ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಹೈಕೋರ್ಟ್ 111 ಜನ ಆರೋಪಿಗಳಿಗೆ ಜಾಮೀನು ನೀಡಿದ್ದು, ಇದಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿಯೇ ಕಾರಣ. ಪ್ರಕರಣದ ಆರೋಪಿಗಳ ಮೇಲೆ ಕಾಂಗ್ರೆಸ್‌ಗೆ ಮೊದಲಿನಿಂದಲೂ ಅನುಕಂಪ(Sympathy) ಇತ್ತು. ಹಾಗಾಗಿ ಅವರ ಬಿಡುಗಡೆಗೆ ಸಹಕರಿಸಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಆರೋಪಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಸರ್ಕಾರ ಸರಿಯಾದ ವಾದ ಮಂಡಿಸದೇ ಇರುವುದೇ ಹೈಕೋರ್ಟ್ ಜಾಮೀನು ನೀಡಲು ಕಾರಣವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಾಗಿನಿಂದಲೂ ಆರೋಪಿಗಳ ಬಿಡುಗಡೆಗಾಗಿ ಲೆಟರ್ ಕೊಡುವುದು, ಒತ್ತಾಯ ಮಾಡುವುದು ನಡೆದೇ ಇತ್ತು ಎಂದು ಕಿಡಿಕಾರಿದ್ದಾರೆ.
ಹಳೇ ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳ ಮೇಲೆ ದೇಶ ದ್ರೋಹದ ಆರೋಪಗಳಿದ್ದವು. ಇಂಥವರನ್ನು ಕಾಂಗ್ರೆಸ್ ಸರ್ಕಾರ, ಸರಿಯಾಗಿ ವಾದ ಮಂಡಿಸದೆ ಬಿಡುಗಡೆಗೊಳಿಸಿದೆ. ಮುಂದಿನ ದಿನಗಳಲ್ಲಿ ಇದರ ಪರಿಣಾಮವನ್ನು ಸರ್ಕಾರ ಅನುಭವಿಸಲಿದೆ ಎಂದು ಎಚ್ಚರಿಸಿದ್ದಾರೆ.
ಇದನ್ನೂ ಓದಿ | BJP National Meet: ಇಂದಿನಿಂದ ಬಿಜೆಪಿ ರಾಷ್ಟ್ರೀಯ ಸಮಾವೇಶ; ಲೋಕಸಭಾ ಚುನಾವಣೆಗೆ ತಯಾರಿ
ಹಳೇ ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಲ್ಲದೆ, ಕಲ್ಲು ತೂರಾಟ ಮಾಡಿ ಪೊಲೀಸ್ ವಾಹನಗಳು ಜಖಂ ಗೊಳಿಸಿ, ಸಾರ್ವಜನಿಕ ಆಸ್ತಿಪಾಸ್ತಿಗೂ ಹಾನಿಗೊಳಿಸಿದ್ದರು. ಹೀಗಿದ್ದರೂ ಕಾಂಗ್ರೆಸ್ ಸರ್ಕಾರ ಇವರ ಬಿಡುಗಡೆಗೆ ಸಹಕರಿಸಿದೆ ಎಂದು ಸಚಿವ ಜೋಶಿ ಆರೋಪಿಸಿದ್ದಾರೆ.
ದಿಕ್ಕು-ದೆಸೆ ಇಲ್ಲದ ಸಾಲದ ಹೊರೆಯ ಬಜೆಟ್: ಸಚಿವ ಪ್ರಲ್ಹಾದ್ ಜೋಶಿ
ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯ ಮಂಡಿಸಿರುವ ರಾಜ್ಯ ಬಜೆಟ್ ಯಾವುದೇ ದಿಕ್ಕು-ದಿಸೆ ಇಲ್ಲದ ಒಂದು ದಾಖಲೆ ಪಟ್ಟಿಯಂತಿದೆ. 3.71 ಲಕ್ಷ ಕೋಟಿ ಬೃಹತ್ ಗಾತ್ರದ ಹೆಗ್ಗಳಿಕೆ ಬಿಟ್ಟರೆ, ಇದು ರಾಜ್ಯದ ಜನರ ಕಲ್ಯಾಣ ಮತ್ತು ಆರ್ಥಿಕ ಪ್ರಗತಿಗೆ ಪೂರಕವಾಗಿಲ್ಲ ಎಂದು ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ್ ಜೋಶಿ ಟೀಕಿಸಿದ್ದಾರೆ.
