Congress Protest: ರಾಹುಲ್‌ ಪರವಾಗಿ ಕಾಂಗ್ರೆಸ್‌ ಪ್ರತಿಭಟನೆ: 3 ಗಂಟೆ ಮೊದಲೇ ಜಾಗ ಖಾಲಿ ಮಾಡಿ ಹೊರಟ ನಾಯಕರು - Vistara News

ಕರ್ನಾಟಕ

Congress Protest: ರಾಹುಲ್‌ ಪರವಾಗಿ ಕಾಂಗ್ರೆಸ್‌ ಪ್ರತಿಭಟನೆ: 3 ಗಂಟೆ ಮೊದಲೇ ಜಾಗ ಖಾಲಿ ಮಾಡಿ ಹೊರಟ ನಾಯಕರು

ನಾವು ನುಡಿದಂತೆ ನಡೆದಿದ್ದೇವೆ. ಬಿಜೆಪಿ ಅವರ ಕುತಂತ್ರದಿಂದ ರಾಹುಲ್ ಗಾಂಧಿ ಅವರ ಸಂಸದ ಸ್ಥಾನ ಅನರ್ಹ ಮಾಡಿದರು ಎಂದು ಡಿ.ಕೆ. ಶಿವಕುಮಾರ್‌ ಪ್ರತಿಭಟನೆ ವೇಳೆ (Congress Protest) ಆರೋಪಿಸಿದರು.

VISTARANEWS.COM


on

Congress Protest in Freedom park
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಯವರನ್ನು ಬಿಜೆಪಿ ಉದ್ದೇಶಪೂರ್ವಕವಾಗಿ ಟಾರ್ಗೆಟ್‌ ಮಾಡಿ ಸಂಸದ ಸ್ಥಾನದಿಂದ ಅನರ್ಹಗೊಳಿಸಿದೆ ಎಂದು ಆರೋಪಿಸಿ ಹಾಗೂ ಇತ್ತೀಚೆಗೆ ನ್ಯಾಯಾಲಯದಲ್ಲಿ ರಾಹುಲ್‌ ಅರ್ಜಿ ತಿರಸ್ಕಾರದ ವಿರುದ್ಧ ಕಾಂಗ್ರೆಸ್‌ ಮೌನ ಪ್ರತಿಭಟನೆ (Congress Protest) ನಡೆಸಿತು.

ದೇಶದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಮೌನ ಪ್ರತಿಭಟನೆ ಮಾಡಲು ಎಐಸಿಸಿ ಸೂಚನೆ ನೀಡಿತ್ತು. ಅದೇ ರೀತಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲೂ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಪ್ರತಿಭಟನೆ ನಡೆಯಲಿದೆ ಎಂದು ತಿಳಿಸಲಾಗಿತ್ತು. ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌, ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೆವಾಲ ಸೇರಿ ಅನೇಕರು ಭಾಗವಹಿಸಿದ್ದರು.

ಬಾಯಿಗೆ ಬಟ್ಟೆ ಕಟ್ಟಿಕೊಂಡು, ಪೋಸ್ಟರ್‌ ಹಿಡಿದು ಪ್ರತಿಭಟನೆ ನಡೆಸಿದ ಕಾಂಗ್ರೆಸ್‌ ನಾಯಕರು ಮದ್ಯಾಹ್ನ 2ಗಂಟೆಗೇ ಪ್ರತಿಭಟನೆ ಮುಗಿಸಿ ಹೊರಟರು. ಇದಕ್ಕೂ ಮೊದಲು ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್‌, ಮೌನಪ್ರತಿಭಟನೆಯಲ್ಲಿ ಸಿಎಂ ಭಾಗಿಯಾಗಿದ್ದರು. ವಿಧಾನಸಭೆ ನಡೆಯುತ್ತಿದೆ, ಕೆಲ ಮಂತ್ರಿಗಳು,ಶಾಸಕರಿಗೆ ಕಳಿಸಿ ಕೊಟ್ಟಿದ್ದೇವೆ. ಮುಖಂಡರು, ಕಾರ್ಯಕರ್ತರು ಶ್ರಮಪಟ್ಟಿದ್ದೀರಿ. ಶ್ರಮಕ್ಕೆ ಪ್ರತಿಫಲ ಸಿಕ್ಕಿದೆ.

ನಾವು ನುಡಿದಂತೆ ನಡೆದಿದ್ದೇವೆ. ಬಿಜೆಪಿ ಅವರ ಕುತಂತ್ರದಿಂದ ರಾಹುಲ್ ಗಾಂಧಿ ಅವರ ಸಂಸದ ಸ್ಥಾನ ಅನರ್ಹ ಮಾಡಿದರು. ಕೋಲಾರದಲ್ಲಿ ರಾಹುಲ್ ಗಾಂಧಿ ಭಾಷಣ ಮಾಡಿದ್ದರು. 2024 ರಲ್ಲಿ ಬಿಜೆಪಿಯವರಿಗೆ ತಮ್ಮ ಸ್ಥಾನ ಉಳಿಸಿಕೊಳ್ಳಲು ಕಷ್ಟ ಆಗಲಿದೆ. ರಾಷ್ಟ್ರದಲ್ಲಿ ರಾಹುಲ್ ಗಾಂಧಿ ಅವರ ನಾಯಕತ್ವ ಒಪ್ಪಿಕೊಂಡಿದ್ದಾರೆ. ಇದಕ್ಕೆ ಚುನಾವಣೆಯಲ್ಲಿ ಜನ ಕೊಟ್ಟ ಆಶೀರ್ವಾದವೇ ಇದಕ್ಕೆ ಸಾಕ್ಷಿ.

