ಶೆಲ್ಟರ್‌ ಗುಂಬಜ್‌ | ಪ್ರತಾಪ್‌ ಸಿಂಹ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ, ಎಂಪಿಯಾಗಲು ನಾಲಾಯಕ್‌ ಎಂದ ಸಲೀಂ ಅಹಮದ್‌ - Vistara News

ಕರ್ನಾಟಕ

ಶೆಲ್ಟರ್‌ ಗುಂಬಜ್‌ | ಪ್ರತಾಪ್‌ ಸಿಂಹ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ, ಎಂಪಿಯಾಗಲು ನಾಲಾಯಕ್‌ ಎಂದ ಸಲೀಂ ಅಹಮದ್‌

ಮೈಸೂರಿನಲ್ಲಿ ಎದ್ದಿರುವ ಶೆಲ್ಟರ್‌ ಗುಂಬಜ್‌ ವಿವಾದಕ್ಕೆ ಸಂಬಂಧಿಸಿ ಕಾಂಗ್ರೆಸ್‌ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್‌ ಸಿಟ್ಟಿಗೆದ್ದಿದ್ದಾರೆ. ಅವರ ಆಕ್ರೋಶದ ಗುರಿ ಸಂಸದ ಪ್ರತಾಪ್‌ ಸಿಂಹ ಅವರ ಹೇಳಿಕೆಗಳು.

VISTARANEWS.COM


on

saleem ahamad
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಗದಗ: ಮೈಸೂರು-ಕೊಡಗು ಸಂಸದರಾಗಿರುವ ಪ್ರತಾಪ್‌ ಸಿಂಹ ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಅವರು ಸಂಸದರಾಗಲು ನಾಲಾಯಕ್‌ ಎಂದಿದ್ದಾರೆ ಕಾಂಗ್ರೆಸ್‌ ನಾಯಕ, ಮೇಲ್ಮನೆ ಸದಸ್ಯ ಸಲೀಂ ಅಹ್ಮದ್‌.

ಮೈಸೂರಿನಲ್ಲಿ ಬಸ್‌ ಶೆಲ್ಟರ್‌ನ ಮೇಲೆ ಗುಂಬಜ್‌ ಮಾದರಿಯ ನಿರ್ಮಾಣಗಳನ್ನು ಮಾಡಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಿಸಿ ಪ್ರತಾಪ್‌ ಸಿಂಹ ಅವರು ನೀಡುತ್ತಿರುವ ಹೇಳಿಕೆಗಳಿಗೆ ಸಂಬಂಧಿಸಿ ಅವರು ಪ್ರತಿಕ್ರಿಯಿಸಿದ್ದಾರೆ.

ಗದಗ ಜಿಲ್ಲೆ‌ ಮುಂಡರಗಿ ತಾಲೂಕಿನ ಕಲಕೇರಿ‌ ಗ್ರಾಮದಲ್ಲಿ ಮಾತನಾಡಿದ ಅವರು, ಗುಂಬಜ್‌ ಒಡೆಯುತ್ತೇವೆ ಎಂಬಿತ್ಯಾದಿ ಹೇಳಿಕೆಗಳ ಮೂಲಕ ನೀವು ಸಮಾಜಕ್ಕೆ ಏನು‌ ಸಂದೇಶ ಕೊಡ್ತಿದ್ದೀರಿ ಎಂದು ಪ್ರಶ್ನಿಸಿದ್ದಾರೆ. ʻʻಬೆಂಗಳೂರಿನಲ್ಲಿ, ದೆಹಲಿಯಲ್ಲಿ ಗುಂಬಜ್ ರೀತಿಯಲ್ಲಿ ಕಟ್ಟಡಗಳಿವೆ. ಎಲ್ಲ ಗುಂಬಜ್ ರೀತಿಯ ಕಟ್ಟಡಗಳನ್ನು ಒಡೆಯುತ್ತಾರಾ‌ ಎಂಪಿ, ಒಬ್ಬ ಸಂಸದನಾಗಿ ಇಂಥ ಮಾತು ಆಡಬಾರದು..ಜನ ನಗ್ತಾರೆʼʼ ಎಂದು ಸಲೀಂ ಹೇಳಿದರು.

ʻʻಕರ್ನಾಟಕ ಇತಿಹಾಸದಲ್ಲಿಯೇ ಇಂಥ ಘಟನೆ ಯಾವತ್ತೂ ಆಗಿಲ್ಲ. ಸರ್ಕಾರಕ್ಕೆ ಯಾವುದೇ‌ ಸಿದ್ಧಾಂತ,ವಿಚಾರಗಳಿಲ್ಲ. ಭ್ರಷ್ಟಾಚಾರದಲ್ಲಿ ಉದಯವಾಗಿರೋ‌ ಸರ್ಕಾರ ಭ್ರಷ್ಟಾಚಾರದಲ್ಲೇ ಮುಳುಗಿದೆʼʼ ಎಂದು ವಾಗ್ದಾಳಿ ನಡೆಸಿದರು ಸಲೀಂ ಅಹ್ಮದ್‌.

bus shelter gumbz

ಕೇಸರಿ ಬಣ್ಣ ನಮ್ಮ ಧ್ವಜದಲ್ಲೂ ಇದೆ.. ಆದರೆ,
ವಿವೇಕ ಕೊಠಡಿ ಹೆಸರಿನಲ್ಲಿ ಶಾಲೆಗಳಿಗೆ ಕೇಸರಿ ಬಣ್ಣ ಬಳಿಯಲು ಸರ್ಕಾರ ಮುಂದಾಗಿದೆ ಎಂಬ ವಿಚಾರದ ಬಗ್ಗೆ ಮಾತನಾಡಿದ ಅವರು, ʻʻಸರ್ಕಾರಿ ಶಾಲೆಗಳಲ್ಲಿ ಟೀಚರ್‌ಗಳಿಲ್ಲ.. ಕೊಠಡಿಗಳಿಲ್ಲ.. ಸರಿಯಾದ‌ ಸಮವಸ್ತ್ರ ಇಲ್ಲ.. ಮಧ್ಯಾಹ್ನ ಬಿಸಿಯೂಟ ಸಿಗ್ತಾಯಿಲ್ಲ.. ಇದೆಲ್ಲ ಬಿಟ್ಟು ಬಣ್ಣದ ಹಿಂದೆ ಬಿದ್ದಿದ್ದಾರೆʼʼ ಎಂದರು. ʻʻನಾವೂ ಸಹ‌ ಕೇಸರಿ‌ ಬಣ್ಣಕ್ಕೆ ಗೌರವ ಕೊಡ್ತೇವೆ.. ನಮ್ಮ ಕಾಂಗ್ರೆಸ್‌ ಧ್ವಜದಲ್ಲೂ ಕೇಸರಿ‌ ಇದೆ. ನಮ್ಮ ದೇಶದ ಧ್ವಜದಲ್ಲೂ ಕೇಸರಿ ಬಣ್ಣ ಇದೆ. ಆದರೆ ಇವರು‌ ಕೇಸರೀಕರಣ ಮಾಡೋದಕ್ಕೆ ಹೊರಟಿದ್ದಾರೆʼʼ ಎಂದು ಆಪಾದಿಸಿದರು. ʻʻಸಣ್ಣ‌ ಮಕ್ಕಳಿಗೆ ಈ ರೀತಿ ಮಾಡುವ ಬದಲು ಒಳ್ಳೆ ಶಿಕ್ಷಣ ನೀಡಿʼʼ ಎಂದು ಕಿವಿಮಾತು ಹೇಳಿದರು.

