Site icon Vistara News

B Y Vijayendra: ಕಾಂಗ್ರೆಸ್ ಸರ್ಕಾರ ರೈತರು, ಬಡವರ ವಿರೋಧಿ: ಬಿ.ವೈ.ವಿಜಯೇಂದ್ರ

MLA BY Vijayendra felicitated

ಚಿತ್ರದುರ್ಗ: ರಾಜ್ಯದ ರೈತರ ಸಂಕಷ್ಟಕ್ಕೆ ಕಾಂಗ್ರೆಸ್ ಸರ್ಕಾರ ಸ್ಪಂದಿಸದಿರುವುದು ದುರ್ದೈವ. ಇದುವರೆಗೆ ಕಾಂಗ್ರೆಸ್‌ನವರು 5 ಗ್ಯಾರಂಟಿಗಳ ಬಗ್ಗೆಯೇ ಮಾತನಾಡುತ್ತಿದ್ದಾರೆ. ಆದರೆ, ಈ ಬಾರಿಯ ಬಜೆಟ್‌ನಲ್ಲಿ ಕೃಷಿ ಇಲಾಖೆಗೆ 1000 ಕೋಟಿ ರೂ. ಅನುದಾನ ಕಡಿತ ಮಾಡಲಾಗಿದೆ. ಕಾಂಗ್ರೆಸ್‌ ಸರ್ಕಾರ ರೈತಪರವಾಗಿದೆ ಎಂದು ಹೇಳಲು ಸಾಧ್ಯವಿಲ್ಲ. ಇದು ರೈತರು, ಬಡವರ ವಿರೋಧಿಯಾಗಿದೆ ಎಂದು ಶಿಕಾರಿಪುರ ಶಾಸಕ ಬಿ.ವೈ.ವಿಜಯೇಂದ್ರ (B Y Vijayendra) ಕಿಡಿಕಾರಿದರು.

ಹೊಳಲ್ಕೆರೆಯ ಸಂವಿಧಾನ ಸೌಧದಲ್ಲಿ ಆಯೋಜಿಸಿದ್ದ ಶಾಸಕ ಎಂ.ಚಂದ್ರಪ್ಪ ಅವರ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಮಳೆ ಅಭಾವ, ಮಲೆನಾಡಿನಲ್ಲಿ ಕುಡಿಯುವ ನೀರಿನ ಸಮಸ್ಯೆಯಿದೆ. ಮಳೆಯಾಗದೇ ರಾಜ್ಯದಲ್ಲಿ ರೈತರು ಕಂಗಾಲಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ನಾವು ರಾಜ್ಯದಲ್ಲಿ ವಿರೋಧ ಪಕ್ಷವಾಗಿ ಜನಪರ ಕೆಲಸ ಮಾಡುತ್ತಿದ್ದೇವೆ. ಜನರ ಸಮಸ್ಯೆಗಳಿಗೆ ಸ್ಪಂದಿಸುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯ ಮಾಡುವುದಾಗಿ ಹೇಳಿದರು.

ನಾವು ರೈತರು, ಬಡವರ ಪರ ಕೆಲಸ ಮಾಡುತ್ತೇವೆ. ವಿರೋಧ ಪಕ್ಷದ ನಾಯಕರು ಯಾರು ಎಂಬುದನ್ನು ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದು ತಿಳಿಸಿದರು.

ಇದನ್ನೂ ಓದಿ | BJP-JDS Coalition: ಕಮಲ-ದಳ ಮೈತ್ರಿ ಫಿಕ್ಸ್‌: ಬಿಜೆಪಿ ಶಾಸಕಾಂಗ ಪಕ್ಷಕ್ಕೆ ಎಚ್‌.ಡಿ. ಕುಮಾರಸ್ವಾಮಿ ನಾಯಕ?

ವೀರಶೈವ ಲಿಂಗಾಯತ ಸಮುದಾಯದಿಂದ ನೂತನ ಬಿಜೆಪಿ ಶಾಸಕ ಎಂ. ಚಂದ್ರಪ್ಪಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಕಾರ್ಯಕರ್ತರು, ಅಭಿಮಾನಿಗಳು ಕಿಕ್ಕಿರಿದು ಸೇರಿದ್ದರು. ವೇದಿಕೆ ಮೇಲಿದ್ದ ಗಣ್ಯರಿಗೆ ಸನ್ಮಾನ‌ ಮಾಡುವ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸನ್ಮಾನ‌ ಮಾಡಲು ಕಾರ್ಯಕರ್ತರು ಮುಂದಾದರು. ಕಾರ್ಯಕರ್ತರನ್ನು ನಿಯಂತ್ರಿಸಲು ಆಯೋಜಕರು ಹರಸಾಹಸ ಪಟ್ಟರು.

Exit mobile version