BJP Protest: ರಾಜ್ಯ ಲೂಟಿ ಮಾಡಲು ಮುಂದಾದ ಕಾಂಗ್ರೆಸ್‌ ಸರ್ಕಾರ: ಸಿ.ಎನ್.ಅಶ್ವತ್ಥ ನಾರಾಯಣ್ ಕಿಡಿ - Vistara News

ಕರ್ನಾಟಕ

BJP Protest: ರಾಜ್ಯ ಲೂಟಿ ಮಾಡಲು ಮುಂದಾದ ಕಾಂಗ್ರೆಸ್‌ ಸರ್ಕಾರ: ಸಿ.ಎನ್.ಅಶ್ವತ್ಥ ನಾರಾಯಣ್ ಕಿಡಿ

BJP Protest: ಸಿಎಂ, ಡಿಸಿಎಂ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್‌ ಪ್ರತಿಭಟನೆ ನಡೆಸಲಾಯಿತು.

VISTARANEWS.COM


on

BJP leaders Protest
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಭ್ರಷ್ಟಾಚಾರ, ಗುತ್ತಿಗೆದಾರರ ಮನೆಯಲ್ಲಿ ಕೋಟ್ಯಂತರ ರೂ. ಪತ್ತೆ, ಕಮಿಷನ್‌ ದಂಧೆ ವಿರೋಧಿಸಿ ರಾಜ್ಯ ಸರ್ಕಾರದ ವಿರುದ್ಧ ನಗರದ ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ವತಿಯಿಂದ ಮಂಗಳವಾರ ಬೃಹತ್‌ ಪ್ರತಿಭಟನೆ (BJP Protest) ನಡೆಸಲಾಯಿತು. ಈ ವೇಳೆ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಸಿಎಂ, ಡಿಸಿಎಂ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಆಗ್ರಹಿಸಿದರು.

ಈ ವೇಳೆ ಮಾಜಿ ಸಚಿವ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ್ ಮಾತನಾಡಿ, ರಾಜ್ಯದ ಕಾಂಗ್ರೆಸ್ ಸರ್ಕಾರ ಎಡವಟ್ಟುಗಳ ಸರ್ಕಾರವಾಗಿದ್ದು, ಆಡಳಿತ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ. ಹೀಗಾಗಿ ಸಿಎಂ, ಡಿಸಿಎಂ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಐಟಿ ದಾಳಿ ಸಂಬಂಧ ಸಿಬಿಐ ತನಿಖೆ ಮಾಡಿ ಹಣದ ಮೂಲವನ್ನು ಪತ್ತೆ ಮಾಡಬೇಕು. ನಾಚಿಕೆ ಇಲ್ಲದ ಸರ್ಕಾರ ಇದು. ಪ್ರತಿಯೊಂದು ವಿಚಾರದಲ್ಲೂ ನಾಡಿಗೇ ಸಂಕಷ್ಟ ತಂದಿಟ್ಟ ಕಾಂಗ್ರೆಸ್ ಸರ್ಕಾರ ಇದೆ. ಈ ಸರ್ಕಾರ ತೊಲಗುವುದನ್ನೇ ಜನ ಬಯಸುತ್ತಿದ್ದಾರೆ. ಹೀಗಾಗಿ ಡಿಸಿಎಂ, ಸಿಎಂ ಉಪ ಮುಖ್ಯಮಂತ್ರಿ ಮತ್ತು ಸಚಿವ ಸಂಪುಟ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ | Congress Politics : ನಿಗಮ, ಮಂಡಳಿಗೆ ಗ್ರೀನ್‌ ಸಿಗ್ನಲ್‌; ಶಾಸಕರ ಜತೆ ಕಾರ್ಯಕರ್ತರ ಲಾಬಿ ಜೋರು

ಸಾಕಷ್ಟು ಆಡಳಿತ ಅನುಭವ, ಪರಿಣತಿ ಇದ್ದರೂ, ಭಾರಿ ಬಹುಮತ ಸಿಕ್ಕಿದರೂ ಜನಾಶೀರ್ವಾದಕ್ಕೆ ತಕ್ಕ ಗೌರವವನ್ನು ನೀಡಿಲ್ಲ. ನಾಮಕಾವಾಸ್ತೆಗೆ ಕೆಲವು ಭಾಗ್ಯಗಳನ್ನು ತೋರಿಸಿ ಲೂಟಿ ಸರ್ಕಾರವನ್ನು ಕೊಟ್ಟಿದ್ದಾರೆ ಎಂದು ಆರೋಪಿಸಿದರು.

ರಾಜ್ಯವನ್ನು ಲೂಟಿ ಮಾಡಲು ಮತ್ತು ಸ್ವಾರ್ಥದಾಹ ಹಿಂಗಿಸಲು ಈ ಸರ್ಕಾರ ಮುಂದಾಗಿದೆ. ಏನೇ ಆಪಾದನೆಗೂ ಅದು ಜಗ್ಗುತ್ತಿಲ್ಲ. ಭಂಡತನದ ಉತ್ತರವನ್ನು ನೀಡುತ್ತಿದ್ದಾರೆ. ಗುತ್ತಿಗೆದಾರರು, ಬಿಲ್ಡರ್‌ಗಳಿಂದ ಹಣ ಲೂಟಿ ಮಾಡುತ್ತಿದ್ದಾರೆ. ಭ್ರಷ್ಟಾಚಾರ ಮಿತಿ ಮೀರಿದೆ ಎಂದು ಆಕ್ಷೇಪಿಸಿದರು.

BJP Protest

ಮಾಜಿ ಸಚಿವ ಆರ್. ಅಶೋಕ್ ಮಾತನಾಡಿ, ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದೇವೆ. ಸರ್ಕಾರ ಬಂದು 4 ತಿಂಗಳಾದರೂ ಕಂಟ್ರಾಕ್ಟರ್‌ಗಳಿಗೆ ಹಣ ಬಿಡುಗಡೆ ಮಾಡಿರಲಿಲ್ಲ. ತನಿಖೆ ಮಾಡುತ್ತೇವೆ, ಆಮೇಲೆ ಹಣ ಬಿಡುಗಡೆ ಮಾಡುತ್ತೇವೆ ಎಂದು ಪುಂಖಾನುಪುಂಖವಾಗಿ ಹೇಳಿದರು. ಆದರೆ ಹಣ ಬಿಡುಗಡೆ ಮಾಡದೆ ಇದ್ದಿದಕ್ಕೆ ಕಾರಣ ಅದಲ್ಲ. ಆಗ ಹಣ ಬಿಡುಗಡೆ ಮಾಡಿರೆ ಪಂಚರಾಜ್ಯ ಚುನಾವಣೆಗೆ ಹಣ ಕೊಡಲು ಆಗಲ್ಲ. ತೆಲಂಗಾಣ, ಮಧ್ಯಪ್ರದೇಶವನ್ನು ಕರ್ನಾಟಕ ದತ್ತು ತೆಗೆದುಕೊಂಡಿದೆ. ಎರಡು ಕಡೆ ಎರಡು ಟೀಂ ಇದೆ, ಅಲ್ಲಿಗೆ ಹಣ ಹೋಗುತ್ತಿದೆ ಎಂದು ಆರೋಪಿಸಿದರು.

