ಬೆಂಗಳೂರು: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಬಿ.ವೈ. ವಿಜಯೇಂದ್ರ ಸೇರಿ ಅನೇಕರ ಕುರಿತು ಹೇಳಿಕೆ ನೀಡುತ್ತಿದ್ದರೂ ಮಾಜಿ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬಿಜೆಪಿ ಕ್ರಮ ಕೈಗೊಂಡಿಲ್ಲ ಎನ್ನುವುದನ್ನು ಕರ್ನಾಟಕ ಕಾಂಗ್ರೆಸ್ ಲೇವಡಿ ಮಾಡಿದೆ.
ಈ ಕುರಿತು ಟ್ವೀಟ್ ಮಾಡಿರುವ ಕೆಪಿಸಿಸಿ, ಶಿಸ್ತಿನ ಪಕ್ಷ ಎಂದುಕೊಳ್ಳುವ ಬಿಜೆಪಿ, ಕನಿಷ್ಠ ಪಕ್ಷ ಒಬ್ಬ ಯತ್ನಾಳರಿಗೆ ಶಿಸ್ತು ಕ್ರಮ ಜರುಗಿಸಲು ಸಾಧ್ಯವಾಗಿಲ್ಲ. ಅಂದರೆ ಬಿಜೆಪಿಯ ಶಿಸ್ತು ಖಾಕಿ ಚಡ್ಡಿ ಹಾಕಿಕೊಳ್ಳುವುದಕ್ಕೆ ಮಾತ್ರ ಮೀಸಲು ಎಂಬುದು ಸ್ಪಷ್ಟ! ಬಿ.ಎಸ್. ಯಡಿಯೂರಪ್ಪ ವಿರುದ್ಧ ಯತ್ನಾಳ್ ಆಡುವ ಮಾತುಗಳು ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರದ್ದು, ಬಾಯಿ ಮಾತ್ರ ಯತ್ನಾಳ್‌ರದ್ದು! ಎಂದು ಟೀಕೆ ಮಾಡಿದೆ.
ಕಾಂಗ್ರೆಸ್ ಕಿಟಿಕಿ ಇಣುಕುವುದರಲ್ಲೇ ನಿರತರಾಗಿದ್ದ ಬಿಜೆಪಿಗೆ ತಮ್ಮಲ್ಲಿನ ಬಿಜೆಪಿ ವರ್ಸಸ್ ಬಿಜೆಪಿ ಕದನದಲ್ಲಿ ಬಿಜೆಪಿಗರೆಲ್ಲ ಈಗ ಹಾವಾಡಿಗರಾಗಿದ್ದಾರೆ. ಅವರ ಹಾವುಗಳು ಎಲ್ಲೆಲ್ಲಿರುತ್ತವೆ, ಎಲ್ಲೆಲ್ಲಿ ಹೆಡೆ ಎತ್ತುತ್ತವೆ ಎಂಬುದು ಸ್ವತಃ ಬಿಜೆಪಿಗೇ ತಿಳಿಯುತ್ತಿಲ್ಲ! ಯತ್ನಾಳರ ಹಾವು ಯಾವುದು? ಭ್ರಷ್ಟಾಚಾರದ ಹಾವೇ? ಸಿಡಿ ಹಾವೇ? ಎಂದು ಪ್ರಶ್ನಿಸಿದೆ.
ಇದನ್ನೂ ಓದಿ | ನಾವು ಗೂಟ ಇಟ್ಟರೆ ಸುಧಾರಿಸಿಕೊಳ್ಳಲು ಆಗಲ್ಲ: ಸ್ವಪಕ್ಷೀಯರಿಗೆ ಬಸನಗೌಡ ಪಾಟೀಲ್ ಯತ್ನಾಳ್ ಎಚ್ಚರಿಕೆ