ʻʻಶಾಲೆಗಳ ಅಭಿವೃದ್ಧಿ ಮಾಡೋ ಬದಲು ಭ್ರಷ್ಟಾಚಾರ ಮಾಡುತ್ತಿದ್ದೀರಿ. ಸರ್ಕಾರದಲ್ಲಿ‌ ಭ್ರಷ್ಟಾಚಾರ ತಾಂಡವಾಡುತ್ತಿದೆ. 40% ಕಮೀಷನ್ ಸರ್ಕಾರ ಅಂತ‌ ಇಡೀ ಜಗಜ್ಜಾಹೀರಾಗಿದೆ. ಪ್ರಪಂಚದಲ್ಲೇ ಇದರ ಬಗ್ಗೆ ಚರ್ಚೆಯಾಗುತ್ತಿದೆ. 40 % ಕಮೀಷನ್ ವಿಚಾರಕ್ಕೆ ಆತ್ಮಹತ್ಯೆ ಮಾಡಿಕೊಳ್ತಿದ್ದಾರೆ. ಹುಬ್ಬಳ್ಳಿ ಗುತ್ತಿಗೆದಾರರೊಬ್ಬರು ರಾಷ್ಟ್ರಪತಿಗಳಿಗೆ ದಯಾಮರಣಕ್ಕೆ ಮನವಿ ಸಲ್ಲಿಸಿದಾರೆ. ಅದರ ಬಗ್ಗೆ ಮಾತನಾಡುವ ಧೈರ್ಯ ಈ‌ ಎಂಪಿಗಿದೆಯಾʼʼ ಎಂದು ಪ್ರಶ್ನಿಸಿದ್ದಾರೆ ಸಲೀಂ ಅಹಮದ್‌.

ಇದನ್ನೂ ಓದಿ | ಶೆಲ್ಟರ್‌ನಲ್ಲಿ ಗುಂಬಜ್‌!| ಇನ್ನು 2 ದಿನದಲ್ಲಿ ಬಸ್‌ ಶೆಲ್ಟರ್‌ ಮೇಲಿನ ಗುಂಬಜ್‌ ತೆಗೆಯದಿದ್ದರೆ ನಾನೇ ಒಡೀತೇನೆ ಎಂದ ಪ್ರತಾಪ್ ಸಿಂಹ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಲಬುರಗಿ

Kalaburagi News : ರಾತ್ರಿ ಹೊತ್ತಲ್ಲಿ ಕಲಬುರಗಿ ಕೇಂದ್ರಿಯ ವಿವಿಯಲ್ಲಿ ಶಂಕಾಸ್ಪದ ಡ್ರೋನ್‌ ಹಾರಾಟ!

Kalaburagi News : ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ (Central University) ಶಂಕಾಸ್ಪದವಾಗಿ ಡ್ರೋನ್‌ ಹಾರಾಟ (Drone flying) ನಡೆಸಿದೆ. ಜತೆಗೆ ನಂಬರ್‌ ಪ್ಲೇಟ್‌ ಇಲ್ಲದ ವಾಹನದಲ್ಲಿ ಬಂದ ಗೂಂಡಾಗಳು ವಿವಿಯೊಳಗೆ ಅತಿಕ್ರಮವಾಗಿ ಪ್ರವೇಶಿಸಿರುವುದು ಆತಂಕ ಸೃಷ್ಟಿಸಿದೆ.

VISTARANEWS.COM


on

By

kalaburagi News Drone flying at kalaburagi Central University
ವಿಶ್ವವಿದ್ಯಾಲಯಕ್ಕೆ ಅತಿಕ್ರಮ ಪ್ರವೇಶಿಸಿರುವ ಅಪರಿಚಿತರು ಹಾಗೂ ರಾತ್ರಿ ಸಮಯದಲ್ಲಿ ಡ್ರೋನ್‌ ಹಾರಾಟ
Koo

ಕಲಬುರಗಿ: ಕಲಬುರಗಿಯ (Kalaburagi News) ಆಳಂದ ತಾಲೂಕಿನಲ್ಲಿರುವ ಕೇಂದ್ರಿಯ ವಿಶ್ವವಿದ್ಯಾಲಯದಲ್ಲಿ (Central University) ಅನಧಿಕೃತವಾಗಿ ಹಾಗೂ ಶಂಕಾಸ್ಪದವಾಗಿ ಡ್ರೋನ್‌ ಹಾರಾಟ (Drone flying) ನಡೆಸಿದೆ. ರಾತ್ರಿ ಹೊತ್ತಲ್ಲಿ ಡ್ರೋನ್‌ ಹಾರಾಟ ನಡೆಸಲಾಗಿದೆ. ಇದು ಕೇಂದ್ರಿಯ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಲ್ಲಿ ಆತಂಕವನ್ನು ಹೆಚ್ಚಿಸಿದೆ.

ವಿಶ್ವವಿದ್ಯಾಲಯದ ಆವರಣದ ಹೊರಗಡೆಯಿಂದ ಬಂದ ಡ್ರೋನ್‌, ವಿವಿ ಕ್ಯಾಂಪಸ್ ಒಳಗಡೆ ಹಾರಾಡಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಹಾರಾಟ ನಡೆಸುತ್ತಿರುವ ಬಗ್ಗೆ ಮಾಹಿತಿ ಸಿಕ್ಕಿದೆ.

ಇದನ್ನೂ ಓದಿ: ಹೋಳಿ ಹೆಸರಲ್ಲಿ ಸ್ಕೂಟಿ ಮೇಲೆಯೇ ಕಾಮದೋಕುಳಿ; ಯುವತಿಯರಿಗೆ 80 ಸಾವಿರ ರೂ. ದಂಡ!

