Congress Meeting: ನನ್ನದು ಹೋರಾಟದ ಬದುಕು, ಬಿಜೆಪಿ-ಜೆಡಿಎಸ್‌ ಎಷ್ಟೇ ಪಾದಯಾತ್ರೆ ಮಾಡಿದ್ರೂ ಜಗ್ಗಲ್ಲ ಎಂದ ಸಿಎಂ - Vistara News

ಕರ್ನಾಟಕ

Congress Meeting: ನನ್ನದು ಹೋರಾಟದ ಬದುಕು, ಬಿಜೆಪಿ-ಜೆಡಿಎಸ್‌ ಎಷ್ಟೇ ಪಾದಯಾತ್ರೆ ಮಾಡಿದ್ರೂ ಜಗ್ಗಲ್ಲ ಎಂದ ಸಿಎಂ

Congress Meeting: ಮನುವಾದಿಗಳು, ಜಾತಿವಾದಿಗಳು ಯಾವತ್ತೂ ಕೂಡ ಶೋಷಿತರು ಅಧಿಕಾರ ನಡೆಸುವುದನ್ನು ಸಹಿಸುವುದಿಲ್ಲ. ಬಿಜೆಪಿ, ಜೆಡಿಎಸ್ ಒಟ್ಟಾಗಿ ಎಷ್ಟೇ ಪಾದಯಾತ್ರೆ ನಡೆಸಿದರೂ ನಾನು ಜಗ್ಗಲ್ಲ, ಬಗ್ಗಲ್ಲ. ಹಿಂದುಳಿದ ವರ್ಗಗಳಲ್ಲಿ ದೇವರಾಜ ಅರಸು ಬಿಟ್ಟರೆ ಮುಖ್ಯಮಂತ್ರಿಯಾಗಿ ಪೂರ್ಣಾವಧಿ ಮುಗಿಸಿದ್ದು ನಾನು ಮಾತ್ರ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

VISTARANEWS.COM


on

Congress Meeting
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೈಸೂರು: ನಾನು ಹೋರಾಟ ಮಾಡಿಕೊಂಡು ಬದುಕುತ್ತಿದ್ದೇನೆ. ಬಿಜೆಪಿಯವರು ಎಷ್ಟೇ ಪಾದಯಾತ್ರೆ ಮಾಡಿದರೂ ಜಗ್ಗುವುದಿಲ್ಲ, ಬಗ್ಗುವುದಿಲ್ಲ. ಕಾರ್ಯಕರ್ತರ (Congress Meeting) ಆಶೀರ್ವಾದ ಇರೋವರೆಗೂ ನನ್ನನ್ನು ಯಾರು ಅಧಿಕಾರದಿಂದ ತೆಗೆಯಲು ಸಾಧ್ಯವಿಲ್ಲ. ಸಂವಿಧಾನ ಉಳಿಸಲು ನಮ್ಮ ಹೋರಾಟ ನಡೆಯುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಬೃಹತ್ ಜನಾಂದೋಲನ ಸಮಾವೇಶದಲ್ಲಿ ಮಾತನಾಡಿದ ಅವರು, ಮನುವಾದಿಗಳು, ಜಾತಿವಾದಿಗಳು ಯಾವತ್ತೂ ಕೂಡ ಶೋಷಿತರು ಅಧಿಕಾರ ನಡೆಸುವುದನ್ನು ಸಹಿಸುವುದಿಲ್ಲ. ನೀವೆಲ್ಲಾ ಪ್ರಜಾಪ್ರಭುತ್ವದ ಸೇನಾನಿಗಳು. ಸಂವಿಧಾನ, ಸಾಮಾಜಿಕ ನ್ಯಾಯ, ಪ್ರಜಾಪ್ರಭುತ್ವದ ರಕ್ಷಣೆಗೆ ನಿಂತ ನಾಡಿನ ಏಳುಕೋಟಿ ಜನತೆಗೆ ಧನ್ಯವಾದ ಅರ್ಪಿಸುತ್ತೇನೆ ಎಂದರು.

ದೇವರಾಜ ಅರಸು, ಬಂಗಾರಪ್ಪ ಅವರನ್ನೂ ಇವರು ಸಹಿಸಲಿಲ್ಲ. ಈಗ ನನ್ನನ್ನೂ ಸಹಿಸುತ್ತಿಲ್ಲ. ಜೆಡಿಎಸ್‌ನ ದೇವೇಗೌಡರು ಮತ್ತು ಕುಮಾರಸ್ವಾಮಿ ಯಾವತ್ತೂ ಕೊಟ್ಟ ಮಾತಿನಂತೆ ನಡೆದುಕೊಳ್ಳುವವರಲ್ಲ. ಕುಮಾರಸ್ವಾಮಿ ಬಿಜೆಪಿ ಜೊತೆ ಸೇರಿ ಅಧಿಕಾರ ನಡೆಸಿದರೆ ನನ್ನ ಶವದ ಮೇಲೆ ನಡೆಸಬೇಕು ಎಂದು ದೇವೇಗೌಡರು ಹೇಳಿದ್ದರು. ಮೋದಿ ಮತ್ತೆ ಪ್ರಧಾನಿ ಆದರೆ ದೇಶ ಬಿಟ್ಟು ಹೋಗುತ್ತೇನೆ ಎಂದು ಹೇಳಿದ್ದ ದೇವೇಗೌಡರೇ ಈಗ ಬಿಜೆಪಿ ಜೊತೆ ಶಾಮೀಲಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ | ISIS Terrorist arrest: ಐಸಿಸ್‌ ಜೊತೆ ಲಿಂಕ್‌ ಹೊಂದಿದ್ದ ಉಗ್ರ ಅರೆಸ್ಟ್‌; ಈತನ ಪತ್ತೆಗೆ ₹3 ಲಕ್ಷ ಬಹುಮಾನ ಘೋಷಿಸಿದ್ದ ಎನ್‌ಐಎ