‌40 ಪರ್ಸೆಂಟ್ ಕಮಿಷನ್ ಎಂದು ನಮ್ಮ ಮೇಲೆ ಆರೋಪ ಮಾಡಿದರು. ಸಾಕ್ಷಿ ಕೇಳಿದಾಗ ಯಾವುದೇ ದಾಖಲೆ ಕೊಡಲಿಲ್ಲ. ತನಿಖೆ ಮಾಡಿ ಎಂದು ಹೇಳಿದ್ದೆವು. ಈಗ ಅವರದೇ ಸರ್ಕಾರದ ಅವಧಿಯಲ್ಲಿ ಸಾಕ್ಷಿ ಸಿಕ್ಕಿದೆ. ಇದಕ್ಕಿಂತ ಇನ್ನೇನು ಬೇಕು. ಹೈಕಮಾಂಡ್ ಇಲ್ಲಿ ಬಂದು ಕೂತಿದೆ. ರೈಡ್ ಆದ ಮೇಲೆ ಕಾಂಗ್ರೆಸ್ ಹೈಕಮಾಂಡ್ ನಡುಗಿದೆ ಹುಷಾರಾಗಿ ವಸೂಲಿ ಮಾಡಿ ಎಂದು ಅವರ ನಾಯಕರಿಗೆ ಹೇಳುತ್ತಿದೆ ಎಂದು ಆರೋಪಿಸಿದರು.

ಮಾಜಿ ಸಿಎಂ ಸದಾನಂದಗೌಡ ಮಾತನಾಡಿ, ನಾಡಿನ ಪರಿಸ್ಥಿತಿ ಹಿಗಾಯ್ತಲ್ಲ ಎಂದು ನಮ್ಮೆಲ್ಲರಿಗೂ ಬೇಸರ ಆಗುತ್ತಿದೆ. ಈ ಹಿಂದೆ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಇಡೀ ದೇಶವನ್ನೇ ಲೂಟಿ ಮಾಡಿದ್ದರು. ಕಾಂಗ್ರೆಸ್ ಬಂದ್ರೆ ಭ್ರಷ್ಟಾಚಾರ, ಮೋಸ, ಅನ್ಯಾಯ ಮಾಡುವುದೇ ಕೆಲಸ. ಇದೆಲ್ಲದರ ವಿರುದ್ಧ ನಾವು ಪ್ರತಿಭಟನೆ ಮಾಡಬೇಕಿದೆ. ಇಷ್ಟು ದಿನ ಹೋಟೆಲ್‌ನಲ್ಲಿ ದರ ಪಟ್ಟಿ ಇತ್ತು. ಚಟ್ನಿ, ಸಾಂಬಾರ್‌ಗೆ ದರ ಇರಲಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದು ಚಟ್ನಿ, ಸಾಂಬಾರ್‌ಗೂ ದರ ಫಿಕ್ಸ್ ಮಾಡಿದೆ ಎಂದು ಕಿಡಿಕಾರಿದರು.

ಅಂಬಿಕಾಪತಿ ಮನೆಗೆ ಕಂಟ್ರಾಕ್ಟರ್ಸ್ ಹೋಗಿದ್ದರು. ಕೆಂಪಣ್ಣ ಮತ್ತು ಟೀಂ ಆಲೋಚನೆ ಮಾಡಿದೆ. ಎಲ್ಲಾ ಗುತ್ತಿಗೆದಾರರನ್ನು ಅಂಬಿಕಾಪತಿ ಮನೆಗೆ ಕಳಿಸಿ ಪ್ರಕರಣವನ್ನು ಮುಚ್ಚಿ ಹಾಕುವ ಕೆಲಸ ಸರ್ಕಾರ ಮಾಡುತ್ತಿದೆ. ಪರದೆ ಕೀ ಪೀಚೆ ಕೆಲವರಿದ್ದಾರೆ. ಅವರು ಹೊರಗೆ ಬರಬೇಕಾದ್ರೆ ಸಿಬಿಐ ಸ್ವಯಂ ಪ್ರೇರಿತ ಕೇಸ್ ದಾಖಲಿಸಿಕೊಳ್ಳಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ | IT Raid : ಐಟಿ ದಾಳಿಯಲ್ಲಿ ಸಿಕ್ಕಿದೆ ಡೈರಿ; ಯಾರ ಹೆಸರಿದೆ? ಕೈ ನಾಯಕರಿಗೆ ನಡುಕ

ಪ್ರತಿಭಟನೆಯಲ್ಲಿ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಶ್ವತ್ಥ ನಾರಾಯಣ್, ಎಸ್‍ಸಿ ಮೋರ್ಚಾ ರಾಜ್ಯ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ, ಮುಖಂಡರಾದ ಭಾಸ್ಕರ ರಾವ್, ನೆ.ಲ. ನರೇಂದ್ರ ಬಾಬು, ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರೇಮನಿ, ಜಿಲ್ಲಾ ಅಧ್ಯಕ್ಷರಾದ ಮಂಜುನಾಥ ಜಿ, ನಾರಾಯಣ ಗೌಡ, ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Prajwal Revanna Case: ಪ್ರಜ್ವಲ್‌ ರೇವಣ್ಣ ಮೇಲೆ ಮತ್ತೊಂದು ಎಫ್‌ಐಆರ್‌; ಪ್ರೀತಂ ಗೌಡ ಮೇಲೂ ದೂರು

Prajwal Revanna Case: ಬೆಂಗಳೂರು ಸೈಬರ್ ಕ್ರೈಂ (Cyber crime) ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಲೈಂಗಿಕ ದೌರ್ಜನ್ಯ ಆರೋಪದ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರಜ್ವಲ್ ಅನ್ನು ಬಾಡಿ ವಾರಂಟ್ ಮೇಲೆ ಎಸ್ಐಟಿ ವಶಕ್ಕೆ ಕೇಳಿತು. ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಜ್ವಲ್ ರೇವಣ್ಣನನ್ನು ಹಾಜರುಪಡಿಸಲಾಯಿತು.

VISTARANEWS.COM


on

prajwal revanna case preetham gowda
Koo

ಬೆಂಗಳೂರು: ಲೈಂಗಿಕ ದೌರ್ಜನ್ಯ (Physical Abuse) ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲುಪಾಲಾಗಿರುವ ಪ್ರಜ್ವಲ್‌ ರೇವಣ್ಣ (Prajwal Revanna Case) ಅವರ ಮೇಲೆ ಇನ್ನೊಂದು ದೂರು (FIR) ದಾಖಲಾಗಿದೆ. ಇದೇ ವೇಳೆ, ಈ ಪ್ರಕರಣದ ವಿಚಾರಣೆಗಾಗಿ ಅವರನ್ನು ನಾಲ್ಕು ದಿನ ಪೊಲೀಸ್‌ ಕಸ್ಟಡಿಗೆ (Police Custody) ಕೊಡಲಾಗಿದೆ. ಈ ದೂರಿನಲ್ಲಿ ಮಾಜಿ ಶಾಸಕ ಪ್ರೀತಂ ಗೌಡ (preetham gowda) ಅವರನ್ನೂ ಹೆಸರಿಸಲಾಗಿದ್ದು, ಬಿಜೆಪಿ ನಾಯಕನ ಮೇಲೂ ಈಗ ವಿಚಾರಣೆಯ ತೂಗುಗತ್ತಿ ತೂಗಲಿದೆ.