ಅವರು ಭಾರತ ಜೋಡೋ‌ ಮಾಡಿದ ಕಡೆ ನಮ್ಮ ಶಾಸಕರು ಗೆದ್ದಿದ್ದಾರೆ. ಗುಂಡ್ಲುಪೇಟೆಯಿಂದ ರಾಯಚೂರುವರೆಗೂ ಜಯ ಆಗಿದೆ. ಇದನ್ನು ಬಿಜೆಪಿಗೆ ಸಹಿಸಲು ಆಗುತ್ತಿಲ್ಲ. ಅವರಿಗೆ ಧ್ವನಿ ತುಂಬಲು ಹೋರಾಟ ಮಾಡುತ್ತಿದ್ದೇವೆ. ರಾಹುಲ್ ಗಾಂಧಿ ದೇಶದ ಬಡವರ ಧ್ವನಿ. ನನ್ನ ಧ್ವನಿ ಯಾರು ಸಹ ಮೊಟಕು‌ ಮಾಡಲು ಆಗಲ್ಲ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ. ಅವರ ಜನಪ್ರಿಯತೆ ಬಿಜೆಪಿಗೆ ಸಹಿಸಲು ಆಗುತ್ತಿಲ್ಲ. ಹಾಗಾಗಿ ಅವರ ಮೇಲೆ ಮಾನನಷ್ಟ ಮೊಕದ್ದಮೆ ಹಾಕಿದ್ದಾರ.

ಕರ್ನಾಟಕ ರಾಜ್ಯದ ಜನತೆ ಅವರ ಜೊತೆ ನಿಂತಿದೆ. ಮೂರ್ನಾಲ್ಕು ಜಿಲ್ಲೆ ಬಿಟ್ಟು ಉಳಿದ ಕಡೆ ಹೋರಾಟ ನಡೆಯುತ್ತಿದೆ. ನನಗೆ ಏನೇ ಕೆಲಸ ಕಾರ್ಯ ಇದ್ದರೂ ಪಕ್ಷ ಮುಖ್ಯ. ಎಷ್ಟೇ ದೊಡ್ಡ ನಾಯಕರು ಇದ್ದರೂ ಮೊದಲು ಕಾರ್ಯಕರ್ತರು. ಗಾಂಧಿ ಕುಟುಂಬ ಮಾತ್ರ ಕಾಂಗ್ರೆಸ್ ಪಕ್ಷವನ್ನು ಒಗ್ಗೂಡಿಸುತ್ತದೆ ಎಂದರು.

ಸುರ್ಜೇವಾಲ ಮಾತನಾಡಿ, ರಾಹುಲ್ ಗಾಂಧಿ ಜನರ ಹಣ ಉಳಿಸಲು ಹೋರಾಟ ಮಾಡ್ತಾ ಇದ್ದಾರೆ. ಪ್ರತಿಯೊಬ್ಬರು ಬ್ಯಾಂಕ್ ಖಾತೆ ಹೊಂದಿರುತ್ತಾರೆ. ಮಹಿಳೆಯರು, ಯುವಕರು, ಸೇರಿದಂತೆ ಎಲ್ಲರೂ ಖಾತೆ ಹೊಂದಿದ್ದಾರೆ. ಬ್ಯಾಂಕ್ ಹಣ ಲೂಟಿ ಮಾಡಿದ್ದಾರೆ. ಅದನ್ನ ರಾಹುಲ್ ಗಾಂಧಿ ಕೇಳಿದ್ದರು. ಮೋದಿ ಎಂಬ ಪದನಾಮ ಹೊಂದಿದವರು ಯಾಕೆ ಕಳ್ಳರು ಆಗಿದ್ದಾರೆ ಎಂದು ಕೋಲಾರದಲ್ಲಿ ಹೇಳಿದ್ದರು. ಲಲಿತ ಮೋದಿ, ವಿಜಯ ಮಲ್ಯ, ನೀರವ್ ಮೋದಿ, ಜಗತ್ತಿನ ಹಣ ಲೂಟಿ ಮಾಡಿಕೊಂಡು ಓಡಿ ಹೋದರು. ಬ್ಯಾಂಕ್‌ಗಳು ನಷ್ಟದಲ್ಲಿವೆ, ಜನ ಸಾಮಾನ್ಯರು ಡೆಪಾಸಿಟ್ ಮಾಡಿದ್ದ ಹಣ ಅದು.

ಇದನ್ನೂ ಓದಿ: Assembly Session: ಸಾಬರಿಗೆ ಕಾಂಗ್ರೆಸ್‌ ಸರ್ಕಾರದಲ್ಲೂ ರಕ್ಷಣೆ ಇಲ್ಲ: ಹುದ್ದೆ ನೀಡುವಲ್ಲಿ ಮೋಸ ಎಂದ ಎಚ್‌.ಡಿ. ರೇವಣ್ಣ

ರಾಹುಲ್ ಗಾಂಧಿ ಅವರಿಗೋಸ್ಕರ ಹೋರಾಟ ಮಾಡ್ತಿಲ್ಲ. ಕಾಂಗ್ರೆಸ್ ಪಕ್ಷಕ್ಕಾಗಿ ರಾಹುಲ್ ಹೋರಾಟ ಮಾಡ್ತಿಲ್ಲ. ದೇಶದ ಜನಸಾಮಾನ್ಯರು, ಯುವಕರಿಗೋಸ್ಕರ, ಬ್ಯಾಂಕಿಂಗ್ ವ್ಯವಸ್ಥೆ ಕುರಿತು ರಾಹುಲ್ ಧ್ವನಿ ಎತ್ತಿದ್ದಾರೆ. ನೀರವ್ ಮೋದಿ, ಚೋಕ್ಸಿ ಸೇರಿ ಹಲವರು ಮೂವತ್ತು ಸಾವಿರ ಕೋಟಿ ಲೂಟಿ ಮಾಡಿದ್ದಾರೆ. ಅವರೆಲ್ಲಾ ವೈಯಕ್ತಿಕವಾಗಿ ಮೋದಿಯವರಿಗೆ ಗೊತ್ತು. ಇದನ್ನ ವಿಪಕ್ಷದವರು ಪ್ರಶ್ನೆ ಮಾಡಬಾರದಾ..?