ನಾನು ರಾಜ್ಯದ ಜನರ ಆಶೀರ್ವಾದದಿಂದ ಎರಡು ಬಾರಿ ಉಪ ಮುಖ್ಯಮಂತ್ರಿ ಹಾಗೂ ಎರಡು ಬಾರಿ ಮುಖ್ಯಮಂತ್ರಿಯಾಗಿದ್ದೇನೆ. ನನಗೆ ಇಷ್ಟೆಲ್ಲಾ ಅಧಿಕಾರ ಸಿಕ್ಕಾಗಲೂ ನನಗೆ ಹಣ ಮಾಡುವ ಆಸೆ ಬಂದಿಲ್ಲ, ನನ್ನ ಪತ್ನಿ ಇವತ್ತಿನವರೆಗೂ ಸಾರ್ವಜನಿಕವಾಗಿ ಕಾಣಿಸಿಲ್ಲ. ಎರಡು ಬಾರಿ ಸಿಎಂ ಆದರೂ ಪ್ರಮಾಣ ವಚನಕ್ಕೂ ಬರಲಿಲ್ಲ. ನಾವು ಭ್ರಷ್ಟಾಚಾರ ಮಾಡಲು ಸಾಧ್ಯವಿಲ್ಲ. ನಿಮ್ಮ ನಂಬಿಕೆಗೆ ದ್ರೋಹ ಎಸಗಲು ಸಾಧ್ಯವಿಲ್ಲ. ನಾನು ರಾಜಕೀಯದಲ್ಲಿ ಇರುವವರೆಗೂ ಯಾವತ್ತೂ ನಿಮ್ಮ ನಂಬಿಕೆಗೆ ದ್ರೋಹ ಬಗೆಯಲ್ಲ ಎಂದರು.

ನಾನು ಸೊನ್ನೆಯಿಂದ ರಾಜಕೀಯ ಪ್ರಾರಂಭಿಸಿದೆ. 1983 ರಲ್ಲಿ ಮೊದಲ ಚುನಾವಣೆಗೆ ಡೆಪಾಸಿಟ್ ಮಾಡಲು ನನ್ನ ಬಳಿ ಹಣ ಇರಲಿಲ್ಲ. ನನ್ನ ಕಚೇರಿ ಕ್ಲರ್ಕ್ ಆನಂದ 250ರೂ ಡೆಪಾಸಿಟ್ ಕಟ್ಟಿದರು. ಜನರೇ ಹಣ ಕೊಟ್ಟು ಚುನಾವಣೆ ಗೆಲ್ಲಿಸಿದರು. ಆ ಚುನಾವಣೆಯಲ್ಲಿ ಜನರೇ 63 ಸಾವಿರ ರೂಪಾಯಿ ಖರ್ಚು ಮಾಡಿ ನನ್ನನ್ನು ಆರಿಸಿದರು ಎಂದು ತಮ್ಮ ಸಚ್ಚಾರಿತ್ರ್ಯದ ಚರಿತ್ರೆಯನ್ನು ಬಿಚ್ಚಿಟ್ಟರು.

ನನ್ನ ಒಂಬತ್ತು ಚುನಾವಣೆ ಗೆಲುವಲ್ಲೂ ಜನರೇ ಹಣ ಖರ್ಚು ಮಾಡಿ ನನ್ನನ್ನು ಗೆಲ್ಲಿಸಿದ್ದಾರೆ‌. ದಲಿತರು, ಶೋಷಿತರು, ಅಲ್ಪಸಂಖ್ಯಾತರ ಹಾಗೂ ಸಮಸ್ತ ಜನರ ಏಳಿಗೆಗಾಗಿ ಮಾತ್ರ ನನ್ನ ಅಧಿಕಾರ ಮುಡಿಪಾಗಿಟ್ಟಿದ್ದೇನೆ. ಬಿಜೆಪಿ, ಜೆಡಿಎಸ್ ಒಟ್ಟಾಗಿ ಎಷ್ಟೇ ಪಾದಯಾತ್ರೆ ನಡೆಸಿದರೂ ನಾನು ಜಗ್ಗಲ್ಲ, ಬಗ್ಗಲ್ಲ. ಹಿಂದುಳಿದ ವರ್ಗಗಳಲ್ಲಿ ದೇವರಾಜ ಅರಸು ಬಿಟ್ಟರೆ ಮುಖ್ಯಮಂತ್ರಿಯಾಗಿ ಪೂರ್ಣಾವಧಿ ಮುಗಿಸಿದ್ದು ನಾನು ಮಾತ್ರ. ಇದನ್ನು ಬಿಜೆಪಿ, ಜೆಡಿಎಸ್ ಸಹಿಸುತ್ತಿಲ್ಲ. ಆದರೆ ಎಲ್ಲಿಯವರೆಗೂ ಸೇನಾನಿಗಳಾದ ನಿಮ್ಮ ಆಶೀರ್ವಾದ ನನ್ನ ಮೇಲೆ ಇರುತ್ತದೋ ಅಲ್ಲಿಯವರೆಗೂ ನನ್ನನ್ನು ಯಾವ ಪಾದಯಾತ್ರೆಗಳೂ ಅಳುಗಾಡಿಸಲು ಸಾಧ್ಯವಿಲ್ಲ ಎಂದರು.

ವಾಲ್ಮೀಕಿ ನಿಗಮದ ಪ್ರಕರಣದಲ್ಲೂ ಸರ್ಕಾರದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿ ಸೋತರು. ದಾಖಲೆಗಳು ಸ್ಪಷ್ಟವಾಗಿವೆ. ಸರ್ಕಾರಕ್ಕೂ ನಿಗಮದ ಹಗರಣಕ್ಕೂ ಸಂಬಂಧ ಇಲ್ಲ ಎನ್ನುವುದು ದಾಖಲೆಗಳಲ್ಲಿದೆ ಎಂದರು.

ವಾಲ್ಮೀಕಿ ನಿಗಮದ ಹಗರಣ ಹೊರಗೆ ಬಂದ ತಕ್ಷಣ ನಾವು SIT ರಚಿಸಿದೆವು. ತನಿಖೆ ನಡೆದು ಹಣ ವಾಪಸ್ ವಸೂಲಾಗಿದೆ. 50 ಕೋಟಿ ರೂಪಾಯಿಯನ್ನು SIT ರಿಕವರಿ ಮಾಡಿ ಆಗಿದೆ. 46 ಕೋಟಿ ಹಣ ಖಾಸಗಿ ಬ್ಯಾಂಕ್ ನಲ್ಲಿದ್ದು ಫ್ರೀಜ್ ಮಾಡಿದ್ದಾರೆ. ಇಷ್ಟು ಪರಿಣಾಮಕಾರಿಯಾಗಿ SIT ಯವರು ತನಿಖೆ ನಡೆಸಿದ್ದಾರೆ. ಆದರೂ ED ಯವರು ಸ್ವಯಂಸ್ಫೂರ್ತಿಯಿಂದ ಕೇಸು ದಾಖಲಿಸಿಕೊಂಡು ತನಿಖೆ ನಡೆಸಿದರೂ ಸರ್ಕಾರದ ವಿರುದ್ಧ ಏನೂ ದಾಖಲೆ ಸಿಗಲಿಲ್ಲ. ಹೀಗಾಗಿ ಹಗರಣವೇ ಅಲ್ಲದ ಮೂಡಾ ಪ್ರಕರಣಕ್ಕೆ ಹಗರಣದ ಬಣ್ಣ ಕೊಟ್ಟರು ಎಂದು ಆಕ್ರೋಶ ವ್ಯಕ್ತಪಡಿಸಿದರು.

