Congress Guarantee: ಕಾಂಗ್ರೆಸ್‌ ಗ್ಯಾರಂಟಿಗಳು 5 ವರ್ಷ ಮುಂದುವರಿಯಲಿವೆಯೆ? ಮಧು ಬಂಗಾರಪ್ಪ ಹೇಳಿದ್ದು ಹೀಗೆ - Vistara News

ಕರ್ನಾಟಕ

Congress Guarantee: ಕಾಂಗ್ರೆಸ್‌ ಗ್ಯಾರಂಟಿಗಳು 5 ವರ್ಷ ಮುಂದುವರಿಯಲಿವೆಯೆ? ಮಧು ಬಂಗಾರಪ್ಪ ಹೇಳಿದ್ದು ಹೀಗೆ

VISTARANEWS.COM


on

Madhu Bangarappa
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಶಿವಮೊಗ್ಗ: ಅಂಗಡಿ ಕ್ಲೋಸ್ ಆಗುವುದು ವಿರೋಧ ಪಕ್ಷದ್ದು, ನಮ್ಮದಲ್ಲ. ಇನ್ನೂ 5 ವರ್ಷ ಗ್ಯಾರಂಟಿಗಳು (Congress Guarantee) ಇರುತ್ತದೆ. ಯಾರು ಎಷ್ಟೇ ಹೇಳಿದರೂ ಐದು ವರ್ಷ ಸಿದ್ದರಾಮಯ್ಯ ಸರ್ಕಾರ ಇರುತ್ತದೆ. ಯಾರೇ ತಿಪ್ಪರಲಾಗ ಹೊಡಿದ್ರೂ ನಮ್ಮ ಸರ್ಕಾರವನ್ನು ಅಲುಗಾಡಿಸಲು ಆಗಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ಸೊರಬ ಪಟ್ಟಣದ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಗ್ಯಾರಂಟಿ ಫಲಾನುಭವಿಗಳ ಸಮಾವೇಶದಲ್ಲಿ ಮಾತನಾಡಿದ ಅವರು, ನಮ್ಮ ಯೋಜನೆಗಳ ಬಗ್ಗೆ ಟೀಕೆ ಟಿಪ್ಪಣಿ ಮಾಡುವವರಿಗೆ ಉತ್ತರ ನೀಡಲು ಫಲಾನುಭವಿಗಳ ಕಾರ್ಯಕ್ರಮದ ಮೂಲಕ ಉತ್ತರ‌ ಕೊಡುತ್ತಿದ್ದೇವೆ ಎಂದರು.

ಕಮಿಷನ್ ಕಮಿಷನ್ ಎನ್ನುತ್ತಾರೆ, ನಿಮ್ಮ ಅಕೌಂಟ್‌ಗೆ ಹಣ ಬರುತ್ತದೆ. ಅದರಲ್ಲಿ ಕಮಿಷನ್ ಕೊಟ್ಟಿದ್ದೀರಾ ನೀವು? ಬಸ್ ಹತ್ತೋಕೆ ಕಮಿಷನ್ ಕೊಡ್ತೀರಾ ನೀವು? ಸುಮ್ಮನೆ ಆರೋಪ ಮಾಡುತ್ತಾರೆ. ಮಾರ್ಕೆಟ್‌ನಲ್ಲಿ ಬ್ಲಡ್, ದುಡ್ಡು ಇಂಪಾರ್ಟೆಂಟ್. ದುಡ್ಡನ್ನು ಮಾರ್ಕೆಟ್‌ನಲ್ಲಿ ಇಟ್ಟೀದ್ದೀವಿ. ಮಾರ್ಕೆಟ್‌ನಲ್ಲಿ ದುಡ್ಡು ಚೆನ್ನಾಗಿದೆ. ಈಗ ಸಿಂಗಲ್ ಎಂಜಿನ್ ಇದೆ, ಈಗಲೇ ಹೀಗೆ. ಮುಂದೆ ಡಬಲ್ ಎಂಜಿನ್ ಆದರೆ ಇನ್ನು ಇನ್ನೇನು ಬರುತ್ತದೋ ನೀವು ನೋಡಬೇಕು ಎಂದು ಪರೋಕ್ಷವಾಗಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಬೆಂಬಲಿಸುವಂತೆ ಕೋರಿದರು.