ಲಲಿತ್ ಮೋದಿ ಇಂಗ್ಲೆಂಡ್‌ಗೆ ಓಡಿ ಹೋದ್ರು. ಅವರ ಮೇಲೆ ಒಂದೂ ಕಂಪ್ಲೇಂಟ್ ಆಗಲಿಲ್ಲ. ಗುಜರಾತ್‌ನ ಮೆಹ್ತಾ ಹನ್ನೊಂದು ಸಾವಿರ ಕೋಟಿ ಲೂಟಿ ಮಾಡಿ ಓಡಿ ಹೋದ್ರು. ಬ್ಯಾಂಕ್ ಗಳಲ್ಲಿ ನಮ್ಮ, ನಿಮ್ಮ ಹಣ ಇರೋದು. ನಾವೆಲ್ಲಾ ನಮ್ಮ ಹಣ ಬ್ಯಾಂಕ್ ಗಳಲ್ಲಿ ಡೆಪಾಸಿಟ್ ಮಾಡಿದ್ದೀವಿ. 2.52 ಲಕ್ಷ ಕೋಟಿ ಹಣ ವಂಚಕರಿಂದ ಲೂಟಿ ಆಗ್ತಿದೆ. ಇದನ್ನ ಬೊಮ್ಮಾಯಿ, ಕಟೀಲ್ ಪ್ರಶ್ನೆ ಮಾಡಿದ್ದಾರಾ? ಎನ್‌ಪಿಎ ಜಾರಿ ಮಾಡಿದ್ದಾರೆ, ಆ ಹಣವನ್ನ ಜನ ವಾಪಾಸ್ ತಗೆದುಕೊಳ್ಳಲು ಆಗಲ್ಲ. 10 ವರ್ಷಗಳ ಬಜೆಟ್ ನಷ್ಟು ಹಣ ಲೂಟಿ ಮಾಡಲು ಪ್ಲ್ಯಾನ್ ಮಾಡಿದ್ದಾರೆ. ಅವರೆಲ್ಲಾ ದೇಶಬಿಟ್ಟು ಯಾಕೆ ಓಡಿಹೋದ್ರು? ಇದರ ವಿರುದ್ಧ ರಾಹುಲ್ ಗಾಂಧಿ ಹೋರಾಟ ಮಾಡ್ತಿದ್ದಾರೆ ಎಂದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮೈಸೂರು

Drowned In water : ಈಜಲು 20 ಅಡಿ ಎತ್ತರದಿಂದ ನೀರಿನ ಬುಗ್ಗೆಗೆ ಜಿಗಿದವನು ಮತ್ತೆ ಏಳಲೇ ಇಲ್ಲ!

Drowned In water : ಪುತ್ತೂರು ಘಟನೆ ಮಾಸುವ ಮೈಸೂರಿನಲ್ಲೂ ಯುವಕನೊಬ್ಬ ಕೆರೆಯಲ್ಲಿ ಈಜಲು ಹೋಗಿ ನೀರುಪಾಲಾಗಿದ್ದಾನೆ. ಹರಿಯುತ್ತಿರುವ ಕೆರೆಗೆ ಸುಮಾರು 20 ಅಡಿ ಎತ್ತರದಿಂದ ಜಿಗಿದಿದ್ದಾನೆ. ಆದರೆ ಮತ್ತೆ ಮೇಲೆ ಬರಲಿಲ್ಲ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ.

VISTARANEWS.COM


on

By

Drowned in water mysuru
ಮೃತ ದುರ್ದೈವಿ
Koo

ಮೈಸೂರು: ರಣ ಬೇಸಿಗೆ ಹಿನ್ನೆಲೆಯಲ್ಲಿ ಸೆಕೆ ತಾಳಲಾರದೆ ಯುವಕನೊಬ್ಬ ಕೆರೆಯಲ್ಲಿ ಈಜಲು (Drowned In water) ಹೋಗಿ ನೀರುಪಾಲಾಗಿದ್ದಾನೆ. ಮೈಸೂರಿನ ನಂಜನಗೂಡು ತಾಲೂಕಿನ ಕೋಣನೂರು ಗ್ರಾಮದ ಕೆರೆಯಲ್ಲಿ ಘಟನೆ ನಡೆದಿದೆ. ಚಾಮರಾಜನಗರದ ರಾಮಸಮುದ್ರ ಗ್ರಾಮದ ದೊಡ್ಡ ಬೀದಿ ನಿವಾಸಿ ಗುಣಶೇಖರ್(22) ಮೃತ ದುರ್ದೈವಿ.

ಸ್ನೇಹಿತರೊಂದಿಗೆ ಕೆರೆಗೆ ಈಜಲು ಹೋಗಿದ್ದ ಗುಣಶೇಖರ್‌ ಕಪಿಲಾ ನದಿಯಿಂದ ಕೆರೆಗೆ ನೀರು ಹರಿಯುತ್ತಿತ್ತು. ಈ ವೇಳೆ ನೀರಿನ ಬುಗ್ಗೆಯ ಮೇಲೆ ಜಿಗಿದಿದ್ದಾನೆ. ಸುಮಾರು 20 ಅಡಿ ಎತ್ತರವಿದ್ದ ನೀರು ಚಿಮ್ಮುವ ಬುಗ್ಗೆಗೆ ಮೇಲಿನಿಂದ ಕೆಳಗೆ ಜಂಪ್ ಮಾಡಿದ್ದಾನೆ. ಮೇಲಿಂದ ಜಂಪ್ ಮಾಡಿದ ಪರಿಣಾಮ ಕೆಳಗಡೆ ಬಿದ್ದವನು ಮತ್ತೆ ಮೇಲೆ ಏಳಲೇ ಇಲ್ಲ.

