ಮಂಗಳೂರು: ಬಿಹಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮದ ವೇಳೆ ಗಲಭೆ ಸೃಷ್ಟಿಸಲು ಹಣಕಾಸಿನ ನೆರವು ಒದಗಿಸಿದ ಆರೋಪದ ಹಿನ್ನೆಲೆಯಲ್ಲಿ ಬಂಟ್ವಾಳದಲ್ಲಿ ರಾಷ್ಟ್ರೀಯ ತನಿಖಾ ದಳ (NIA Raid) ಕಾರ್ಯಾಚರಣೆ ನಡೆಸಿ, ಐವರು ಆರೋಪಿಗಳನ್ನು ವಶಕ್ಕೆ ಪಡೆದಿದೆ.
ಬಂಟ್ವಾಳದ ನಂದಾವರ ನಿವಾಸಿಗಳಾದ ಮಹಮ್ಮದ್ ಸಿನಾನ್, ಇಕ್ಬಾಲ್, ಸರ್ಫಾಜ್ ನವಾಜ್, ನೌಫಲ್ ಹಾಗೂ ಪುತ್ತೂರು ತಾಲೂಕಿನ ಗ್ರಾಮಾಂತರ ಠಾಣಾ ವ್ಯಾಪ್ತಿಯ ರಫೀಕ್ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ. ಕಳೆದ ಹಲವು ತಿಂಗಳಿನಿಂದ ಇವರ ವ್ಯವಹಾರದ ಮೇಲೆ ಎನ್.ಐ.ಎ ತಂಡ ನಿಗಾ ಇಟ್ಟಿತ್ತು. ಹಲವು ಬ್ಯಾಂಕ್ ಖಾತೆಗಳಿಗೆ ನಿರಂತರ ಹಣ ರವಾನೆ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಐವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.