ರಾಜ್ಯದಲ್ಲಿ ಬಂಗಾರಪ್ಪ ಸ್ಮಾರಕ ಮಾಡುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಇದಕ್ಕಾಗಿ ಅವರಿಗೆ ಧನ್ಯವಾದ ತಿಳಿಸುತ್ತೇನೆ. ಬಿಜೆಪಿಯವರು ಈಗ ರಾಮನನ್ನು ಬೀದಿಗೆ ತಂದಿದ್ದಾರೆ. ರೋಡ್‌ನಲ್ಲಿ ಫ್ಲೆಕ್ಸ್ ಹಾಕಿದ್ದಾರೆ. ಅದೆಲ್ಲಾ ಈಗ ಹರಿದು ಆ ರೀತಿ ಯಾರೂ ಮಾಡಬಾರದು. ವಿದ್ಯುತ್‌ ಕಡಿತ ಮಾಡುತ್ತಿದ್ದಾರೆ ಎಂಬ ದೂರುಗಳು ಕೇಳಿದ್ದೇನೆ. ನಾನು ಅದನ್ನು ಒಪ್ಪಿಕೊಳ್ಳುತ್ತೇನೆ. ಬರಗಾಲದಲ್ಲಿ ವಿದ್ಯುತ್‌ ಉತ್ಪಾದನೆ ಕಡಿಮೆ ಇರುತ್ತದೆ, ಅದಕ್ಕೆ ಸ್ವಲ್ಪ ಕರೆಂಟ್ ಕಡಿಮೆ ನೀಡಲಾಗುತ್ತದೆ ಎಂದರು.

ಅವ್ವ ನಿನ್ನ ಕಿಡ್ನಿ ಸರಿ ಮಾಡಿಸ್ತೀನಿ

ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿರುವ ಮಹಿಳೆಗೆ ಚಿಕಿತ್ಸೆ ಕೊಡಿಸುವುದಾಗಿ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದರು. ಕಾರ್ಯಕ್ರಮದಲ್ಲಿ ಪಲಾನುಭವಿ ಲಕ್ಷ್ಮಮ್ಮ ಜತೆ ಮಾತುಕತೆ ನಡೆಸಿದ ಅವರು, ಅವ್ವ ನಿನ್ನ ಕಿಡ್ನಿ ಸರಿ ಮಾಡಿಸ್ತೀನಿ. ನಿನಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಹಣ ಕೊಡಿಸುತ್ತೇನೆ. ತೊಂದರೆ ಇರುವವರಿಗೆ ಹೆಲ್ಫ್ ಮಾಡಬೇಕು. ನಾನು ನಿನಗೆ ಹಣ ಕೊಡಿಸುತ್ತೇನೆ ಎಂದು ತಿಳಿಸಿದ ಅವರು, ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ನ್ಯಾಯ ಕೊಡಿಸಿ ಸರ್… ಕಣ್ಣೀರಿಟ್ಟ ಮಹಿಳೆಯರು

ತಾಳಗುಪ್ಪ ಎಂಆರ್‌ಎಸ್‌ನಲ್ಲಿ ಸೆಕ್ಯೂರಿಟಿ ಕೆಲಸದಿಂದ ಕಿತ್ತು ಹಾಕಿದ ಹಿನ್ನೆಲೆ ಮಹಿಳೆಯರು ಸಚಿವರ ಮುಂದೆ ಕಣ್ಣೀರಿಟ್ಟು, ನ್ಯಾಯ ಕೊಡಿಸುವಂತೆ ಮನವಿ ಮಾಡಿದರು. ನಮ್ಮ ಗಂಡಂದಿರನ್ನು ಕೆಲಸದಿಂದ ಕಿತ್ತು ಹಾಕಿದ್ದಾರೆ. ಹೊಸ ಸೆಕ್ಯೂರಿಟಿ ಏಜೆನ್ಸಿಯವರು ಸುಖಾಸುಮ್ಮನೆ ದೌರ್ಜನ್ಯ ಮಾಡುತ್ತಿದ್ದಾರೆ. ನಮಗೆ ನ್ಯಾಯ ಕೊಡಿಸಿ ಸರ್ ಎಂದು ಮಹಿಳೆಯರು ಕಣ್ಣೀರಿಟ್ಟಿದ್ದಾರೆ.