ಸ್ಥಳಕ್ಕೆ ಕವಲಂದೆ ಪೊಲೀಸ್ ಠಾಣೆಯ ಪಿಎಸ್ಐ ಕೃಷ್ಣಕಾಂತ ಕೋಳಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮೇಲೆಯೆತ್ತಿ ಮರಣೋತ್ತರ ಪರೀಕ್ಷೆಗೆ ರವಾನಿಸಲಿದ್ದಾರೆ. ಕವಲಂದೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಹೆತ್ತವರ ಕಣ್ಣೇದುರಿಗೆ ನೇತ್ರಾವತಿ ನದಿಯಲ್ಲಿ ಕೊಚ್ಚಿ ಹೋದರು ಪುತ್ರಿಯರು

ಪುತ್ತೂರು: ಪೋಷಕರ ಎದುರೇ ಮಕ್ಕಳಿಬ್ಬರು ನೀರುಪಾಲಾಗಿದ್ದಾರೆ. ದಕ್ಷಿಣ ಕನ್ನಡದ ಬಂಟ್ವಾಳದ ನಾವೂರು ಎಂಬಲ್ಲಿ ಈ ದುರಂತ (Drowned In water) ನಡೆದಿದೆ. ಉಳ್ಳಾಲ ನಿವಾಸಿಗಳಾದ ಅನ್ಸಾರ್ ಎಂಬುವವರ ಪುತ್ರಿ ಆಶ್ರಾ (11), ಇಲಿಯಾಸ್ ಎಂಬುವವರ ಪುತ್ರಿ ನಾಶಿಯಾ (14) ನೀರುಪಾಲಾಗಿದ್ದಾರೆ.

ಎರಡು ಕುಟುಂಬಗಳು ತಮ್ಮ ಮಕ್ಕಳೊಂದಿಗೆ ನೇತ್ರಾವತಿ ನದಿ ತೀರಕ್ಕೆ ತೆರಳಿದ್ದರು. ಈ ವೇಳೆ ನೀರಿನಲ್ಲಿ ಆಟವಾಡುವಾಗ ಏಕಾಏಕಿ ಆಕಸ್ಮಿಕವಾಗಿ ಮುಳುಗಿ ಮೃತಪಟ್ಟಿದ್ದಾರೆ. ಪೋಷಕರ ಮುಂದೆಯೇ ಬಾಲಕಿಯರು ನೀರುಪಾಲಾಗಿದ್ದಾರೆ. ಈಜು ಬಾರದ ಹಿನ್ನೆಲೆಯಲ್ಲಿ ಮಕ್ಕಳನ್ನು ರಕ್ಷಿಸಲಾಗದೆ ಪೋಷಕರು ಅಸಹಾಯಕರಾಗಿದ್ದರು.

ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಮೇಲಕ್ಕೆತ್ತಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ.

ಇದನ್ನೂ ಓದಿ: Channapatna News: ಮದುವೆಯಲ್ಲಿ ಐಸ್ ಕ್ರೀಂ ತಿಂದು 50ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಮುಂಡರಗಿ ಬಳಿ ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರ ಸಾವು

ಗದಗ: ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆ ಮುಂಡರಗಿ ತಾಲೂಕಿನ ಹೈತಾಪುರ ಗ್ರಾಮದಲ್ಲಿ ನಡೆದಿದೆ. ತಂಗಿಯ ಮಗನೊಂದಿಗೆ ಮಹಿಳೆಯೊಬ್ಬರು ನೀರು ತರಲು‌ ಕೃಷಿ ಹೊಂಡಕ್ಕೆ ಹೋದಾಗ ಘಟನೆ ನಡೆದಿದೆ.

ಗೀತಾ ಹೆಸರೂರು (34), ಮನೋಜ ಕವಲೂರು (5) ಮೃತರು. ಮೊದಲಿಗೆ ಮನೋಜ್ ಹೊಂಡದಲ್ಲಿ ಕಾಲು‌ ಜಾರಿ ಬಿದ್ದಿದ್ದಾನೆ. ಬಾಲಕನ ರಕ್ಷಣೆಗೆ ಹೋಗಿದ್ದ ಗೀತಾ ಕೂಡ ನೀರಿನಲ್ಲಿ ಮುಳುಗಿದ್ದಾರೆ. ಶಾಲೆ ರಜೆ ಹಿನ್ನೆಲೆ ದೊಡ್ಡಮ್ಮನ ಮನೆಗೆ ಮನೋಜ್ ಬಂದಿದ್ದ. ಬಾಲಕನ ಜತೆಗೆ ಕೃಷಿ ಹೊಂಡಕ್ಕೆ ಗೀತಾ ಹೋಗಿದ್ದಾಗ ದುರ್ಘಟನೆ ನಡೆದಿದೆ. ಮುಂಡರಗಿ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದಕ್ಷಿಣ ಕನ್ನಡ

Drowned In water : ಹೆತ್ತವರ ಕಣ್ಣೇದುರಿಗೆ ನೇತ್ರಾವತಿ ನದಿಯಲ್ಲಿ ಕೊಚ್ಚಿ ಹೋದರು ಪುತ್ರಿಯರು

Drowned In water : ಹೆತ್ತವರ ಕಣ್ಣೇದುರಿಗೆ ಇಬ್ಬರು ಪುತ್ರಿಯರು ನೀರುಪಾಲಾದ ದುರಂತ ನಡೆದಿದೆ. ನೇತ್ರಾವತಿ ನದಿ ತೀರಕ್ಕೆ ತೆರಳಿದವರು, ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

VISTARANEWS.COM


on

By

Drowned in water
ಸಾಂದರ್ಭಿಕ ಚಿತ್ರ
Koo

ಪುತ್ತೂರು: ಪೋಷಕರ ಎದುರೇ ಮಕ್ಕಳಿಬ್ಬರು ನೀರುಪಾಲಾಗಿದ್ದಾರೆ. ದಕ್ಷಿಣ ಕನ್ನಡದ ಬಂಟ್ವಾಳದ ನಾವೂರು ಎಂಬಲ್ಲಿ ಈ ದುರಂತ (Drowned In water) ನಡೆದಿದೆ. ಉಳ್ಳಾಲ ನಿವಾಸಿಗಳಾದ ಅನ್ಸಾರ್ ಎಂಬುವವರ ಪುತ್ರಿ ಆಶ್ರಾ (11), ಇಲಿಯಾಸ್ ಎಂಬುವವರ ಪುತ್ರಿ ನಾಶಿಯಾ (14) ನೀರುಪಾಲಾಗಿದ್ದಾರೆ.