ಎವಿಬಿಪಿ ಕಾರ್ಯಕ್ರಮಕ್ಕೆ ಅಡೆತಡೆ

ಎಬಿವಿಪಿ ಕಾರ್ಯಕರ್ತರ ಕಾರ್ಯಕ್ರಮಕ್ಕೆ ಅಡೆತಡೆ ಮುಂದುವರೆದಿದೆ. ವಿದ್ಯಾರ್ಥಿ ಸಂಘಟನೆಯಾಗಿರುವ ಎವಿಬಿಪಿ ಕಾರ್ಯಕರ್ತರು ಕೇಂದ್ರಿಯ ವಿವಿಯಲ್ಲೇ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಕಳೆದ ಕೆಲ ದಿನಗಳ ಹಿಂದೆ ಎಬಿವಿಪಿ ಕಾರ್ಯಕರ್ತರ ಕಾರ್ಯಕ್ರಮಕ್ಕೆ ಬೆದರಿಕೆ ಹಾಕಲಾಗಿತ್ತು ಎಂಬ ಆರೋಪ ಕೇಳಿ ಬಂದಿದೆ.

ಎಬಿವಿಪಿಯ ಕಾರ್ಯಕ್ರಮಕ್ಕೆ ಹೊರಗಿನಿಂದ ಬಂದ ಗೂಂಡಾಗಳು ಬೆದರಿಕೆ ಹಾಕಿದ್ದರಂತೆ. ವಿಶ್ವವಿದ್ಯಾಲಯಕ್ಕೆ ಅತಿಕ್ರಮ ಪ್ರವೇಶಿಸಿ ಎಬಿವಿಪಿ ಕಾರ್ಯಕ್ರಮದ ಸ್ಥಳಕ್ಕೆ ಬಂದು ಭಯದ ವಾತಾವರಣವನ್ನು ಸೃಷ್ಟಿಸಿದ್ದರು ಎನ್ನಲಾಗಿದೆ. ಮಾತ್ರವಲ್ಲ ನಂಬರ್ ಪ್ಲೇಟ್‌ ಇಲ್ಲದ ವಾಹನದಲ್ಲಿ ಬರುವ ಗೂಂಡಾಗಳು ಆತಂಕದ ವಾತಾವರಣ ಸೃಷ್ಟಿ ಮಾಡುತ್ತಿದ್ದಾರೆ ಎಂಬ ಆರೋಪವಿದೆ.

ಸದ್ಯ ಕೇಂದ್ರಿಯ ವಿವಿಯಲ್ಲಿ ರಾತ್ರಿ ಹೊತ್ತಿನಲ್ಲಿ ಡ್ರೋನ್‌ ಹಾರಾಟಕ್ಕೂ, ಈ ಗೂಂಡಾಗಳಿಗೂ ಏನಾದರೂ ಸಂಬಂಧ ಇದ್ಯಾ ಎಂಬುದು ತನಿಖೆಯಿಂದ ತಿಳಿಯಬೇಕಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

Lok Sabha Election 2024

Lok Sabha Election 2024: ಪ್ರಲ್ಹಾದ್‌ ಜೋಶಿಗೆ ವಾಲ್ಮೀಕಿ ಸಮಾಜದ ಬೆಂಬಲ: ಪ್ರಸನ್ನಾನಂದಪುರಿ ಸ್ವಾಮೀಜಿ

Lok Sabha Election 2024: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನಮ್ಮ ಸಮಾಜದವರು ಒಗ್ಗಟ್ಟಾಗಿ ಪ್ರಲ್ಹಾದ್‌ ಜೋಶಿಯವರನ್ನು ಬೆಂಬಲಿಸುವ ಮೂಲಕ ಶಕ್ತಿ ತುಂಬಬೇಕು. ರಾಜ್ಯದಲ್ಲೇ ಅತಿ ಹೆಚ್ಚು ಅಂತರದ ಗೆಲುವು ಜೋಶಿಯವರದ್ದಾಗಬೇಕು ಎಂದು ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಕರೆ ನೀಡಿದ್ದಾರೆ.

VISTARANEWS.COM


on

Lok Sabha Election 2024 Valmiki Samaj to support Pralhad Joshi says Prasannanandapuri Swamiji
Koo

ಹುಬ್ಬಳ್ಳಿ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ (Lok Sabha Election 2024) ವಾಲ್ಮೀಕಿ ಸಮಾಜದವರು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಅವರ ಬೆನ್ನಿಗೆ ನಿಲ್ಲಬೇಕು. ಅವರಿಗೆ ಶಕ್ತಿಯಾಗಬೇಕು ಎಂದು ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ (Prasannanandapuri Swamiji) ಸಮಾಜದ ಬಾಂಧವರಿಗೆ ಕರೆ ನೀಡಿದ್ದಾರೆ.

ರಾಜನಹಳ್ಳಿ ವಾಲ್ಮೀಕಿ ಗುರುಪೀಠಕ್ಕೆ ಭೇಟಿ ನೀಡಿದ ಸಚಿವ ಪ್ರಲ್ಹಾದ್‌ ಜೋಶಿ ಅವರನ್ನು ಆಶೀರ್ವದಿಸಿ ಮಾತನಾಡಿದ ಪ್ರಸನ್ನಾನಂದಪುರಿ ಸ್ವಾಮೀಜಿ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನಮ್ಮ ಸಮಾಜದವರು ಒಗ್ಗಟ್ಟಾಗಿ ಪ್ರಲ್ಹಾದ್‌ ಜೋಶಿಯವರನ್ನು ಬೆಂಬಲಿಸುವ ಮೂಲಕ ಶಕ್ತಿ ತುಂಬಬೇಕು. ರಾಜ್ಯದಲ್ಲೇ ಅತಿ ಹೆಚ್ಚು ಅಂತರದ ಗೆಲುವು ಜೋಶಿಯವರದ್ದಾಗಬೇಕು ಎಂದು ಆಶಿಸಿದರು.

ಪ್ರಲ್ಹಾದ್‌ ಜೋಶಿಯವರು ಮತ್ತೆ ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಮಂತ್ರಿಯಾಗಿ ನಮ್ಮೆಲ್ಲರ ಬೇಡಿಕೆಗೆ ಸ್ಪಂದಿಸುತ್ತಾರೆ ಎಂಬ ವಿಶ್ವಾಸ ನಮಗಿದೆ. ಎಲ್ಲ ಸಮಾಜದ ಜನರನ್ನು ನಾವು ವಿಶ್ವಾಸಕ್ಕೆ ತೆಗೆದುಕೊಂಡು ಬಿಜೆಪಿಯ ಐತಿಹಾಸಿಕ ಗೆಲುವಿಗೆ ಕಾರಣವಾಗಬೇಕು ಎಂದು ಪ್ರಸನ್ನಾನಂದಪುರಿ ಸ್ವಾಮೀಜಿ ಹೇಳಿದರು.

