Site icon Vistara News

Murder Case: ನಟಿ, ಕಾಂಗ್ರೆಸ್ ನಾಯಕಿ ವಿದ್ಯಾ ಹತ್ಯೆ ಆರೋಪಿ ಪತಿಯ ಬಂಧನ

Congress leader actress Vidya murder case Accused husband arrested

ಮೈಸೂರು: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾಗಿದ್ದ (Murder Case) ಕಾಂಗ್ರೆಸ್ ಮುಖಂಡೆ ಹಾಗೂ ಶಿವರಾಜ್‌ಕುಮಾರ್ ನಟನೆಯ ಸೂಪರ್‌ ಹಿಟ್‌ ಚಿತ್ರ ‘ಭಜರಂಗಿ’ ಯಲ್ಲಿ ನಟಿಸಿದ್ದ ವಿದ್ಯಾ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿ, ಪತಿ ನಂದೀಶ್‌ನನ್ನು ಬನ್ನೂರು ಠಾಣಾ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: Rain News: ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ; ಹಾರಿದ 10ಕ್ಕೂ ಹೆಚ್ಚು ಮನೆಗಳ ಮೇಲಿನ ಶೀಟ್, ಇಬ್ಬರಿಗೆ ಗಾಯ

ಶಿವರಾಜ್‌ಕುಮಾರ್ ನಟನೆಯ ಸೂಪರ್‌ ಹಿಟ್‌ ಚಿತ್ರ ‘ಭಜರಂಗಿ’ಯಲ್ಲಿ ನಟಿಸಿದ್ದ ವಿದ್ಯಾ ನಂದೀಶ್ ಕನ್ನಡದ ಕೆಲ ಸಿನಿಮಾಗಳಲ್ಲಿ ಪೋಷಕ ನಟಿಯಾಗಿ ಬಣ್ಣ ಹಚ್ಚಿದ್ದರು. ವಿದ್ಯಾ ನಂದೀಶ್ ಮೈಸೂರಿನ ಶ್ರೀರಾಮಪುರದಲ್ಲಿ ಪತಿ ಹಾಗೂ ಮಕ್ಕಳ ಜೊತೆ ನೆಲೆಸಿದ್ದರು. ಬನ್ನೂರಿನ ತುರಗನೂರಿನಲ್ಲಿ ಪತಿಯ ಮನೆಗೆ ಆಕೆ ತೆರಳಿದ್ದಾಗ ಗಲಾಟೆ ನಡೆದಿದೆ ಎನ್ನಲಾಗಿದೆ. ಪತಿ ಹಾಗೂ ಪತ್ನಿ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು. ಆದರೆ ಈ ಬಾರಿ ಅದು ವಿಕೋಪಕ್ಕೆ ಹೋಗಿ ಕೊಲೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಈ ಕುರಿತು ಬನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬನ್ನೂರು ಪೊಲೀಸ್‌ ಠಾಣೆಯ ಇನ್ಸ್‌ಪೆಕ್ಟರ್ ಪುನೀತ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಆರೋಪಿಯ ಸ್ನೇಹಿತ ನೀಡಿದ ಸುಳಿವಿನ ಮೇರೆಗೆ ಆರೋಪಿ ನಂದೀಶ್‌ನನ್ನು ಬಂಧಿಸಿದ್ದಾರೆ.

Murder Case: ಯುವತಿ ಪ್ರಬುದ್ಧ ಸಾವು ಆತ್ಮಹತ್ಯೆಯಲ್ಲ, ಕೊಲೆ: ತಾಯಿ ದೂರು

ರಾಜಧಾನಿಯ ಸುಬ್ರಹ್ಮಣ್ಯಪುರ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಭುದ್ಧ ಎಂಬ ಯುವತಿಯ ಸಾವಿನ (Girl Death) ಕುರಿತು ಅನುಮಾನಗಳು ಮೂಡಿದ್ದು, ಇದು ಆತ್ಮಹತ್ಯೆ (Self Harming) ಅಲ್ಲ ಕೊಲೆ (Murder Case) ಎಂದು ಪ್ರಬುಧ್ದ ತಾಯಿ ದೂರು ನೀಡಿದ್ದಾರೆ.

