ಬೆಂಗಳೂರು: ಸರ್ವ ಜನಾಂಗದ ಶಾಂತಿಯ ತೋಟ ಎಂಬ ಘೋಷವಾಕ್ಯದಡಿ ಕಾಂಗ್ರೆಸ್ 2023ನೇ ಸಾಲಿನ ವಿಧಾನಸಭಾ ಚುನಾವಣೆಯ ಪ್ರಣಾಳಿಕೆಯನ್ನು (Congress Manifesto) ಪ್ರಕಟಿಸಿದೆ. ಇದರಲ್ಲಿ ಈಗಾಗಲೇ ಘೋಷಿತವಾಗಿರುವ ಆರು ಉಚಿತ ಯೋಜನೆಗಳ ಜತೆಗೆ ಇನ್ನೂ ಹಲವು ಹೊಸ ಸಂಗತಿಗಳನ್ನು ಪ್ರಕಟಿಸಲಾಗಿದೆ. ರಾಜ್ಯ ಕಾಂಗ್ರೆಸ್ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಅವರ ನೇತೃತ್ವದಲ್ಲಿ ತಯಾರಿಸಲಾದ ಈ ದಾಖಲೆಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬಿಡುಗಡೆಗೊಳಿಸಿದರು.
ಕಾಂಗ್ರೆಸ್ ಈ ಹಿಂದೆ ಮನೆಗೆ 200 ಯುನಿಟ್ ಉಚಿತ ವಿದ್ಯುತ್ ನೀಡುವ ಗೃಹ ಜ್ಯೋತಿ, ಡಿಪ್ಲೊಮಾ ಆದವರಿಗೆ 1500 ರೂ, ಪದವೀಧರರಿಗೆ 3000 ರೂ. ನಿರುದ್ಯೋಗ ಭತ್ತೆ ನೀಡುವ ಯುವನಿಧಿ, ಪ್ರತಿ ಕುಟುಂಬಕ್ಕೆ ಐದು ಕೆಜಿ ಅಕ್ಕಿ ನೀಡುವ ಅನ್ನಭಾಗ್ಯ, ಪ್ರತಿ ಮನೆಯ ಯಜಮಾನಿಗೆ 2000 ರೂ. ನೀಡುವ ಗೃಹಲಕ್ಷ್ಮಿ, ಎಲ್ಲ ಮಹಿಳೆಯರಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣದ ಅವಕಾಶ ನೀಡುವ ಶಕ್ತಿ ಕಾರ್ಯಕ್ರಮವನ್ನು ಘೋಷಿಸಿತ್ತು
ಇದೀಗ ಪೌರ ಕಾರ್ಮಿಕರ ಕಾಯಂ ಭರವಸೆ, ಅಂಗನವಾಡಿ ಕಾರ್ಯಕರ್ತೆಯರ ಪ್ರೋತ್ಸಾಹ ಧನ ಹೆಚ್ಚಳದ ಎರಡು ಹೊಸ ಭರವಸೆಯನ್ನು ನೀಡಲಾಗಿದೆ.
ಎಲ್ಲ ಸರ್ಕಾರಿ ಹುದ್ದೆಗಳು ಭರ್ತಿ, ಉದ್ಯೋಗಿಗಳಿಗೆ ಹಳೆ ಪಿಂಚಣಿ ಪದ್ಧತಿ ಜಾರಿ
-ಸರ್ಕಾರದಲ್ಕಿ ಖಾಲಿ ಇರುವ ಎಲ್ಲ ಅನುಮೋದಿತ ಹುದ್ದೆಗಳನ್ನು ಒಂದು ವರ್ಷದಲ್ಲಿ ಭರ್ತಿ
-2006ರಿಂದ ನೇಮಕವಾದ, ಪಿಂಚಣಿಗೆ ಅರ್ಹತೆಯುಳ್ಳ ಎಲ್ಲಾ ಸರಕಾರಿ ಮತ್ತು ಅನುದಾನಿತ ಉದ್ಯೋಗಿಗಳನ್ನು ಹಳೆಯ ಪಿಂಚಣಿ ಯೋಜನೆಯ ಅಡಿಯಲ್ಲಿ ತರಲು ಸಹಾನುಭೂತಿಯ ನಿರ್ಧಾರ.
-ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳಲ್ಲಿ ಕಳೆದ 15-20 ವರ್ಷಗಳಿಂದ ಗುತ್ತಿಗೆ ಆಧಾರದಲ್ಲ ಸಲಹ ಮಾಡುತ್ತಿರುವ ನೌಕರರನ್ನು ರಾಜಸ್ಥಾನ ಮತ್ತು ಹಿಮಾಚಲ ಪ್ರದೇಶಗಳ ಕಾಂಗ್ರೆಸ್ ಸರಕಾರಗಳ ಆದೇಶಗಳ ಮಾದರಿಯಲ್ಲಿ ಕಾಯಂಗೊಳಿಸುವ ಪ್ರಕ್ರಿಯೆ ಜಾರಿ
–ಅಂಗನವಾಡಿ ಕಾರ್ಯಕರ್ತೆಯರ ವೇತನ ರೂ 1,500/- ರಿಂದ ರೂ. 15,000/- ಹೆಚ್ಚಳ ಮಿನಿ ಅಂಗನವಾಡಿ ಕಾರ್ಯಕರ್ತೆಯರ ವೇತನ ರೂ 7,500/- ರಿಂದ ರೂ. 10,000/- ಹೆಚ್ಚಳ ಮತ್ತು ವಿಶ್ರಾಂತಿ ವೇತನ ರೂ. 2 ಲಕ್ಷ
-ಆಶಾ ಕಾರ್ಯಕರ್ತೆಯರಿಗೆ ಮಾಸಿಕ ನಿಶ್ಚಿತ ಗೌರವಧನ ರೂ 5,000/- ದಿಂದ ರೂ 8,000/- ಹೆಚ್ಚಳ ಸರಕಾರಿ ಸ್ವಾಮ್ಯದಲ್ಲಿರುವ ಸಾರಿಗೆ ನಿಗಮಗಳ ಉದ್ಯೋಗಿಗಳ ವೇತನ ಇತ್ಯಾದಿ ಸೌಲಭ್ಯಗಳನ್ನು ಸರಕಾರಿ ಸಮಾನಾಂತರವಾದ ಹುದ್ದೆಗಳ ವೇತನಗಳಿಗೆ ಅನುಗುಣವಾಗಿ, ಆಯಾ ನಿಗಮಗಳ ಆಯವ್ಯಯಗಳ ಪತ್ರಗಳಲ್ಲಿ ಅಡಕವಾಗುವಂತೆ ಕಾರ್ಯ ನಡು ರಚನೆ ಆಸಿಯೂಟದ ಅಡಿಗೆಯವರಿಗೆ ಮಾಸಿಕ ಗೌರವಧನ ರೂ 3,600ರಿಂದ ರೂ 6,000ಕ್ಕೆ ಹೆಚ್ಚಳ.
-ಅತಿಥಿ ಮತ್ತು ಗುತ್ತಿಗೆಯ ಆಧಾರದ ಮೇಲೆ ಸರಕಾರದಲ್ಲಿ ಕೆಲಸ ಮಾಡುತ್ತಿರುವ ಉದ್ಯೋಗಿಗಳಿಗೆ ಸರಕಾರಿ ನೇಮಕಾತಿಗಳಲ್ಲಿ ಆದ್ಯತೆ.
ಇದನ್ನೂ ಓದಿ : BJP Manifesto : ಬಿಜೆಪಿಯು ಪ್ರಣಾಳಿಕೆಯಲ್ಲಿ ನೀಡಿರುವ ಪ್ರಮುಖ 16 ಭರವಸೆಗಳೇನು?