Site icon Vistara News

Tiptur Election Results: ತಿಪಟೂರಿನಲ್ಲಿ ಬಿ.ಸಿ.ನಾಗೇಶ್‌ ವಿರುದ್ಧ ಗೆದ್ದು ಬೀಗಿದ ಕಾಂಗ್ರೆಸ್‌ನ ಕೆ.ಷಡಕ್ಷರಿ

Tiptur Election Results K Shadakshari

Tiptur Election Results K Shadakshari

ತುಮಕೂರು: ವಿಧಾನಸಭಾ ಚುನಾವಣೆಯ (Tiptur Election Results) ಫಲಿತಾಂಶ ಶನಿವಾರ ಹೊರಬಿದ್ದಿದ್ದು, ತಿಪಟೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಕೆ.ಷಡಕ್ಷರಿ ಜಯಭೇರಿ ಬಾರಿಸಿದ್ದಾರೆ. ಇವರು 17,652 ಮತಗಳ ಅಂತರದಿಂದ ಸಮೀಪದ ಸ್ಪರ್ಧಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಅವರ ವಿರುದ್ಧ ಗೆಲುವಿನ ನಗೆ ಬೀರಿದ್ದಾರೆ.

ತಿಪಟೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ಷಡಕ್ಷರಿ 71,999 ಮತ ಪಡೆದಿದ್ದು, ಬಿಜೆಪಿ ಅಭ್ಯರ್ಥಿ ಬಿ.ಸಿ.ನಾಗೇಶ್ 54,347‌ ಮತ ಹಾಗೂ ಜೆಡಿಎಸ್ ಅಭ್ಯರ್ಥಿ ಕೆ.ಟಿ.ಶಾಂತಕುಮಾರ್ 26,014‌ ಮತಗಳನ್ನು ಪಡೆದಿದ್ದಾರೆ.

2018ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ಸಿ.ನಾಗೇಶ್ ಅವರು 61,383 ಮತಗಳನ್ನು ಪಡೆದು ಜಯ ಗಳಿಸಿದ್ದರು. ಕಾಂಗ್ರೆಸ್‌ ಅಭ್ಯರ್ಥಿ ಷಡಕ್ಷರಿ 35,820 ಮತಗಳನ್ನು ಪಡೆದಿದ್ದರು.

ಇದನ್ನೂ ಓದಿ | Madhugiri Election Results: ಮಧುಗಿರಿಯಲ್ಲಿ ಗೆಲುವಿನ ನಗೆ ಬೀರಿದ ಕೆ.ಎನ್. ರಾಜಣ್ಣ

ತಿಪಟೂರು, ಕೊಬ್ಬರಿ ಬೆಳೆಗೆ ಹೆಸರುವಾಸಿಯಾಗಿರುವ ತಿಪಟೂರು ಪ್ರಜ್ಞಾವಂತ ಮತದಾರರನ್ನು ಹೊಂದಿರುವ ಕ್ಷೇತ್ರ. ಏಕೆಂದರೆ 1962ರಿಂದ ಈಚೆಗೆ ಈ ಕ್ಷೇತ್ರದಲ್ಲಿ ಒಮ್ಮೆ ಶಾಸಕರಾಗಿದ್ದವರು ಸತತ ಎರಡನೇ ಬಾರಿ ಶಾಸಕರಾಗಿ ಆಯ್ಕೆಯಾದ ಉದಾಹರಣೆಯೇ ಇಲ್ಲ. 2018ರಲ್ಲಿ ಗೆಲುವು ಸಾಧಿಸಿ, ಹಾಲಿ ಸಚಿವರೂ ಆಗಿರುವ ಬಿ.ಸಿ.ನಾಗೇಶ್ ಈ ಸಂಪ್ರದಾಯವನ್ನು ಮುರಿಯುವ ಲೆಕ್ಕಾಚಾರದಲ್ಲಿದ್ದರು. ಆದರೆ ಅದು ಸಾಧ್ಯವಾಗಿಲ್ಲ.‌

Exit mobile version