Site icon Vistara News

Congress government: ಕೈ ಶಾಸಕರಿಂದಲೇ ರಾಜ್ಯ ಸರ್ಕಾರ ಪತನವಾಗಲಿದೆ ಎಂದ ಆರ್.ಅಶೋಕ್‌

ahoratri dharani until the guilts are punished says Opposition party Leader R Ashok

ಕೋಲಾರ: ಡಿ.ಕೆ. ಸುರೇಶ್ ಅವರನ್ನು ಸೋಲಿಸಿ ಸಿದ್ದರಾಮಯ್ಯ ಅವರು ಸಿಎಂ ಸ್ಥಾನ (Congress government) ಭದ್ರಪಡಿಸಿಕೊಂಡಿದ್ದಾರೆ, ಈ ಹಿಂದೆ ಪರಮೇಶ್ವರ್ ಸೋಲಿಸಿ ಸಿಎಂ ಸ್ಥಾನ ಭದ್ರಪಡಿಸಿಕೊಂಡಿದ್ದರು. ಇದೀಗ ಅಣ್ಣ-ತಮ್ಮಂದಿರ ಕಾಟ ತಪ್ಪಿಸಲು, ಡಿ.ಕೆ. ಸುರೇಶ್‌ರನ್ನು ಸೋಲಿಸಿದ್ದಾರೆ. ಅದಕ್ಕೆ ಡಿಕೆಶಿ ಸಹ ಅವರದೇ ರೀತಿ ಚದುರಂಗದಾಟ ಆಡುತ್ತಿದ್ದು, ಸಿಎಂ ಸ್ಥಾನ ಬಿಟ್ಟುಕೊಡುವಂತೆ ಸಿದ್ದರಾಮಯ್ಯಗೆ ಸ್ವಾಮೀಜಿಗಳಿಂದ ಹೇಳಿಸಿದ್ದಾರೆ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಅವರ ಶಾಸಕರಿಂದಲೇ ಪತನವಾಗಲಿದೆ, ಇದರಲ್ಲಿ ನಮ್ಮ ಹಸ್ತಕ್ಷೇಪವಿರುವುದಿಲ್ಲ. ಡಿಸಿಎಂಗೆ ಎಕ್ಸ್ಪೈರಿ ಡೇಟ್‌ ಆಗಿದೆ. ಧರ್ಮಾತ್ಮನಾಗಿದ್ದರೆ ಸಿಎಂ ಸ್ಥಾನ ಬಿಟ್ಟುಕೊಡಿ ಎಂದು ಸ್ವಾಮೀಜಿ ಕೇಳಿದ್ದಾರೆ. ಹಾಗಾದರೆ ಸಿಎಂ ಪಾಪಾತ್ಮನಾ? ದಿನನಿತ್ಯ ಮೂರು ಡಿಸಿಎಂ ಹುದ್ದೆ ಸೃಷ್ಟಿಸಿ ಎಂಬ ಕೂಗು ಕೇಳಿಬರುತ್ತಿದೆ. ಈ ಸರ್ಕಾರ ಬಹಳ ದಿನ ಉಳಿಯಲ್ಲ, ಅವರ ಶಾಸಕರೇ ಸರ್ಕಾರವನ್ನು ಬೀಳಿಸುತ್ತಾರೆ. ಇಲ್ಲದಿದ್ದರೆ ಡಿ.ಕೆ. ಶಿವಕುಮಾರ್ ಅವರೇ ಸರ್ಕಾರವನ್ನು ಬೀಳಿಸುತ್ತಾರೆ ಎಂದ ತಿಳಿಸಿದರು.

ಇದನ್ನೂ ಓದಿ | CM Siddaramaiah: ನಿತಿನ್‌ ಗಡ್ಕರಿ ಭೇಟಿಯಾದ ಸಿಎಂ ಸಿದ್ದರಾಮಯ್ಯ; ಪ್ರಮುಖ ಹೆದ್ದಾರಿ ಯೋಜನೆಗಳ ಬಗ್ಗೆ ಚರ್ಚೆ

ವಾಲ್ಮೀಕಿ ನಿಗಮ ಹಗರಣದಲ್ಲಿ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೂ ಹೋರಾಟ; ಆರ್‌. ಅಶೋಕ್‌