ಇಂದು ಬೆಳಗ್ಗೆ ಮತ್ತೆ ಪ್ರಜ್ವಲ್ ರೇವಣ್ಣನನ್ನು ನಾಲ್ಕು ದಿನಗಳ ಕಾಲ ಎಸ್‌ಐಟಿ ಅಧಿಕಾರಿಗಳ ಕಸ್ಟಡಿಗೆ ನೀಡಿ 42ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರು ಆದೇಶ ನೀಡಿದರು. ಬೆಂಗಳೂರು ಸೈಬರ್ ಕ್ರೈಂ (Cyber crime) ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಲೈಂಗಿಕ ದೌರ್ಜನ್ಯ ಆರೋಪದ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರಜ್ವಲ್ ಅನ್ನು ಬಾಡಿ ವಾರಂಟ್ ಮೇಲೆ ಎಸ್ಐಟಿ ವಶಕ್ಕೆ ಕೇಳಿತು. ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಜ್ವಲ್ ರೇವಣ್ಣನನ್ನು ಹಾಜರುಪಡಿಸಲಾಯಿತು.

ಪ್ರಜ್ವಲ್ ರೇವಣ್ಣ, ಕಿರಣ, ಶರತ್, ಪ್ರೀತಂ ಗೌಡ ಮೇಲೆ‌ ಎಫ್ಐಆರ್ ದಾಖಲಾಗಿದೆ. ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ವಿಚಾರಣೆಯಲ್ಲಿ ಪ್ರಜ್ವಲ್ ರೇವಣ್ಣಗೆ ನಾಲ್ಕನೇ ಎಫ್ಐಆರ್ ಬಗ್ಗೆ ಜಡ್ಜ್ ಮಾಹಿತಿ ನೀಡಿದರು. ʼನಿಮ್ಮ ಮೇಲೆ ಮತ್ತೊಂದು ಎಫ್ಐಆರ್ ಆಗಿದೆ. ನಿಮ್ಮ ವಕೀಲರು ಇಲ್ಲೇ ಇದ್ದಾರೆʼ ಎಂದು ಜಡ್ಜ್ ಹೇಳಿದರು. ಮತ್ತೊಂದು ಎಫ್ಐಆರ್ ಬಗ್ಗೆ ಸುದ್ದಿ ತಿಳಿದು ಪ್ರಜ್ವಲ್ ಆತಂಕಕ್ಕೊಳಗಾದರು.

ಪ್ರಜ್ವಲ್ ರೇವಣ್ಣ ಬಾಡಿ ವಾರೆಂಟ್ ವಿಚಾರಣೆ ಆರಂಭವಾದಾಗ, ಆರೋಪಿಯನ್ನು ಹಾಸನಕ್ಕೆ ಕರೆದುಕೊಂಡು ಹೋಗಿ ತನಿಖೆ ಮಾಡಬೇಕು, ಸ್ಥಳ ಮಹಜರು ನಡೆಸಬೇಕು, ಹೀಗಾಗಿ ಪ್ರಜ್ವಲ್ ರೇವಣ್ಣ ಒಂದು ವಾರಗಳ ಕಾಲ ಪೊಲೀಸ್ ಕಸ್ಟಡಿಗೆ ಬೇಕು ಎಂದು ಎಸ್‌ಪಿಪಿ ಜಗದೀಶ್ ವಾದ ಮಂಡಿಸಿದರು. ಪ್ರಜ್ವಲ್ ಪರ ವಕೀಲ ಅರುಣ್ ವಾದ ಮಂಡಿಸಿದರು. ಕೊನೆಗೆ ಪ್ರಜ್ವಲ್‌ನನ್ನು 4 ದಿನ ಕಸ್ಟಡಿಗೆ ನೀಡಲಾಯಿತು.

ಪ್ತಜ್ವಲ್‌ ರೇವಣ್ಣ, ಮಾಜಿ ಶಾಸಕ ಪ್ರೀತಂ ಗೌಡ ಸೇರಿದಂತೆ ನಾಲ್ವರ ಮೇಲೆ ಸೈಬರ್ ಠಾಣೆಯಲ್ಲಿ ಹೊಸ ಎಫ್ಐಆರ್ ದಾಖಲಾಗಿದೆ. IPS ಕಾಯಿದೆಯ 354(A), 354(D), 354(B), 506 ಹಾಗೂ 66E IT ACTನಡಿ ಎಫ್ಐಆರ್ ದಾಖಲಾಗಿದೆ. 354(A) ಲೈಂಗಿಕ ಕಿರುಕುಳ, 354(D) ಮಹಿಳೆಯ ನಿರಾಸಕ್ತಿ ಹೊರತಾಗಿಯೂ ಪದೇ ಪದೆ ಎಲೆಕ್ಟ್ರಾನಿಕ್ ಸಂವಹನ ಮಾಡುವ ಅಪರಾಧ, 354(B) ಮಹಿಳೆ ಮೇಲೆ ಆಕ್ರಮಣ, ಕ್ರಿಮಿನಲ್ ಬಲವನ್ನು‌ ಬಳಸಿ ವಿವಸ್ತ್ರವಾಗಿರಲು ಒತ್ತಾಯಿಸುವುದು, 506 ಕ್ರಿಮಿನಲ್ ಬೆದರಿಕೆ, 66E IT ACT ಖಾಸಗಿತನ ಉಲ್ಲಂಘಿಸಿ ವ್ಯಕ್ತಿಯ ಚಿತ್ರೀಕರಣ ಮುಂತಾದ ಅಪರಾಧಗಳು ದಾಖಲಾಗಿವೆ.

ನನಗೆ ಗೊತ್ತಿಲ್ಲ ಎಂದ ಪ್ರೀತಂ ಗೌಡ

ಪ್ರಜ್ವಲ್ ವಿಡಿಯೋ ಹಂಚಿಕೆ ಆರೋಪ ವಿಚಾರದಲ್ಲಿ ತಮ್ಮ ವಿರುದ್ಧ ಎಫ್ಐಆರ್ ದಾಖಲಾದ ವಿಚಾರ ತಮಗೆ ಗೊತ್ತಿಲ್ಲ ಎಂದು ಮಾಜಿ ಶಾಸಕ ಪ್ರೀತಂ ಗೌಡ ಹೇಳಿದ್ದಾರೆ. ʼಪ್ರಕರಣ ದಾಖಲಾದ ಬಗ್ಗೆ ನನಗೆ ಗೊತ್ತಿಲ್ಲ. ಅದರ ಬಗ್ಗೆ ತಿಳ್ಕೊಂಡು ಬಂದು ಮತ್ತೆ ಮಾತಾಡ್ತೇನೆʼ ಎಂದು ಬಿಜೆಪಿ ಕಚೇರಿಯಲ್ಲಿದ್ದ ಪ್ರೀತಂ ಗೌಡ ತರಾತುರಿಯಲ್ಲಿ ಕಾರು ಹತ್ತಿ ನಿರ್ಗಮಿಸಿದರು.