ಎರಡು ಕುಟುಂಬಗಳು ತಮ್ಮ ಮಕ್ಕಳೊಂದಿಗೆ ನೇತ್ರಾವತಿ ನದಿ ತೀರಕ್ಕೆ ತೆರಳಿದ್ದರು. ಈ ವೇಳೆ ನೀರಿನಲ್ಲಿ ಆಟವಾಡುವಾಗ ಏಕಾಏಕಿ ಆಕಸ್ಮಿಕವಾಗಿ ಮುಳುಗಿ ಮೃತಪಟ್ಟಿದ್ದಾರೆ. ಪೋಷಕರ ಮುಂದೆಯೇ ಬಾಲಕಿಯರು ನೀರುಪಾಲಾಗಿದ್ದಾರೆ. ಈಜು ಬಾರದ ಹಿನ್ನೆಲೆಯಲ್ಲಿ ಮಕ್ಕಳನ್ನು ರಕ್ಷಿಸಲಾಗದೆ ಪೋಷಕರು ಅಸಹಾಯಕರಾಗಿದ್ದರು.

ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಮೇಲಕ್ಕೆತ್ತಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ.

ಇದನ್ನೂ ಓದಿ: Channapatna News: ಮದುವೆಯಲ್ಲಿ ಐಸ್ ಕ್ರೀಂ ತಿಂದು 50ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಮುಂಡರಗಿ ಬಳಿ ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರ ಸಾವು

ಗದಗ: ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆ ಮುಂಡರಗಿ ತಾಲೂಕಿನ ಹೈತಾಪುರ ಗ್ರಾಮದಲ್ಲಿ ನಡೆದಿದೆ. ತಂಗಿಯ ಮಗನೊಂದಿಗೆ ಮಹಿಳೆಯೊಬ್ಬರು ನೀರು ತರಲು‌ ಕೃಷಿ ಹೊಂಡಕ್ಕೆ ಹೋದಾಗ ಘಟನೆ ನಡೆದಿದೆ.

ಗೀತಾ ಹೆಸರೂರು (34), ಮನೋಜ ಕವಲೂರು (5) ಮೃತರು. ಮೊದಲಿಗೆ ಮನೋಜ್ ಹೊಂಡದಲ್ಲಿ ಕಾಲು‌ ಜಾರಿ ಬಿದ್ದಿದ್ದಾನೆ. ಬಾಲಕನ ರಕ್ಷಣೆಗೆ ಹೋಗಿದ್ದ ಗೀತಾ ಕೂಡ ನೀರಿನಲ್ಲಿ ಮುಳುಗಿದ್ದಾರೆ. ಶಾಲೆ ರಜೆ ಹಿನ್ನೆಲೆ ದೊಡ್ಡಮ್ಮನ ಮನೆಗೆ ಮನೋಜ್ ಬಂದಿದ್ದ. ಬಾಲಕನ ಜತೆಗೆ ಕೃಷಿ ಹೊಂಡಕ್ಕೆ ಗೀತಾ ಹೋಗಿದ್ದಾಗ ದುರ್ಘಟನೆ ನಡೆದಿದೆ. ಮುಂಡರಗಿ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Prajwal Revanna Case: ಗಂಡ, ಮಗನ ಕೇಸ್‌ನಿಂದ ಭವಾನಿ ರೇವಣ್ಣಗೂ ಕಾನೂನು ಕಂಟಕ?

Prajwal Revanna Case: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣದಲ್ಲಿ ಈಗಾಗಲೇ ರೇವಣ್ಣ ಎಸ್‌ಐಟಿ ವಶದದಲ್ಲಿದ್ದಾರೆ. ಪ್ರಜ್ವಲ್‌ ಬಂಧನಕ್ಕೆ ಅಧಿಕಾರಿಗಳು ಹೊಂಚು ಹಾಕಿದ್ದಾರೆ. ಇತ್ತ ರೇವಣ್ಣ ಅವರ ಪತ್ನಿ ಭವಾನಿ ಅವರಿಗೂ ಕಾನೂನು ಕಂಟಕ ಎದುರಾಗುವ ಸಾಧ್ಯತೆ ಇದೆ. ಪ್ರಕರಣದಲ್ಲಿ ರೇವಣ್ಣ ಅವರ ಪತ್ನಿ ಭವಾನಿ ಹೆಸರೂ ಕೇಳಿ ಬಂದಿದ್ದು, ಅವರಿಗೂ ಸಂಕಷ್ಟ ಎದುರಾಗಲಿದೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣ(Hassan Pen Drive Case)ದಲ್ಲಿ ದಿನಕ್ಕೊಂಡು ಬೆಳವಣಿಗೆ ನಡೆಯುತ್ತದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಪ್ರಜ್ವಲ್‌ ತಂದೆ, ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರನ್ನು ಎಸ್‌ಐಟಿ ವಶಕ್ಕೆ ಪಡೆದು ವಿಚಾರಣೆಯನ್ನು ತೀವ್ರಗೊಳಿಸಿದೆ. ಈ ಮಧ್ಯೆ ಪ್ರಕರಣದಲ್ಲಿ ರೇವಣ್ಣ ಅವರ ಪತ್ನಿ ಭವಾನಿ ಹೆಸರೂ ಕೇಳಿ ಬಂದಿದ್ದು, ಅವರಿಗೂ ಸಂಕಷ್ಟ ಎದುರಾಗಲಿದೆ.

