Site icon Vistara News

Congress government: ನಮ್ಮ ಸರ್ಕಾರ ಅಲುಗಾಡಿಸಿದರೆ ರಕ್ತಕ್ರಾಂತಿ ಆಗುತ್ತೆ: ಕೆ.ಎಂ.ಶಿವಲಿಂಗೇಗೌಡ ಎಚ್ಚರಿಕೆ

Congress government

ಹಾಸನ: ರಾಜ್ಯದಲ್ಲಿ ಒಂದು ಇಂಚು ಸಿಎಂ ಸಿದ್ದರಾಮಯ್ಯ ಅಥವಾ ಕಾಂಗ್ರೆಸ್‌ ಸರ್ಕಾರವನ್ನು (Congress government) ಅಲುಗಾಡಿಸಿದರೆ ರಕ್ತಕ್ರಾಂತಿ ಆಗುತ್ತದೆ, ನೀವು ಎಚ್ಚರಿಕೆಯಿಂದ ಇರಬೇಕು. ನಿಮಗೆ ಏನಾದರೂ ಆ ಆಲೋಚನೆ ಇದ್ದರೆ, ವಾಪಸ್ ತೆಗೆದುಕೊಳ್ಳಿ, ಇಲ್ಲವಾದರೆ ರಕ್ತಕ್ರಾಂತಿ ಆಗುತ್ತದೆ ಎಂದು ಕೇಂದ್ರ ಸರ್ಕಾರಕ್ಕೆ ಗೃಹ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ಕೆ.ಎಂ.ಶಿವಲಿಂಗೇಗೌಡ ಎಚ್ಚರಿಕೆ ನೀಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ದೂರು ತೆಗೆದುಕೊಂಡು ಪ್ರಾಸಿಕ್ಯೂಷನ್‌ಗೆ ನೋಟೀಸ್ ನೀಡುತ್ತಾರೆ ಎಂಬ ಗುಮಾನಿ ಹರಡಿದೆ. ಟಿವಿ ಮಾಧ್ಯಮಗಳಲ್ಲಿ ಈ ಬಗ್ಗೆ ಬರುತ್ತಿದೆ. ಟಿವಿ ಮಾಧ್ಯಮಗಳಲ್ಲಿ ಬಂದಿದ್ದು, ಬಹುಶಃ ನಿಜ ಆಗಬಹುದು. ಹೀಗಾಗಿ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ಕೊಡುತ್ತೇನೆ. ಬಿಜೆಪಿ ಸರ್ಕಾರ ಎರಡು ಬಾರಿಯೂ ಮುಂಭಾಗಿಲಿನಿಂದ ಅಧಿಕಾರಕ್ಕೆ ಬಂದಿಲ್ಲ, ಹಿಂಭಾಗಿಲಿನಿಂದ ಅಧಿಕಾರಕ್ಕೆ ಬಂದಿದೆ. ಈ ಬಾರಿ ಪುನಃ ಇದೇ ಆಟವನ್ನು ಬಿಜೆಪಿಯವರು ಆಡಲು ಹೊರಟಿದ್ದಾರೆ ಎಂದು ಕಿಡಿಕಾರಿದರು.

ಇಂದು ಕಾಂಗ್ರೆಸ್ ಕಚೇರಿಯಲ್ಲಿ ಇಸತ್ಯಶೋಧನ ಸಮಿತಿ ಸಭೆ ನಡೆಸಿದ್ದೇವೆ. ಪ್ರತಿಭಟನೆ ಮೂಲಕ ಜಿಲ್ಲಾಧಿಕಾರಿಗೆ ಮನವಿ ನೀಡಿದ್ದೇವೆ. ಸರ್ಕಾರ ಬೀಳಿಸಿದರೆ ಕೇಂದ್ರ ಸರ್ಕಾರ ಹಾಗೂ ಬಿಜೆಪಿ ವಿರುದ್ಧ ಉಗ್ರ ಹೋರಾಟ ಮಾಡುತ್ತೇವೆ, ರಕ್ತ ಕ್ರಾಂತಿ ಆಗುತ್ತೆ. ಇದಕ್ಕೆ ನಾವು ತಯಾರಾಗಿದ್ದೇವೆ, ಈ ಮೂಲಕ ಎಚ್ಚರಿಕೆ ನೀಡುತ್ತಿದ್ದೇವೆ. ಅನಿವಾರ್ಯ ಘಟನೆ ನಡೆದರೆ ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಯುದ್ಧಕ್ಕೆ ತಯಾರಾಗಬೇಕು. ಈ ರಾಜ್ಯದಲ್ಲಿ ಯುದ್ಧವನ್ನೇ ಮಾಡಬೇಕಾಗುತ್ತೆ ಎಂದು ಹೇಳಿದರು.

ಇದನ್ನೂ ಓದಿ | MB Patil: ರಾಜ್ಯದಲ್ಲಿ ಟೊಯೋಟಾ ಕಂಪನಿಯ ಹೂಡಿಕೆ ಅಬಾಧಿತ; ಸಚಿವ ಎಂ‌.ಬಿ. ಪಾಟೀಲ

136 ಸೀಟ್ ಬಂದಿರುವ ಸರ್ಕಾರವನ್ನು ಅನ್ಯ ಮಾರ್ಗದಲ್ಲಿ ತೆಗೆಯಲು ಹೋದರೆ ಈ ರಾಜ್ಯದಲ್ಲಿ ಯುದ್ಧವೇ ಆಗುತ್ತೆ, ರಕ್ತ ಕ್ರಾಂತಿ ಆಗುತ್ತೆ. ಇದು ಬಿಜೆಪಿಗೆಯವರಿಗೆ ಎಚ್ಚರಿಕೆ. ಎರಡು ಬಾರಿ ನಿಮ್ಮ ಆಟ ನೋಡಿದ್ದೇವೆ, ಈ ಬಾರಿ ನಿಮ್ಮ ಆಟ ನಡೆಯಲ್ಲ. ಹಾಗೇನಾದರೂ ನೀವು ಅನಿವಾರ್ಯವಾಗಿ ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ನೋಟಿಸ್ ಕೊಟ್ಟರೆ ಉಗ್ರಕ್ರಾಂತಿ ಆಗುತ್ತದೆ ಎಂದು ಎಚ್ಚರಿಕೆ ನೀಡಿದರು.

Exit mobile version