ಇದನ್ನೂ ಓದಿ: Suraj Revanna Case: ಸೂರಜ್‌ ರೇವಣ್ಣಗೇ ʼಹಿಂದಿನಿಂದ ಇರಿದವರುʼ ಯಾರು?

Continue Reading

ಸಿನಿಮಾ

Kannada New Movie: ಅದ್ಧೂರಿಯಾಗಿ ನಡೆದ ’ದ ಪ್ರಸೆಂಟ್’ ಚಿತ್ರದ ಮುಹೂರ್ತ

Kannada New Movie: ಗ್ಲೋಬಲ್ ಎಂಟರ್‌ಟೈನ್‌ಮೆಂಟ್ ನೆಟ್‌ವರ್ಕ್ (ಜೆನ್) ಸಂಸ್ಥೆಯು ’ದ ಪ್ರಸೆಂಟ್’ಸಿನಿಮಾವನ್ನು ಮೊದಲ ಹೆಜ್ಜೆಯಾಗಿ ನಿರ್ಮಾಣ ಮಾಡುತ್ತಿದ್ದು, ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಶನಿವಾರ ಅದ್ಧೂರಿಯಾಗಿ ಮುಹೂರ್ತ ನಡೆಯಿತು. ಮಾಜಿ ಸಂಸದ ಎಲ್. ಶಿವರಾಮೇಗೌಡ ಅವರ ಅಳಿಯ ರಾಜೀವ್‌ ರಾಥೋಡ್ ನಾಯಕನಾಗಿ ನಟಿಸುತ್ತಿರುವುದರಿಂದ, ಸಮಾರಂಭಕ್ಕೆ ಆಗಮಿಸಿ ಪ್ರಥಮ ದೃಶ್ಯಕ್ಕೆ ಕ್ಲಾಪ್ ಮಾಡಿ ಅವರು ಶುಭ ಹಾರೈಸಿದರು.

VISTARANEWS.COM


on

The Present kannada film muhurtha at Kanteerava Studio
Koo

ಬೆಂಗಳೂರು: ಹೊಸ ಪ್ರತಿಭೆಗಳಿಗೆ ಎಂದೇ ತೆರೆದುಕೊಂಡಿರುವ ಗ್ಲೋಬಲ್ ಎಂಟರ್‌ಟೈನ್‌ಮೆಂಟ್ ನೆಟ್‌ವರ್ಕ್ (ಜೆನ್) ಸಂಸ್ಥೆಯು ’ದ ಪ್ರಸೆಂಟ್’ ಸಿನಿಮಾವನ್ನು ಮೊದಲ ಹೆಜ್ಜೆಯಾಗಿ ನಿರ್ಮಾಣ ಮಾಡುತ್ತಿದ್ದು, ಕಂಠೀರವ ಸ್ಟುಡಿಯೋದಲ್ಲಿ ಶನಿವಾರ ಅದ್ದೂರಿಯಾಗಿ ಮುಹೂರ್ತ (Kannada New Movie) ನಡೆಯಿತು.

ಮಾಜಿ ಸಂಸದ ಎಲ್. ಶಿವರಾಮೇಗೌಡ ಅವರ ಅಳಿಯ ರಾಜೀವ್‌ ರಾಥೋಡ್ ನಾಯಕನಾಗಿ ನಟಿಸುತ್ತಿರುವುದರಿಂದ, ಸಮಾರಂಭಕ್ಕೆ ಆಗಮಿಸಿ ಪ್ರಥಮ ದೃಶ್ಯಕ್ಕೆ ಕ್ಲಾಪ್ ಮಾಡಿ ಅವರು ಶುಭ ಹಾರೈಸಿದರು. ರಾಷ್ಟ್ರ ಪ್ರಶಸ್ತಿ ವಿಜೇತ ತುಮಕೂರು ಜಿಲ್ಲೆಯ ಯುವ ರೈತ ರಮೇಶ್ ಕ್ಯಾಮೆರಾ ಆನ್ ಮಾಡಿದರು. ಹಾಗೂ ಕ್ರೈಂ ಬ್ರಾಂಚ್‌ನ ಡೈನಮಿಕ್ ಪೋಲೀಸ್ ಅಧಿಕಾರಿ ಆರ್.ನವೀನ್‌ಕುಮಾರ್ ಅತಿಥಿಯಾಗಿ ಉಪಸ್ಥಿತರಿದ್ದರು.

ಈ ವೇಳೆ ಜೆನ್ ಮಾಲೀಕ ಮತ್ತು ನಿರ್ದೇಶಕ ಶಿವಪೂರ್ಣ ಮಾತನಾಡಿ, ಇದೊಂದು ಮೈಥಲಾಜಿಕಲ್ ವಿಷಯಗಳನ್ನು ಒಳಗೊಂಡಿರುತ್ತದೆ. ಚಿತ್ರಕಥೆ ಸಿದ್ದಪಡಿಸಲು ಒಂದು ವರ್ಷ ಸಮಯ ತೆಗೆದುಕೊಂಡಿದೆ. ಒಂದು ಆತ್ಮದ 3 ಜನ್ಮದ ಕಥೆ ಒಳಗೊಂಡಿರುತ್ತದೆ. ಪ್ರಸೆಂಟ್, ಪಾಸ್ಟ್ ಹಾಗೂ ಫ್ಯೂಚರ್ ಎಂದು ಮೂರು ಭಾಗಗಳಲ್ಲಿ ಬರಲಿದೆ.

ಇದನ್ನೂ ಓದಿ: Gold Rate Today: ಏರಿಕೆಯೂ ಇಲ್ಲ ಇಳಿಕೆಯೂ ಇಲ್ಲ; ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ

ಭಾಗ-1 ಪ್ರಸೆಂಟ್‌ನಲ್ಲಿ ನಡೆಯಲಿರುವ ಅಂಶಗಳನ್ನು ಹೇಳಲಾಗುತ್ತಿದೆ. ನಂತರ ಪಾಸ್ಟ್, ಫ್ಯೂಚರ್ ಟೇಕ್ ಆಫ್ ಆಗುತ್ತದೆ. ಕಾಲ್ಪನಿಕ ಆದರೂ ನೋಡುಗರಿಗೆ ಹೊಸತನ ಕೊಡಬೇಕೆಂದು ಯೋಜನೆ ಹಾಕಲಾಗಿದೆ. ಯುವ ರೈತ ಬಂದಿದ್ದು ಖುಷಿ ತರಿಸಿದೆ. ಕಥೆಯಲ್ಲಿ ರೈತರ ಮಕ್ಕಳು ಪೋಷಕರನ್ನು ಯಾವ ರೀತಿ ಅಸಡ್ಡೆಯಿಂದ ಕಾಣುತ್ತಾರೆ ಎಂಬುದು ಬರುತ್ತದೆ. ಹೆಚ್ಚು ಭಾಗ ಬೆಂಗಳೂರು, ಉಳಿದಂತೆ ಕೇರಳದ ಸುಂದರ ತಾಣಗಳಲ್ಲಿ ಚಿತ್ರೀಕರಣ ನಡೆಸಲಾಗುವುದು.

