ಹಾಸನ: ವಿಧಾನಸಭಾ ಚುನಾವಣೆಯ (Arsikere Election Results( ಮತ ಎಣಿಕೆ ಶನಿವಾರ ನಡೆದಿದ್ದು, ಜಿಲ್ಲೆಯ ಅರಸೀಕೆರೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ಎಂ.ಶಿವಲಿಂಗೇಗೌಡ ಗೆಲುವು ದಾಖಲಿಸಿದ್ದಾರೆ. ಇವರು 20,177 ಮತಗಳ ಅಂತರದಿಂದ ಸಮೀಪದ ಪ್ರತಿಸ್ಪರ್ಧಿ ಜೆಡಿಎಸ್ ಅಭ್ಯರ್ಥಿ ವಿರುದ್ಧ ಜಯಭೇರಿ ಬಾರಿಸಿದ್ದಾರೆ.
ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಕೆ.ಎಂ.ಶಿವಲಿಂಗೌಡ 98,375 ಮತ, ಜೆಡಿಎಸ್ ಅಭ್ಯರ್ಥಿ ಎನ್.ಆರ್.ಸಂತೋಷ್ 78,198 ಮತ, ಬಿಜೆಪಿ ಅಭ್ಯರ್ಥಿ ಜಿವಿಟಿ ಬಸವರಾಜ್ 6538 ಮತಗಳನ್ನು ಪಡೆದಿದ್ದಾರೆ.
2018ರ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಕೆ.ಎಂ. ಶಿವಲಿಂಗೇಗೌಡ 93,986 ಮತ, ಕಾಂಗ್ರೆಸ್ ಅಭ್ಯರ್ಥಿ ಜಿ.ಬಿ .ಶಶಿಧರ 50,297 ಮತ ಹಾಗೂ ಬಿಜೆಪಿ ಅಭ್ಯರ್ಥಿ ಜಿ. ಮರಿಸ್ವಾಮಿ 25,258 ಮತಗಳನ್ನು ಪಡೆದಿದ್ದರು.
ಇದನ್ನೂ ಓದಿ | Arkalgud Election Results: ಅರಕಲಗೂಡಿನಲ್ಲಿ ಜೆಡಿಎಸ್‌ನ ಎ.ಮಂಜುಗೆ ವಿಜಯ ಮಾಲೆ
ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದ ಕೆ.ಎಂ.ಶಿವಲಿಂಗೇಗೌಡ ಅವರು ಈ ಬಾರಿ ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಆಪ್ತ ಎನ್.ಆರ್.ಸಂತೋಷ್ ಬಿಜೆಪಿಯಿಂದ ಜೆಡಿಎಸ್‌ಗೆ ಪಕ್ಷಾಂತರವಾಗಿದ್ದರು. ಪಕ್ಷದ ಮೇಲಿನ ವರ್ಚಸ್ಸಿಗಿಂತ ವ್ಯಕ್ತಿ ಮೇಲೆ ನಡೆದ ಈ ಚುನಾವಣೆಯಲ್ಲಿ ಕೆ.ಎಂ.ಶಿವಲಿಂಗೇಗೌಡ ಗೆದ್ದು ಬೀಗಿದ್ದಾರೆ.