ಬೆಳಗಾವಿ: ವಾಯವ್ಯ ಪದವೀಧರ, ಶಿಕ್ಷಕರ ಕ್ಷೇತ್ರದ ಚುನಾವಣೆ (ಜೂ.13) ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಬುಧವಾರ ನಾಮಪತ್ರ ಸಲ್ಲಿಸಲಿದ್ದು, ಇದಕ್ಕೂ ಮುನ್ನಾ ಕುಂದಾನಗರಿಯಲ್ಲಿ ಬೃಹತ್ ಸಮಾವೇಶದ ಮೂಲಕ ಕಾಂಗ್ರೆಸ್ ಶಕ್ತಿ ಪ್ರದರ್ಶನಕ್ಕೆ ಸಜ್ಜಾಗಿದೆ.
ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೆವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಧ್ಯಾಹ್ನ 12.15ಕ್ಕೆ ಬೆಂಗಳೂರಿನಿಂದ ವಿಶೇಷ ವಿಮಾನ ಮೂಲಕ ಬೆಳಗಾವಿಗೆ ಆಗಮಿಸಲಿದ್ದಾರೆ. ಇವರ ಸಮ್ಮುಖದಲ್ಲಿ 2 ಗಂಟೆಗೆ ವಾಯವ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿ, ವಾಯುವ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಸಂಕ್ ನಾಮಪತ್ರ ಸಲ್ಲಿಸಲಿದ್ದಾರೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸಾಥ್ ನೀಡಲಿದ್ದು, ಜಿಲ್ಲೆಯ ಕಾಂಗ್ರೆಸ್ ಹಾಲಿ, ಮಾಜಿ ಶಾಸಕರು, ಎಂಎಲ್‌ಸಿಗಳು ಉಪಸ್ಥಿತರಿರಲಿದ್ದಾರೆ. ಇದಕ್ಕೂ ಮುನ್ನಾ ನಗರದ ಮರಾಠಾ ಮಂದಿರದಲ್ಲಿ ಬೃಹತ್ ಕಾಂಗ್ರೆಸ್ ಸಮಾವೇಶ ಆಯೋಜಿಸಲಾಗಿದೆ. ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಲ್ಲಿ ಗೆದ್ದು ಹುಮ್ಮಸ್ಸಿನಲ್ಲಿರುವ ‘ಕೈ’ ಪಡೆ, ಬೆಳಗಾವಿಯನ್ನೇ ಗುರಿಯಾಗಿಸಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಪಂಚಮಸಾಲಿ ಸಮುದಾಯದ ಜಿಲ್ಲೆಯ ಇಬ್ಬರು ಅಭ್ಯರ್ಥಿಗಳಿಗೆ ಹೈಕಮಾಂಡ್ ಟಿಕೆಟ್ ನೀಡಿದೆ. ಕ್ಷೇತ್ರದ ವ್ಯಾಪ್ತಿಯ ಬೆಳಗಾವಿ, ಬಾಗಲಕೋಟ, ವಿಜಯಪುರ ಪೈಕಿ ಬೆಳಗಾವಿಯಲ್ಲೇ ಅತಿ ಹೆಚ್ಚು ಮತದಾರರು ಇದ್ದಾರೆ. ಬೆಳಗಾವಿ ಬಿಟ್ಟು ಬೇರೆ ಜಿಲ್ಲೆಗೆ ಟಿಕೆಟ್ ನೀಡಿರುವ ಬಿಜೆಪಿಯನ್ನು ಮಣಿಸಲು ಕಾಂಗ್ರೆಸ್ ರಣತಂತ್ರ ಹೂಡಿದ್ದಾರೆ. ಈನ್ನು ಬೂತ್ ಮಟ್ಟದಲ್ಲಿ ಸತೀಶ್ ಜಾರಕಿಹೊಳಿ ಸ್ಟ್ರಾಂಗ್ ಕಮಿಟಿ ರಚಿಸಿ ಜವಾಬ್ದಾರಿ ಹಂಚಿಕೆ ಮಾಡಿದ್ದಾರೆ.
ಇದನ್ನೂ ಓದಿ | ಕಾಂಗ್ರೆಸ್‌ಗೆ ಹಾರ್ದಿಕ್ ಪಟೇಲ್ ಗುಡ್‌ಬೈ, ಮುಂದಿನ ನಿಲ್ದಾಣ ಬಿಜೆಪಿ?