ವಾಲ್ಮೀಕಿ ಕಾರ್ಯಕರ್ತರನ್ನು ನಾಯಕರನ್ನಾಗಿ ಬೆಳೆಸಿದ್ದಾರೆ

ನಮ್ಮ ಸಮಾಜದ ಕಾರ್ಯಕರ್ತರನ್ನು ನಾಯಕರನ್ನಾಗಿಸಿದ್ದೇ ಪ್ರಲ್ಹಾದ್‌ ಜೋಶಿಯವರು. ಬಂಗಾರು ಹನುಮಂತು ರಾಜ್ಯ ಬಿಜೆಪಿ ಎಸ್.ಟಿ. ಮೋರ್ಚಾದ ಅಧ್ಯಕ್ಷ ಆಗಲು ಬೆನ್ನ ಹಿಂದೆ ನಿಂತು ಪ್ರೋತ್ಸಾಹಿಸಿ ಸಹಕರಿಸಿದವರು ಪ್ರಲ್ಹಾದ್‌ ಜೋಶಿ ಎಂದು ಪ್ರಸನ್ನಾನಂದಪುರಿ ಸ್ವಾಮೀಜಿ ಸ್ಮರಿಸಿದರು.

ಧರಣಿಗೆ ನ್ಯಾಯ ನೀಡಿದರು

ಬೆಂಗಳೂರಿನಲ್ಲಿ ತಾವು ಉಪವಾಸ ಧರಣಿ ಕುಳಿತ ವೇಳೆ ತನ್ನೆಲ್ಲ ಪ್ರೋಟೋಕಾಲ್ ಮರೆತು ನನ್ನನ್ನು ಭೇಟಿಯಾಗಿ ಯೋಗಕ್ಷೇಮ ವಿಚಾರಿಸಿದ್ದಲ್ಲದೆ, ಕೇಂದ್ರ ಸರ್ಕಾರದ ಮಟ್ಟದಲ್ಲಿ ಪ್ರಯತ್ನಿಸಿ ನಮ್ಮ ಬೇಡಿಕೆಗೆ ನ್ಯಾಯ ಒದಗಿಸಿದವರು ಪ್ರಲ್ಹಾದ್‌ ಜೋಶಿ ಎಂದು ಪ್ರಸನ್ನಾನಂದಪುರಿ ಸ್ವಾಮೀಜಿ ಅಭಿಮಾನ ವ್ಯಕ್ತಪಡಿಸಿದರು.

ಜಾತಿ ಭೇದ ತೋರದ ನಾಯಕ

ಸಚಿವ ಪ್ರಲ್ಹಾದ್‌ ಜೋಶಿಯವರು ಯಾವತ್ತೂ ಜಾತಿ ಭೇದ ತೋರಿದವರಲ್ಲ. ಎಲ್ಲ ಸಮಾಜ, ವರ್ಗದವರನ್ನು ಸಮಾನವಾಗಿ ಕಂಡು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದಾರೆ. ಧಾರವಾಡ ಲೋಕಸಭಾ ಕ್ಷೇತ್ರವನ್ನು ಸಮಗ್ರ ಅಭಿವೃದ್ಧಿಪಡಿಸಿ ಮನ ಗೆದ್ದಿದ್ದಾರೆ ಎಂದು ಪ್ರಸನ್ನಾನಂದಪುರಿ ಸ್ವಾಮೀಜಿ ಹೇಳಿದರು.

ಇದನ್ನೂ ಓದಿ: Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

ಗುರು-ಹಿರಿಯರ ಆಶೀರ್ವಾದವೇ ಶ್ರೀರಕ್ಷೆ

ಈ ವೇಳೆ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಅವರು ರಾಜನಹಳ್ಳಿ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಆಶೀರ್ವಾದ ಪಡೆದರು.

ವಾಲ್ಮೀಕಿ ಸಮುದಾಯದ ಪ್ರಗತಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿಗೊಳಿಸಿ, ಶ್ರಮಿಸಿದೆ. ಮುಂದೆಯೂ ಸಮಾಜದ ಪರ ಇರಲಿದೆ ಎಂದು ಪ್ರಲ್ಹಾದ್‌ ಜೋಶಿ‌ ಹೇಳಿದರು.

ಈ ಸಂದರ್ಭದಲ್ಲಿ ಬಿಜೆಪಿ ಎಸ್.ಟಿ. ಮೋರ್ಚಾದ ರಾಜ್ಯ ಅಧ್ಯಕ್ಷ ಬಂಗಾರು ಹನುಮಂತು, ಮಣಿಕಂಠ ಶಾಗೋಟಿ, ಪುಂಡಲಿಕ ತಳವಾರ, ಮೋಹನ್ ಗುಡಿಸಲ್ಮನಿ, ಮಾರುತಿ ಚಾಕಲಬ್ಬಿ, ಲಕ್ಷ್ಮಣ್ ಮ್ಯಾಗಿನ್ಮನಿ, ಅಶೋಕ ಸೋಲಾರ್ಕೊಪ್ಪ, ಸಂತೋಷ ಟಿ, ದೇವೇಂದ್ರ, ಮಂಜು ಹುಡ್ಡೇದ ಹಾಗೂ ಬಿಜೆಪಿ ಪ್ರಮುಖರು ಮತ್ತು ವಾಲ್ಮೀಕಿ ಸಮಾಜದ ಮುಖಂಡರು ಉಪಸ್ಥಿತರಿದ್ದರು

Continue Reading

ಬೆಂಗಳೂರು

Water Crisis: ಇನ್ನು 3 ದಿನದಲ್ಲಿ ನಿಮ್ಮ ಮನೆಯ ನಲ್ಲಿಗಳಿಗೆ ಈ ಸಾಧನ ಹಾಕದಿದ್ದರೆ 5000 ರೂ. ದಂಡ!

Water Crisis: ಬೆಂಗಳೂರಿನಲ್ಲಿ ನೀರಿನ ತೀವ್ರ ಸಮಸ್ಯೆ ಎದುರಾಗಿದೆ. ಹೀಗಾಗಿ ನಲ್ಲಿಗಳಿಗೆ Flow Restrictor/Aerator ಸಾಧನಗಳ ಅಳವಡಿಕೆಗೆ ಮಾರ್ಚ್ 31ರಂದು ಡೆಡ್‌ಲೈನ್‌ ನೀಡಲಾಗಿದೆ.

