ಚಿಕ್ಕಬಳ್ಳಾಪುರ: ಕರ್ನಾಟಕ ವಿಧಾನಸಭಾ ಚುನಾವಣೆ (Chintamani Election Results) ಫಲಿತಾಂಶ ಬಿಡುಗಡೆಯಾಗಿದ್ದು,, ಚಿಂತಾಮಣಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ.ಎಂ.ಸಿ.ಸುಧಾಕರ್ ಗೆಲುವು ಸಾಧಿಸಿದ್ದಾರೆ. ಇವರು 29,052 ಮತಗಳ ಅಂತರದಿಂದ ಜೆಡಿಎಸ್ ಅಭ್ಯರ್ಥಿ ಜೆ.ಕೆ.ಕೃಷ್ಣಾರೆಡ್ಡಿ ವಿರುದ್ಧ ಗೆಲುವಿನ ನಗಾರಿ ಬಾರಿಸಿದ್ದಾರೆ.
ಚಿಂತಾಮಣಿ ಕ್ಷೇತ್ರದಲ್ಲಿ ಡಾ.ಎಂ.ಸಿ.ಸುಧಾಕರ್ 97,324 ಮತಗಳು, ಜೆಡಿಎಸ್ ಅಭ್ಯರ್ಥಿ ಜೆ.ಕೆ.ಕೃಷ್ಣಾರೆಡ್ಡಿ 68,272 ಮತಗಳು, ಬಿಜೆಪಿ ಅಭ್ಯರ್ಥಿ ಜಿ.ಎನ್.ವೇಣುಗೋಪಾಲ್ 21,711 ಮತಗಳನ್ನು ಪಡೆದಿದ್ದಾರೆ.
ಇದನ್ನೂ ಓದಿ | Sidlaghatta Election Results: ಶಿಡ್ಲಘಟ್ಟದಲ್ಲಿ ಜೆಡಿಎಸ್‌ನ ಬಿ.ಎನ್. ರವಿಕುಮಾರ್‌ಗೆ ಜಯ
2018ರ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಜೆ.ಕೆ.ಕೃಷ್ಣಾರೆಡ್ಡಿ 87,753 ಪಡೆದು ಗೆಲುವು ಪಡೆದಿದ್ದರು. ಭಾರತೀಯ ಪ್ರಜಾ ಪಕ್ಷದ ಡಾ.ಎಂ.ಸಿ ಸುಧಾಕರ್ 82,513 ಮತ, ಕಾಂಗ್ರೆಸ್ ಅಭ್ಯರ್ಥಿ ವಾಣಿ ಕೃಷ್ಣಾರೆಡ್ಡಿ 2,233 ಮತಗಳನ್ನು ಗಳಿಸಿದ್ದರು. ಬಿಜೆಪಿ ಅಭ್ಯರ್ಥಿ ನಾ. ಶಂಕರ್ 1,962 ಮತ ಪಡೆದಿದ್ದರು.