Site icon Vistara News

Congress leader Celebration: ತಲ್ವಾರ್ ಹಿಡಿದು ಕೇಕ್ ಕಟ್ ಮಾಡಿದ ಕಾಂಗ್ರೆಸ್‌ ಮುಖಂಡ; ವಿಡಿಯೊ ವೈರಲ್‌

Congress leader Celebration

ಬಾಗಲಕೋಟೆ: ಕಾಂಗ್ರೆಸ್‌ ಮುಖಂಡನೊಬ್ಬರು ತಲ್ವಾರ್ ಹಿಡಿದು ಕೇಕ್ ಕಟ್ ಮಾಡಿರುವ ಘಟನೆ (Congress leader Celebration) ಬಾಗಲಕೋಟೆ ತಾಲೂಕಿನ ಹವೇಲಿ ಗ್ರಾಮದಲ್ಲಿ ನಡೆದಿದೆ. ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಸಾಹಸ ಸಿಂಹ ವಿಷ್ಣುವರ್ಧನ್ ಸಾಂಗ್ ಹಾಕಿ ಕಾಂಗ್ರೆಸ್‌ ಮುಖಂಡ ಕೇಕ್ ಕಟ್ ಮಾಡಿದ್ದು, ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಹಳೆ ಹವೇಲಿ ಗ್ರಾಮದ ಕೈ ಮುಖಂಡ ರಮೇಶ್ ರಾಠೋಡ ತಲ್ವಾರ್‌ನಿಂದ ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ. ತಲ್ವಾರ್‌ನಿಂದ ಕೇಕ್ ಕತ್ತರಿಸಿದ ಮುಖಂಡನಿಗೆ ಬೆಂಬಲಿಗರು ಸನ್ಮಾನ ಮಾಡಿದ್ದಾರೆ. ಈ ವಿಡಿಯೊವನ್ನು ಇನ್ಸ್ಟಾಗ್ರಾಮ್‌ನಲ್ಲಿ ಬೆಂಬಲಿಗರು ಹಂಚಿಕೊಂಡಿದ್ದಾರೆ.

ಲೈಸೆನ್ಸ್ ಇಲ್ಲದೇ ಮಾರಕಾಸ್ತ್ರ ಹೊಂದುವುದು, ಸಾರ್ವಜನಿಕವಾಗಿ ಮಾರಕಾಸ್ತ್ರ ಬಳಿಸುವುದು ಕಾನೂನು ಪ್ರಕಾರ ಅಪರಾಧ. ಹೀಗಾಗಿ ಕೈ ಮುಂಖಡನ ಬಗ್ಗೆ ನೆಟ್ಟಿಗರು ಆಕ್ಷೇಪ ವ್ಯಕ್ತಪಡಿಸಿದ್ದು, ಮುಖಂಡನ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ | Lok Sabha Election 2024: ಮೈಸೂರು ಕ್ಷೇತ್ರದಲ್ಲಿ ಗೆಲುವು ಯಾರಿಗೆ? ಶ್ವಾನದಿಂದ ಅಚ್ಚರಿಯ ಭವಿಷ್ಯ!

ಮೈಸೂರು ಕ್ಷೇತ್ರದಲ್ಲಿ ಗೆಲುವು ಯಾರಿಗೆ? ಶ್ವಾನದಿಂದ ಅಚ್ಚರಿಯ ಭವಿಷ್ಯ!