ಎರಡು ಕೇಸ್‌ನಲ್ಲಿ ಸಂತ್ರಸ್ತೆಯರು ಭವಾನಿ ರೇವಣ್ಣ ಅವರ ಹೆಸರು ಉಲ್ಲೇಖಿಸಿದ್ದಾರೆ. ಲೈಂಗಿಕ ಕಿರುಕುಳ ಆರೋಪ ಮತ್ತು ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಹೆಸರು ಕೇಳಿ ಬಂದಿದೆ. ಅದರಲ್ಲಿಯೂ ಅಪಹರಣ ಕೇಸ್‌ನಲ್ಲಿ ನೇರವಾಗಿ ಭವಾನಿ ರೇವಣ್ಣ ಅವರ ವಿರುದ್ಧ ಆರೋಪ ಮಾಡಲಾಗಿದೆ. ಭವಾನಿ ರೇವಣ್ಣ ಕರೆದರು ಎಂದು ಹೇಳಿಯೇ ಅಪಹರಣ ಮಾಡಲಾಗಿದೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ಕಿಡ್ನಾಪ್ ಕೇಸ್‌ನಲ್ಲಿ ಭವಾನಿ ರೇವಣ್ಣ ಅವರಿಗೆ ಕಾನೂನು ಕಂಟಕ ಎದುರಾಗುವ ಸಾಧ್ಯತೆ ಇದೆ.

ಪ್ರಕರಣ ಸಂಬಂಧ ತೀವ್ರ ತನಿಖೆ ನಡೆಸುತ್ತಿರುವ ಎಸ್‌ಐಟಿ ಈಗಾಗಲೇ ಭವಾನಿ ರೇವಣ್ಣ ಅವರಿಗೆ ನೋಟಿಸ್‌ ನೀಡಿ ಮಾಹಿತಿ ಪಡೆದಿದೆ. ತನಿಖೆ ವೇಳೆ ಅವರ ವಿರುದ್ಧ ಸಾಕ್ಷಿ ಕಂಡು ಬಂದರೆ ಅವರೂ ಕಾನೂನಿನ ಕೈಗೆ ಸಿಲುಕಿಕೊಳ್ಳಲಿದ್ದಾರೆ. ಸದ್ಯ ಭವಾನಿ ರೇವಣ್ಣ ಅವರ ಪಾತ್ರದ ಬಗ್ಗೆ ತನಿಖೆ ಮುಂದುವರಿದಿದೆ ಎಂದು ಮೂಲಗಳು ತಿಳಿಸಿವೆ.

ಪ್ರಜ್ವಲ್ ರೇವಣ್ಣಗಾಗಿ ತೀವ್ರ ಹುಡುಕಾಟ

ಇತ್ತ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್‌ ರೇವಣ್ಣ ಅವರಿಗಾಗಿ ಎಸ್‌ಐಟಿ ತೀವ್ರ ಹುಡುಕಾಟ ನಡೆಸುತ್ತಿದೆ. ಬ್ಲೂ ಕಾರ್ನರ್ ನೋಟಿಸ್ ಜತೆಗೆ ರೆಡ್ ಕಾರ್ನರ್ ನೋಟಿಸ್‌ ಹೊರಡಿಸಲು ಸಿಬಿಐಗೆ ಎಸ್‌ಐಟಿ ಮನವಿ ಸಲ್ಲಿಸಿದೆ. ಪ್ರಜ್ವಲ್ ರೇವಣ್ಣ ಬಳಿ ಇರುವ ರಾಜತಾಂತ್ರಿಕ ಪಾಸ್‌ಪೋರ್ಟ್ ಸಹ ವಜಾಗೊಳಿಸಲು ಆಗ್ರಹಿಸಿದೆ. ಪ್ರಜ್ವಲ್ ರೇವಣ್ಣ ಅವರ ಪಾಸ್‌ಪೋರ್ಟ್‌ನಿಂದ ಕೊನೆಯ ಬಾರಿ ಯಾವ ದೇಶಕ್ಕೆ ಟಿಕೇಟ್ ಬುಕ್ ಅಗಿದೆ ಎಂಬ ಮಾಹಿತಿಯನ್ನೂ ಎಸ್‌ಐಟಿ ಕಲೆ ಹಾಕುತ್ತಿದೆ. ಕೊನೆಯ ಬಾರಿ ಯಾವ ಏರ್‌ಪೋರ್ಟ್‌ ತಲುಪಿದ್ದಾರೆ ಎನ್ನುವ ಮಾಹಿತಿ ನೀಡಲು ರೆಡ್ ಕಾರ್ನರ್ ನೊಟೀಸ್ ನೀಡಿ ಮನವಿ ಮಾಡಿದೆ.

ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸಿಲು ಎಲ್ಲ ರೀತಿಯಿಂದಲೂ ಎಸ್‌ಐಟಿ ಪ್ರಯತ್ನ ಪಡುತ್ತಿದೆ. ಪ್ರಜ್ವಲ್ ರೇವಣ್ಣ ಅವರು ಆಪ್ತರ ಜತೆ ಸಂಪರ್ಕದಲ್ಲಿರುವ ಹಿನ್ನೆಲೆಯಲ್ಲಿ ಆಪ್ತರು ಹಾಗೂ ಕುಟುಂಬದ ಸದಸ್ಯರ ಮೇಲೆಯೂ ನಿಗಾವಹಿಸಲಾಗಿದೆ. ರಾಜ್ಯದಲ್ಲಿ ಎರಡನೇ ಹಂತ ಮುಗಿದ ನಂತರ ಪ್ರಜ್ವಲ್‌ ಎಸ್‌ಐಟಿ ಮುಂದೆ ಶರಣಾಗುತ್ತಾರೆ ಎನ್ನುವ ಮಾತು ಕೂಡ ಕೇಳಿ ಬಂದಿದೆ. ಅದಾಗ್ಯೂ ದೇಶದ ಪ್ರಮುಖ ಏರ್‌ಪೋರ್ಟ್‌ಗಳಲ್ಲಿ ಎಸ್‌ಐಟಿ ಅಧಿಕಾರಿಗಳು ಮೇಲೆ ನಿಗಾ ವಹಿಸಿದ್ದಾರೆ. ಕರ್ನಾಟಕದಲ್ಲಿ ಎರಡನೇ ಹಂತದ ಮತದಾನ ಮೇ 7ರಂದು ನಡೆಯಲಿದೆ.

Continue Reading

ಕರ್ನಾಟಕ

Prajwal Revanna Case: ಎಚ್‌.ಡಿ.ರೇವಣ್ಣರಿಗೆ ಇಂದು ಜಾಮೀನು ಸಿಗುತ್ತಾ?

