Site icon Vistara News

ಉತ್ತರ ಕನ್ನಡ ಜಿಲ್ಲೆಯಲ್ಲಿ ಮತ್ತೆ ಗುಡ್ಡ ಕುಸಿತದ ಆತಂಕ: ಭೂ ವಿಜ್ಞಾನಿಗಳ ತಂಡ ಭೇಟಿ

ಗುಡ್ಡ ಕುಸಿತದ ಆತಂಕ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಬೀಳುತ್ತಿರುವುದರಿಂದ ಮತ್ತೆ ಗುಡ್ಡ ಕುಸಿತದ ಆತಂಕ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಪುನಃ ಸಮೀಕ್ಷೆ ನಡೆಸುತ್ತಿದ್ದಾರೆ. ಸೂಕ್ಷ್ಮ ಪ್ರದೇಶಗಳಿಗೆ ಕೇಂದ್ರದ ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ ಹಾಗೂ ಜಿಲ್ಲಾ ಭೂ ವಿಜ್ಞಾನಿಗಳ ತಂಡ ಭೇಟಿ ನೀಡಿದೆ.

ಶಿರಸಿಯ ಜಾಜಿಗುಡ್ಡ, ಕುಮಟಾದ ತಂಡ್ರಕುಳಿ, ಹೊನ್ನಾವರದ ಅಪ್ಸರಕೊಂಡ, ಯಲ್ಲಾಪುರ ಭಾಗದ ಕಳಚೆ, ಜೋಯಿಡಾ ಭಾಗದ ಅಣಶಿ, ಭಟ್ಕಳದ ಮುಟ್ಟಳ್ಳಿ ಭಾಗಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಶಿರಸಿಯ ಜಾಜಿ ಗುಡ್ಡದ ಭಾಗದ ಜನರಿಗೆ ಗುಡ್ಡ ಕುಸಿತ ಆತಂಕದಿಂದ ಬೇರೆಡೆ ಸ್ಥಳಾಂತರಗೊಳ್ಳುವಂತೆ ಸೂಚನೆ ನೀಡಿದೆ.

ಭಟ್ಕಳದ ಮುಟ್ಟಳ್ಳಿಯಲ್ಲಿ ಮನೆಯ ಮೇಲೆ ಗುಡ್ಡ ಕುಸಿದು ನಾಲ್ಕು ಮಂದಿ ಮೃತಪಟ್ಟಿದ್ದರು. ಹೊನ್ನಾವರದ ಅಪ್ಸರಕೊಂಡದಲ್ಲೂ ಹಲವು ಕಡೆ ಭೂಕುಸಿತವಾಗಿ ಗುಡ್ಡದಲ್ಲಿ ಬಿರುಕು ಮೂಡಿತ್ತು. ಆದ್ದರಿಂದ ಜಿಲ್ಲೆಯ ಪಶ್ಚಿಮಘಟ್ಟ ಭಾಗ ಹಾಗೂ ಕರಾವಳಿಯ ಸೂಕ್ಷ್ಮ ಪ್ರದೇಶಗಳ ಪರಿಶೀಲನೆ ನಡೆಸಲಾಗಿದೆ.

ಇದನ್ನೂ ಓದಿ |Heavy Rain | ಸತತ ಮಳೆಗೆ ಭಟ್ಕಳದಲ್ಲಿ ಮತ್ತೆ ಗುಡ್ಡ ಕುಸಿತ; ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

ಇದನ್ನೂ ಓದಿ | ಗುಡ್ಡ ಕುಸಿತದ ಭೀತಿ | ಆ.11ರವರೆಗೆ ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ರಾತ್ರಿ ಸಂಚಾರ ಬಂದ್‌

Exit mobile version