ನನ್ನದೊಂದು ಪತ್ರ ಇಲ್ಲ, ನನ್ನದೊಂದು ಸಹಿ ಇಲ್ಲ, ಆಗ ನಮ್ಮ ಸರ್ಕಾರ ಅಧಿಕಾರದಲ್ಲೂ ಇರಲಿಲ್ಲ. ಆದರೂ ಹಗರಣ, ಹಗರಣ ಎಂದು ಬೊಬ್ಬೆ ಹಾಕುತ್ತಾ ಸುಳ್ಳು ಆರೋಪ ಹೊರಿಸುತ್ತಿದ್ದಾರೆ. ಇದಕ್ಕೆ ನೀವ್ಯಾರೂ ಸೊಪ್ಪು ಹಾಕಬೇಡಿ, ನಂಬಬೇಡಿ ಎಂದು ಕರೆ ನೀಡಿದರು.

ಯಡಿಯೂರಪ್ಪ ಅವರು ಈ ವಯಸ್ಸಲ್ಲಿ ಲೈಂಗಿಕ ದೌರ್ಜನ್ಯ ನಡೆಸಿ ಪೋಕ್ಸೋ ಕೇಸಲ್ಲಿ ಇದ್ದಾರೆ. ನಾಚಿಕೆ ಆಗಲ್ವಾ ಬಿಜೆಪಿ, ಜೆಡಿಎಸ್ ಅಧಿಕಾರಿದಲ್ಲಿ ಇದ್ದಾಗ ನಡೆಸಿದ್ದು ಒಂದಾ, ಎರಡಾ ಹಗರಣಗಳು. ಸುಪ್ರೀಕೋರ್ಟ್ ನಲ್ಲಿ ತಮ್ಮ ಹಗರಣಗಳಿಗೆ ತಡೆಯಾಜ್ಞೆ ತಂದಿದ್ದಾರೆ. ಇವರು ನನ್ನ ರಾಜೀನಾಮೆ ಕೇಳುತ್ತಿದ್ದಾರೆ. ಇವರಿಗೆ ನಾಚಿಕೆ ಆಗಲ್ವಾ ಎಂದರು.

ಯಡಿಯೂರಪ್ಪ ಅವರು ಚೆಕ್‌ನಲ್ಲಿ ಲಂಚ ಪಡೆದು ಜೈಲಿಗೆ ಹೋದರು. ಆರ್.ಅಶೋಕ್, ವಿಜಯೇಂದ್ರ ಇವರೆಲ್ಲರೂ ಜೈಲಿಗೆ ಹೋಗಬೇಕಾದವರು. ಇವರಿಗೆ ನನ್ನ ಬಗ್ಗೆ ಮಾತನಾಡುವ ಯಾವ ಯೋಗ್ಯತೆ ಇದೆ ಎಂದು ಪ್ರಶ್ನಿಸಿದರು. 15 ಬಜೆಟ್ ಮಂಡಿಸಿದವನು ನಾನು. ನನಗೆ ಹಣದ ಮೋಹ ಇದ್ದಿದ್ದರೆ ಕೋಟಿ ಕೋಟಿ ಮಾಡಬಹುದಿತ್ತು. ಇಷ್ಟು ದಿನವಾದರೂ ನನಗೆ ಮೈಸೂರಲ್ಲಿ ಮನೆ ಇಲ್ಲ. ಈಗ ಕಟ್ಟಿಸುತ್ತಿದ್ದೇನೆ. ಹಿಂದಿದ್ದ ಮನೆ ಸಾಲ ತಗೊಂಡು ಕಟ್ಟಿಸಿದ್ದೆ. ಸಾಲ ತೀರಿಸಲಾಗದೆ ಆ ಮನೆ ಮಾರಿಬಿಟ್ಟೆ. ಬಾಡಿಗೆ ಮನೆಯಲ್ಲಿ ಇದ್ದುಕೊಂಡೇ ವಿಧಾನಸಭೆ, ಲೋಕಸಭೆ ಚುನಾವಣೆ ಮಾಡಿದೆ. ಈಗ ಕಟ್ಟುತ್ತಿರುವ ಮಬೆ ಬಿಟ್ಟು ನನ್ನ ಹೆಸರಲ್ಲಿ ಒಂದೇ ಒಂದು ಸೈಟು ಇದ್ದರೆ ತೋರಿಸಿ ಎಂದು ಸವಾಲು ಹಾಕಿದರು.

ಈಗ ರಾಜಭವನವನ್ನು ದುರುಪಯೋಗಪಡಿಸಿಕೊಂಡು ನನ್ನ ವಿರುದ್ಧ ಷಡ್ಯಂತ್ರ ನಡೆಸುತ್ತಿದ್ದಾರೆ. ಈ ಷಡ್ಯಂತ್ರದಲ್ಲಿ ಹೆಚ್.ಡಿ.ಕುಮಾರಸ್ವಾಮಿ, ಯಡಿಯೂರಪ್ಪ, ವಿಜಯೇಂದ್ರ, ಆರ್.ಅಶೋಕ್ ಸೇರಿದ್ದಾರೆ. ಕುಮಾರಸ್ವಾಮಿ ವಿರುದ್ಧ, ನಿರಾಣಿ ವಿರುದ್ಧ, ಶಶಿಕಲಾ ಜೊಲ್ಲೆ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಿದರೂ ರಾಜಭವನದಿಂದ ಇದುವರೆಗೂ ನೋಟಿಸ್ ಹೋಗಿಲ್ಲ. ಆದರೆ ನನಗೆ ಮಾತ್ರ ನೋಟಿಸ್ ಬಂದಿದೆ. ಇದು ಪರಮ ದ್ರೋಹ ಅಲ್ಲವೇ ಎಂದು ಪ್ರಶ್ನಿಸಿದರು.

