Site icon Vistara News

Karnataka Politics : ಲೋಕಸಭೆಯಲ್ಲಿ ಕಾಂಗ್ರೆಸ್‌ ಮನೆಯವರಿಗೆ ಮಣೆ! ಕುಟುಂಬ ರಾಜಕಾರಣ?

Laksmi Hebbalkar CM Siddaramaiah and Satish Jarkiholi

ಬೆಂಗಳೂರು: ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಗೆ (Lok Sabha Election 2024) ಈಗಾಗಲೇ ರಾಜಕೀಯ ಪಕ್ಷಗಳು ತಾಲೀಮು ಆರಂಭಿಸಿವೆ. ರಾಜ್ಯ ರಾಜಕೀಯದಲ್ಲಿಯೂ (Karnataka Politics) ಸಾಕಷ್ಟು ಬೆಳವಣಿಗೆಗಳು ನಡೆಯುತ್ತಿದೆ. ಈ ನಡುವೆ ಕಾಂಗ್ರೆಸ್‌ ರಣತಂತ್ರವನ್ನು ಹೆಣೆಯುತ್ತಿದೆ. ಕರ್ನಾಟಕದಲ್ಲಿ ಶತಾಯಗತಾಯ 20 ಸ್ಥಾನಗಳನ್ನು ಗೆದ್ದು ಬೀಗುವ ತವಕದಲ್ಲಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಆಯ್ಕೆಯಾಗಿರುವ ಶಾಸಕರನ್ನು (ಸಚಿವರಾದಿಯಾಗಿ) ಕಣಕ್ಕಿಳಿಸಲು ಚಿಂತನೆ ನಡೆಸುತ್ತಿದೆ. ಆದರೆ, ಇದರಿಂದ ದಿಗಿಲುಗೊಂಡಿರುವ ಸಚಿವರು, ಶಾಸಕರು ತಮ್ಮ ಕುಟುಂಬದವರನ್ನು ಕಣಕ್ಕಿಳಿಸುವ (Family politics) ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಮನೆಯವರಿಗೆ ಮಣೆ ಹಾಕಲು ಮುಂದಾಗಲಾಗಿದೆ. ಇದಕ್ಕೆ ಪುಷ್ಟೀಕರಿಸುವಂತೆ ಮೈಸೂರು ಲೋಕಸಭಾ ಕ್ಷೇತ್ರಕ್ಕೆ ಸಿಎಂ ಸಿದ್ದರಾಮಯ್ಯ (CM Siddaramaiah) ಪುತ್ರ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah), ಬೆಳಗಾವಿ ಕ್ಷೇತ್ರಕ್ಕೆ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ‌ಜಾರಕಿಹೊಳಿ (Priyanka Jarkiholi) ಹಾಗೂ ಚಿಕ್ಕೋಡಿ ಕ್ಷೇತ್ರಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಗ ಮೃಣಾಲ್ (Mrinal Hebbalkar) ಅವರನ್ನು ಕಣಕ್ಕಿಳಿಸುವ ಬಗ್ಗೆ ಈ ನಾಯಕರು ತೀರ್ಮಾನ ಕೈಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ದೆಹಲಿಯಲ್ಲಿ ನಡೆಯುತ್ತಿರುವ ರಾಜ್ಯ ನಾಯಕರು, ಶಾಸಕರು ಹಾಗೂ ಸಚಿವರ ಜತೆಗಿನ ಸಭೆಯಲ್ಲಿ ಹೈಕಮಾಂಡ್ ನಾಯಕರ ಜತೆ ಏನೆಲ್ಲ ಪ್ರಸ್ತಾಪ ಮಾಡಬೇಕು ಎಂಬ ಬಗ್ಗೆ ಈಗಾಗಲೇ ಪಟ್ಟಿ ಸಿದ್ಧಮಾಡಿಕೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಒಂದು ಕಡೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ (DK Shivakumar) ಅವರು, ರಾಜ್ಯದ ಕೆಲವು ಹಾಲಿ ಶಾಸಕರು ಮತ್ತು ಸಚಿವರನ್ನು ಲೋಕಸಭೆಗೆ ಅಭ್ಯರ್ಥಿಯನ್ನಾಗಿ ಘೋಷಿಸುವ ಸಂಬಂಧ ಪಟ್ಟಿ ತಯಾರಿ ಮಾಡಿಕೊಂಡಿದ್ದರೆ, ಅದಕ್ಕೆ ಕೌಂಟರ್‌ ಕೊಡಲು ಹಲವರು ರೆಡಿಯಾಗಿದ್ದಾರೆ. ಇದರ ಜತೆಗೆ ತಮ್ಮ ಕುಟುಂಬದ ಮುಂದಿನ ಕುಡಿಗಳನ್ನು ರಾಜಕೀಯವಾಗಿ ಬೆಳೆಸಲು ಪ್ಲ್ಯಾನ್‌ ಮಾಡಿಕೊಂಡಿದ್ದಾರೆ ಎಂಬ ಅಂಶ ಬೆಳಕಿಗೆ ಬಂದಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಸಮ್ಮುಖದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಲೋಕಸಭೆಯಲ್ಲಿ ಗೆಲ್ಲಬೇಕಾದರೆ ಏನು ಮಾಡಬಹುದು ಮತ್ತು ಏನು ಮಾಡಬೇಕು ಎಂಬ ಬಗ್ಗೆ ಸುದೀರ್ಘ ಚರ್ಚೆ ನಡೆಯಲಿದೆ. ಈ ವೇಳೆ ಸ್ಪರ್ಧೆಗೆ ಹಾಲಿ ಸಚಿವರ ಹೆಸರುಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಅವರು ತಮ್ಮದೇ ಆದ ರಾಜಕೀಯ ದಾಳ ಉರುಳಿಸಲು ಮುಂದಾಗಿದ್ದಾರೆ.

