ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (DK Shivakumar) ಅವರಿಗೆ ಆದಾಯ ತೆರಿಗೆ ಇಲಾಖೆಯಿಂದ ಪದೇಪದೆ ನೋಟಿಸ್ ನೀಡುತ್ತಿರುವುದನ್ನು ಆಕ್ಷೇಪಿಸಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ನಾಯಕರೀಗ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಐಟಿ ಕಚೇರಿ ಮುಂದೆ ಕಾಂಗ್ರೆಸ್ ನಾಯಕರು ಪ್ರತಿಭಟನೆ ಮಾಡಿದ್ದಕ್ಕೆ ಪ್ರತಿಯಾಗಿ ಈಗ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಸಮನ್ಸ್ ಜಾರಿಯಾಗಿದೆ. ಕಾಂಗ್ರೆಸ್‌ನ ಹಿರಿಯ ನಾಯಕರೂ ಸೇರಿದಂತೆ ೧೩ ಮಂದಿಗೆ ನೋಟಿಸ್ ಜಾರಿಯಾಗಿದ್ದು, ಅವರೆಲ್ಲರೂ ಜನವರಿ ೧೦ರಂದು (ಮಂಗಳವಾರ) ವಿಚಾರಣೆಗೆ ಹಾಜರಾಗಬೇಕಾಗಿದೆ.
ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಡಾ. ಜಿ ಪರಮೇಶ್ವರ್, ರಿಜ್ವಾನ್ ಆರ್ಷಾದ್, ಟಿ.ಬಿ ಜಯಚಂದ್ರ, ವೀರಪ್ಪ ಮೊಯ್ಲಿ, ಕೆ.ಜೆ ಜಾರ್ಜ್, ಯು.ಟಿ ಖಾದರ್, ಎಂ ನಾರಾಯಣ ಸ್ವಾಮಿ, ಪರಮೇಶ್ವರ್ ನಾಯ್ಕ್, ಸಲೀಂ ಅಹಮದ್, ಸೌಮ್ಯ ರೆಡ್ಡಿ, ಮಹಮದ್ ಹ್ಯಾರಿಸ್ ನಲಪಾಡ್‌ಗೆ ಸಮನ್ಸ್ ನೀಡಲಾಗಿದೆ.
ಐಟಿ ಅಧಿಕಾರಿಗಳು ಕೇಂದ್ರ ಸರಕಾರದ ಕೈಗೊಂಬೆಗಳಂತೆ ವರ್ತಿಸುತ್ತಾ ಡಿಕೆಶಿ ಅವರಿಗೆ ಪದೇಪದೆ ನೋಟೀಸ್ ಕೊಟ್ಟು ಕಿರುಕುಳ ಕೊಡ್ತಿದ್ದಾರೆ ಎಂದು ಆರೋಪ ಮಾಡಿ ಕಾಂಗ್ರೆಸ್ ನಾಯಕರು ಹಲವು ಬಾರಿ ಪ್ರತಿಭಟನೆ ಮಾಡಿದ್ದರು. ಈ ಪ್ರತಿಭಟನೆಯ ಬಗ್ಗೆ ಯಾವುದೇ ತಗಾದೆ ಎತ್ತಲಾಗಿಲ್ಲ. ಬದಲಾಗಿ, ಕೊರೊನಾ ಮಾರ್ಗಸೂಚಿ ಉಲ್ಲಂಘನೆ ಮಾಡಿ ಪ್ರತಿಭಟನೆ ಮಾಡಿದ್ದಾರೆಂದು ಎಫ್ಐಆರ್ ದಾಖಲಿಸಿದ್ದರು ಪೊಲೀಸರು!
ಇದನ್ನು ಓದಿ | Santro Ravi case | 1995ರಲ್ಲೇ ಕಾಲೇಜು ವಿದ್ಯಾರ್ಥಿನಿಯನ್ನು ಅಪಹರಿಸಿ ಅತ್ಯಾಚಾರ ಮಾಡಿದ್ದ ಸ್ಯಾಂಟ್ರೋ ರವಿ!