ಇದನ್ನೂ ಓದಿ | Congress Meeting: ಮೈಸೂರಲ್ಲಿ ಸಿಎಂ ಶಕ್ತಿ ಪ್ರದರ್ಶನ; ಈ ಬಂಡೆ ಸಿದ್ದರಾಮಯ್ಯ ಜತೆ ಇದೆ ಎಂದ ಡಿಕೆಶಿ

ಹೇಳಿ, ಇದರಲ್ಲಿ ನನ್ನ ತಪ್ಪು ಎಲ್ಲಿದೆ? ಮುಡಾದ ಯಾವ ಸದಸ್ಯರಿಗೂ ನಾನು ಕರೆ ಮಾಡಿಲ್ಲ, ಬೇಡಿಕೆ ಇಟ್ಟಿಲ್ಲ, ಶಿಫಾರಸು ಮಾಡಿಲ್ಲ. ನಾನು ಯಾವುದಕ್ಕೂ ಸಹಿ ಹಾಕಿಲ್ಲ. ಹೀಗಿದ್ದಾಗ ಇದರಲ್ಲಿ ನನ್ನ ಪಾತ್ರ ಏನು ಹೇಳಿ? ನಾನು ತಪ್ಪು ಮಾಡಿದ್ದೀನಾ ಹೇಳಿ? ನಮ್ಮ ಜಮೀನು ಪಡೆದು ಸೈಟು, ಪಾರ್ಕು ಮಾಡಿ, ರಸ್ತೆ ಮಾಡಿ ಹಂಚಿಬಿಟ್ಟರು. ಇಲ್ಲಿ ತಪ್ಪು ಮಾಡಿರುವುದು ಮುಡಾ ಎನ್ನುತ್ತಾ ಮುಡಾ ಸೈಟು ಹಂಚಿಕೆಯಲ್ಲಿ ಮೂಡಾ ಮಾಡಿರುವ ಲೋಪಗಳನ್ನು ವಿವರಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

CM Siddaramaiah: 4 ದಶಕದಿಂದ ರಾಜಕೀಯದಲ್ಲಿರುವ ನನ್ನ ಬದುಕು ತೆರೆದ ಪುಸ್ತಕ: ಸಿಎಂ ಸಿದ್ದರಾಮಯ್ಯ

CM Siddaramaiah: ರಾಜ್ಯ ಬಿಜೆಪಿ ಮತ್ತು ಜೆಡಿಎಸ್ ನಾಯಕರ ದುರುದ್ದೇಶದ ಪಾದಯಾತ್ರೆಯ ವಿರುದ್ಧವಾಗಿ ಇಂದು ಮೈಸೂರಿನಲ್ಲಿ ಆಯೋಜಿಸಿದ್ದ ಬೃಹತ್ ಜನಾಂದೋಲನ ಸಭೆ ಅತ್ಯಂತ ಯಶಸ್ವಿಯಾಗಿದೆ. ಸತ್ಯ, ನ್ಯಾಯ, ಪ್ರಾಮಾಣಿಕತೆಗೆ ಸಹೃದಯಿ ಕನ್ನಡಿಗರು ಸದಾ ಜೊತೆ ನಿಲ್ಲುತ್ತಾರೆ ಎಂಬುದಕ್ಕೆ ಇಂದು ಸೇರಿದ್ದ ಲಕ್ಷಾಂತರ ಜನರು ಸಾಕ್ಷಿಯಾದರು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

VISTARANEWS.COM


on

CM Siddaramaiah
Koo

ಬೆಂಗಳೂರು: ನಾಲ್ಕು ದಶಕಗಳಿಂದ ರಾಜಕೀಯದಲ್ಲಿರುವ ನನ್ನ ಬದುಕು ತೆರೆದ ಪುಸ್ತಕ. ಈ ಪುಸ್ತಕದ ಪುಟಪುಟಗಳು ರಾಜ್ಯದ ಜನರಿಗೆ ತಿಳಿದಿದೆ. ಜನರ ವಿಶ್ವಾಸ ನನ್ನ ಮೇಲಿರುವವರೆಗೆ ವಿರೋಧಿಗಳ ಯಾವ ಷಡ್ಯಂತ್ರ, ಹೋರಾಟ, ಪಾದಯಾತ್ರೆಗಳು ನನ್ನನ್ನು ಒಂದಿಂಚು ಅಲುಗಾಡಿಸಲೂ ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, ಕೇಂದ್ರ ಸರ್ಕಾರದ ದ್ವೇಷ ರಾಜಕಾರಣ, ಅಧಿಕಾರ ದುರುಪಯೋಗ ಮತ್ತು ರಾಜ್ಯ ಬಿಜೆಪಿ ಮತ್ತು ಜೆಡಿಎಸ್ ನಾಯಕರ ದುರುದ್ದೇಶದ ಪಾದಯಾತ್ರೆಯ ವಿರುದ್ಧವಾಗಿ ಇಂದು ಮೈಸೂರಿನಲ್ಲಿ ಆಯೋಜಿಸಿದ್ದ ಬೃಹತ್ ಜನಾಂದೋಲನ ಸಭೆ ಅತ್ಯಂತ ಯಶಸ್ವಿಯಾಗಿದೆ. ಸತ್ಯ, ನ್ಯಾಯ, ಪ್ರಾಮಾಣಿಕತೆಗೆ ಸಹೃದಯಿ ಕನ್ನಡಿಗರು ಸದಾ ಜೊತೆ ನಿಲ್ಲುತ್ತಾರೆ ಎಂಬುದಕ್ಕೆ ಇಂದು ಸೇರಿದ್ದ ಲಕ್ಷಾಂತರ ಜನರು ಸಾಕ್ಷಿಯಾದರು.

ನಾಡಿನ ಮೂಲೆ ಮೂಲೆಗಳಿಂದ ಆಗಮಿಸಿ, ಬಿಜೆಪಿ – ಜೆಡಿಎಸ್ ವಿರುದ್ಧದ ನಮ್ಮ ಹೋರಾಟಕ್ಕೆ ಬೆಂಬಲವಾಗಿ ನಿಂತ ತಮ್ಮೆಲ್ಲರಿಗೂ ನಾನು ಸದಾ ಋಣಿ. ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ನಮ್ಮ ಹಿರಿಯ-ಕಿರಿಯ ನಾಯಕರು ಪ್ರಮುಖವಾಗಿ ಪಕ್ಷದ ಸಾವಿರಾರು ಕಾರ್ಯಕರ್ತರು ಶ್ರಮಿಸಿದ್ದಾರೆ. ಅವರೆಲ್ಲರಿಗೂ ನಾನು ಆಭಾರಿಯಾಗಿದ್ದೇನೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | Congress Meeting: ಮೈಸೂರಲ್ಲಿ ಸಿಎಂ ಶಕ್ತಿ ಪ್ರದರ್ಶನ; ಈ ಬಂಡೆ ಸಿದ್ದರಾಮಯ್ಯ ಜತೆ ಇದೆ ಎಂದ ಡಿಕೆಶಿ

