Site icon Vistara News

Karnataka election 2023: ಬಳ್ಳಾರಿ ಗ್ರಾಮೀಣ ಕ್ಷೇತ್ರದ ಕೌಲ್‌ಬಜಾರ್‌ನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಬಿ. ನಾಗೇಂದ್ರ ಪ್ರಚಾರ

Karnataka election 2023 Congress candidate B Nagendra campaigning in Kaulbazar Ballari rural constituency

ಬಳ್ಳಾರಿ: ಸಾರ್ವತ್ರಿಕ ವಿಧಾನಸಭಾ ಚುನಾವಣೆ (Karnataka election 2023) ಹಿನ್ನೆಲೆಯಲ್ಲಿ ಬಳ್ಳಾರಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ, ಶಾಸಕ ಬಿ. ನಾಗೇಂದ್ರ ಕ್ಷೇತ್ರದ ಕೌಲ್‌ಬಜಾರ್‌ ಪ್ರದೇಶದಲ್ಲಿ ಭಾನುವಾರ ರಾತ್ರಿ ಬಹಿರಂಗ ಸಭೆ ನಡೆಸಿ, ಮತಯಾಚನೆ ಮಾಡಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ, ಶಾಸಕ ಬಿ.ನಾಗೇಂದ್ರ ಮಾತನಾಡಿ, ನಾನು ಐದು ವರ್ಷಗಳಲ್ಲಿ ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ ಶಾಸಕನಾಗಿ ಸೇವೆ ಸಲ್ಲಿಸಿದ್ದರ ಬಗ್ಗೆ ನನಗೆ ಹೆಮ್ಮೆ ಇದೆ ಎಂದು ತಿಳಿಸಿದರು.

ಶಾಂತಿಯುತ ಆಡಳಿತ ನಮ್ಮ ಐದು ವರ್ಷಗಳ ಕಾಲದ ಶಕ್ತಿಯಾಗಿದೆ. ನಾವು ಐದು ವರ್ಷ ನಡೆಸಿದ ಆಡಳಿತವು ಜನರ ಮನ ಗೆದ್ದಿದೆ. ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಮತ ನೀಡಿ ಗೆಲ್ಲಿಸುವಂತೆ ಕ್ಷೇತ್ರದ ಕೌಲ್‌ಬಜಾರ್‌ ಪ್ರದೇಶದ ಮತದಾರರಲ್ಲಿ ಮನವಿ ಮಾಡಿದರು.

ಇದನ್ನೂ ಓದಿ: SSLC Result 2023 : ಎಸ್‌ಎಸ್‌ಎಲ್‌ಸಿ ನಂತರ ಮುಂದೇನು?; ಇಲ್ಲಿದೆ ಉಪಯುಕ್ತ ಟಿಪ್ಸ್‌

ಈ ಸಂದರ್ಭದಲ್ಲಿ ರಾಜ್ಯಸಭಾ ಸದಸ್ಯ ಡಾ.ಸಯ್ಯದ್ ನಾಸಿರ್ ಹುಸೇನ್, ಮಾಜಿ ಸಚಿವ ಅಲ್ಲಂ ವೀರಭದ್ರಪ್ಪ, ವಕ್ಫ್ ಬೋರ್ಡ್ ಅಧ್ಯಕ್ಷ ಹುಮಾಯೂನ್ ಖಾನ್, ಬ್ಲಾಕ್ ಅಧ್ಯಕ್ಷ ಅಲ್ಲಾಬಕಷ್, ಮೊಹಮ್ಮದ್, ಸರಗು ನಾಗರಾಜ್, ಅಸುಂಡಿ ಹೊನ್ನೂರಪ್ಪ (ವಂಡ್ರಿ), ಚಿನ್ನ, ಪಾಲಿಕೆ ಸದಸ್ಯ ಆಸಿಫ್ ಸೇರಿದಂತೆ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

Exit mobile version