Site icon Vistara News

ಪ್ರಧಾನಿ ನೇತೃತ್ವದಲ್ಲಿ ಸಮಗ್ರ ಅಭಿವೃದ್ದಿ: ಸಂಸದ ಬಿ.ವೈ. ರಾಘವೇಂದ್ರ

ಬಿ.ವೈ.ರಾಘವೇಂದ್ರ

ಶಿವಮೊಗ್ಗ: ಜನಕಲ್ಯಾಣ ಯೋಜನೆಗಳ ಫಲಾನುಭವಿಗಳೊಂದಿಗೆ ನರೇಂದ್ರ ಮೋದಿ ಸಂವಾದ ಮಾಡಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಿವಿಧ ಜನ ಕಲ್ಯಾಣ ಯೋಜನೆಗಳ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನೂ ತಲುಪುತಿದ್ದು, ಅವರ ನೇತೃತ್ವದ ಪ್ರತಿಫಲವಾಗಿ ದೇಶದಲ್ಲಿ ಸಮಗ್ರ ಅಭಿವೃದ್ದಿ ಸಾಧಿಸಲಾಗುತ್ತಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ನುಡಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ

ಆಜಾದಿ ಕಾ ಅಮೃತ್ ಮಹೋತ್ಸವ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಮಂಗಳವಾರ ಬೆಳಿಗ್ಗೆ ಹಿಮಾಚಲ ಪ್ರದೇಶದ ಶಿಮ್ಲಾದಿಂದ ಕೇಂದ್ರ ಸರ್ಕಾರದ ಒಂಭತ್ತು ಸಚಿವಾಲಯದ ಸುಮಾರು 16 ಯೋಜನೆ-ಕಾರ್ಯಕ್ರಮಗಳ ಫಲಾನುಭವಿಗಳೊಂದಿಗೆ ವರ್ಚುವಲ್ ವೇದಿಕೆ ಮೂಲಕ ಸಂವಾದ ಕಾರ್ಯಕ್ರಮ ನಡೆಸಿದ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತ್ ನಜೀರ್ ಸಾಬ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಧಾನಮಂತ್ರಿಯವರ ನೇತೃತ್ವದಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳ ತಂಡ ಪರಿಶ್ರಮದಿಂದ ಸಾಮಾನ್ಯ ಮತ್ತು ಬಡ ಜನರಿಗೆ ಅನೇಕ ಜನ ಕಲ್ಯಾಣ ಯೋಜನೆಗಳನ್ನು ತಲುಪಿಸುವ ಕೆಲಸವನ್ನು ಮಾಡುತ್ತಿದ್ದಾರೆ. ನರೇಂದ್ರ ಮೋದಿಯವರ ಸರ್ಕಾರದ ಎರಡು ಅವಧಿ ಸೇರಿ ಇದೀಗ 8 ವರ್ಷ ಪೂರ್ಣಗೊಂಡಿದೆ.

ಅವರ ನೇತೃತ್ವದಲ್ಲಿ ದೇಶ ಸರ್ವಾಂಗೀಣ ಅಭಿವೃದ್ದಿ ಕಾಣುತ್ತಿದೆ. ಅಕ್ಕಪಕ್ಕದ ದೇಶದಲ್ಲಿ ಅಕ್ಕಿ, ವಿದ್ಯುತ್ ಎಲ್ಲ ದುಬಾರಿಯಾಗಿದ್ದು, ಜನ ಕತ್ತಲಲ್ಲಿದ್ದಾರೆ. ಆದರೆ ನಮ್ಮ ಪ್ರಧಾನಿಯವರು ಇಂತಹ ಸಂದರ್ಭದಲ್ಲೂ ಆರ್ಥಿಕವಾಗಿ ಜೀವ ತುಂಬುವ ಕೆಲಸ ಮಾಡುತ್ತಿದ್ದಾರೆ ಎಂದರು.

ಇದನ್ನೂ ಓದಿ:Drone Modi: ಮೋದಿ ಡ್ರೋನ್‌ ಹಾರಿಸಲೂ ಸೈ! ಮೇಲೇರುವುದನ್ನು ನೋಡಿ ಖುಷಿಯೋ ಖುಷಿ

ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಮಾತನಾಡಿ, ಪಾರದರ್ಶಕತೆ ಏಕೆ ಬೇಕೆಂದು ಪ್ರಧಾನಿ ಮೋದಿಯವರು ತೋರಿಸಿದ್ದಾರೆ. ಯೋಜನೆ, ಸೌಲಭ್ಯಗಳನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ತಲುಪಿಸುತ್ತಿದ್ದಾರೆ. ಪ್ರಸ್ತುತ ದೇಶದಲ್ಲಿ 20 ಕೋಟಿ ಮಹಿಳೆಯರ ಬ್ಯಾಂಕ್ ಖಾತೆ ಇದ್ದು ನೇರವಾಗಿ ಅವರಿಗೆ ಯೋಜನೆಗಳ ಸೌಲಭ್ಯ ದೊರೆಯುತ್ತಿರುವುದು ಹೆಮ್ಮೆಯ ವಿಷಯ .

ಅಧ್ಯಕ್ಷತೆ ವಹಿಸಿದ್ದ ಶಾಸಕ ಕೆ.ಎಸ್.ಈಶ್ವರಪ್ಪ ಮಾತನಾಡಿ, ಸೌಲಭ್ಯಗಳು ಎಲ್ಲ ಅರ್ಹರಿಗೆ ತಲುಪಿದಾಗ ಮಾತ್ರ ಆ ಯೋಜನೆ ಸಾರ್ಥಕವಾಗುತ್ತದೆ. ಇಂದು ಜನ ಕಲ್ಯಾಣ ಯೋಜನೆಗಳ ಫಲಾನುಭವಿಗಳೊಂದಿಗೆ ನೇರವಾಗಿ ಮಾತನಾಡಿದ್ದು ಸಂತಸ ತಂದಿದೆ. ಸಂಸತ್ ಸದಸ್ಯರು ಪ್ರತಿ ಗ್ರಾಮಗಳಿಗೆ ಯೋಜನೆಗಳನ್ನು ತಲುಪಿಸುತ್ತಿರುವುದು ಅಭಿನಂದನೀಯವಾಗಿದ್ದು ಡಿಸಿ, ಜಿ.ಪಂ ಸಿಇಓ ರವರ ಕಾರ್ಯ ಕೂಡ ಅಭಿನಂದನಾರ್ಹವಾಗಿದೆ. ಫಲಾನುಭವಿಗಳು ಸಹ ಇತರರಿಗೆ ತಾವು ಪಡೆದ ಸೌಲಭ್ಯಗಳ ಬಗ್ಗೆ ತಿಳಿಸಿ ಸಹಾಯ ಮಾಡಬೇಕು ಎಂದು ಹೇಳಿದರು.

ಇದನ್ನೂ ಓದಿ: Mann Ki Baat 89 | ಮೂರೇ ತಿಂಗಳಲ್ಲಿ ಕನ್ನಡ ಕಲಿತ ಹುಡುಗಿಯನ್ನು ಶ್ಲಾಘಿಸಿದ ಮೋದಿ

Exit mobile version