ವಿಪಕ್ಷಗಳು ಏನನ್ನೂ ಮಾಡಲು ಹೇಸದವರು, ತಮ್ಮ ದುರುದ್ದೇಶವನ್ನು ಈಡೇರಿಸಲು ಯಾವ ಮಟ್ಟಕ್ಕೂ ಹೋಗಬಲ್ಲರು. ಇಂತಹ ಬೆದರಿಕೆ, ಬ್ಲ್ಯಾಕ್ ಮೇಲ್ ತಂತ್ರಕ್ಕೆ ಬಗ್ಗುವ, ಕುಗ್ಗುವ, ಅಂಜುವ ವ್ಯಕ್ತಿ ನಾನಲ್ಲ. ಪ್ರಾಣಕ್ಕಿಂತ ಮಾನ ಮುಖ್ಯ ಎಂದು ತಿಳಿದುಕೊಂಡವನು ನಾನು. ನಾಲ್ಕು ದಶಕಗಳಿಂದ ರಾಜಕೀಯದಲ್ಲಿರುವ ನನ್ನ ಬದುಕು ತೆರೆದ ಪುಸ್ತಕ. ಈ ಪುಸ್ತಕದ ಪುಟಪುಟಗಳು ರಾಜ್ಯದ ಜನರಿಗೆ ತಿಳಿದಿದೆ.

ನಿಮ್ಮೆಲ್ಲರ ಪ್ರೀತಿ – ವಿಶ್ವಾಸ ನನ್ನ ಮೇಲಿರುವವರೆಗೆ ವಿರೋಧಿಗಳ ಯಾವ ಷಡ್ಯಂತ್ರ, ಹೋರಾಟ, ಪಾದಯಾತ್ರೆಗಳು ನನ್ನನ್ನು ಒಂದಿಂಚು ಅಲುಗಾಡಿಸಲು ಸಾಧ್ಯವಿಲ್ಲ. ನಿಜವಾಗಿ ಇವರು ದ್ವೇಷಿಸುವುದು ನನ್ನನ್ನಲ್ಲ,
ನಾನು ಅನುಷ್ಠಾನಕ್ಕೆ ತಂದ ಜನಪರವಾದ ಯೋಜನೆಗಳನ್ನು. ಇವರು ದ್ವೇಷಿಸುವುದು ನಾನು ನಂಬಿರುವ ಸಾಮಾಜಿಕ ನ್ಯಾಯದ ಸಿದ್ದಾಂತವನ್ನು, ನನ್ನ ಜಾತ್ಯತೀತ ನಿಲುವನ್ನು. ನನ್ನ ಪ್ರಾಮಾಣಿಕತೆ ಮತ್ತು ಪಾರದರ್ಶಕ ನಡವಳಿಕೆಯನ್ನು ಎಂದು ಹೇಳಿದ್ದಾರೆ.

ಇವರು ನನ್ನ ಮೇಲೆ ನೂರು ಕೇಸ್ ಹಾಕಿದರೂ, ಸಾವಿರಾರು ಆರೋಪ ಮಾಡಿದರೂ ಸೈದ್ಧಾಂತಿಕವಾಗಿ ನನ್ನನ್ನು ಬಗ್ಗಿಸಲು, ಬದಲಾಯಿಸಲು ಇವರಿಗೆ ಸಾಧ್ಯವಿಲ್ಲ. ನನ್ನ ಕೊನೆಯ ಉಸಿರು ಇರುವ ವರೆಗೆ ನಾನು ನಂಬಿರುವ ಸಾಮಾಜಿಕ ನ್ಯಾಯದ ಸಿದ್ಧಾಂತ, ಜಾತ್ಯತೀತ ಧೋರಣೆ ಮತ್ತು ಪ್ರಾಮಾಣಿಕ ಹಾಗೂ ಪಾರದರ್ಶಕ ನಡವಳಿಕೆಗೆ ಬದ್ಧನಾಗಿರುತ್ತೇನೆ.

ನಾಡಿನ ಪ್ರತಿ ಅವಕಾಶ ವಂಚಿತ, ಶೋಷಿತ, ಬಡ ವ್ಯಕ್ತಿಯೂ ನನ್ನ ಕುಟುಂಬವೇ ಆಗಿದ್ದಾರೆ. ನನ್ನ ಉಸಿರಿರುವವರೆಗೆ ಜನರಿಗಾಗಿ ನನ್ನ ಹೋರಾಟ ಮುಂದುವರಿಯಲಿದೆ. ನಿಮ್ಮೆಲ್ಲರ ಪ್ರೀತಿಯ ಶ್ರೀರಕ್ಷೆ ನನ್ನನ್ನು ಕಾಯಲಿದೆ ಎಂಬ ವಿಶ್ವಾಸ ನನಗಿದೆ. ಅಸತ್ಯ, ಅನ್ಯಾಯ, ಅಪಪ್ರಚಾರದ ವಿರುದ್ಧದ ಹೋರಾಟದಲ್ಲಿ ಅಂತಿಮ ಗೆಲುವು ನನ್ನದೇ. ಸತ್ಯಮೇವ ಜಯತೆ ಎಂದು ತಿಳಿಸಿದ್ದಾರೆ.

ನಾನು ಬಿಜೆಪಿ-ಜೆಡಿಎಸ್‌ ಷಡ್ಯಂತ್ರಕ್ಕೆ ಬಲಿಯಾಗುವವನಲ್ಲ: ಸಿಎಂ ಸಿದ್ದರಾಮಯ್ಯ

ಮೈಸೂರು: ನಾನು ಈ ನೆಲದ ಶೋಷಿತರು, ಶ್ರಮಿಕರು, ಬಡವರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರ ಪರವಾಗಿ ಇದ್ದೀನಿ. ಇವರ ಪರವಾಗಿ ಕಾರ್ಯಕ್ರಮಗಳನ್ನು ರೂಪಿಸುತ್ತೇನೆ ಎನ್ನುವ ಕಾರಣಕ್ಕೆ ನನ್ನನ್ನು ಕೆಳಗಿಳಿಸುವ ಹುನ್ನಾರ ನಡೆಸುತ್ತಿದ್ದಾರೆ. ಇದಕ್ಕೆ ಈ ನಾಡಿನ‌ ಜನತೆ ಅವಕಾಶ ಕೊಡುವುದಿಲ್ಲ ಎನ್ನುವ ನಂಬಿಕೆ ನನಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇದನ್ನೂ ಓದಿ | Congress Meeting: ನನ್ನದು ಹೋರಾಟದ ಬದುಕು, ಬಿಜೆಪಿ-ಜೆಡಿಎಸ್‌ ಎಷ್ಟೇ ಪಾದಯಾತ್ರೆ ಮಾಡಿದ್ರೂ ಜಗ್ಗಲ್ಲ ಎಂದ ಸಿಎಂ