ಶೇಕಡ 10ರಷ್ಟು ಗ್ರಾಫಿಕ್ಸ್ ಇರುತ್ತದೆ. ಸಿದ್ದಿ ಸಂಗೀತ, ಟಾಲಿವುಡ್‌ದಲ್ಲಿ ಹೆಸರು ಮಾಡಿರುವ ಹಿರಿಯ ಛಾಯಾಗ್ರಾಹಕ ಪ್ರಸಾದ್ ಪುಲಿಚರ್ಲ ನಮ್ಮ ಸಿನಿಮಾದ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಡುತ್ತಿದ್ದಾರೆ. ಕ್ರಿಸ್‌ಮಸ್ ವೇಳೆಗೆ ಜನರಿಗೆ ತೋರಿಸುವ ಇರಾದೆ ಇದೆ. ಕನ್ನಡ ಸೇರಿದಂತೆ ತಮಿಳು, ತೆಲುಗು, ಹಿಂದಿ ಹಾಗೂ ಮಲೆಯಾಳಂ ಭಾಷೆ ಹೀಗೆ ಪ್ಯಾನ್ ಇಂಡಿಯ ಮಟ್ಟದಲ್ಲಿ ಬರಲಿದೆ ಎಂದು ತಿಳಿಸಿದರು.

ಜೆನ್ ಮೂಲಕ ಹಲವು ಪ್ರತಿಭೆಗಳಿಗೆ ವೇದಿಕೆ ಸೃಷ್ಟಿಸುತ್ತಿದೆ. ವರ್ಷಕ್ಕೆ ಹತ್ತು ಚಿತ್ರಗಳನ್ನು ತಯಾರು ಮಾಡುತ್ತಿದ್ದು, ಇಂತಹವರಿಗೆ ಅವಕಾಶ ಮಾಡಿ ಕೊಡಲಾಗುವುದು. ಮುಂದಿನ ದಿನಗಳಲ್ಲಿ ಸ್ಯಾಟಲೈಟ್ ಚಾನಲ್, ಫ್ಯಾಷನ್ ಶೋ, ಡಿಜಿಟಲ್ ಸೇವೆ ಶುರು ಮಾಡಲಾಗುವುದು. ಹೊಸಬರು ಜೆನ್ ವೆಬ್‌ಸೈಟ್ ಮೂಲಕ ವೇದಿಕೆಯನ್ನು ಸೃಷ್ಟಿಸಿಕೊಳ್ಳಬಹುದು. ನಮ್ಮ ಸಂಸ್ಥೆಯಲ್ಲಿ ಗುರುತಿಸಿಕೊಂಡಿರುವ ಕೀರ್ತಿ ಅವರಿಗೆ ಹೊಸ ಸಿನಿಮಾಕ್ಕೆ ಆಕ್ಷನ್ ಕಟ್ ಹೇಳಲು ಅವಕಾಶ ಮಾಡಿಕೊಡಲಾಗುತ್ತಿದೆ. ಮಾಧ್ಯಮದ ಸಹಕಾರಬೇಕು ಎಂದು ಅವರು ಕೋರಿದರು.

ಚಿತ್ರದಲ್ಲಿ ಸುಪ್ರಿಂ ಸ್ಟಾರ್ ರಾಜೀವ್‌ರಾಥೋಡ್ ನಾಯಕ. ದಿಯಾ, ಮಾನಸಗೌಡ ನಾಯಕಿಯರು. ಬೇಬಿ ಆರಾಧ್ಯ. ಇವರೆಲ್ಲರೂ ಪಾತ್ರದ ಪರಿಚಯ ಮಾಡಿಕೊಂಡರು. ಖಳನಾಗಿ ರಾಬರ್ಟ್ ಉಳಿದಂತೆ ಅವಿನಾಶ್, ಶ್ರೀಧರ್, ದುಬೈ ರಫೀಕ್, ಮಂಜೇಶ್‌ಗೌಡ, ಸಹನ, ಭುವನ, ಮಾಧುರಿರೆಡ್ಡಿ, ಆಶಾ, ಭಾವನಾ, ಸಮೃದ್ದಿ, ಶೌರ್ಯ,ಅರುಣ್, ಮಮತ ಹಾಗೂ ಮುಂತಾದವರು ನಟಿಸುತ್ತಿದ್ದಾರೆ.

ಇದನ್ನೂ ಓದಿ: Milk Price: ನಂದಿನಿ ಹಾಲು ದರ ಏರಿಕೆ ಶಾಕ್‌; ಅರ್ಧ ಲೀಟರ್‌ಗೂ ₹2, ಒಂದು ಲೀಟರ್‌ಗೂ ₹2 ಬೆಲೆ ಏರಿಕೆ!

ನಂತರ ರಾತ್ರಿ ನಡೆದ ರ‍್ಯಾಂಪ್ ವಾಕ್‌ದಲ್ಲಿ ಸಂಸ್ಥೆಯ ಪ್ರೊಮೋ, ಟೈಟಲ್ ಅನಾವರಣಗೊಂಡಿತು. ತರುವಾಯ ಸಿನಿಮಾದ ಕಲಾವಿದೆಯರು, ಮಾಡೆಲ್‌ಗಳು ಭಾಗವಹಿಸಿ ಕಾರ್ಯಕ್ರಮಕ್ಕೆ ಮೆರುಗು ತಂದರು. ಇಂತಹ ಕಾರ್ಯಕ್ರಮಗಳನ್ನು ಮುಂದೆಯೂ ಹಮ್ಮಿಕೊಳ್ಳಲಾಗುವುದೆಂದು ಶಿವಪೂರ್ಣ ಮಾಹಿತಿ ಹಂಚಿಕೊಂಡರು.

Continue Reading

ಕರ್ನಾಟಕ

Milk Price: ಜನರ ಬದುಕಿನೊಂದಿಗೆ ಕಾಂಗ್ರೆಸ್‌ ಸರ್ಕಾರ ಚೆಲ್ಲಾಟ; ಹಾಲಿನ ದರ ಏರಿಕೆಗೆ ವಿಜಯೇಂದ್ರ ಆಕ್ರೋಶ

Milk Price: ಈ ರಾಜ್ಯದ ಜನರ ಬದುಕಿನೊಂದಿಗೆ ಚೆಲ್ಲಾಟವಾಡಲು ಹೊರಟಿರುವ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಮುಂದುವರಿಯುವ ನೈತಿಕತೆ ಕಳೆದು ಕೊಂಡಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.