VISTARANEWS.COM


on

By

Water Crisis in Bengaluru
Koo

ಬೆಂಗಳೂರು: ರಾಜಧಾನಿ ಬೆಂಗಳೂರಿನ ಹಲವೆಡೆ ನೀರಿಲ್ಲದೇ (Water Crisis) ಜನರು ಪರದಾಡುವಂತಾಗಿದೆ. ಭೂಮಿ ಬತ್ತಿ ಹೋಗಿದ್ದು, ಬೋರ್‌ವೆಲ್‌ಗಳೆಲ್ಲವೂ ಬಂದ್‌ ಆಗಿದೆ. ಹನಿ ನೀರಿಗೂ ಜನರು ಸಂಕಷ್ಟವನ್ನು ಎದುರಿಸಬೇಕಾಗಿದೆ. ದಿನನಿತ್ಯದ ಬಳಕೆಯಿಂದ ಹಿಡಿದು ಕುಡಿಯುವ ನೀರಿಗೂ ಬಡಿದಾಡಿಕೊಳ್ಳುವಂತಾಗಿದೆ. ಬೆಂಗಳೂರು ನಗರದಲ್ಲಿ ಮಳೆಯ ಅಭಾವದಿಂದಾಗಿ ಅಂತರ್ಜಲ ಮಟ್ಟವು ತೀವ್ರವಾಗಿ ಕುಸಿದಿದೆ. ಇದರಿಂದಾಗಿ ಸಾಕಷ್ಟು ಕೊಳವೆ ಬಾವಿಗಳು (ಬೋರ್‌ವೆಲ್‌ಗಳು) ಬತ್ತಿ ಹೋಗಿವೆ. ಈ ಹಿನ್ನೆಲೆಯಲ್ಲಿ ನಲ್ಲಿಗಳಲ್ಲಿ ಕಡ್ಡಾಯವಾಗಿ Flow Restrictor/Aerator ಎಂಬ ಸಾಧನವನ್ನು ಅಳಡಿಸಿಕೊಳ್ಳಬೇಕೆಂದು ಜಲಮಂಡಳಿ (BWSSB) ಆದೇಶಿಸಿದೆ.

ನಗರದ ಮಾಲ್‌ಗಳಿಂದ ಹಿಡಿದು ವಾಣಿಜ್ಯ ಸಂಕೀರ್ಣಗಳು, ಅಪಾರ್ಟ್‌ಮೆಂಟ್‌ಗಳು, ಸರ್ಕಾರಿ ಕಟ್ಟಡಗಳು, ಐಷಾರಾಮಿ ಹೋಟೆಲ್‌ಗಳು ಸೇರಿ ರೆಸ್ಟೋರೆಂಟ್‌ಗಳು ಹಾಗೂ ಧಾರ್ಮಿಕ ಸ್ಥಳಗಳನ್ನೊಳಗೊಂಡ ಸಾರ್ವಜನಿಕ ಪ್ರದೇಶಗಳಲ್ಲಿ ಸ್ವಚ್ಛತೆಗಾಗಿ ಬಳಸುವ ನಲ್ಲಿಗಳಲ್ಲಿ ಕಡ್ಡಾಯವಾಗಿ Flow Restrictor/Aerator ಎಂಬ ಸಾಧನವನ್ನು ಅಳವಡಿಸಿರಬೇಕು. ಇದೇ ತಿಂಗಳ ಮಾ.31ರೊಳಗಾಗಿ ಅಳವಡಿಸಿಕೊಂಡು ನಂತರ ನೀರನ್ನು ಬಳಕೆ ಮಾಡಿಕೊಳ್ಳಿ ಎಂದು ಜಲಮಂಡಳಿ ಕಳೆದ 21ರಂದು ಆದೇಶಿಸಿತ್ತು. ಇನ್ನೂ ಈ ಕ್ರಮವನ್ನು ಸರಿಯಾಗಿ ನಿರ್ವಹಿಸುವವರಿಗೆ ಬೆಂಗಳೂರು ಜಲಮಂಡಳಿ ವತಿಯಿಂದ “ಪರಿಸರ ಸ್ನೇಹಿ ಹಸಿರು ಸ್ಟಾರ್ ಬಳಕೆದಾರ” ಎಂಬ ಪ್ರಮಾಣ ಪತ್ರ ನೀಡಲಾಗುತ್ತಿದೆ.

ಇದನ್ನೂ ಓದಿ: Murder Case : ಕುಡಿಯುವ ನೀರಿಗಾಗಿ ಚಿಮ್ಮಿತು ರಕ್ತ; ಚಾಕು ಇರಿದು ಯುವಕನ ಕೊಲೆ

ಪ್ರತಿದಿನವೂ ಬೀಳುತ್ತೆ ದಂಡ

ಒಂದು ವೇಳೆ ಮಾ. 31ರ ಒಳಗೆ ಈ ಸಾಧನವನ್ನು ಅಳವಡಿಕೆ ಮಾಡಿಕೊಳ್ಳದೇ ಹೋದರೆ ಭಾರಿ ದಂಡವನ್ನು ತೆತ್ತಾಬೇಕಾಗುತ್ತದೆ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಕಾಯ್ದೆ-1964 ಕಲಂ 53 ರಂತೆ ಕ್ರಮವಹಿಸಲಾಗುತ್ತದೆ. ಆ ಪ್ರಕಾರ ನೀರಿನ ಪ್ರಮಾಣದಲ್ಲಿ ಶೇಕಡ 50%ರ ವರೆಗೆ ಕಡಿತ ಮಾಡಿ, ರೂ. 5000/- ಗಳ ದಂಡ ಹಾಕಲಾಗುತ್ತದೆ. ಒಂದು ವೇಳೆ ಉಲ್ಲಂಘನೆಯು ಮರುಕಳಿಸಿದರೆ ದಂಡದ ಮೊತ್ತ 5000 ರೂ. ಜತೆಗೆ, ಹೆಚ್ಚುವರಿಯಾಗಿ 500 ರೂ. ಅನ್ನು ಪ್ರತಿದಿನದಂತೆ ದಂಡವಾಗಿ ವಸೂಲಿ ಮಾಡಲಾಗುತ್ತದೆ ಎಂದು ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ಎಚ್ಚರಿಕೆ ನೀಡಿದೆ. ಮಾತ್ರವಲ್ಲ ಜಲಮಂಡಳಿ ವತಿಯಿಂದಲೆ Flow Restrictor/Aerator ಅಳವಡಿಸಿ ಆ ಮೊತ್ತವನ್ನು ಆಯಾ ಗ್ರಾಹಕರಿಂದಲೇ ವಸೂಲಿಯನ್ನೂ ಮಾಡಲಾಗುತ್ತದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

Lok Sabha Election 2024

Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

Lok Sabha Election 2024: ಕೋಲಾರದಲ್ಲಿ ಯಾರೂ ರಾಜೀನಾಮೆ ನೀಡಲ್ಲ. ಟಿಕೆಟ್ ವಿಚಾರವಾಗಿ ಒತ್ತಡ ಇದೆ. ಪಕ್ಷ ಇದುವರೆಗೂ ಯಾರಿಗೂ ಟಿಕೆಟ್ ಘೋಷಣೆ ಮಾಡಿಲ್ಲ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ಸಮ್ಮುಖದಲ್ಲಿ ಚರ್ಚೆ ಮಾಡಲಾಗುವುದು ಎಂದು ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