ಕಾರ್ಯಕ್ರಮದಲ್ಲಿ ಡಿಸಿ ಗುರುದತ್ತ ಹೆಗಡೆ, ಎಸಿ ಯತೀಶ್, ತಹಸೀಲ್ದಾರ್ ಸರಕಾವಸ್, ಸಾವಿರಾರು ಮಹಿಳೆಯರು, ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಿದ್ದಾರೆ.

ನಾಡಗೀತೆ ಕಡ್ಡಾಯವಲ್ಲ ಎಂಬ ಆದೇಶದ ಬಗ್ಗೆ ಪ್ರತಿಕ್ರಿಯಿಸಿ, ಯಾರೋ ಕೆಲವರು ಹೀಗೆ ಮಾಡಿರುತ್ತಾರೆ. ನಾನು ಬೆಳಗ್ಗೆ ಹೇಳಿದ್ದೆ, ಇದು ಒಳ್ಳೆಯದಲ್ಲ ಅಂತ ಹೇಳಿದ್ದೆ. ನನ್ನ ಇಲಾಖೆಯಲ್ಲಿ ನಾಡಗೀತೆಗೆ ನಿರ್ಬಂಧ ಇಲ್ಲ. ಕುವೆಂಪು ಅವರ ಬಗ್ಗೆ ಗೌರವವಿದೆ. ಯಾರು ಹೀಗೆ ಆದೇಶ ಮಾಡಿದರು ಎಂಬ ಬಗ್ಗೆ ಇಲಾಖೆಯವರು ಚೆಕ್ ಮಾಡಬೇಕು. ಅದು ನನ್ನ ಇಲಾಖೆಯಲ್ಲ, ಸರ್ಕಾರ ಜವಾಬ್ದಾರಿಯುತವಾಗಿ ಇರಬೇಕಾಗುತ್ತದೆ. ಯಾರು ಆದೇಶ ಮಾಡಿದ್ದಾರೆ ಎಂಬ ಬಗ್ಗೆ ಚೆಕ್‌ ಮಾಡಿಸಬೇಕು ಎಂದರು.

ಕನ್ನಡ ಅಸ್ಮಿತೆ ಅಳಿಸಲು ಕಾಂಗ್ರೆಸ್ ಮುಂದಾಗಿದೆ ಎಂಬ ಬಿಜೆಪಿ ಟ್ವೀಟ್ ವಿಚಾರಕ್ಕೆ ಪ್ರತಿಕ್ರಿಯಿಸಿ, ಟ್ವೀಟ್ ಮಾಡಿರುವವರಿಗೆ ದೇವರು ಒಳ್ಳೆಯದು ಮಾಡಲಿ. ಬಿಜೆಪಿಯವರು ಟ್ವೀಟ್ ಮಾಡುವ ಬದಲು ಜನರ ಬಳಿ ಹೋಗಿ ಕೇಳಬೇಕು. ಟ್ವೀಟ್ ಮಾಡಿದರೆ ಅಣೆಪಟ್ಟಿ ಬರುವುದಿಲ್ಲ, ಜನರ ಬಳಿ ಇವರು ಕೇಳಬೇಕು. ಹಸಿದವರಿಗೆ ಅನ್ನ ನೀಡಿದ್ದೇವೆ. ಗೃಹಜ್ಯೋತಿ, ಶಕ್ತಿ ಯೋಜನೆ ಅಂಥವರ ಬಳಿ ಹೋಗಿ ಅಭಿಪ್ರಾಯ ಕೇಳಿ ಎಂದು ಆಗ್ರಹಿಸಿದರು.