VISTARANEWS.COM


on

Milk Price
Koo

ಬೆಂಗಳೂರು: ಬೆಲೆ ಏರಿಸುವುದರಲ್ಲಿ ನಿಸ್ಸೀಮತನಕ್ಕೆ ಹೆಸರಾಗುತ್ತಿರುವ ಕಾಂಗ್ರೆಸ್‌ ಸರ್ಕಾರ ಜನ ಸಾಮಾನ್ಯರ ಮನೆಯಲ್ಲಿ ಕ್ಷೀರ ಉಕ್ಕುವುದನ್ನು ಕ್ಷೀಣಿಸಲು ಹಾಲು ದರವನ್ನು (Milk Price) ಉಕ್ಕಿಸಲು ಮುಂದಾಗಿದೆ. ಈ ಮೂಲಕ ರಾಜ್ಯದ ಜನರ ಬದುಕಿನೊಂದಿಗೆ ಚೆಲ್ಲಾಟವಾಡುತ್ತಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ಹೊರಹಾಕಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, ಇತ್ತ ಬಡವರಿಗೂ ಉಪಕಾರಿಯಾಗಲಿಲ್ಲ, ಹೈನುಗಾರಿಕೆ ಹಾಗೂ ಪಶುಸಂಗೋಪನೆ ಅವಲಂಬಿಸಿರುವ ರೈತರ ಬದುಕೂ ಹಸನಾಗಿಸಲಿಲ್ಲ. ಇದೀಗ ನಂದಿನಿ ಹಾಲಿನ ದರ ಹೆಚ್ಚಿಸಿ ಸದ್ಯ ಲೀಟರ್ ಹಾಲಿಗೆ ಇರುವ 42 ರೂಪಾಯಿ ದರವನ್ನು 2 ರೂ. 10 ಪೈಸೆ ಹೆಚ್ಚಳ ಮಾಡಲಾಗಿದೆ.

ಈ ರಾಜ್ಯದ ಜನರ ಬದುಕಿನೊಂದಿಗೆ ಚೆಲ್ಲಾಟವಾಡಲು ಹೊರಟಿರುವ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಮುಂದುವರಿಯುವ ನೈತಿಕತೆ ಕಳೆದು ಕೊಂಡಿದೆ. ಈ ಜನವಿರೋಧಿ ಸರ್ಕಾರ ಕೆಳಗಿಳಿಸುವವರೆಗೂ ಬಿಜೆಪಿಯ ಜನಪರ ಹೋರಾಟ ನಿರಂತರ ಸಾಗಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ | Milk Price: ನಂದಿನಿ ಹಾಲು ದರ ಏರಿಕೆ ಶಾಕ್‌; ಅರ್ಧ ಲೀಟರ್‌ಗೂ ₹2, ಒಂದು ಲೀಟರ್‌ಗೂ ₹2 ಬೆಲೆ ಏರಿಕೆ!

ತುರ್ತು ಪರಿಸ್ಥಿತಿ ಹೇರಿಕೆಯ ವಾರ್ಷಿಕೋತ್ಸವ ಸಂಭ್ರಮಿಸಲು ದರ ಏರಿಕೆ: ಅಶೋಕ್‌ ಕಿಡಿ

Petrol Diesel Price

ಹಾಲಿನ ದರ ಹೆಚ್ಚಳಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಕಿಡಿಕಾರಿದ್ದಾರೆ. ಎಕ್ಸ್‌ನಲ್ಲಿ ಬೆಲೆ ಏರಿಕೆ ವಿರುದ್ಧ ಟ್ವೀಟ್ ಮಾಡಿರುವ ಅವರು, ತುರ್ತು ಪರಿಸ್ಥಿತಿ ಹೇರಿಕೆಯ ವಾರ್ಷಿಕೋತ್ಸವ ಸಂಭ್ರಮಿಸಲು ಕಾಂಗ್ರೆಸ್ ಸರ್ಕಾರ ನಂದಿನಿ ಹಾಲಿನ ದರವನ್ನ ಲೀಟರ್ಗೆ ಎರಡು ರೂಪಾಯಿ ಹೆಚ್ಚಳ ಮಾಡಿ ವಿಕೃತ ಸಂತೋಷ ಅನುಭವಿಸುತ್ತಿದೆ.

ಸಿಎಂ ಸಿದ್ದರಾಮಯ್ಯನವರೇ, ತಾವು ಅಧಿಕಾರಕ್ಕೆ ಬಂದ ಮೇಲೆ ಕೇವಲ 13 ತಿಂಗಳಿನಲ್ಲಿ ಹಾಲಿನ ದರವನ್ನ ಎರಡು ಬಾರಿ ಹೆಚ್ಚಿಸಿದ್ದೀರಿ. ಕಳೆದ ವರ್ಷ ಆಗಸ್ಟ್ ನಲ್ಲಿ 3 ರೂಪಾಯಿ ಹೆಚ್ಚಳವಾಗಿದ್ದ ಹಾಲಿನ ಬೆಲೆ, ಈಗ ಮತ್ತೊಮ್ಮೆ 2 ರೂಪಾಯಿ ಹೆಚ್ಚಾಗಿದೆ. ರಾಜ್ಯದ ಬಡವರು, ಮಾಧ್ಯಮ ವರ್ಗದ ಜನ ಈಗಾಗಲೇ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ, ಗಗನಕ್ಕೇರಿರುವ ತರಕಾರಿ ಬೆಲೆಗಳಿಂದ ಕಂಗಾಲಾಗಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಹಾಲಿನ ದರ ಏರಿಸಿ ಮತ್ತೊಮ್ಮೆ ಬಡವರ ಗಾಯದ ಮೇಲೆ ಬರೆ ಎಳೆದಿದ್ದೀರಿ. ನಿಮಗೆ ಬಡವರು, ಮಾಧ್ಯಮ ವರ್ಗದ ಜನರ ಮೇಲೆ ಕಿಂಚಿತ್ತಾದರೂ ಕನಿಕರ ಇದ್ದರೆ ಈ ಕೂಡಲೇ ಹಾಲಿನ ದರ ಏರಿಕೆ ಆದೇಶವನ್ನು ಹಿಂಪಡೆಯಿರಿ ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ | CM Siddaramaiah: ಡಿಸಿಎಂ ವಿಚಾರದಲ್ಲಿ ಮತ್ತೆ ಒಡೆದುಹೋದ ಕಾಂಗ್ರೆಸ್‌; ಸಿದ್ದು- ಡಿಕೆಶಿ ಬಣದ ನಡುವೆ ಡಿಶುಂ ಡಿಶುಂ

ಜನ ತಾಳ್ಮೆ ಕಳೆದುಕೊಳ್ಳುವ ಮೊದಲು ಕುರ್ಚಿ ಬಿಟ್ಟು ತೊಲಗಿ

ಹಾಲಿನ ದರ ಹೆಚ್ಚಳಕ್ಕೆ ರಾಜ್ಯ ಬಿಜೆಪಿ ಖಂಡಿಸಿದೆ. ಹಾಲು ಉತ್ಪಾದಕರಿಗೆ ಹಾಲಾಹಲ ನೀಡಿದ್ದ ಕಾಂಗ್ರೆಸ್ ಸರ್ಕಾರ ಈಗ ಗ್ರಾಹಕರಿಗೆ ಅಕ್ಷರಶಃ ಬೆಲೆಯೇರಿಕೆಯ ವಿಷವುಣಿಸುತ್ತಿದೆ. ಹಾಲು ಉತ್ಪಾದಕರಿಗೆ ಸಬ್ಸಿಡಿ ನೀಡದೆ ಭಂಡತನ ತೋರಿದ ಕಾಂಗ್ರೆಸ್‌ ಸರ್ಕಾರ, ಇದೀಗ ಏಕಾಏಕಿ ಹಾಲಿನ ದರವನ್ನು ಪ್ರತಿ ಲೀ.ಗೆ ₹2.10 ಏರಿಸಿ ಗಾಯದ ಮೇಲೆ ಬರೆ ಎಳೆಯುತ್ತಿದೆ.

