ಕೋಲಾರ: ಮಾಲೂರು ತಾಲೂಲಿನ ಮಾಸ್ತಿ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ವಸತಿ ಗೃಹದಲ್ಲಿ ಸಮುದಾಯ ಆರೋಗ್ಯಾಧಿಕಾರಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ (Suicide death) ಮಾಡಿಕೊಂಡಿದ್ದಾರೆ.
ಬಾಳಿಗಾನಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಸಮುದಾಯ ಆರೋಗ್ಯ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಶಿವಾನಂದ ಚಿಕ್ಕಣ್ಣನವರ್ (೨೪) ಅವರೇ ಆತ್ಮಹತ್ಯೆ ಮಾಡಿಕೊಂಡವರು.
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲ್ಲೂಕು ಮೂಲದ ಶಿವಾನಂದ್ ಚಿಕ್ಕಣ್ಣನವರ್ ಅವರು ಮಾಸ್ತಿ ಪ್ರಾಥಮಿಕ ಕೇಂದ್ರ ವೈದ್ಯಾಧಿಕಾರಿಗಳ ವಸತಿ ಗೃಹದಲ್ಲಿ ನೇಣು ಬಿಗಿದುಕೊಂಡಿದ್ದಾರೆ. ಅವರು ಯಾಕೆ ಆತ್ಮಹತ್ಯೆ ಮಾಡಿಕೊಂಡರು ಎಂಬುದು ತಿಳಿದುಬಂದಿಲ್ಲ. ಮಾಸ್ತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಇದನ್ನೂ ಓದಿ | Mass suicide | ಇಬ್ಬರು ಹಾಲುಗಲ್ಲದ ಮಕ್ಕಳಿಗೆ ವಿಷ ಉಣಿಸಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ತಾಯಿ