಲ್ಕೊತಾದಲ್ಲಿ 2,332 ರೂ., ಮುಂಬೈನಲ್ಲಿ 2,171.50 ರೂ., ಚೆನ್ನೈನಲ್ಲಿ 2,373 ರೂ., ಇದೆ. ಆದರೆ ಗೃಹಬಳಕೆಯ ಗ್ಯಾಸ್ ಸಿಲಿಂಡರ್ ದರದಲ್ಲಿ ಯಾವುದೇ ರೀತಿಯ ಬದಲಾವಣೆ ಆಗಿಲ್ಲ. ಸದ್ಯ 14.2 ಕೆಜಿ ಸಿಲಿಂಡರ್ ಬೆಲೆ ಬೆಂಗಳೂರಿನಲ್ಲಿ 1,006 ರೂ. ಇದೆ.
ಹಣದುಬ್ಬರದಿಂದ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದ್ದರಿಂದ ಗ್ರಾಹಕರಿಗೆ ಹೊರೆಯಾಗಿತ್ತು. ಇತ್ತೀಚೆಗೆ ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕೇಂದ್ರ ಸರ್ಕಾರ ಇಳಿಕೆ ಮಾಡಿದ್ದರಿಂದ ಪೆಟ್ರೋಲ್ 9.5 ರೂ., ಡೀಸೆಲ್ 7 ರೂ. ಇಳಿಕೆಯಾಗಿತ್ತು. ಇದೀಗ ವಾಣಿಜ್ಯ ಬಳಕೆಯ ಸಿಲಿಂಡರ್ ದರ ಇಳಿಕೆಯಾಗಿರುವುದರಿಂದ ಗ್ರಾಹಕರು ಸ್ವಲ್ಪಮಟ್ಟಿಗೆ ನಿರಾಳರಾಗುವಂತಾಗಿದೆ.
ಇದನ್ನೂ ಓದಿ | GOLD PRICE: ಬಂಗಾರದ ದರದಲ್ಲಿ 100 ರೂ. ಇಳಿಕೆ, ಬೆಳ್ಳಿ ದರ 500 ರೂ. ಹೆಚ್ಚಳ