VISTARANEWS.COM


on

Lok Sabha Election 2024 personal prestige will not be allowed DK Shivakumar warns Kolar leaders
Koo

ಬೆಂಗಳೂರು: ಈ ಲೋಕಸಭಾ ಚುನಾವಣೆ (Lok Sabha Election 2024:) ಸಂಬಂಧ ಕೋಲಾರದಲ್ಲಿ ಎಲ್ಲ ನಾಯಕರು ಒಟ್ಟಾಗಿ ಕಾಂಗ್ರೆಸ್ ಅಭ್ಯರ್ಥಿ (Congress Candidate) ಗೆಲುವಿಗೆ ಕೆಲಸ ಮಾಡಲಿದ್ದಾರೆ. ಯಾರ ವೈಯಕ್ತಿಕ ಪ್ರತಿಷ್ಠೆಗೂ ಪಕ್ಷದಲ್ಲಿ ಅವಕಾಶ ನೀಡುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಖಡಕ್‌ ವಾರ್ನಿಂಗ್‌ ನೀಡಿದ್ದಾರೆ.

ಸದಾಶಿವನಗರ ನಿವಾಸದ ಬಳಿ ಮಾಧ್ಯಮದವರೊಂಧಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್‌, ಕೋಲಾರದಲ್ಲಿ ಯಾರೂ ರಾಜೀನಾಮೆ ನೀಡಲ್ಲ. ಟಿಕೆಟ್ ವಿಚಾರವಾಗಿ ಒತ್ತಡ ಇದೆ. ಪಕ್ಷ ಇದುವರೆಗೂ ಯಾರಿಗೂ ಟಿಕೆಟ್ ಘೋಷಣೆ ಮಾಡಿಲ್ಲ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ಸಮ್ಮುಖದಲ್ಲಿ ಚರ್ಚೆ ಮಾಡಿ ಅಂತಿಮಗೊಳಿಸಲಾಗುತ್ತದೆ ಎಂದು ತಿಳಿಸಿದರು.

ಕೋವಿಡ್ ಸಮಯದಲ್ಲಿ ಸುರೇಶ್ ಸೇವೆ ಒಂದು ಇತಿಹಾಸ

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ತಯಾರಿ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್‌, ನಾವು ಕೇವಲ ಇಂದು ಚುನಾವಣೆ ತಯಾರಿ ಮಾಡುತ್ತಿಲ್ಲ. ಸುರೇಶ್ ಅವರು ಗೆದ್ದ ಮೊದಲ ದಿನದಿಂದ ಪ್ರತಿ ನಿತ್ಯ ಕೆಲಸ ಮಾಡಿಕೊಂಡೇ ಬಂದಿದ್ದಾರೆ. ಕೋವಿಡ್ ಸಮಯದಲ್ಲಿ ಕೇಂದ್ರ ಸಚಿವ ಸುರೇಶ್ ಅಂಗಡಿ ಅವರ ದೇಹವನ್ನು ಅವರ ತವರೂರಿಗೆ ತರಲು ಬಿಜೆಪಿ ಕೇಂದ್ರ ಸರ್ಕಾರ ಅವಕಾಶ ನೀಡಲಿಲ್ಲ. ಆದರೆ, ಡಿ.ಕೆ. ಸುರೇಶ್ ಅವರು ಕೋವಿಡ್ ಕಷ್ಟಕಾಲದಲ್ಲಿ ರೈತರಿಂದ ಹಣ್ಣು ತರಕಾರಿ ಖರೀದಿ ಮಾಡಿ ಜನರಿಗೆ ಉಚಿತವಾಗಿ ಹಂಚಿದರು. ಜನರಿಗೆ ಮೆಡಿಕಲ್ ಕಿಟ್ ನೀಡಿ ಸಹಾಯ ಮಾಡಿದರು. ಸರ್ಕಾರ ಶವಗಳನ್ನು ಜೆಸಿಬಿಯಲ್ಲಿ ಎಸೆಯುತ್ತಿರುವಾಗ, ಕೋವಿಡ್‌ನಿಂದ ಮೃತಪಟ್ಟವರ ಅಂತ್ಯಸಂಸ್ಕಾರಕ್ಕೆ ಅವರ ಮನೆಯವರು ಮುಂದೆ ಬಾರದಿದ್ದಾಗ ಡಿ.ಕೆ ಸುರೇಶ್ ಪಿಪಿಇ ಕಿಟ್ ಧರಿಸಿ ಶವಗಳ ಅಂತ್ಯ ಸಂಸ್ಕಾರ ಮಾಡಿದರು.

ಎಲ್ಲ ನಾಯಕರು ಮನೆಯಿಂದ ಆಚೆ ಬರಲು ಹಿಂಜರಿದಾಗ, ಸುರೇಶ್ ಕೋವಿಡ್ ಆಸ್ಪತ್ರೆಗಳಿಗೆ ಹೋಗಿ, ಸೋಂಕಿತರ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದರು. ಇದೆಲ್ಲವೂ ಇತಿಹಾಸ. ಅಂತಹ ಕಷ್ಟ ಕಾಲದಲ್ಲಿ ತಮ್ಮ ಪ್ರಾಣವನ್ನು ಲೆಕ್ಕಿಸದೆ ಕ್ಷೇತ್ರದ ಜನರಿಗಾಗಿ ಶ್ರಮಿಸಿದ್ದಾರೆ. ಇದ್ಯಾವುದೂ ಚುನಾವಣೆ ಸಮಯದಲ್ಲಿ ಮಾಡಿದ ಕೆಲಸವಲ್ಲ. ಸುರೇಶ್ ಅವರು ಪ್ರತಿ ಹಳ್ಳಿ, ಹಳ್ಳಿ ಸುತ್ತಾಡಿ ಪಂಚಾಯ್ತಿ ಸದಸ್ಯನಂತೆ ಕೆಲಸ ಮಾಡಿದ್ದಾರೆ. ಹೀಗಾಗಿ ನಾವು ಈ ಬಾರಿಯ ಚುನಾವಣೆಯಲ್ಲಿ ನಾವು ವಿಶೇಷವಾದ ತಯಾರಿ ಮಾಡುವ ಅಗತ್ಯವಿಲ್ಲ. ನಮ್ಮ ಪರವಾಗಿ ಜನರು, ಕಾರ್ಯಕರ್ತರು ಇದ್ದಾರೆ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