ಯಾರದ್ದೋ ದುಡ್ಡಲ್ಲಿ ಕಾಂಗ್ರೆಸ್ ಸರ್ಕಾರ ಯಲ್ಲಮ್ಮ ಜಾತ್ರೆ ಎಂಬ ಸಿ.ಟಿ.ರವಿ ಹೇಳಿಕೆಗೆ ಪ್ರತಿಕ್ರಿಯಿಸಿ, ಇಷ್ಟು ದಿನ ಸಿ.ಟಿ.ರವಿಯವರು ಯಾರದೋ ದುಡ್ಡಲ್ಲಿ ಯಲ್ಲಮ್ಮ ಜಾತ್ರೆ ಮಾಡಿದರು. ಇವತ್ತು ಚಿಕ್ಕಮಗಳೂರಿನಲ್ಲಿ ಅವರು ತಿಪ್ಪರಲಾಗ ಹೊಡೆದಿದ್ದಾರೆ. ಸಿ.ಟಿ.ರವಿ ಸೀಟಿ ಹೊಡೆದುಕೊಂಡು ಕೂರುವುದಕ್ಕೆ ಹೇಳಿ, ಬಸ್ಟಾಂಡ್‌ ಹೋಗಿ ಸೀಟಿ ಹೊಡೆಯಲಿ, ಕೂತ ಜಾಗದಲ್ಲಿ ಅವರ ಹೇಳಿಕೆ ನಡೆಯುವುದಿಲ್ಲ. ಹಣೆ ಬರಹಕ್ಕೆ ಅವರು ಇನ್ನು ಮುಂದೆ ಉದ್ಧಾರ ಆಗುವುದಿಲ್ಲ ಎಂದರು.

ಇದನ್ನೂ ಓದಿ | Karnataka Budget Session 2024: ಮೋದಿ ಬಗ್ಗೆ ಸಿದ್ದರಾಮಯ್ಯ ಟೀಕೆ; ಪಲಾಯನವಾದಿ ಸಿಎಂ ಎಂದ ಬಿಜೆಪಿ

ಕನ್ನಡ ವಿರೋಧಿ ಸರ್ಕಾರ ಆರ್.ಆಶೋಕ್ ಹೇಳಿಕೆಗೆ ಪ್ರತಿಕ್ರಿಯಿಸಿ, ಅವರಿಗೆ ಮೊದಲು ಕನ್ನಡ ಕಲಿಯೋಕೆ ಹೇಳಿ. ಅವರ ಕನ್ನಡ ಸರಿಯಾಗಿದಿಯಾ ತಿಳಿದುಕೊಳ್ಳೊಕೆ ಹೇಳಿ ಎಂದರು. ಇದೇ ವೇಳೆ ಲೋಕಸಭಾ ಚುನಾವಣೆಗೆ ಸ್ಪರ್ಧೆ ವಿಚಾರದ ಬಗ್ಗೆ ಮಾತನಾಡಿ, ನಾವು ಚುನಾವಣೆಗೆ ರೆಡಿ ಇದ್ದೇವೆ. ಪಕ್ಷ ಯಾರಿಗೆ ಹೇಳುತ್ತೋ ಅವರು ಸ್ಫರ್ಧೆ ಮಾಡ್ತಾರೆ. ಯಾರಿಗೆ ಅರ್ಹತೆ ಇದೆಯೋ ಅವರು ನಿಲ್ಲುತ್ತಾರೆ. ನಾವು ಪಕ್ಷಕ್ಕಾಗಿ ದುಡಿಯುತ್ತೇವೆ. ಗ್ಯಾರಂಟಿ ಸಮಾವೇಶಕ್ಕೆ ಸಾಕಷ್ಟು ಮಹಿಳೆಯರು ಬಂದಿದ್ದಾರೆ. ಅವರಿಗೆ ಗ್ಯಾರಂಟಿ ಸಿಕ್ಕಿದೆ. ಹಾಗಾಗಿ ಇಲ್ಲಿಗೆ ಬಂದಿದ್ದಾರೆ ಎಂದು ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಆಗಸ್ಟ್‌ 31ರ ಒಳಗೆ GBA ಚುನಾವಣೆ ನಡೆಸಿ- ಸುಪ್ರೀಂ ಕೋರ್ಟ್‌