Prajwal Revanna Case: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಬಂಧನದಲ್ಲಿರುವ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರ ವಿಚಾರಣೆಯನ್ನು ಎಸ್‌ಐಟಿ ತೀವ್ರಗೊಳಿಸಿದೆ. ಈ ಮಧ್ಯೆ ಇಂದು (ಮೇ 6) ರೇವಣ್ಣ ಪರ ವಕೀಲರು ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಲಿದ್ದಾರೆ. ಆದರೆ ಬೇಲ್‌ ಸಿಗುವ ಸಾಧ್ಯತೆ ಇಲ್ಲ ಎನ್ನಲಾಗುತ್ತದೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಈಗಾಗಲೇ ಬಂಧನದಲ್ಲಿರುವ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರ ವಿಚಾರಣೆಯನ್ನು ಎಸ್‌ಐಟಿ ತೀವ್ರಗೊಳಿಸಿದೆ. ಈ ಮಧ್ಯೆ ಇಂದು (ಮೇ 6) ರೇವಣ್ಣ ಪರ ವಕೀಲರು ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಲಿದ್ದಾರೆ.

ಈ ಹಿಂದೆ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್ ವಜಾ ಮಾಡಿದ್ದರಿಂದ ರೇವಣ್ಣ ಅವರನ್ನು ಬಂಧಿಸಲಾಗಿತ್ತು. ಆದರೆ ಇಂದು ಕೂಡ ಜಾಮೀನು ದೊರೆಯು ಸಾಧ್ಯತೆ ಕಡಿಮೆ ಎನ್ನಲಾಗಿದೆ. ಹೀಗಾಗಿ ಇನ್ನೂ ನಾಲ್ಕು ದಿನ ರೇವಣ್ಣ ಅವರು ಎಸ್‌ಐಟಿ ವಶದಲ್ಲಿರುವುದು ಅನಿವಾರ್ಯವಾಗಲಿದೆ.

ಭಾನುವಾರ ರೇವಣ್ಣ ಅವರನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗಿತ್ತು. ಆ ವೇಳೆ ರೇವಣ್ಣ ಅವರನ್ನು ನ್ಯಾಯಾಧೀಶರು ನಾಲ್ಕು ದಿನ ಎಸ್ಐಟಿ ಕಸ್ಟಡಿಗೆ ನೀಡಿದ್ದರು. ಹೀಗಾಗಿ ತನಿಖಾ ಭಾಗವಾಗಿ ನಾಲ್ಕು ದಿನಗಳ ಕಾಲ ರೇವಣ್ಣ ಎಸ್‌ಐಟಿ ವಶದಲ್ಲಿ ಇರಲಿದ್ದಾರೆ.

ಇಂದು ರೇವಣ್ಣ ಪರ ವಕೀಲರು ಬೇಲ್ ಅರ್ಜಿ ಸಲ್ಲಿಸಿದರೆ ಎಸ್ಐಟಿ ಪರ ವಕೀಲರು ಆಕ್ಷೇಪಣೆ ಸಲ್ಲಿಸಲಿದ್ದಾರೆ. ಕಸ್ಟಡಿಯಲ್ಲಿರುವ ಅವರಿಗೆ ಹಿನ್ನೆಲೆ ಜಾಮೀನು ಕೊಟ್ಟರೆ ತನಿಖೆಗೆ ಹಿನ್ನೆಡೆಯಾಗಬಹುದು ಎಂದು ಎಸ್‌ಐಟಿ ವಾದ ಮಂಡಿಸಲಿದೆ. ಇದೇ ಕಾರಣಕ್ಕೆ ರೇವಣ್ಣ ಅವರಿಗೆ ಇಂದು ಜಾಮೀನು ಸಿಗುವ ಸಾಧ್ಯತೆ ಕಡಿಮೆ ಎನ್ನಲಾಗಿದೆ. ಕಸ್ಟಡಿ ಅವಧಿ ನಂತರವೇ ಜಾಮೀನು ಭಾಗ್ಯ ಲಭಿಸಲಿದೆ ಎಂದು ಮೂಲಗಳು ತಿಳಿಸಿವೆ.

ಒತ್ತಡದಲ್ಲಿರುವ ರೇವಣ್ಣ

ಇನ್ನು ಎಸ್‌ಐಟಿ ವಶದಲ್ಲಿರುವ ರೇವಣ್ಣ ಅವರು ಮಾನಸಿಕವಾಗಿ ಕುಗ್ಗಿದ್ದಾರೆ. ಸುಸ್ತಾಗಿರುವಂತೆ ಅವರು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ನಿನ್ನೆ ತಡರಾತ್ರಿ ಎಸ್ಐಟಿ ಅಧಿಕಾರಿಗಳು ಯಾವುದೇ ವಿಚಾರಣೆ ನಡೆಸಲಿಲ್ಲ. ಇಂದು ಬೆಳಗ್ಗೆ ಮತ್ತೆ ಪ್ರಕರಣದ ಬಗ್ಗೆ ಪ್ರಶ್ನಿಸಲಿದ್ದಾರೆ.