ದೇವೇಗೌಡರ ಕುಟುಂಬದ ವಿರುದ್ಧ ಹೋರಾಟ ನಮಗೆ ಹೊಸತಲ್ಲ

ಬಿಜೆಪಿ ಹಾಗೂ ಜೆಡಿಎಸ್ ಸೇರಿ‌ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಕುಟುಂಬದವರಾದ ಡಾ. ಸಿ.ಎನ್.‌ ಮಂಜುನಾಥ್ ಅವರನ್ನು ಕಣಕ್ಕೆ ಇಳಿಸಲಾಗಿರುವ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿ.ಕೆ. ಶಿವಕುಮಾರ್‌, ನಾವು ದೇವೇಗೌಡರ ಕುಟುಂಬದ ವಿರುದ್ಧ ಅನೇಕ ಚುನಾವಣೆಗಳನ್ನು ಮಾಡಿದ್ದೇವೆ. ದೇವೇಗೌಡರ ವಿರುದ್ಧ ಓರ್ವ ಮಹಿಳೆಯನ್ನು ನಿಲ್ಲಿಸಿ ಗೆಲ್ಲಿಸಿದ್ದೇವೆ. ನಾನು ಕುಮಾರಸ್ವಾಮಿ ಅವರ ವಿರುದ್ಧ ಸ್ಪರ್ಧಿಸಿ ಗೆದ್ದಿದ್ದೇನೆ. 2013ರ ಉಪಚುನಾವಣೆಯಲ್ಲಿ ಇದೇ ರೀತಿ ಜೆಡಿಎಸ್ ಹಾಗೂ ಬಿಜೆಪಿ ಸೇರಿ ಅನಿತಾ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸಿದಾಗ ಸುರೇಶ್ ಅವರು ಗೆದ್ದಿದ್ದರು. ಆಗ ಸಿದ್ದರಾಮಯ್ಯ ಅವರ ಸರ್ಕಾರ ಇದ್ದರೂ ನಾನು ಸಚಿವನಾಗಿರಲಿಲ್ಲ. ಆಗ ನನಗೆ ದೊಡ್ಡ ಸವಾಲಾಗಿತ್ತು. ಆಗಲೂ ನಾವು ಸಹೋದರಿ ಅನಿತಾ ಕುಮಾರಸ್ವಾಮಿ ಅವರನ್ನು 1.30 ಲಕ್ಷ ಮತಗಳಿಂದ ಮಣಿಸಿದೆವು. ನಂತರ ಜನ ಸುರೇಶ್ ಅವರನ್ನು ಸತತವಾಗಿ ಗೆಲ್ಲಿಸಿಕೊಂಡು ಬಂದಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: Lok Sabha Election 2024: ಇಂದು ಡಿಕೆ ಸುರೇಶ್‌ ನಾಮಪತ್ರ ಸಲ್ಲಿಕೆ; ಅಣ್ಣ – ಅತ್ತಿಗೆ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಸಂಸದ

ಬಿಜೆಪಿ ದುರ್ಬಲವಾಗಿರುವುದಕ್ಕೆ ಹಾಲಿ ಸಂಸದರಿಗೆ ಟಿಕೆಟ್ ನೀಡಿಲ್ಲ

ಚಿತ್ರದುರ್ಗದಲ್ಲಿ ಬಿಜೆಪಿಯಿಂದ ಮಾಜಿ ಸಚಿವ ಗೋವಿಂದ ಕಾರಜೋಳ ಅವರ ಸ್ಪರ್ಧೆ ಬಗ್ಗೆ ಮಾಧ್ಯಮದವರು ಪ್ರಶ್ನೆ ಮಾಡಿದಾಗ, ಅವರ ಪಕ್ಷದಿಂದ ಯಾರನ್ನಾದರೂ ನಿಲ್ಲಿಸಲಿ. ನಾವು ಚಂದ್ರಪ್ಪ ಅವರನ್ನು ಕಣಕ್ಕಿಳಿಸಿದ್ದೇವೆ. ಹಾಲಿ ಸಚಿವರಿಗೆ, ಹಾಲಿ ಸಂಸದರಿಗೆ ಬಿಜೆಪಿ ಟಿಕೆಟ್ ನೀಡಿಲ್ಲ. ಆ ಮೂಲಕ ಅವರ ಪಕ್ಷ ದುರ್ಬಲವಾಗಿದೆ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಡಿ.ಕೆ. ಶಿವಕುಮಾರ್‌ ತಿಳಿಸಿದರು.

ರಾಹುಲ್‌, ಸೋನಿಯಾ, ಪ್ರಿಯಾಂಕಾ ಬರ್ತಾರೆ ಪ್ರಚಾರಕ್ಕೆ

ಚುನಾವಣೆಯ ಸ್ಟಾರ್ ಪ್ರಚಾರಕರಾಗಿ ಯಾರು ಆಗಮಿಸಲಿದ್ದಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್‌, “ಎಐಸಿಸಿ ಅಧ್ಯಕ್ಷರು ನಮ್ಮವರೇ. ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರಿಗೆ ಆಗಮಿಸುವಂತೆ ಮನವಿ ಮಾಡಿದ್ದೇವೆ. ಅವರು ಇಡೀ ದೇಶದಲ್ಲಿ ಪ್ರಚಾರ ಮಾಡಬೇಕಿದ್ದು, ಅವರಿಂದ ರಾಜ್ಯದಲ್ಲಿ ಹೆಚ್ಚು ದಿನಗಳ ಪ್ರಚಾರ ನಿರೀಕ್ಷೆ ಮಾಡಲು ಆಗುವುದಿಲ್ಲ ಎಂದು ತಿಳಿಸಿದರು.

Continue Reading
Advertisement
kalaburagi News Drone flying at kalaburagi Central University
ಕಲಬುರಗಿ6 mins ago

Kalaburagi News : ರಾತ್ರಿ ಹೊತ್ತಲ್ಲಿ ಕಲಬುರಗಿ ಕೇಂದ್ರಿಯ ವಿವಿಯಲ್ಲಿ ಶಂಕಾಸ್ಪದ ಡ್ರೋನ್‌ ಹಾರಾಟ!

Lok Sabha Election 2024 Valmiki Samaj to support Pralhad Joshi says Prasannanandapuri Swamiji
Lok Sabha Election 202416 mins ago

Lok Sabha Election 2024: ಪ್ರಲ್ಹಾದ್‌ ಜೋಶಿಗೆ ವಾಲ್ಮೀಕಿ ಸಮಾಜದ ಬೆಂಬಲ: ಪ್ರಸನ್ನಾನಂದಪುರಿ ಸ್ವಾಮೀಜಿ

Holi Girls
ದೇಶ31 mins ago

ಹೋಳಿ ಹೆಸರಲ್ಲಿ ಸ್ಕೂಟಿ ಮೇಲೆಯೇ ಕಾಮದೋಕುಳಿ; ಯುವತಿಯರಿಗೆ 80 ಸಾವಿರ ರೂ. ದಂಡ!