ಸುಬ್ರಹ್ಮಣ್ಯಪುರ ಠಾಣೆ ಪೊಲೀಸರು ಈ ಪ್ರಕರಣದಲ್ಲಿ ಸೆಕ್ಷನ್‌ 302 ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಳೆದ 15ನೇ ತಾರೀಕಿನಂದು ಪ್ರಬುಧ್ದ (20) ಸಾವಿಗೀಡಾಗಿದ್ದರು. ಬಾತ್ ರೂಮಿನಲ್ಲಿ ಆಕೆಯ ಶವ ಪತ್ತೆಯಾಗಿತ್ತು. ಮೇಲ್ನೋಟಕ್ಕೆ ಕಂಡುಬಂದಂತೆ ಇದು ಆತ್ಮಹತ್ಯೆ ಎಂದು ಪೊಲೀಸರು ಪರಿಗಣಿಸಿದ್ದರು. ಆತ್ಮಹತ್ಯೆಗೆ ಬಳಸಲಾದ ಚಾಕು ಕೂಡ ಶವದ ಪಕ್ಕದಲ್ಲೇ ಇತ್ತು, ಯಾವುದೇ ವಸ್ತು ಕಳವಾಗಿರಲಿಲ್ಲ. ಮನೆಯ ಮುಂದಿನ ಬಾಗಿಲು ಒಳಗಿನಿಂದ ಲಾಕ್‌ ಆಗಿದ್ದು, ಹಿಂದಿನ ಬಾಗಿಲಿನ ಚಿಲಕ ಹಾಕಿರಲಿಲ್ಲ.

ಆದರೆ ಮಗಳ ಸಾವಿನ‌ ಬಗ್ಗೆ ತಾಯಿ ಅನುಮಾನ ವ್ಯಕ್ತಪಡಿಸಿದ್ದಾರೆ. ಆಕೆ ಆತ್ಮಹತ್ಯೆ ಮಾಡಿಕೊಳ್ಳುವಂಥ ಸ್ವಭಾವದವಳಲ್ಲ, ಅದಕ್ಕೆ ಯಾವುದೇ ಕಾರಣವೂ ಇರಲಿಲ್ಲ. ನನ್ನ ಮಗಳನ್ನು ಯಾರೋ ಕ್ರೂರವಾಗಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: Gas Leak deaths: ಮುಚ್ಚಿದ ಮನೆಯಲ್ಲಿ ಗ್ಯಾಸ್‌ ಸೋರಿಕೆ, ನಿದ್ರೆಯಲ್ಲೇ ಚಿರನಿದ್ರೆಗೆ ಜಾರಿದ 4 ಮಂದಿ

ಕತ್ತು ಮತ್ತು ಕೈಯನ್ನು ಚಾಕುವಿನಿಂದ ಕುಯ್ದು ಕೊಲೆ ಮಾಡಿದ್ದಾರೆ. ಮುಖಕ್ಕೆ ಮತ್ತು ತಲೆಯ ಹಿಂಭಾಗಕ್ಕೆ ಬಲವಾಗಿ ಹೊಡೆಯಲಾಗಿದೆ ಎಂದು ತಾಯಿ ಅನುಮಾನಿಸಿದ್ದಾರೆ. ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿರುವ ಪೊಲೀಸರು, ಅನುಮಾನಾಸ್ಪದ ವ್ಯಕ್ತಿಗಳ ವಿಚಾರಣೆ ನಡೆಸುತ್ತಿದ್ದಾರೆ. ಪೋಸ್ಟ್ ಮಾರ್ಟಂ ವರದಿಗಾಗಿ ಕಾಯಲಾಗುತ್ತಿದೆ.

Exit mobile version