VISTARANEWS.COM


on

ಆಗಸ್ಟ್‌ 31ರ ಒಳಗೆ ಜಿಬಿಎ ಚುನಾವಣೆ ನಡೆಸಲು ಸುಪ್ರೀಂ ಕೋರ್ಟ್‌ ರಾಜ್ಯ ಸರ್ಕಾರಕ್ಕೆ ಗಡುವು ನೀಡಿದೆ. ರಾಜ್ಯ ಸರ್ಕಾರ ಹಾಗೂ ಚುನಾವಣಾ ಆಯೋಗದ ಮನವಿಯನ್ನು ಪರಿಗಣಿಸಿದ ಸುಪ್ರೀಂಕೋರ್ಟ್‌, ಆಗಸ್ಟ್‌ 31ರವರೆಗೆ ಕಾಲಾವಕಾಶ ನೀಡಿದೆ. ಚುನಾವಣಾ ಪ್ರಕ್ರಿಯೆ ಪೂರ್ಣಗೊಳಿಸಲು ಇನ್ನೂ ಮೂರು ತಿಂಗಳ ಗಡುವು ವಿಸ್ತರಣೆ ಕೋರಿ ರಾಜ್ಯ ಸರ್ಕಾರ ಅರ್ಜಿ ಸಲ್ಲಿಸಿತ್ತು.

ಈ ಹಿಂದೆ ಜೂನ್‌ 30ರೊಳಗೆ ಜಿಬಿಎ ಚುನಾವಣೆ ನಡೆಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿತ್ತು. ಆದರೆ ಇದೀಗ ಸರ್ಕಾರದ ಮನವಿ ಮೇರೆಗೆ ಚುನಾವಣಾ ಗಡುವನ್ನು ಆಗಸ್ಟ್‌ ಅಂತ್ಯದವರೆಗೆ ವಿಸ್ತರಿಸಲಾಗಿದೆ.

ಸೆಪ್ಟೆಂಬರ್‌ ಅಂತ್ಯದವರೆಗೆ ಕಾಲಾವಕಾಶ ನೀಡಬೇಕೆಂದು ಕರ್ನಾಟಕ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗದ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿದ್ದವು. ಮನವಿಯನ್ನು ಆಲಿಸಿದ ಸಿಜೆಐ ಅವರನ್ನು ಒಳಗೊಂಡ ನ್ಯಾಯಪೀಠ ಈ ಆದೇಶ ನೀಡಿದೆ. ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ ಎರಡು ಪ್ರತ್ಯೇಕ ಅರ್ಜಿಗಳಲ್ಲಿ, ರಾಜ್ಯದಲ್ಲಿ ಚುನಾವಣಾ ಸಿಬ್ಬಂದಿ ವರ್ಗ ಜನಗಣತಿ, ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ, ಎಸ್‌ಎಸ್‌ಎಲ್‌ಸಿ ಮತ್ತು ಪಿಯು ಪರೀಕ್ಷೆಗಳಲ್ಲಿ ನಿರತರಾಗಿದ್ದಾರೆ. ಹೀಗಾಗಿ ಜಿಬಿಎ ಚುನಾವಣೆ ನಡೆಸಲು ಮೂರು ತಿಂಗಳ ಕಾಲಾವಕಾಶ ನೀಡಬೇಕೆಂದು ಮನವಿ ಮಾಡಿದ್ದವು.

Continue Reading

Latest

ದೇಶಾದ್ಯಂತ ಇಂದು ಮೆಡಿಕಲ್‌ ಸ್ಟೋರ್‌ ಬಂದ್‌

VISTARANEWS.COM


on

ಇ-ಫಾರ್ಮಸಿ ಹಾಗೂ ಆನ್‌ಲೈನ್‌ ಮೂಲಕ ಔಷಧ ಮಾರಾಟ ನಿಲ್ಲಿಸುವಂತೆ ಆಗ್ರಹಿಸಿ ಕರ್ನಾಟಕ ಸೇರಿದಂತೆ ದೇಶಾದ್ಯಂತ ಇಂದು ಮೆಡಿಕಲ್‌ ಸ್ಟೋರ್‌ಗಳು ಬಂದ್‌ ಆಗಿವೆ. ಅಖಿಲ ಭಾರತ ಔಷಧ ವ್ಯಾಪಾರಿಗಳ ಸಂಘದ ಕರೆ ಮೇರೆಗೆ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಮೆಡಿಕಲ್‌ ಸ್ಟೋರ್‌ ಮಾಲೀಕರು ಪ್ರತಿಭಟನೆ ನಡೆಸುತ್ತಿದ್ದಾರೆ.