ಸಿಎಂ ಸಿದ್ದರಾಮಯ್ಯ ಅವರೇ, ಹಾಲು ಉತ್ಪಾದಕರಿಗೆ ₹1087 ಕೋಟಿ ಸಬ್ಸಿಡಿ ಹಣವನ್ನು ನೀಡದೆ ಬಾಕಿ ಉಳಿಸಿಕೊಂಡಿರುವ ನೀವು, ಈಗ ಗ್ರಾಹಕರಿಗೆ ಬೆಲೆಯೇರಿಕೆ ಶಿಕ್ಷೆ ನೀಡಿರುವುದು ಯಾವ ಪುರುಷಾರ್ಥಕ್ಕೆ..!! ನಿಮ್ಮದು ಕೇವಲ ರೈತ ವಿರೋಧಿ ಸರ್ಕಾರ ಮಾತ್ರವಲ್ಲ, ನಿಮ್ಮದು ಜನ ವಿರೋಧಿ ಸರ್ಕಾರವೂ ಹೌದು. ಬೆಲೆಯೇರಿಕೆಯನ್ನೇ ಬಂಡವಾಳವನ್ನಾಗಿಸಿಕೊಂಡಿರುವ ನೀವು ಆಳಲು ಯೋಗ್ಯರಲ್ಲ ಎಂಬುದಂತೂ ಸಾಬೀತಾಗಿದೆ, ಜನ ತಾಳ್ಮೆ ಕಳೆದುಕೊಳ್ಳುವ ಮೊದಲು ಕುರ್ಚಿ ಬಿಟ್ಟು ತೊಲಗಿ ಎಂದು ಆಗ್ರಹಿಸಿದೆ.

Continue Reading

ಪ್ರಮುಖ ಸುದ್ದಿ

Milk Price: ನಂದಿನಿ ಹಾಲು ದರ ಏರಿಕೆ ಶಾಕ್‌; ಅರ್ಧ ಲೀಟರ್‌ಗೂ ₹2, ಒಂದು ಲೀಟರ್‌ಗೂ ₹2 ಬೆಲೆ ಏರಿಕೆ!

Milk Price hike: ಇಷ್ಟು ದಿನ 1000 ml ಹಾಲು 42 ರೂ.ಗೆ ಮಾರಾಟವಾಗುತ್ತಿತ್ತು. ಆದರೆ ನಾಳೆಯಿಂದ 50 ml ಹಾಲನ್ನು ಹೆಚ್ಚುವರಿಯಾಗಿ ಸೇರಿಸಿ, ಅದರ ದರ 2 ರೂ.ಗಳನ್ನು ಸೇರಿಸಿ ನಾಳೆಯಿಂದ ಮಾರಾಟ ಮಾಡಲಾಗುತ್ತದೆ. ಒಟ್ಟು 1050 ml ಹಾಲಿನ ದರ 44 ರೂ. ಆಗುತ್ತಿದೆ ಎಂದು KMF ಅಧ್ಯಕ್ಷ ಭೀಮಾ ನಾಯ್ಕ್ ತಿಳಿಸಿದ್ದಾರೆ.

VISTARANEWS.COM


on

milk price hike
Koo

ಬೆಂಗಳೂರು: ಕರ್ನಾಟಕ ಹಾಲು ಒಕ್ಕೂಟದ (KMF) ನಂದಿನಿ ಹಾಲಿನ (Nandini milk) ದರಗಳನ್ನು (milk price hike) ಏರಿಸಲಾಗಿದೆ. ಲೀಟರ್‌ಗೆ 2 ರೂ. ಏರಿಕೆ ಮಾಡಲಾಗಿದ್ದು, ಒಂದು ಲೀಟರ್‌ ಹಾಲಿನ ದರ ನಾಳೆಯಿಂದ 44 ರೂ. ಆಗುತ್ತಿದೆ. ಈ ಮೂಲಕ ತೈಲ ಬೆಲೆ ಏರಿಕೆ (petrol price hike) ಬೆನ್ನಲ್ಲೇ ಜನ ಸಾಮಾನ್ಯರಿಗೆ ಮತ್ತೊಂದು ಶಾಕ್ ನೀಡಿದೆ ರಾಜ್ಯ ಸರಕಾರ.

ಇಷ್ಟು ದಿನ 1000 ml ಹಾಲು 42 ರೂ.ಗೆ ಮಾರಾಟವಾಗುತ್ತಿತ್ತು. ಆದರೆ ನಾಳೆಯಿಂದ 50 ml ಹಾಲನ್ನು ಹೆಚ್ಚುವರಿಯಾಗಿ ಸೇರಿಸಿ, ಅದರ ದರ 2 ರೂ.ಗಳನ್ನು ಸೇರಿಸಿ ನಾಳೆಯಿಂದ ಮಾರಾಟ ಮಾಡಲಾಗುತ್ತದೆ. ಒಟ್ಟು 1050 ml ಹಾಲಿನ ದರ 44 ರೂ. ಆಗುತ್ತಿದೆ ಎಂದು KMF ಅಧ್ಯಕ್ಷ ಭೀಮಾ ನಾಯ್ಕ್ ತಿಳಿಸಿದ್ದಾರೆ.

ಆದರೆ ಅರ್ಧ ಲೀಟರ್ ಪ್ಯಾಕೇಟ್ ಹಾಲಿಗೂ 2 ರೂಪಾಯಿ ಏರಿಕೆ ಮಾಡಲಾಗುತ್ತಿದೆ. ಯಾಕೆಂದರೆ ಅರ್ಧ ಲೀಟರ್‌ ಹಾಲಿನ ಪ್ಯಾಕೆಟ್‌ಗೂ 50 ml ಹಾಲನ್ನು ಹೆಚ್ಚುವರಿಯಾಗಿ ಸೇರಿಸಲಾಗುತ್ತಿದೆ. ಪ್ರತಿಯೊಂದು ಪ್ಯಾಕೆಟ್‌ಗೂ 50 ML ಹಾಲು ಹೆಚ್ಚುವರಿಯಾಗಿ ಸೇರಿಸುವುದರಿಂದ 2 ರೂಪಾಯಿ ಏರಿಕೆ ಮಾಡಲಾಗುತ್ತಿದೆ. ಈ ಲೆಕ್ಕಾಚಾರದಲ್ಲಿ ಅರ್ಧ ಲೀಟರ್‌ ಹಾಲಿನ ಎರಡು ಪ್ಯಾಕೆಟ್‌ಗಳನ್ನು ತೆಗೆದುಕೊಳ್ಳುವುದಕ್ಕಿಂತಲೂ, ಒಂದು ಲೀಟರ್‌ ಹಾಲಿನ ಪ್ಯಾಕೆಟ್‌ ತೆಗೆದುಕೊಳ್ಳುವುದು ಅಗ್ಗವಾಗಲಿದೆ.