ರಾಜ್ಯ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಈ ಬಜೆಟ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಭಾಷಣದಂತೆ ಇತ್ತು. ಗ್ಯಾರಂಟಿಗಳಿಗೆ ವರ್ಷವಿಡೀ ಹೇಗೆ ಹಣ ಕ್ರೋಡೀಕರಣ ಎಂಬ ಅಂಶವಿದೆಯೇ ಹೊರತು ಮುಂದಿನ ವರ್ಷಗಳಲ್ಲಿ ರಾಜ್ಯವನ್ನು ಆರ್ಥಿಕ ಸಶಕ್ತಗೊಳಿಸಲು ಯಾವುದೇ ಯೋಜನೆಗಳ ಪ್ರಸ್ತಾಪವೇ ಇಲ್ಲ ಎಂದು ಹೇಳಿದ್ದಾರೆ.
ಹಿಂದಿನ ಸರ್ಕಾರದ ಪ್ರಸ್ತಾವನೆಗಳೇ ಈ ಬಜೆಟ್‌ನಲ್ಲಿವೆ ಅಷ್ಟೇ. ನೀರಾವರಿ ಯೋಜನೆಗಳಿಗೆ ಯಾವುದೇ ಹಣಕಾಸು ಪ್ರಸ್ತಾಪವಿಲ್ಲ. ಕೇಂದ್ರ ಸರ್ಕಾರದ ಅನುಮತಿ ನೇಪಹೇಳಿ ಜಾರಿಕೊಳ್ಳುವ ವ್ಯರ್ಥ ಪ್ರಯತ್ನವೇ ಸಿಎಂ ಸಿದ್ದರಾಮಯ್ಯ ಅವರ ಕಸರತ್ತು ಆಗಿದೆ ಎಂದು ಸಚಿವರು ಆರೋಪಿಸಿದ್ದಾರೆ.
ಇದನ್ನೂ ಓದಿ | Karnataka Budget 2024 : ಬಜೆಟ್ ಬಹಿಷ್ಕಾರ ಇತಿಹಾಸದಲ್ಲೇ ಮೊದಲಲ್ಲ! 2021ರಲ್ಲೇ ಸಿದ್ದು ಇತಿಹಾಸ ಸೃಷ್ಟಿಸಿದ್ದರು!
ಸಾಲದ ಹೊರೆಯ ಬಜೆಟ್
ಕಳೆದ ವರ್ಷಕ್ಕೆ ಹೋಲಿಸಿದರೆ ರೆವೆನ್ಯೂ ವೆಚ್ಚ 1 ಲಕ್ಷ ಕೋಟಿಗೂ ಮೀರಿದೆ. ತೆರಿಗೆದಾರರ ಮೇಲೆ ಅನಗತ್ಯ ಹೊರೆ ಹೇರಲಾಗಿದೆ. ಅಲ್ಲದೇ, ಕಳೆದ ಸರ್ಕಾರಕ್ಕಿಂತ ಶೇ.22ರಷ್ಟು ಸಾಲದ ಹೊರೆ ಇದರಲ್ಲಿದೆ. 1,05,246 ಕೋಟಿಗೂ ಅಧಿಕ ಸಾಲ ಈ ಬಜೆಟ್ ಒಳಗೊಂಡಿದೆ. ಹಾಗಾಗಿ ಇದೊಂದು ಸಾಲದ ಹೊರೆಯ ಬಜೆಟ್ ಆಗಿದೆ ಎಂದು ಸಚಿವ ಪ್ರಲ್ಹಾದ್ ಜೋಶಿ ಟೀಕಿಸಿದ್ದಾರೆ.