ಮೈಸೂರಿನಲ್ಲಿ ನಡೆದ ಜನಾಂದೋಲನ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿ, ಜೆಡಿಎಸ್ ಎಷ್ಟೇ ಕಪಟ ಉದ್ದೇಶದ ಪಾದಯಾತ್ರೆ ನಡೆಸಿದರೂ ನಾನು ಹೆದರುವುದಿಲ್ಲ. ರಾಜಭವನ ಮತ್ತು ಕೇಂದ್ರ ಸರ್ಕಾರ ಎಷ್ಟೇ ಷಡ್ಯಂತ್ರ ನಡೆಸಿದರೂ ನಾನು ಹೆದರುವುದಿಲ್ಲ. ನಾನು ಇವರ ಷಡ್ಯಂತ್ರಕ್ಕೆ ಬಲಿಯಾಗಿ ಮನೆಯಲ್ಲಿ ಕೂರುವವನಲ್ಲ ಎಂದು ಇದೇ ಸಂದರ್ಭದಲ್ಲಿ ಸಿಎಂ ಎಚ್ಚರಿಸಿದರು.

Continue Reading

ಕರ್ನಾಟಕ

Snake Bite: ನಾಗರ ಪಂಚಮಿ ಹಬ್ಬದಂದೇ ಹಾವು ಕಚ್ಚಿ ಬಾಣಂತಿ ಸಾವು

Snake Bite: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹುತ್ತಾದಿಂಬ ಗ್ರಾಮದಲ್ಲಿ ಘಟನೆ ನಡೆದಿದೆ. ಗದ್ದೆಯಲ್ಲಿ ಮೇವು ತರಲು ಹೋಗಿದ್ದ ವೇಳೆ ಪೊದೆಯಲ್ಲಿದ್ದ ಹಾವು, ಬಾಣಂತಿಗೆ ಕಚ್ಚಿದೆ.

VISTARANEWS.COM


on

Snake Bite
Koo

ಶಿವಮೊಗ್ಗ: ನಾಗರ ಪಂಚಮಿ ಹಬ್ಬದಂದೇ ಹಾವು ಕಚ್ಚಿ ಬಾಣಂತಿ ಮೃತಪಟ್ಟಿರುವ ಘಟನೆ (Snake Bite) ಜಿಲ್ಲೆಯ ಸಾಗರ ತಾಲೂಕಿನ ಹುತ್ತಾದಿಂಬ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗದ್ದೆಯಲ್ಲಿ ಮೇವು ತರಲು ತೆರಳಿದ್ದ ವೇಳೆ ಹಾವು ಕಚ್ಚಿದ್ದರಿಂದ ದುರಂತ ಸಂಭವಿಸಿದೆ.

ರಂಜಿತಾ (22) ಮೃತಪಟ್ಟ ಯುವತಿ. ಗದ್ದೆಯಲ್ಲಿ ಮೇವು ತರಲು ಹೋಗಿದ್ದ ವೇಳೆ ಪೊದೆಯಲ್ಲಿದ್ದ ಹಾವು, ಬಾಣಂತಿಗೆ ಕಚ್ಚಿದೆ. ಆದರೆ, ಈ ಬಗ್ಗೆ ಯುವತಿ ಗಮನಕ್ಕೆ ಬಂದಿಲ್ಲ. ಕೆಲಹೊತ್ತಿನ ಬಳಿಕ ಕುಟುಂಬಸ್ಥರು ನೋಡಿದಾಗ ಗದ್ದೆಯಲ್ಲಿ ರಂಜಿತಾ ಕುಸಿದು ಬಿದ್ದಿದ್ದಳು. ತಕ್ಷಣ ಸಾಗರದ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯೆ ರಂಜಿತಾ ಮೃತಪಟ್ಟಿದ್ದಾಳೆ.

ಮೃತ ರಂಜಿತಾ 3 ವರ್ಷದ ಹೆಣ್ಣು ಹಾಗೂ 4 ತಿಂಗಳ ಹಸುಗೂಸು ಹೊಂದಿದ್ದಳು. ಆಸ್ಪತ್ರೆಯ ಶವಾಗಾರದ ಬಳಿ ಮೃತಳ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ | Road Accident : ಪ್ರತ್ಯೇಕ ಅಪಘಾತದಲ್ಲಿ ಆರು ಬೈಕ್‌ ಸವಾರರ ದುರ್ಮರಣ; ಓರ್ವನಿಗೆ ಗಂಭೀರ ಗಾಯ

ಮದುವೆಗೆ ಪೋಷಕರ ವಿರೋಧ; ಮರಕ್ಕೆ ನೇಣು ಬಿಗಿದುಕೊಂಡು ಪ್ರೇಮಿಗಳು ಆತ್ಮಹತ್ಯೆ

LOve case
LOve case

ಬಾಗಲಕೋಟೆ: ಮದುವೆಗೆ ಪೋಷಕರು ವಿರೋಧಿಸಿದಕ್ಕೆ ಪ್ರೇಮಿಗಳಿಬ್ಬರು (Love Case) ನೇಣಿಗೆ ಶರಣಾಗಿದ್ದಾರೆ. ಬಾಗಲಕೋಟೆಯ ರಬಕವಿ-ಬನಹಟ್ಟಿ ತಾಲೂಕಿನ ನಂದಗಾಂವ ಗ್ರಾಮದಲ್ಲಿ ಘಟನೆ ನಡೆದಿದೆ.

ಸಚಿನ್ ದಳವಾಯಿ, ಪ್ರಿಯಾ ಮಡಿವಾಳರ ಮೃತ ಪ್ರೇಮಿಗಳು. ಇವರಿಬ್ಬರು ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ ಮನೆಯಲ್ಲಿ ಇವರಿಬ್ಬರ ಮದುವೆಗೆ ವಿರೋಧ ವ್ಯಕ್ತವಾಗಿತ್ತು. ಇದರಿಂದ ಮನನೊಂದು ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ‌ ಮಾಡಿಕೊಂಡಿದ್ದಾರೆ.

ಮಹಾಲಿಂಗಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಇಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ .ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: Road Accident : ಪ್ರತ್ಯೇಕ ಅಪಘಾತದಲ್ಲಿ ಆರು ಬೈಕ್‌ ಸವಾರರ ದುರ್ಮರಣ; ಓರ್ವನಿಗೆ ಗಂಭೀರ ಗಾಯ

ಇಬ್ಬರು ಪುಟ್ಟ ಮಕ್ಕಳ ಜತೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ಶಿವಮೊಗ್ಗ: ಇಬ್ಬರು ಪುಟ್ಟ ಮಕ್ಕಳ ಜತೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ಮತ್ತಿಕೈ ಗ್ರಾಮದಲ್ಲಿ ನಡೆದಿದೆ. ಚಂಪಕಾಪುರ ನಿವಾಸಿ ರಾಜೇಶ್ ಎಂಬುವವರ ಪತ್ನಿ ವಾಣಿ (32), ಮಕ್ಕಳಾದ ಸಮರ್ಥ(12), ಸಂಪದ (6) ಮೃತರು.

ಗುರುವಾರ ರಾತ್ರಿ ಘಟನೆ ನಡೆದಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾವಿಯಿಂದ ಮೃತದೇಹಗಳನ್ನು ಹೊರತೆಗೆದು ನಗರ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka weather : ವಿಜಯಪುರದ ಹಲವೆಡೆ ಸುರಿದ ಭಾರಿ ಮಳೆ; ನಾಳೆಗೂ ಇದೆ ಅಲರ್ಟ್‌

Karnataka Weather Forecast : ರಾಜ್ಯಾದ್ಯಂತ ವಾರಾಂತ್ಯದಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆ ಇದೆ. ಇತ್ತ ಮಳೆ ಇಲ್ಲದೆ ಕಂಗಲಾಗಿದ್ದ ವಿಜಯಪುರದಲ್ಲಿ ಮಳೆಯಾದರೆ, ಕಲಬುರಗಿಯಲ್ಲಿ ನೀರು ನುಗ್ಗಿ ಜಮೀನುಗಳು ಜಲಾವೃತಗೊಂಡಿದೆ.

VISTARANEWS.COM


on

By

karnataka weather Forecast
Koo

ವಿಜಯಪುರ: ಮಳೆ ಬಾರದೆ (Rain News) ಕಂಗಾಲಾಗಿದ್ದ ವಿಜಯಪುರ ಜಿಲ್ಲೆಯ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಶುಕ್ರವಾರ ವಿಜಯಪುರ ಜಿಲ್ಲೆಯ ಹಲವೆಡೆ ಭಾರಿ ಮಳೆ ಸುರಿದಿದೆ. ಮಳೆ ಇಲ್ಲದೆ ತೊಗರಿ, ಮೆಕ್ಕೆಜೋಳ ಬೆಳೆ ಒಣಗುತ್ತಿತ್ತು. ವಿಜಯಪುರ ಜಿಲ್ಲೆಯ ಸಿಂದಗಿ, ಕೋರವಾರ, ಕೊಂಡಗೂಳಿ, ಜಾಲವಾದ, ಹಂಚಲಿ, ಸೇರಿದಂತರ ಹಲವೆಡೆ (Karnataka Weather Forecast) ಮಳೆಯಾಗಿದೆ.

ಇತ್ತ ಮಹಾರಾಷ್ಟ್ರದಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಉಜನಿ ಜಲಾಶಯದಿಂದ ಭೀಮಾನದಿಗೆ ಬಾರಿ ಪ್ರಮಾಣದ ನೀರು ಬಿಡುಗಡೆ ಮಾಡಲಾಗುತ್ತಿದೆ. ಕಲಬುರಗಿ ತಾಲೂಕಿನ ಹಾಗರಗುಂಡಗಿ, ಕೌಲಗಾ ಗ್ರಾಮದ ಸುತ್ತಲ್ಲಿ‌ಭಾರಿ ಪ್ರಮಾಣದ ಬೆಳೆ ಹಾನಿಯಾಗಿದೆ. ಹಾಗರಗುಂಡಗಿ ಗ್ರಾಮದ ಜಮೀನಿಗೆ ನೀರು ನುಗ್ಗಿದೆ. ಸರಿ ‌ಸುಮಾರು 500 ಹೆಚ್ಚು ಎಕರೆ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಕಬ್ಬು, ತೊಗರಿ , ಹೆಸರು ಬೆಳೆ ಭೀಮಾ ನೀರು ಪಾಲಾಗಿದ್ದು, ಮತ್ತಷ್ಟು ರೈತರು ಸಂಕಷ್ಟಕ್ಕೆ ಸಿಲುಕಲಿದ್ದಾರೆ.

ಇದನ್ನೂ ಓದಿ: Love Case : ಮದುವೆಗೆ ಪೋಷಕರ ವಿರೋಧ; ಮರಕ್ಕೆ ನೇಣು ಬಿಗಿದುಕೊಂಡು ಪ್ರೇಮಿಗಳು ಆತ್ಮಹತ್ಯೆ

ವಾರಾಂತ್ಯದಲ್ಲಿ ಹಗುರ ಮಳೆ ಸಾಧ್ಯತೆ

ವಾರಾಂತ್ಯದಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28° C ಮತ್ತು 21° C ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬಾಗಲಕೋಟೆ

Love Case : ಮದುವೆಗೆ ಪೋಷಕರ ವಿರೋಧ; ಮರಕ್ಕೆ ನೇಣು ಬಿಗಿದುಕೊಂಡು ಪ್ರೇಮಿಗಳು ಆತ್ಮಹತ್ಯೆ

Love Case : ಮದುವೆಗೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದಕ್ಕೆ ಮನನೊಂದ ಪ್ರೇಮಿಗಳು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

VISTARANEWS.COM


on

By

LOve case
Koo

ಬಾಗಲಕೋಟೆ: ಮದುವೆಗೆ ಪೋಷಕರು ವಿರೋಧಿಸಿದಕ್ಕೆ ಪ್ರೇಮಿಗಳಿಬ್ಬರು (Love Case) ನೇಣಿಗೆ ಶರಣಾಗಿದ್ದಾರೆ. ಬಾಗಲಕೋಟೆಯ ರಬಕವಿ-ಬನಹಟ್ಟಿ ತಾಲೂಕಿನ ನಂದಗಾಂವ ಗ್ರಾಮದಲ್ಲಿ ಘಟನೆ ನಡೆದಿದೆ.