Kangana Ranaut
ಬಾಲಿವುಡ್40 mins ago

Kangana Ranaut : ನಾನು, ಶಾರುಖ್‌ ಈ ಯುಗದ ಕೊನೆಯ ಸೂಪರ್‌ಸ್ಟಾರ್‌ಗಳು ಎಂದ ಕಂಗನಾ!

Water Crisis in Bengaluru
ಬೆಂಗಳೂರು47 mins ago

Water Crisis: ಇನ್ನು 3 ದಿನದಲ್ಲಿ ನಿಮ್ಮ ಮನೆಯ ನಲ್ಲಿಗಳಿಗೆ ಈ ಸಾಧನ ಹಾಕದಿದ್ದರೆ 5000 ರೂ. ದಂಡ!

Lok Sabha Election 2024 personal prestige will not be allowed DK Shivakumar warns Kolar leaders
Lok Sabha Election 202460 mins ago

Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

Rahul Gandhi And Mallikarjun Kharge
ದೇಶ1 hour ago

Congress: ಚುನಾವಣೆ ಹೊಸ್ತಿಲಲ್ಲೇ ಕಾಂಗ್ರೆಸ್‌ಗೆ ಶಾಕ್;‌ ಐಟಿ ತನಿಖೆಗೆ ತಡೆ ನೀಡಲು ಕೋರ್ಟ್‌ ನಕಾರ

gold rate today trisha
ಚಿನ್ನದ ದರ1 hour ago

Gold Rate Today: ಬಂಗಾರದ ಧಾರಣೆಯಲ್ಲಿ ಮತ್ತೆ ಏರಿಕೆ ಆರಂಭ; ಇಂದು ಬೆಲೆ ಎಷ್ಟಾಗಿದೆ ಗಮನಿಸಿ

Lok Sabha Election 2024 DK Suresh files nomination today MP and perform pooja at temple
Lok Sabha Election 20241 hour ago

Lok Sabha Election 2024: ಇಂದು ಡಿಕೆ ಸುರೇಶ್‌ ನಾಮಪತ್ರ ಸಲ್ಲಿಕೆ; ಅಣ್ಣ – ಅತ್ತಿಗೆ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಸಂಸದ

Murder Case Rowdy sheeter Dinesh
ಬೆಂಗಳೂರು2 hours ago

Murder Case : ಎದುರಾಳಿಯ ಮುಗಿಸಲು ತಾನೇ ರೆಡಿ ಮಾಡಿದ್ದ ಹುಡುಗರಿಂದಲೇ ಕೊಲೆಯಾದ ರೌಡಿಶೀಟರ್‌

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election 2024 personal prestige will not be allowed DK Shivakumar warns Kolar leaders
Lok Sabha Election 202460 mins ago

Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

dina bhavishya read your daily horoscope predictions for March 28 2024
ಭವಿಷ್ಯ8 hours ago

Dina Bhavishya : ಇಂದು ಈ ರಾಶಿಯವರಿಗೆ ಒತ್ತಡ ಹೆಚ್ಚು; ಜಾಗ್ರತೆ ವಹಿಸುವುದು ಉತ್ತಮ!

R Ashok Pressmeet and attack on CM Siddaramaiah Congress Government
Lok Sabha Election 202423 hours ago

Lok Sabha Election 2024: ಬೈ ಬೈ ಬೆಂಗಳೂರು ಎನ್ನುತ್ತಿರುವ ಜನ; ಸರ್ಕಾರದ ವಿರುದ್ಧ ಹರಿಹಾಯ್ದ ಆರ್.‌ ಅಶೋಕ್

Tejaswini Gowda resigns from BJP Council Impact on BJP
Lok Sabha Election 202424 hours ago

Tejaswini Gowda: ಬಿಜೆಪಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ತೇಜಸ್ವಿನಿ ಗೌಡ! ಬಿಜೆಪಿಗೆ ಎಫೆಕ್ಟ್?

Lok Sabha Election 2024 Gokarna priest shalls to make DK Shivakumar CM Whats wrong says Shivakumar
Lok Sabha Election 20241 day ago

Lok Sabha Election 2024: ಡಿಕೆಶಿ ಸಿಎಂ ಆಗಲಿ ಎಂದು ಗೋಕರ್ಣ ಅರ್ಚಕರಿಂದ ಸಂಕಲ್ಪ; ತಪ್ಪೇನು ಎಂದ ಶಿವಕುಮಾರ್

Dina Bhavishya
ಭವಿಷ್ಯ1 day ago

Dina Bhavishya : ಉತ್ಸಾಹದಲ್ಲಿ ಆಶ್ವಾಸನೆ ಕೊಟ್ಟು ಅಪಾಯದ ಸುಳಿಗೆ ಸಿಲುಕಬೇಡಿ

BBMP marshals harass street vendors in Jayanagar
ಬೆಂಗಳೂರು2 days ago

BBMP Marshals : ಜಯನಗರದ ಬೀದಿಯಲ್ಲಿ ಬ್ಯಾಗ್‌ ಮಾರುತ್ತಿದ್ದ ವೃದ್ಧನ ಮೇಲೆ ದರ್ಪ ಮೆರೆದ ಮಾರ್ಷಲ್ಸ್‌

Dina Bhavishya
ಭವಿಷ್ಯ2 days ago

Dina Bhavishya : ಆಪ್ತರ ವರ್ತನೆಯು ಈ ರಾಶಿಯವರ ಮನಸ್ಸಿಗೆ ನೋವು ತರಲಿದೆ

Lok Sabha Election 2024 Sanganna Karadi rebels quell and assure to support koppala BJP Candidate
Lok Sabha Election 20243 days ago

Lok Sabha Election 2024: ರಾಜ್ಯಸಭೆ ಇಲ್ಲವೇ ಪರಿಷತ್‌ ಸ್ಥಾನದ ಭರವಸೆ; ತಣ್ಣಗಾದ ಕರಡಿ! ಅಭ್ಯರ್ಥಿ ಪರ ಪ್ರಚಾರಕ್ಕೆ ಜೈ

Does congress karnataka have the power to slap youth for PM Narendra Modi slogan Pralhad Joshi question
ಕರ್ನಾಟಕ3 days ago

PM Narendra Modi: ಮೋದಿ ಯುವ ಪಡೆಯ ಕಪಾಳಕ್ಕೆ ಹೊಡೆಯುವ ಶಕ್ತಿ ‘ಕೈ’ಗಿದೆಯೇ? ಪ್ರಲ್ಹಾದ್‌ ಜೋಶಿ ಪ್ರಶ್ನೆ

ಟ್ರೆಂಡಿಂಗ್‌