ರೇವಣ್ಣ ಬಂಧನವಾಗಿ 24 ಗಂಟೆ ಕಳೆದರೂ ಅವರನ್ನು ಭೇಟಿಯಾಗಲು ಅವರ ಕುಟುಂಬಸ್ಥರು ಆಗಮಿಸಿಲ್ಲ. ಯಾವಾಗಲೂ ರಾಜಕೀಯ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದ ರೇವಣ್ಣ ಸದ್ಯ ಒಬ್ಬಂಟಿಯಾಗಿದ್ದಾರೆ. ಶನಿವಾರ ಬಂಧನವಾದಾಗಿನಿಂದ ಸರಿಯಾಗಿ ನಿದ್ದೆ ಮಾಡದೇ ತಲೆ ಕೆಡಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸ್ಥಳ ಮಹಜರು

ಇಂದು (ಮೇ 6) ಸ್ಥಳ ಮಹಜರಿಗೆ ರೇವಣ್ಣ ಅವರನ್ನು ಅಧಿಕಾರಿಗಳು ಕರೆದೊಯ್ಯುವ ಸಾಧ್ಯತೆ ಇದೆ. ಇದೇ ವೇಳೆ ಸಂತ್ರಸ್ತೆಯನ್ನು ಅಕ್ರಮವಾಗಿ ಕೂಡಿಟ್ಟಿ ಸ್ಥಳ ತೋಟದ ಮನೆಯಲ್ಲಿಯೂ ಮಹಜರು ಪ್ರಕ್ರಿಯೆ ನಡೆಯಲಿದೆ. ಈಗಾಗಲೇ ಸಂತ್ರಸ್ತೆಯರಿಗಾಗಿ ಹೆಲ್ಪ್‌ಲೈನ್‌ ಆರಂಭಿಸಿರುವ ಎಸ್‌ಐಟಿ ಹೇಳಿಕೆ ದಾಖಲಿಸಿಕೊಳ್ಳುತ್ತಿದೆ. ಈ ಮಧ್ಯೆ ಹಾಸನದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ವಿಡಿಯೊಗಳನ್ನು ಯಾರೇ ಆಗಲಿ ವಾಟ್ಸ್‌ಆ್ಯಪ್‌, ಫೇಸ್‌ಬುಕ್‌ ಸೇರಿ ಯಾವುದೇ ಸಾಮಾಜಿಕ ಜಾಲತಾಣಗಳಲ್ಲಿ ಶೇರ್‌ ಮಾಡಿದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಐಟಿ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ಕೇಸ್‌ನ ಸಂತ್ರಸ್ತೆಯರಿಗಾಗಿ ಆರಂಭಿಸಿದ ಹೆಲ್ಪ್‌ಲೈನ್‌ಗೆ ಬರ್ತಿವೆ ಹಲವು ಕರೆಗಳು

Continue Reading
Advertisement
Rohit Sharma
ಕ್ರೀಡೆ5 mins ago

Rohit Sharma: ಐಪಿಎಲ್​ನಿಂದ ಹೊರಗುಳಿಯಲಿದ್ದಾರೆ ರೋಹಿತ್​ ಶರ್ಮ!

Karan Johar upset with Kettan Singh's poor mimicry of him
ಸಿನಿಮಾ10 mins ago

Karan Johar: ‘ಕಳಪೆ’ ಮಿಮಿಕ್ರಿ ಕಂಡು ಕರಣ್ ಜೋಹರ್ ಗರಂ; ಕ್ಷಮೆಯಾಚಿಸಿದ ಹಾಸ್ಯನಟ!

Drowned in water mysuru
ಮೈಸೂರು13 mins ago

Drowned In water : ಈಜಲು 20 ಅಡಿ ಎತ್ತರದಿಂದ ನೀರಿನ ಬುಗ್ಗೆಗೆ ಜಿಗಿದವನು ಮತ್ತೆ ಏಳಲೇ ಇಲ್ಲ!

Drowned in water
ದಕ್ಷಿಣ ಕನ್ನಡ34 mins ago

Drowned In water : ಹೆತ್ತವರ ಕಣ್ಣೇದುರಿಗೆ ನೇತ್ರಾವತಿ ನದಿಯಲ್ಲಿ ಕೊಚ್ಚಿ ಹೋದರು ಪುತ್ರಿಯರು

ED Raid
ದೇಶ47 mins ago

ED Raid: ಇಡಿ ಭರ್ಜರಿ ಬೇಟೆ; ಕಾಂಗ್ರೆಸ್‌ ಮುಖಂಡನ ಆಪ್ತ ಕಾರ್ಯದರ್ಶಿ ಮನೆಯಿಂದ 25 ಕೋಟಿ ರೂ. ವಶ

Mahanati Show Gagana Comedy About Rishi actor
ಕಿರುತೆರೆ57 mins ago

Mahanati Show: ‘ಮಹಾನಟಿʼ ವೇದಿಕೆಯಲ್ಲಿ ನಟ ರಿಷಿ ಫೋನ್‌ ನಂಬರ್‌ ಕೇಳಿದ ಚಿತ್ರದುರ್ಗದ ಗಗನಾ!

amethi unrest
ದೇಶ1 hour ago

Amethi Unrest: ಕಾಂಗ್ರೆಸ್‌ ಕಚೇರಿ ಮೇಲೆ ಕಿಡಿಗೇಡಿಗಳಿಂದ ಅಟ್ಯಾಕ್‌; ಬಿಜೆಪಿಯ ದುಷ್ಕೃತ್ಯ ಎಂದು ಆರೋಪ

Paris Olympics
ಕ್ರೀಡೆ2 hours ago

Paris Olympics: ಪ್ಯಾರಿಸ್​ ಒಲಿಂಪಿಕ್ಸ್​ಗೆ ಅರ್ಹತೆ ಪಡೆದ ​ಭಾರತದ ಪುರುಷರ & ಮಹಿಳೆಯರ ರಿಲೇ ತಂಡ

Prajwal Revanna Case
ಕರ್ನಾಟಕ2 hours ago

Prajwal Revanna Case: ಗಂಡ, ಮಗನ ಕೇಸ್‌ನಿಂದ ಭವಾನಿ ರೇವಣ್ಣಗೂ ಕಾನೂನು ಕಂಟಕ?

Boat Capsize
ವೈರಲ್ ನ್ಯೂಸ್2 hours ago

Boat Capsizes: ಜಲಾವೃತ ಸೇತುವೆಗೆ ದೋಣಿ ಡಿಕ್ಕಿ; ಶಾಕಿಂಗ್‌ ವಿಡಿಯೋ ವೈರಲ್‌

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina bhavishya
ಭವಿಷ್ಯ7 hours ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ16 hours ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ18 hours ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ18 hours ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ2 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ3 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ3 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ4 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ4 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

ಟ್ರೆಂಡಿಂಗ್‌