ಸಚಿನ್ ದಳವಾಯಿ, ಪ್ರಿಯಾ ಮಡಿವಾಳರ ಮೃತ ಪ್ರೇಮಿಗಳು. ಇವರಿಬ್ಬರು ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ ಮನೆಯಲ್ಲಿ ಇವರಿಬ್ಬರ ಮದುವೆಗೆ ವಿರೋಧ ವ್ಯಕ್ತವಾಗಿತ್ತು. ಇದರಿಂದ ಮನನೊಂದು ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ‌ ಮಾಡಿಕೊಂಡಿದ್ದಾರೆ.

ಮಹಾಲಿಂಗಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಇಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ .ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: Road Accident : ಪ್ರತ್ಯೇಕ ಅಪಘಾತದಲ್ಲಿ ಆರು ಬೈಕ್‌ ಸವಾರರ ದುರ್ಮರಣ; ಓರ್ವನಿಗೆ ಗಂಭೀರ ಗಾಯ

ಇಬ್ಬರು ಪುಟ್ಟ ಮಕ್ಕಳ ಜತೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ಶಿವಮೊಗ್ಗ: ಇಬ್ಬರು ಪುಟ್ಟ ಮಕ್ಕಳ ಜತೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ಮತ್ತಿಕೈ ಗ್ರಾಮದಲ್ಲಿ ನಡೆದಿದೆ. ಚಂಪಕಾಪುರ ನಿವಾಸಿ ರಾಜೇಶ್ ಎಂಬುವವರ ಪತ್ನಿ ವಾಣಿ (32), ಮಕ್ಕಳಾದ ಸಮರ್ಥ(12), ಸಂಪದ (6) ಮೃತರು.

ಗುರುವಾರ ರಾತ್ರಿ ಘಟನೆ ನಡೆದಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾವಿಯಿಂದ ಮೃತದೇಹಗಳನ್ನು ಹೊರತೆಗೆದು ನಗರ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
ವಾಣಿಜ್ಯ10 mins ago

Richest Indian Family: ಭಾರತದ ಜಿಡಿಪಿಯ ಶೇ. 10ರಷ್ಟು ಸಂಪತ್ತು ಹೊಂದಿರುವ ಅಂಬಾನಿ ಕುಟುಂಬ! ಇತರ ಶ್ರೀಮಂತ ಕುಟುಂಬಗಳು ಯಾವವು?

Viral news
ವೈರಲ್ ನ್ಯೂಸ್20 mins ago

Viral News: ಮಾಂಸದೂಟಕ್ಕಾಗಿ ಜಗಳ: ಮೆದುಳು ಹೊರಬರುವಂತೆ ಬಡಿದು ಪತಿಯನ್ನೇ ಕೊಂದ ಮಹಿಳೆ

CM Siddaramaiah
ಕರ್ನಾಟಕ23 mins ago

CM Siddaramaiah: 4 ದಶಕದಿಂದ ರಾಜಕೀಯದಲ್ಲಿರುವ ನನ್ನ ಬದುಕು ತೆರೆದ ಪುಸ್ತಕ: ಸಿಎಂ ಸಿದ್ದರಾಮಯ್ಯ

Paris Olympics 2024
ಪ್ರಮುಖ ಸುದ್ದಿ33 mins ago

Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಆಗಸ್ಟ್​​ 10ರಂದು ಭಾರತಕ್ಕೆ ಯಾವ್ಯಾವ ಸ್ಪರ್ಧೆಗಳಿವೆ? ಇಲ್ಲಿದೆ ವಿವರ

Viral News
ವಿದೇಶ47 mins ago

Viral News: ಇಸ್ರೇಲ್ ಮಹಿಳಾ ಸೈನಿಕರಿಂದ ನಿರಂತರ ಅತ್ಯಾಚಾರ; ಕ್ರೂರ ಅನುಭವ ಬಿಚ್ಚಿಟ್ಟ ಪ್ಯಾಲೇಸ್ಟಿನಿಯನ್ ಬಂಧಿತ

Lending Rate
ದೇಶ1 hour ago

Lending Rate: ಬ್ಯಾಂಕ್‌ ಆಫ್‌ ಬರೋಡಾ ಬಡ್ಡಿದರ ಹೆಚ್ಚಳ; ಸಾಲಗಾರರಿಗೆ ಇಎಂಐ ಇನ್ನಷ್ಟು ಭಾರ

Vinesh Phogat
ಕ್ರೀಡೆ1 hour ago

Vinesh Phogat: ಕುಸ್ತಿಯಲ್ಲಿ ಅರಳಿದ ಪ್ರೀತಿ, ಒಂದು ರೂಪಾಯಿ ಖರ್ಚಿನಲ್ಲಿ ಮದುವೆ; ಇದುವೇ ವಿನೇಶ್​ ಫೋಗಟ್​ – ಸೋಮ್​ವೀರ್​ ಪ್ರೇಮದ ಕತೆ

Hijab Ban
ಪ್ರಮುಖ ಸುದ್ದಿ2 hours ago

Hijab Ban: ಕಾಲೇಜಿನಲ್ಲಿ ಹಿಜಾಬ್‌ ನಿಷೇಧಿಸಿದ್ದಕ್ಕೆ ಸುಪ್ರೀಂ ಕೋರ್ಟ್‌ ತರಾಟೆ; ತಿಲಕಕ್ಕೆ ವಿನಾಯಿತಿ ಏಕೆ ಎಂದು ಪ್ರಶ್ನೆ!

Vinesh Phogat
ಪ್ರಮುಖ ಸುದ್ದಿ2 hours ago

Vinesh Phogat : ವಿನೇಶ್​ ಪೋಗಟ್​ಗೆ ಬೆಳ್ಳಿ ಪದಕ ಕೊಡಿ; ಕುಸ್ತಿಪಟುವಿನ ಬೆಂಬಲಕ್ಕೆ ನಿಂತ ಸಚಿನ್ ತೆಂಡೂಲ್ಕರ್​

Snake Bite
ಕರ್ನಾಟಕ2 hours ago

Snake Bite: ನಾಗರ ಪಂಚಮಿ ಹಬ್ಬದಂದೇ ಹಾವು ಕಚ್ಚಿ ಬಾಣಂತಿ ಸಾವು

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ1 day ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 day ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 day ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ5 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ6 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