ಆನ್‌ಲೈನ್‌ ಔಷಧ ವ್ಯಾಪಾರಕ್ಕೆ ಕಟ್ಟುನಿಟ್ಟಾದ ನಿಯಮ ಜಾರಿಗೊಳಿಸಬೇಕು, ಕಾರ್ಪೊರೇಟ್‌ ಸಂಸ್ಥೆಗಳ ಭಾರಿ ರಿಯಾಯಿತಿ ದರ ಸಮರಕ್ಕೆ ಬ್ರೇಕ್‌ ಹಾಕಬೇಕು ಹಾಗೂ ಎಲ್ಲಾ ವ್ಯಾಪಾರಿಗಳಿಗೆ ಸಮಾನ ಮುಕ್ತ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಬೇಕು ಎಂಬ ಬೇಡಿಕೆಗಳನ್ನು ಅಖಿಲ ಭಾರತ ಕೆಮಿಸ್ಟ್‌ ಮತ್ತು ಡ್ರಗ್ಗಿಸ್ಟ್‌ ಸಂಘ ಮುಂದಿಟ್ಟಿದೆ.

ಈ ಬಂದ್‌ನಿಂದ ಅನೇಕ ಕಡೆಗಳಲ್ಲಿ ಔಷಧ ಖರೀದಿಗೆ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಆದರೆ ತುರ್ತು ಸೇವೆಗಳಿಗಾಗಿ ಕೆಲವು ಮೆಡಿಕಲ್‌ ಸ್ಟೋರ್‌ಗಳು ಮಾತ್ರ ಕಾರ್ಯನಿರ್ವಹಿಸುತ್ತಿವೆ.

Continue Reading

Latest

ನಾಳೆ ದೇಶಾದ್ಯಂತ ಮೆಡಿಕಲ್ ಶಾಪ್‌ ಬಂದ್‌

VISTARANEWS.COM


on

ಆನ್‌ಲೈನ್‌ನಲ್ಲಿ ಔಷಧ ಮಾರಾಟವನ್ನು ವಿರೋಧಿಸಿ ನಾಳೆ ದೇಶಾದ್ಯಂತ ಮೆಡಿಕಲ್ ಶಾಪ್‌ಗಳ ಬಂದ್‌ಗೆ ಕರೆ ನೀಡಲಾಗಿದೆ. ದೇಶದಾದ್ಯಂತ ಸುಮಾರು 9 ಲಕ್ಷ ಔಷಧ ಅಂಗಡಿಗಳು ಪ್ರತಿಭಟನೆಯಲ್ಲಿ ಭಾಗವಹಿಸುವ ಸಾಧ್ಯತೆ ಇದೆ.
ಕರ್ನಾಟಕದಲ್ಲೂ ಸುಮಾರು 26 ಸಾವಿರಕ್ಕೂ ಹೆಚ್ಚು ಮೆಡಿಕಲ್ ಶಾಪ್‌ಗಳು ಬಂದ್ ಆಗುವ ಸಾಧ್ಯತೆ ಇದ್ದು, ಗ್ರಾಹಕರು ಅಗತ್ಯ ಔಷಧಿಗಳನ್ನು ಮುಂಚಿತವಾಗಿ ಖರೀದಿಸಿಕೊಳ್ಳುವಂತೆ ಸಂಘಟನೆಗಳು ಮನವಿ ಮಾಡಿವೆ.