ಸಚಿವರು ಈ ಸಂಬಂಧ ವಾದ ಮಂಡಿಸಲು ಸಿದ್ಧರಾಗಿದ್ದು, “ಒಟ್ಟಾರೆ ನಿಮಗೆ ಏನು ಬೇಕು? ಜಯ ಬೇಕು ತಾನೇ? ನಮ್ಮ ಬಗ್ಗೆ ಕ್ಷೇತ್ರದಲ್ಲಿ ವರ್ಚಸ್ಸು ಇದ್ದು, ನಾವು ಸ್ಪರ್ಧೆ ಮಾಡಿದರೆ ಗೆಲ್ಲುತ್ತೇವೆ ಎಂಬುದು ನಿಮ್ಮ ಇಂಗಿತವಾಗಿದೆ. ಹಾಗಿದ್ದರೆ ನಮ್ಮ ಕುಟುಂಬದವರನ್ನೇ ಕಣಕ್ಕೆ ಇಳಿಸುತ್ತೇವೆ. ಅವರ ಪರ ನಾವು ಓಡಾಟ ಮಾಡಿ ಗೆಲ್ಲಿಸಿಕೊಂಡು ಬರುತ್ತೇವೆ. ಅದಕ್ಕಾಗಿ ಈಗ ಇರುವುದನ್ನು ಕಳೆದುಕೊಳ್ಳುವುದು ಬೇಡ ಎಂಬ ವಾದವನ್ನು ಮುಂದಿಡುತ್ತಿದ್ದಾರೆ.

ಇದನ್ನೂ ಓದಿ: BJP Karnataka : ಸದ್ಯಕ್ಕಿಲ್ಲ ಬಿಜೆಪಿ ರಾಜ್ಯಾಧ್ಯಕ್ಷ? ಡೆಲ್ಲಿಯಿಂದ ʼತಾಂತ್ರಿಕʼ ಅಡಚಣೆ!

ಯಾವ ಲೋಕಸಭಾ ಕ್ಷೇತ್ರಕ್ಕೆ ಯಾರಿಗೆ ಟಿಕೆಟ್ ಕೇಳುವ ಸಾಧ್ಯತೆ?

Exit mobile version