ಕೋಲಾರ: ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಭಾಗಿಯಾಗಿದ್ದು, ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ (R Ashok) ಆಗ್ರಹಿಸಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ವಿರುದ್ಧ ಬಿಜೆಪಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಸಚಿವ ಬಿ. ನಾಗೇಂದ್ರ 20% ತಿಂದಿದ್ದಾರೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ 80% ತಿಂದಿದ್ದಾರೆ ಎಂದು ಆರೋಪಿಸಿದ ಅವರು, ಆದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಈ ಕುರಿತು ಸದನದಲ್ಲೂ ಆಗ್ರಹಿಸುತ್ತೇವೆ. ಸಿಎಂ ರಾಜೀನಾಮೆ ನೀಡುವವರೆಗೂ ಹೋರಾಡುತ್ತೇವೆ ಎಂದು ತಿಳಿಸಿದರು.

ಕೂಲಿ ಮಾಡಿ ದುಡಿದು ಮದ್ಯ ಸೇವಿಸಲು ಹೋದರೆ ಅದಕ್ಕೂ ದರ ಏರಿಕೆ ಮಾಡಿದ್ದಾರೆ. ಶ್ರೀಮಂತರು ಕುಡಿಯುವ ಮದ್ಯದ ದರವನ್ನು ಇಳಿಕೆ ಮಾಡಿದ್ದಾರೆ. ರಾಜ್ಯದಲ್ಲಿ ಅಭಿವೃದ್ಧಿ ನಡೆಯುತ್ತಿಲ್ಲ. ಆದರೆ ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿ ಮಾತ್ರ ಅಭಿವೃದ್ಧಿಯಾಗುತ್ತಿದ್ದಾರೆ ಎಂದು ದೂರಿದರು.

ಇದನ್ನೂ ಓದಿ: Uttara Kannada News: ಕಾರವಾರದ ಎನ್.ಕೆ. ಬೈಲು ಸಂತ್ರಸ್ತರಿಗೆ ತಕ್ಷಣ ಪರಿಹಾರಕ್ಕೆ ಸೂಚನೆ

ರೈತರಿಗೆ 800 ಕೋಟಿ ರೂ. ಹಾಲಿನ ಪ್ರೋತ್ಸಾಹಧನ ನೀಡಬೇಕಿದೆ. ರೈತರು ಬರ ಪರಿಹಾರ, ಪ್ರೋತ್ಸಾಹಧನ ಇಲ್ಲದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸರ್ಕಾರಕ್ಕೆ ಕುಡಿಯುವ ನೀರು ಕೊಡಲು ಕೂಡ ಯೋಗ್ಯತೆ ಇಲ್ಲದೆ ಕಲುಷಿತ ನೀರು ಕುಡಿದು ಜನರು ಸತ್ತಿದ್ದಾರೆ. ಡೆಂಘೀ ರೋಗ ಹರಡುತ್ತಿದ್ದು, ಅದಕ್ಕೆ ಚಿಕಿತ್ಸೆ ನೀಡಲು ಸರ್ಕಾರದ ಬಳಿ ಹಣವಿಲ್ಲ. ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜನರು ಕಾಂಗ್ರೆಸ್‌ಗೆ ಬುದ್ಧಿ ಕಲಿಸಬೇಕು ಎಂದು ತಿಳಿಸಿದರು.

ತೈಲ ದರ ಏರಿಕೆಯಾಗಿ ಎಲ್ಲ ದರಗಳು ಏರಿದೆ. ಹಾಲು ಉತ್ಪಾದನೆ ಹೆಚ್ಚಳವಾದರೆ ಅದನ್ನು ಬೇರೆ ರೀತಿ ಬಳಸಿಕೊಳ್ಳಬಹುದು. ಅದನ್ನು ಬಿಟ್ಟು ಹಾಲಿನ ದರ ಏರಿಸಿದ್ದಾರೆ. ಇನ್ನು ಲಿಕ್ಕರ್‌ ದರ ಕೂಡ ಏರಿಸುತ್ತಾರೆ. ಅವೈಜ್ಞಾನಿಕ ಗ್ಯಾರಂಟಿಗಳನ್ನು ಜಾರಿ ಮಾಡಿ, ಅದಕ್ಕೆ ಹಣ ಹೊಂದಿಸಲು ಸಾಧ್ಯವಾಗದೆ ತೆರಿಗೆ ವಿಧಿಸಿ ಜನರ ರಕ್ತ ಹೀರುತ್ತಿದ್ದಾರೆ ಎಂದು ದೂರಿದರು.

Exit mobile version