ಮೈಸೂರು: 2024ರ ಲೋಕಸಭಾ ಚುನಾವಣೆಯ (Lok Sabha Election 2024) 7ನೇ ಹಂತದ ಮತದಾನ ಶನಿವಾರ ಮುಕ್ತಾಯವಾದ ಬೆನ್ನಲ್ಲೇ ಬಿಡುಗಡೆಯಾದ ಎಕ್ಸಿಟ್‌ ಪೋಲ್‌ಗಳ ಫಲಿತಾಂಶದಲ್ಲಿ ಬಹುತೇಕವು ಕೇಂದ್ರದಲ್ಲಿ ಸತತ ಮೂರನೇ ಬಾರಿ ಬಿಜೆಪಿ ನೇತೃತ್ವದ ಎನ್‌ಡಿಎ, ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತದೆ ಎಂದು ತಿಳಿಸಲಾಗಿದೆ. ಈ ನಡುವೆ ಮೈಸೂರಿನಲ್ಲಿ ಶ್ವಾನವೊಂದು ಫಲಿತಾಂಶದ ಬಗ್ಗೆ ಭವಿಷ್ಯ ನುಡಿದಿದೆ. ಕೇಂದ್ರದಲ್ಲಿ ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿಯಾಗಲಿದ್ದಾರೆ ಎಂದು ಹೇಳಿರುವ ಶ್ವಾನ, ಮೈಸೂರು-ಕೊಡಗು ಕ್ಷೇತ್ರದಲ್ಲಿ ಯಾರು ಜಯಭೇರಿ ಬಾರಿಸುತ್ತಾರೆ ಎಂಬುವುದರ ಬಗ್ಗೆಯೂ ತಿಳಿಸಿದೆ.

ದೇಶಾದ್ಯಂತ ಏಳು ಹಂತಗಳಲ್ಲಿ ಮತದಾನ ಮುಗಿದಿದ್ದು, ಫಲಿತಾಂಶಕ್ಕಾಗಿ (ಜೂನ್‌ 4) ಜನರು ಕಾತರಿಂದ ಕಾಯುತ್ತಿದ್ದಾರೆ. ಇದಕ್ಕೂ ಮೊದಲು ನಗರದ ಕೆ.ಟಿ. ಸ್ಟ್ರೀಟ್‌ನ ಕಾಲಭೈರವೇಶ್ವರ ದೇಗುಲದಲ್ಲಿ ಭೈರವ ಎಂಬ 2 ವರ್ಷದ ಶ್ವಾನ ಲೋಕಸಭಾ ಚುನಾವಣೆ ಫಲಿತಾಂಶದ ಬಗ್ಗೆ ಭವಿಷ್ಯ ನುಡಿಯುವ ಮೂಲಕ ಗಮನ ಸೆಳೆದಿದೆ. ಶ್ವಾನದ ಭವಿಷ್ಯ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಇದನ್ನೂ ಓದಿ | MLC Election: ಪರಿಷತ್ ಚುನಾವಣೆ; ಯತೀಂದ್ರ ಸೇರಿ 8 ಅಭ್ಯರ್ಥಿಗಳ ಪಟ್ಟಿ ಘೋಷಿಸಿದ ಕಾಂಗ್ರೆಸ್‌

ಗೋಪಿನಾಥ್ ಎಂಬುವವರು ಸಾಕಿರುವ ಭೈರವ ಶ್ವಾನದ ಮುಂದೆ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಹುಲ್ ಗಾಂಧಿ ಅವರ ಭಾವಚಿತ್ರವಿಟ್ಟಾಗ ಶ್ವಾನ ಮೋದಿ ಅವರ ಭಾವಚಿತ್ರ ಆಯ್ಕೆ ಮಾಡುವ ಮೂಲಕ ಬಿಜೆಪಿ ಮೈತ್ರಕೂಟ ಮತ್ತೊಮ್ಮೆ ಗೆಲ್ಲಲಿದೆ ಎಂದು ಭವಿಷ್ಯ ನುಡಿದಿದೆ. ಇನ್ನು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕೈ ಅಭ್ಯರ್ಥಿ ಎಂ. ಲಕ್ಷ್ಮಣ್ ಹಾಗೂ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಭಾವಚಿತ್ರ ತೋರಿಸಿದಾಗ ಶ್ವಾನ ಯದುವೀರ್ ಭಾವಚಿತ್ರ ಆಯ್ಕೆ ಮಾಡುವ ಮೂಲಕ ಈ ಚುನಾವಣೆಯಲ್ಲಿ ಗೆಲುವು ಯಾರಿಗೆ ಎಂಬುವುದನ್ನು ಸೂಚಿಸಿದೆ.

Exit mobile version