ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಬಡ ಜನರ, ರೈತರ ವಿರೋಧಿಯಾಗಿದೆ. ಈ ಸರ್ಕಾರಕ್ಕೆ ಬಡವರು, ರೈತರು ಹಿಡಿಶಾಪ ಹಾಕುತ್ತಿದ್ದಾರೆ. ಬರಗಾಲದ ಕುರಿತು ನಿರ್ಲಕ್ಷ್ಯ ವಹಿಸಿದ ಕಾಂಗ್ರೆಸ್ ಸರ್ಕಾರವನ್ನು ಎಚ್ಚರಿಸುವ ಕಾರ್ಯವನ್ನು ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಟೀಕಿಸಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ʼಜಗನ್ನಾಥ ಭವನʼದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ, ರಾಜ್ಯ ಸರ್ಕಾರವನ್ನು ಎಚ್ಚರಿಸುವ ಕಾರ್ಯವನ್ನು ರಾಜ್ಯಾಧ್ಯಕ್ಷನಾಗಿ ನಾನು ಮತ್ತು ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಅವರು, ನಮ್ಮೆಲ್ಲ ಶಾಸಕರು, ವಿಧಾನಪರಿಷತ್ ಸದಸ್ಯರು, ಹಿರಿಯ ನಾಯಕರು ಒಗ್ಗಟ್ಟಾಗಿ ಮಾಡಲಿದ್ದೇವೆ ಎಂದರು.
ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಹಮ್ಮಿಕೊಳ್ಳುತ್ತೇವೆ ಎಂದ ಅವರು, ಮುಂದಿನ ಲೋಕಸಭಾ ಚುನಾವಣೆಯು ಈ ದೇಶದ ದಿಕ್ಕನ್ನು ಬದಲಾಯಿಸುವ ಮಹತ್ವದ ಚುನಾವಣೆ. ಅದು ರಾಜ್ಯದ ರಾಜಕೀಯ ದಿಕ್ಕನ್ನು ಬದಲಾಯಿಸಲಿದೆ. ರಾಜ್ಯ ಮತ್ತು ದೇಶದ ಭವಿಷ್ಯದ ದೃಷ್ಟಿಯಿಂದ ಮುಂದಿನ ಲೋಕಸಭಾ ಚುನಾವಣೆಯಲ್ಲಿ ನಮ್ಮ ನೆಚ್ಚಿನ ಪ್ರಧಾನಮಂತ್ರಿ ನರೇಂದ್ರ ಮೋದಿಜೀ ಅವರು 3ನೇ ಬಾರಿಗೆ ದೇಶದ ಪ್ರಧಾನಿ ಆಗಬೇಕು. ಇದಕ್ಕಾಗಿ ರಾಜ್ಯದಲ್ಲಿ 28ಕ್ಕೆ 28 ಸ್ಥಾನಗಳನ್ನು ಬಿಜೆಪಿ ಗೆಲ್ಲುವ ಮೂಲಕ ರಾಜ್ಯ ಸರ್ಕಾರಕ್ಕೆ ತಕ್ಕ ಉತ್ತರ ಕೊಡಬೇಕಾಗಿದೆ ಎಂದು ತಿಳಿಸಿದರು.
ಇದಕ್ಕಾಗಿ ನಾವು, ನೀವೆಲ್ಲರೂ ಜತೆಗೂಡಿ ಪಕ್ಷ ಬಲಪಡಿಸುವ ಕಾರ್ಯ ಮಾಡೋಣ. ಮೋದಿಜೀ ಅವರ ಕೈಗಳನ್ನು ಬಲಪಡಿಸೋಣ ಎಂದು ವಿನಂತಿಸಿ, ವಿಪಕ್ಷನಾಯಕರಾಗಿ ಆಯ್ಕೆಯಾಗಿದ್ದಕ್ಕೆ ಮತ್ತೊಮ್ಮೆ ಆರ್.ಅಶೋಕ್ ಅವರಿಗೆ ಅಭಿನಂದನೆಗಳು ಎಂದು ತಿಳಿಸಿದರು.
