ಬೆಳಗಾವಿ: ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯ ಪ್ರಥಮ ದರ್ಜೆ ಸಹಾಯಕರೊಬ್ಬರು ಸೇವೆಯಲ್ಲಿರುವಾಗಲೇ ನಿಧನ ಹೊಂದಿದ್ದರಿಂದ ಅವರ ಅವಲಂಬಿತ ಕಿರಿಯ ಸಹೋದರನಿಗೆ ಕೇವಲ 24 ಗಂಟೆಯಲ್ಲಿ ಅನುಕಂಪ ಆಧಾರಿತ ನೇರ ನೇಮಕಾತಿ ಆದೇಶ ನೀಡುವ ಮೂಲಕ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಮಾನವೀಯತೆ ಮೆರೆದಿದ್ದಾರೆ.
ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದ ಸಚಿನ್ ಮಹಾದೇವ ಬಾದುಲೆ ಅವರು ಆಗಸ್ಟ್ 22ರಂದು ಅನಾರೋಗ್ಯದಿಂದ ನಿಧನ ಹೊಂದಿದ್ದರು. ಇದರಿಂದ ಕುಟುಂಬ ವರ್ಗ ತೀವ್ರ ಸಂಕಷ್ಟದಲ್ಲಿರುವ ಬಗ್ಗೆ ತಿಳಿದ ಜಿಲ್ಲಾಧಿಕಾರಿ, ಸ್ವತಃ ಕುಟುಂಬದವರಿಂದ ಅರ್ಜಿ ಪಡೆದು ನೌಕರಿ ನೀಡುವ ಪ್ರಕ್ರಿಯೆಗೆ ಚಾಲನೆ ನೀಡಿದ್ದರು.
ಸರ್ಕಾರದ ನೀತಿ-ನಿಯಮಗಳ ಅನುಸಾರ ಮೃತರ ಸಹೋದರ ಬಸವರಾಜ ಮಹಾದೇವ ಬಾದುಲೆ ಅವರ ವಿದ್ಯಾರ್ಹತೆ ಸೇರಿ ಇನ್ನಿತರ ಅಂಶಗಳನ್ನು ಪರಿಶೀಲಿಸಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು, 24 ಗಂಟೆಗಳ ಅವಧಿಯಲ್ಲಿ ಗ್ರೂಪ್ “ಸಿ ಗ್ರೇಡ್” ಹುದ್ದೆಗೆ ನೇರ ನೇಮಕಾತಿ ಮಾಡುವ ಮೂಲಕ ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆ.
ಇದನ್ನೂ ಓದಿ | ಕಾಂಗ್ರೆಸ್ ಮಡಿಕೇರಿ ಚಲೋ ರದ್ದಾಗಿದ್ದು ಏಕೆ? ಇದರಲ್ಲಿ ಡಿ.ಕೆ. ಶಿವಕುಮಾರ್ ಪಾತ್ರವೇನು?