Site icon Vistara News

Compound Wall Collapse: ಹಾಜಬ್ಬರ ಶಾಲೆ ಕಾಂಪೌಂಡ್ ಗೋಡೆ ಕುಸಿದು ವಿದ್ಯಾರ್ಥಿನಿ ದಾರುಣ ಸಾವು

Compound Wall Collapse

ಮಂಗಳೂರು: ಶಾಲೆಯ ಕಾಂಪೌಂಡ್ ಗೋಡೆ ಕುಸಿದು ವಿದ್ಯಾರ್ಥಿನಿ ದಾರುಣವಾಗಿ ಮೃತಪಟ್ಟಿರುವ ಘಟನೆ (Compound Wall Collapse) ದಕ್ಷಿಣ ಕನ್ನಡ ಜಿಲ್ಲೆಯ ‌ಉಳ್ಳಾಲ ತಾಲೂಕಿನ ನ್ಯೂಪಡ್ಪುನಲ್ಲಿ ನಡೆದಿದೆ. ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ (Harekala Hajabba) ಅವರು ಕಟ್ಟಿದ ನ್ಯೂಪಡ್ಪು ಶಾಲೆಯ ಕಾಂಪೌಂಡ್ ಗೋಡೆ ಕುಸಿದು ದುರ್ಘಟನೆ ಸಂಭವಿಸಿದೆ.

ನ್ಯೂಪಡ್ಪು ನಿವಾಸಿ ಸಿದ್ದೀಖ್ ಜಮೀಲಾ ಪುತ್ರಿ ಶಾಜಿಯಾ (7) ಮೃತ ಬಾಲಕಿ. ಹಾಜಬ್ಬರ ಶಾಲೆಯಲ್ಲಿ ವಿದ್ಯಾರ್ಥಿನಿ ಶಾಜಿಯಾ 3ನೇ ತರಗತಿ ಓದುತ್ತಿದ್ದಳು. ಶಾಲೆಯಲ್ಲಿ ನಡೆಯುತ್ತಿದ್ದ ಎನ್‌ಎಸ್‌ಎಸ್ ಶಿಬಿರದಲ್ಲಿ ಭಾಗಿಯಾಗಿದ್ದ ವಿದ್ಯಾರ್ಥಿನಿ ಗೇಟಿನ ಬಳಿ ಆಟವಾಡುತ್ತಿದ್ದಾಗ ಕಾಂಪೌಡ್ ಗೋಡೆ ಕುಸಿದಿದ್ದರಿಂದ ದುರ್ಘಟನೆ ಸಂಭವಿಸಿದೆ. ಉಳ್ಳಾಲ ತಾಲೂಕಿನಲ್ಲಿ ಮೊದಲ ಮಳೆಗೆ ಅನಾಹುತ ಸಂಭವಿಸಿದೆ.

ಇದನ್ನೂ ಓದಿ | Physical Abuse & Murder: ಬಾಲಕಿ ಮೇಲೆ ಅತ್ಯಾಚಾರ, ಸಜೀವ ದಹನ ಕೇಸ್‌; ಹಂತಕರಿಗೆ ಮರಣದಂಡನೆ

ಕೂಡ್ಲಿಗಿಯಲ್ಲಿ ಹಿಟ್ ಆ್ಯಂಡ್ ರನ್; ಬೈಕ್‌ಗೆ ಲಾರಿ ಡಿಕ್ಕಿಯಾಗಿ ಯುವತಿ ಸಾವು

ವಿಜಯನಗರ: ಬೈಕ್‌ಗೆ ಲಾರಿ ಡಿಕ್ಕಿಯಾಗಿ ಯುವತಿ ಸ್ಥಳದಲ್ಲೇ ಮೃತಪಟ್ಟು, ಯುವಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಶಿವಪುರದ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ. ಅಪಘಾತದ (Hit And Run Case) ಬಳಿಕ ಲಾರಿ ಸಮೇತ ಚಾಲಕ ಪರಾರಿಯಾಗಿದ್ದು, ಆತನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಮೇಘನಾ (18) ಮೃತ ಯುವತಿ. ಹೊಸಪೇಟೆಯಿಂದ ಕೂಡ್ಲಿಗಿ ಕಡೆ ಹೊರಟಿದ್ದ ಬೈಕ್ ಮೇಲೆ ಯುವಕ, ಯುವತಿ ಹೋಗುತ್ತಿದ್ದಾಗ ಲಾರಿ ಡಿಕ್ಕಿಯಾಗಿದೆ. ಈ ವೇಳೆ ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದು, ಯುವಕ ಕೈಲಾಶ್‌ ಎಂಬಾತನಿಗೆ ಗಂಭೀರ ಗಾಯಗಳಾಗಿವೆ. ಆತನನ್ನು ಹೆಚ್ಚಿನ ಚಿಕಿತ್ಸೆಗೆ ಬಳ್ಳಾರಿಯ ವಿಮ್ಸ್‌ಗೆ ರವಾನೆ ಮಾಡಲಾಗಿದೆ. ಕೂಡ್ಲಿಗಿ ಡಿವೈಎಸ್ಪಿ ಮಲ್ಲೇಶಪ್ಪ, ಸಿಪಿಐ ವಿನಾಯಕ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಹಿಟ್ ಆ್ಯಂಡ್ ರನ್ ಮಾಡಿದ ಲಾರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಇದನ್ನೂ ಓದಿ | Baby Death : ಮಲತಾಯಿಯ ಕ್ರೌರ್ಯಕ್ಕೆ ಬಲಿಯಾಯ್ತಾ 3 ವರ್ಷದ ಕಂದಮ್ಮ?

Exit mobile version