ಇದನ್ನೂ ಓದಿ | Opposition Leader : ಬಿಜೆಪಿ ರಾಜ್ಯಾಧ್ಯಕ್ಷ, ವಿಪಕ್ಷ ಸ್ಥಾನಕ್ಕೆ ಎಷ್ಟು ಫಿಕ್ಸ್ ಆಗಿದೆ?: ಪ್ರಿಯಾಂಕ್ ಖರ್ಗೆ
ಕಾಂಗ್ರೆಸ್ ಸರ್ಕಾರದ ಕಿವಿ ಹಿಂಡುವ ಕೆಲಸ ಮಾಡುತ್ತೇವೆ: ಬಿ.ವೈ. ವಿಜಯೇಂದ್ರ
ಬೆಂಗಳೂರು: ಬಹು ನಿರೀಕ್ಷಿತ ವಿಪಕ್ಷ ನಾಯಕನ ಆಯ್ಕೆ ಮಾಡಲಾಗಿದೆ. ಶಾಸಕಾಂಗ ಪಕ್ಷದ ಸಭೆಯಲ್ಲಿ ಸರ್ವಾನುಮತದಿಂದ ಹಿರಿಯ ಶಾಸಕ, ಮಾಜಿ ಡಿಸಿಎಂ ಅಶೋಕ್ ಅವರನ್ನು ವಿಪಕ್ಷ ನಾಯಕರಾಗಿ ಆಯ್ಕೆಮಾಡಲಾಗಿದ್ದು, ರಾಜ್ಯದ ಬಿಜೆಪಿ ಅಧ್ಯಕ್ಷನಾಗಿ ಅಶೋಕ್ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಮುಂದಿನ ದಿನದಲ್ಲಿ ನಾನು, ಅಶೋಕ್ ಅವರು ಒಗ್ಗಟ್ಟಾಗಿ ಬಡವರ ವಿರೋಧಿ, ರೈತ ವಿರೋಧಿಯಾದ ಕಾಂಗ್ರೆಸ್ ಸರ್ಕಾರದ ವಿರುದ್ಧ ಸದನದ ಒಳಗೆ, ಹೊರಗೆ ಜನರ ಧ್ವನಿಯಾಗಿ ಕಿವಿ ಹಿಂಡುವ ಕೆಲಸ ಮಾಡುತ್ತೇವೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
ಇದನ್ನೂ ಓದಿ | Karnataka Politics : ಬಿಜೆಪಿ ಟೀ ಪಾರ್ಟಿ; ಕಾಂಗ್ರೆಸ್ ಕೌಂಟರ್‌ಗೆ ಯತ್ನಾಳ್ ಎನ್‌ಕೌಂಟರ್!
ವಿಧಾನಸಭೆ ಪ್ರತಿಪಕ್ಷ ನಾಯಕರಾಗಿ ಆರ್.ಅಶೋಕ್ ಅವರನ್ನು ಆಯ್ಕೆ ಮಾಡಿದ ಬಳಿಕ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮೆಲ್ಲರ ಗುರಿ ಲೋಕಸಭಾ ಚುನಾವಣೆ. 28ಕ್ಕೆ 28 ಕ್ಷೇತ್ರ ಗೆಲ್ಲುವ ಮೂಲಕ ದೇಶದ ಪ್ರಧಾನಮಂತ್ರಿ ಆಗಲು ನರೇಂದ್ರ ಮೋದಿ ಅವರಿಗೆ ಸಹಕಾರ ಕೊಡುತ್ತೇವೆ. ಸರ್ಕಾರದ ಆಡಳಿತ ವೈಖರಿಯನ್ನು ವಿಪಕ್ಷ ಮಾತ್ರವಲ್ಲ. ರಾಜ್ಯದ ಜನರೂ ವಿರೋಧ ಮಾಡುತ್ತಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಜನರು ತಕ್ಕ ಪಾಠ ಕಲಿಸುತ್ತಾರೆ ಎಂದು ಹೇಳಿದರು.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