ಇ-ಫಾರ್ಮಸಿ ವೇದಿಕೆಗಳ ಮೂಲಕ ಭಾರಿ ರಿಯಾಯಿತಿಯಲ್ಲಿ ಔಷಧ ಮಾರಾಟವಾಗುತ್ತಿರುವುದು ಸಣ್ಣ ಹಾಗೂ ಮಧ್ಯಮ ಮಟ್ಟದ ಮೆಡಿಕಲ್ ಅಂಗಡಿಗಳಿಗೆ ಹೊಡೆತ ನೀಡುತ್ತಿದೆ ಎಂದು ವ್ಯಾಪಾರಿಗಳು ಆರೋಪಿಸಿದ್ದಾರೆ. ಜೊತೆಗೆ ಆನ್‌ಲೈನ್ ಮೂಲಕ ನಿಯಂತ್ರಣವಿಲ್ಲದೆ ಔಷಧ ವಿತರಣೆ ನಡೆಯುತ್ತಿರುವುದರಿಂದ ರೋಗಿಗಳ ಆರೋಗ್ಯಕ್ಕೂ ಅಪಾಯ ಉಂಟಾಗಬಹುದು ಎಂದು ಎಚ್ಚರಿಸಿದ್ದಾರೆ.
ಆನ್‌ಲೈನ್ ಮೂಲಕ ಔಷಧ ಖರೀದಿ ವ್ಯವಸ್ಥೆಯನ್ನು ನಿಯಂತ್ರಿಸುವುದು ಹಾಗೂ ಇ-ಫಾರ್ಮಸಿ ಕಂಪನಿಗಳ ವಿರುದ್ಧ ಕಠಿಣ ನಿಯಮ ಜಾರಿಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಲಾಗಿದೆ.

Continue Reading

Latest

ಕಂಜನ್ ದಾಳಿಗೆ ತುತ್ತಾಗಿದ್ದ ಮಾರ್ತಾಂಡ ದುರ್ಮರಣ

VISTARANEWS.COM


on

ಕೊಡಗಿನ ದುಬಾರೆ ಆನೆ ಶಿಬಿರದಲ್ಲಿ ನಡೆದ ಸಾಕಾನೆಗಳ ಕಾದಾಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ. ನಿನ್ನೆ ಕಂಜನ್ ಮತ್ತು ಮಾರ್ತಾಂಡ ನಡುವೆ ನಡೆದ ಕಾದಾಟ ನಡೆದಿತ್ತು. ಈ ವೇಳೆ ಆನೆಯ ಕೆಳಗೆ ಸಿಲುಕಿ ಪ್ರವಾಸಿ ಮಹಿಳೆ ದುರ್ಮರಣ ಹೊಂದಿದ್ದರು.

ಘಟನೆಯ ಬೆನ್ನಲ್ಲೇ ದುಬಾರೆ ಆನೆ ಶಿಬಿರವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದ್ದು, ಮುಂದಿನ ಆದೇಶದವರೆಗೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.

ಇದೇ ವೇಳೆ ರಾಜ್ಯದ ಎಲ್ಲಾ ಸಾಕಾನೆ ಶಿಬಿರಗಳಿಗೆ ಹೊಸ SOP ಜಾರಿಗೊಳಿಸಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಆದೇಶ ನೀಡಿದ್ದಾರೆ. ಹೊಸ ಮಾರ್ಗಸೂಚಿಗಳ ಪ್ರಕಾರ ಆನೆಗಳಿಂದ ಕನಿಷ್ಠ 100 ಅಡಿ ದೂರ ಕಾಪಾಡಿಕೊಳ್ಳಬೇಕು, ಆನೆಗಳ ಬಳಿ ಸೆಲ್ಫಿ ಹಾಗೂ ಫೋಟೋ ತೆಗೆದುಕೊಳ್ಳುವುದನ್ನು ನಿಷೇಧಿಸಲಾಗಿದೆ. ಜೊತೆಗೆ ಪ್ರವಾಸಿಗರು ಸಾಕಾನೆಗಳಿಗೆ ಯಾವುದೇ ಆಹಾರ ನೀಡಬಾರದು ಎಂದು ಸೂಚಿಸಲಾಗಿದೆ.

Continue Reading
Advertisement
galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ3 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