Site icon Vistara News

Anganawadi workers : ಸರ್ಕಾರಕ್ಕೆ ತಲೆನೋವಾದ 6ನೇ ಗ್ಯಾರಂಟಿ; ನಾಳೆಯಿಂದ ಅಂಗನವಾಡಿ ಪ್ರತಿಭಟನೆ

Anganawadi protest

#image_title

ಬೆಂಗಳೂರು: ಅನ್ನ ಭಾಗ್ಯ, ಗೃಹಲಕ್ಷ್ಮಿ ಯೋಜನೆ, ಗೃಹ ಜ್ಯೋತಿ ಸ್ಕೀಂ, ಯುವನಿಧಿ ಮತ್ತು ಮಹಿಳೆಯರ ಉಚಿತ ಪ್ರಯಾಣದ ಐದು ಗ್ಯಾರಂಟಿ ಸ್ಕೀಂಗಳ (Congress Guarantee) ಜತೆಗೆ ಹಿರಿಯ ನಾಯಕರೆಲ್ಲ ಘಂಟಾಘೋಷವಾಗಿ ಸಾರಿದ ಆರನೇ ಭರವಸೆಯೊಂದು ಈಗ ಕಾಂಗ್ರೆಸ್‌ ಸರ್ಕಾರದ (Congress Government) ತಲೆ ತಿನ್ನಲು ಆರಂಭಿಸಿದೆ.

ಐದು ಗ್ಯಾರಂಟಿಗಳನ್ನು ಹೇಗಾದರೂ ಮಾಡಿ ಜಾರಿ ಮಾಡಬೇಕು ಎಂದು ಹರಸಾಹಸಪಡುತ್ತಿರುವ ಸರ್ಕಾರಕ್ಕೆ ಈಗ ತಲೆನೋವಾಗಿ ಪರಿಣಮಿಸಿರುವುದು ಅಂಗನವಾಡಿ (Anganawadi workers) ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗೌರವಧನ ಹೆಚ್ಚಳ ಮಾಡುವುದಾಗಿ ಹೇಳಿದ್ದ ಭರವಸೆ.

ಚುನಾವಣಾ ಪ್ರಣಾಳಿಕೆಯಲ್ಲಿ (Congress Manifesto) ಕಾಂಗ್ರೆಸ್‌ ನೀಡಿದ 6ನೇ ಗ್ಯಾರಂಟಿ ಯೋಜನೆಯನ್ನು ಜಾರಿಗೊಳಿಸಬೇಕು. ಈ ಬಗ್ಗೆ ಶೀಘ್ರ ಸರ್ಕಾರ ಆದೇಶ ಹೊರಡಿಸಬೇಕೆಂದು ಬೃಹತ್ ಪ್ರತಿಭಟನೆಗೆ ಸಜ್ಜಾಗಿದ್ದಾರೆ ಅಂಗನವಾಡಿ ಕಾರ್ಯಕರ್ತೆಯರು.

ಜೂನ್‌ 27ರಂದು (ಮಂಗಳವಾರ) ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಸಜ್ಜಾಗಿದ್ದಾರೆ. ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಶನ್ (AITUC) ಈ ಪ್ರತಿಭಟನೆಗೆ ಕರೆ ನೀಡಿದೆ. ಬೆಂಗಳೂರು ಮಾತ್ರವಲ್ಲ ಎಲ್ಲ ಜಿಲ್ಲಾ ಕೇಂದ್ರಗಳಲ್ಲೂ ಪ್ರತಿಭಟನೆ ಆಯೋಜಿಸಲಾಗಿದೆ.

ಅಂಗನವಾಡಿ ಕಾರ್ಯಕರ್ತೆಯರು ಬೇಡಿಕೆಗಳೇನು..?

  1. ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗೌರವಧನವನ್ನು ಕ್ರಮವಾಗಿ 15 ಸಾವಿರ ಮತ್ತು 10 ಸಾವಿರ ರುಪಾಯಿಗೆ ಹೆಚ್ಚಳ ಮಾಡುವುದಾಗಿ ಭರವಸೆ ನೀಡಿದ್ದು ಅನುಷ್ಠಾನಗೊಳಿಸಬೇಕು.
  2. ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ 4 ವರ್ಷದ ಹಿಂದೆ ಕಾರ್ಯಕರ್ತೆಯರಿಗೆ ನೀಡಿದ್ದ ಮೊಬೈಲ್‌ಗಳು ಕಳಪೆ ಗುಣಮಟ್ಟದ್ದಾಗಿದ್ದು ಹಾಳಾಗಿವೆ. ಆದ್ದರಿಂದ ಹೊಸ ಮೊಬೈಲ್‌ ಅಥವಾ ಮಿನಿ ಟ್ಯಾಬ್‌ ನೀಡಬೇಕು.
  3. ಪ್ರಣಾಳಿಕೆಯ ಭಾಗವಾದ ಅಂಗನವಾಡಿ ಕಾರ್ಯಕರ್ತೆಯರಿಗೆ ಪಿಂಚಣಿ ಸೌಕರ್ಯವಿಲ್ಲ. ಹಾಗಾಗಿ ಅವರು ಸೇವಾ ನಿವೃತ್ತಿ ಹೊಂದಿದರೆ ಅಥವಾ ನಿಧನರಾದರೆ, ₹3 ಲಕ್ಷ ಹಾಗೂ ಮಿನಿ ಅಂಗನವಾಡಿ ಕಾರ್ಯಕರ್ತೆಯರಿಗೆ ₹2 ಲಕ್ಷ ನೀಡುವುದು.
  4. ಗೃಹಜ್ಯೋತಿ ಯೋಜನೆ ಅನುಷ್ಠಾನಕ್ಕೂ ಸಹಕರಿಸುವಂತೆ ಒತ್ತಡ ಹೆರಲಾಗುತ್ತಿದ್ದು, ಈ ಕ್ರಮವನ್ನು ಕೈಬಿಡಬೇಕು ಮತ್ತು ಹಲವು ಬೇಡಿಕೆಗಳು

ಇದನ್ನೂ ಓದಿ: ರಾಜ ಮಾರ್ಗ ಅಂಕಣ: ಆಧುನಿಕ ಅಂಗನವಾಡಿಗಳ ನಿರ್ಮಾಪಕ ಆದಿತ್ಯರಂಜನ್ IAS

Exit mobile version