Site icon Vistara News

Bagepalli Election Results: ಬಾಗೇಪಲ್ಲಿಯಲ್ಲಿ ಕಾಂಗ್ರೆಸ್‌ನ ಎಸ್.ಎನ್.ಸುಬ್ಬಾರೆಡ್ಡಿಗೆ ಗೆಲುವು

Bagepalli Election Results SN Subba Reddy wins

Bagepalli Election Results SN Subba Reddy wins

ಚಿಕ್ಕಬಳ್ಳಾಪುರ: ವಿಧಾನಸಭಾ ಚುನಾವಣೆಯ (Bagepalli Election Results) ಫಲಿತಾಂಶ ಹೊರಬಿದ್ದಿದ್ದು, ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಎಸ್.ಎನ್.ಸುಬ್ಬಾರೆಡ್ಡಿ ಗೆಲುವು ಕಂಡಿದ್ದಾರೆ. ಇವರು 19179 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಸಿ.ಮುನಿರಾಜು ವಿರುದ್ಧ ವಿಜಯ ಪತಾಕೆ ಹಾರಿಸಿದ್ದಾರೆ.

ಬಾಗೇಪಲ್ಲಿ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್‌ ಅಭ್ಯರ್ಥಿ ಎಸ್.ಎನ್.ಸುಬ್ಬಾರೆಡ್ಡಿ 82,128 ಮತಗಳು, ಜೆಡಿಎಸ್‌ ಅಭ್ಯರ್ಥಿ ಸಿ. ಮುನಿರಾಜು 62,949 ಮತ, ಸಿಪಿಐಎಂ ಅಭ್ಯರ್ಥಿ 19,621 ಮತಗಳನ್ನು ಪಡೆದಿದ್ದಾರೆ.

ಕಳೆದ ಬಾರಿಯ ಫಲಿತಾಂಶ ಏನು?

ಸಿಪಿಐಎಂ ಪಕ್ಷದ ಭದ್ರಕೋಟೆಯಾಗಿದ್ದ ಬಾಗೇಪಲ್ಲಿಯಲ್ಲಿ 2018ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಸ್.ಎನ್. ಸುಬ್ಬಾರೆಡ್ಡಿ ಅವರು 65,710 ಮತಗಳನ್ನು ಪಡೆದು ವಿಜಯಿಯಾಗಿದ್ದರು. ಸಿಪಿಐಎಂ ಅಭ್ಯರ್ಥಿ ಜಿ.ವಿ.ಶ್ರೀರಾಮ ರೆಡ್ಡಿ 51,697 ಮತ, ಜೆಡಿಎಸ್ ಅಭ್ಯರ್ಥಿ ಸಿ.ಆರ್. ಮನೋಹರ್ 38,302 ಮತ, ಬಿಜೆಪಿ ಅಭ್ಯರ್ಥಿ ಸಾಯಿ ಕುಮಾರ್ 4,140 ಮತ ಗಳಿಸಿದ್ದರು.

Exit mobile version