ಬೆಂಗಳೂರು: ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು (Congress Guarantee) ನಿಲ್ಲಿಸಬೇಕೆಂಬ ಚರ್ಚೆ ಹಿನ್ನೆಲೆ ಮುನ್ನೆಲೆಗೆ ಬಂದ ಹಿನ್ನೆಲೆಯಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ ರೇವಣ್ಣ (HM Revanna) ಪ್ರತಿಕ್ರಿಯಿಸಿದ್ದಾರೆ. ಗ್ಯಾರಂಟಿಗಳು ನಿಲ್ಲಿಸಿ ಎಂದು ಹೇಳಬೇಡಿ. ಎಷ್ಟೇ ದೊಡ್ಡ ನಾಯಕರು ಆದರೂ ನಿಲ್ಲಿಸುವ ಬಗ್ಗೆ ಮಾತನಾಡಬೇಡಿ. ನಾವು ಗ್ಯಾರಂಟಿಗಳನ್ನ ನಿಲ್ಲಿಸುವುದಿಲ್ಲ. ಸಣ್ಣ ಪುಟ್ಟ ತಪ್ಪುಗಳು ಇದ್ದರೆ ಸರಿಪಡಿಸುತ್ತೇವೆ ಎಂದು ಕೈ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಗ್ಯಾರಂಟಿಗಳಿಗಾಗಿ 36 ಸಾವಿರ ಕೋಟಿ ಖರ್ಚು ಆಗುತ್ತಿತ್ತು, ಅದು 46 ಸಾವಿರ ಕೋಟಿಗೆ ಏರಿಕೆ ಆಗಿದೆ. ಆದರೂ ಅದು ನಮ್ಮ ಬದ್ಧತೆ. ನಾವು ಬದುಕಿಗಾಗಿ ಇದ್ದೇವೆ, ಬಿಜೆಪಿಯವರು ಭಾವನೆಗಳಿಗಾಗಿ ಇದ್ದಾರೆ ಎಂದು ತಿಳಿಸಿದ್ದಾರೆ.
ಎಲ್ಲ ಕಡೆಗಳಿಂದ ದೂರು ಬಂದಿವೆ. ಒಂದೇ ಮನೆಯಲ್ಲಿ ಇಬ್ಬರು ಫಲಾನುಭವಿಗಳ ಇರುವ ಬಗ್ಗೆ ದೂರು ಬಂದಿವೆ. ಅವುಗಳನ್ನು ಪರಿಶೀಲನೆ ಮಾಡುತ್ತೇವೆ ಎಂದು ಹೇಳಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ನಿರೀಕ್ಷಿತ ಸ್ಥಾನಗಳು ಬರದ ಹಿನ್ನೆಲೆಯಲ್ಲಿ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದೇ ಒಳಿತು ಎಂದು ಕೆಲ ಕೈ ನಾಯಕರು ಅಭಿಪ್ರಾಯ ಹೊರಹಾಕುತ್ತಿದ್ದಾರೆ. ಇತ್ತೀಚೆಗೆ ಮೈಸೂರು-ಕೊಡಗು ಕ್ಷೇತ್ರದ ಪರಾಜಿತ ಕೈ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರು ಮತದಾರರ ವಿರುದ್ಧ ಅಸಮಾಧಾನ ಹೊರಹಾಕುತ್ತಾ, ಜನರಿಗೆ ಗ್ಯಾರಂಟಿಗಳು ಬೇಕಿಲ್ಲ, ಇದರ ಬಗ್ಗೆ ಸಿಂ ಸಿದ್ದರಾಮಯ್ಯ ಅವರು ಮರು ಪರಿಶೀಲನೆ ನಡೆಸಬೇಕು ಎಂದು ಹೇಳಿದ್ದರು. ಹೀಗಾಗಿ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ ರೇವಣ್ಣ ಪ್ರತಿಕ್ರಿಯಿಸಿದ್ದಾರೆ.
ಇದನ್ನೂ ಓದಿ | Election Commission : ಜುಲೈ 10ರಂದು 7 ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ
“ಒಕ್ಕೂಟ ವ್ಯವಸ್ಥೆಯ ಆಶಯ…” ಪ್ರಧಾನಿ ಮೋದಿಗೆ ಶುಭ ಕೋರಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಪ್ರಧಾನ ಮಂತ್ರಿಯಾಗಿ (Prime minister) ಮೂರನೇ ಬಾರಿಗೆ ಪ್ರಮಾಣ ವಚನ (Oath) ಸ್ವೀಕರಿಸಿದ ನರೇಂದ್ರ ಮೋದಿ (Narendra Modi) ಅವರಿಗೆ ಕರ್ನಾಟಕ (Karnataka) ಸಿಎಂ ಸಿದ್ದರಾಮಯ್ಯ (CM Siddaramaiah) ಸಾಮಾಜಿಕ ಜಾಲತಾಣ X ಖಾತೆ ಮೂಲಕ ಶುಭ ಕೋರಿದ್ದಾರೆ.
“3ನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರಧಾನಿ @narendramodi ಅವರಿಗೆ ಅಭಿನಂದನೆಗಳು. ಕರುನಾಡಿನ ಅಭಿವೃದ್ಧಿಯ ನಮ್ಮ ಸಂಕಲ್ಪಕ್ಕೆ ನಿಮ್ಮ ಸಹಕಾರ ಇರಲಿದೆ, ಒಕ್ಕೂಟ ವ್ಯವಸ್ಥೆಯ ಆಶಯಗಳನ್ನು ಎತ್ತಿಹಿಡಿಯುತ್ತಾ ರಾಜ್ಯಗಳ ಹಿತಾಸಕ್ತಿಯನ್ನು ನೀವು ಗೌರವಿಸುತ್ತೀರೆಂದು ಭಾವಿಸಿದ್ದೇನೆ. ಸಂಪದ್ಭರಿತ ಕರ್ನಾಟಕದ ಮೂಲಕ ಸದೃಢ ಭಾರತ ನಿರ್ಮಾಣಕ್ಕಾಗಿ ನಿಮ್ಮ ಜೊತೆಯಾಗಿ ಶ್ರಮಿಸುವ ದಿನಗಳನ್ನು ಎದುರು ನೋಡುತ್ತಿದ್ದೇನೆ” ಎಂದು ಸಿದ್ದರಾಮಯ್ಯ ಹಾರೈಸಿದ್ದಾರೆ.
3ನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರಧಾನಿ @narendramodi ಅವರಿಗೆ ಅಭಿನಂದನೆಗಳು.
— Siddaramaiah (@siddaramaiah) June 9, 2024
ಕರುನಾಡಿನ ಅಭಿವೃದ್ಧಿಯ ನಮ್ಮ ಸಂಕಲ್ಪಕ್ಕೆ ನಿಮ್ಮ ಸಹಕಾರ ಇರಲಿದೆ, ಒಕ್ಕೂಟ ವ್ಯವಸ್ಥೆಯ ಆಶಯಗಳನ್ನು ಎತ್ತಿಹಿಡಿಯುತ್ತಾ ರಾಜ್ಯಗಳ ಹಿತಾಸಕ್ತಿಯನ್ನು ನೀವು ಗೌರವಿಸುತ್ತೀರೆಂದು ಭಾವಿಸಿದ್ದೇನೆ.
ಸಂಪದ್ಭರಿತ ಕರ್ನಾಟಕದ ಮೂಲಕ…