“ಕೆಎಂಎಫ್‌ ಇಡೀ ರಾಷ್ಟ್ರದಲ್ಲಿ ಅತಿ ದೊಡ್ಡ ಎರಡನೇ ದೊಡ್ಡ ಹಾಲಿನ ಮಂಡಲಿ. 98 ಲಕ್ಷದ 17 ಸಾವಿರ ಲೀಟರ್ ಹಾಲು ನಮ್ಮಲ್ಲಿ ಶೇಖರಣೆ ಆಗುತ್ತಿದೆ. ಒಂದು ಕೋಟಿ ಲೀಟರ್ ಹಾಲಿನ ಶೇಖರಣೆ ಮಾಡಲು ಸಿದ್ಧರಾಗಿದ್ದೇವೆ. 27 ಲಕ್ಷ ಹಾಲು ಉತ್ಪಾದಕ ರೈತರಿಂದ ನಮಗಿದು ಸಾಧ್ಯವಾಗಿದೆ. 30 ಲಕ್ಷ ಲೀಟರ್ ಹಾಲು, ಹಾಲಿನ ಪೌಡರ್‌ಗೆ ಮೀಸಲಾಗಿದೆ” ಎಂದು ಭೀಮಾ ನಾಯ್ಕ್‌ ಮಾಹಿತಿ ನೀಡಿದ್ದಾರೆ.

ಹೊಸ ದರಗಳು ಹೀಗಿವೆ:

  • ನೀಲಿ ಪ್ಯಾಕೆಟ್ ಹಾಲು 42 ರಿಂದ 44 ರೂ
  • ನೀಲಿ ಪ್ಯಾಕೆಟ್ (ಟೋನ್ಡ್ ಹಾಲು) 43 ರಿಂದ 45ರೂ
  • ಆರೆಂಜ್ ಪ್ಯಾಕೆಟ್ ಹಾಲು 46ರಿಂದ 48 ರೂ
  • ಆರೆಂಜ್ ಸ್ಪೆಷಲ್ ಹಾಲು 48 ರಿಂದ 50 ರೂ
  • ಶುಭಂ ಹಾಲು 48ರಿಂದ 50 ರೂ
  • ಸಮೃದ್ದಿ ಹಾಲು 51ರಿಂದ 53ರೂ
  • ಶುಭಂ (ಟೋನ್ಡ್ ಹಾಲು) 49ರಿಂದ 51ರೂ
  • ಸಂತೃಪ್ತಿ ಹಾಲು 55 ರಿಂದ 57 ರೂ
  • ಶುಭಂ ಗೋಲ್ಡ್ ಹಾಲು 49ರಿಂದ 51ರೂ
  • ಶುಭಂ ಡಬಲ್ ಟೋನ್ಡ್ ಹಾಲು 41 ರಿಂದ 43 ರೂ ಗೆ ಏರಿಕೆ

ಇದನ್ನೂ ಓದಿ: Milk Products: ಹಾಲು, ಹಾಲಿನ ಉತ್ಪನ್ನ ಸೇವಿಸಿದರೆ ಲಾಭವೋ ನಷ್ಟವೋ?

Continue Reading
Advertisement
prajwal revanna case preetham gowda
ಪ್ರಮುಖ ಸುದ್ದಿ11 mins ago

Prajwal Revanna Case: ಪ್ರಜ್ವಲ್‌ ರೇವಣ್ಣ ಮೇಲೆ ಮತ್ತೊಂದು ಎಫ್‌ಐಆರ್‌; ಪ್ರೀತಂ ಗೌಡ ಮೇಲೂ ದೂರು

Lok Sabha Speaker Election
ದೇಶ16 mins ago

Lok Sabha Speaker Election: ಲೋಕಸಭೆ ಇತಿಹಾಸದಲ್ಲೇ ಮೊದಲ ಬಾರಿ ಸ್ಪೀಕರ್‌ ಹುದ್ದೆಗೆ ನಡೆಯಲಿದೆ ಚುನಾವಣೆ

The Present kannada film muhurtha at Kanteerava Studio
ಸಿನಿಮಾ22 mins ago

Kannada New Movie: ಅದ್ಧೂರಿಯಾಗಿ ನಡೆದ ’ದ ಪ್ರಸೆಂಟ್’ ಚಿತ್ರದ ಮುಹೂರ್ತ

Milk Price
ಕರ್ನಾಟಕ23 mins ago

Milk Price: ಜನರ ಬದುಕಿನೊಂದಿಗೆ ಕಾಂಗ್ರೆಸ್‌ ಸರ್ಕಾರ ಚೆಲ್ಲಾಟ; ಹಾಲಿನ ದರ ಏರಿಕೆಗೆ ವಿಜಯೇಂದ್ರ ಆಕ್ರೋಶ

Nita Ambani
Latest25 mins ago

Nita Ambani: ಕಾಶಿಯಲ್ಲಿ ಮದುವೆ ಆಮಂತ್ರಣ ಪೂಜೆ; ಚಾಟ್‌ ಅಂಗಡಿಗೂ ಭೇಟಿ ನೀಡಿದ ನೀತಾ ಅಂಬಾನಿ

Viral Video
Latest28 mins ago

Viral Video: ಕ್ಯಾಸಿನೋದಲ್ಲಿ 33 ಕೋಟಿ ರೂ. ಜಾಕ್‌ಪಾಟ್‌; ಖುಷಿ ಹೆಚ್ಚಾಗಿ ಹಾರ್ಟ್‌ ಅಟ್ಯಾಕ್‌!

Rashid Khan
ಕ್ರಿಕೆಟ್47 mins ago

Rashid Khan: ರನ್​ ಓಡದ ಸಿಟ್ಟಿನಲ್ಲಿ ಸಹ ಆಟಗಾರನ್ನತ್ತ ಬ್ಯಾಟ್​ ಎಸೆದ ರಶೀದ್​ ಖಾನ್​; ವಿಡಿಯೊ ವೈರಲ್​

Amarnath Yatra
ದೇಶ48 mins ago

Amarnath Yatra: ಆಗಸ್ಟ್‌ನಲ್ಲಿ ಪಾಕ್‌ ನಡೆಸುತ್ತಾ ಡೆಡ್ಲಿ ಅಟ್ಯಾಕ್‌? ಎರಡೆರಡು ಉಗ್ರ ಸಂಘಟನೆಗಳಿಂದ ದೊಡ್ಡ ಪ್ಲ್ಯಾನ್‌!

Gold Rate Today
ಚಿನ್ನದ ದರ1 hour ago

Gold Rate Today: ಏರಿಕೆಯೂ ಇಲ್ಲ ಇಳಿಕೆಯೂ ಇಲ್ಲ; ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ

milk price hike
ಪ್ರಮುಖ ಸುದ್ದಿ1 hour ago

Milk Price: ನಂದಿನಿ ಹಾಲು ದರ ಏರಿಕೆ ಶಾಕ್‌; ಅರ್ಧ ಲೀಟರ್‌ಗೂ ₹2, ಒಂದು ಲೀಟರ್‌ಗೂ ₹2 ಬೆಲೆ ಏರಿಕೆ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ19 hours ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ4 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ4 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ5 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 week ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