Site icon Vistara News

Contaminated Water: ಹೊಸಪೇಟೆಯ ನಲ್ಲಾಪುರದಲ್ಲಿ ಕಲುಷಿತ ನೀರು ಸೇವಿಸಿ 18 ಮಂದಿ ಅಸ್ವಸ್ಥ

Women who fell ill in hospital

ವಿಜಯನಗರ: ಕಲುಷಿತ ನೀರು ಸೇವಿಸಿ 18 ಮಂದಿ ಅಸ್ವಸ್ಥರಾದ ಘಟನೆ ಹೊಸಪೇಟೆ ತಾಲೂಕಿನ ನಲ್ಲಾಪುರ ಗ್ರಾಮದಲ್ಲಿ ನಡೆದಿದೆ. ಓವರ್ ಹೆಡ್ ಟ್ಯಾಂಕ್ ಸ್ವಚ್ಛ ಮಾಡದ ಹಿನ್ನೆಲೆಯಲ್ಲಿ ಕಲುಷಿತ ನೀರು (Contaminated Water) ಪೂರೈಕೆಯಾಗಿದೆ ಎಂಬ ಆರೋಪ ಕೇಳಿಬಂದಿದೆ.

ಇದುವರೆಗೆ 18 ಜನರು ವಾಂತಿ- ಭೇದಿಯಿಂದ ಅಸ್ವಸ್ಥಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದವರು ಆರೋಗ್ಯ ಸ್ಥಿತಿ ಉತ್ತಮವಾಗಿದೆ ಎನ್ನಲಾಗಿದೆ. ವಿಜಯನಗರ ಜಿಪಂ ಸಿಇಒ ಸದಾಶಿವ ಪ್ರಭು, ಡಿಎಚ್ಒ‌ ಶಂಕರ್ ನಾಯ್ಕ್ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿ, ಪೂರೈಕೆಯಾದ ನೀರಿನ ಮಾದರಿಯನ್ನು ಪರೀಕ್ಷೆಗೆಂದು ಲ್ಯಾಬ್‌ಗೆ ಕಳುಹಿಸಿದ್ದಾರೆ.

ಇದನ್ನೂ ಓದಿ | Double Murder : ಅಮ್ಮ-ಮಗನನ್ನು ಕ್ರೂರವಾಗಿ ಕೊಂದ ಫೇಸ್‌ಬುಕ್‌ ಗೆಳೆಯ; ವರ್ಷದ ನಂತರ ಸಿಕ್ಕಿಬಿದ್ದ

ಅಧಿಕಾರಿಗಳ ಕಿರುಕುಳ; ಬಸ್‌ನಲ್ಲೇ ವಿಷ ಕುಡಿದು ಒದ್ದಾಡಿದ ಕೆಎಸ್‌ಆರ್‌ಟಿಸಿ ಡ್ರೈವರ್‌

Shivamogga News KSRTC bus Driver attempts suicide by consuming poison

ಶಿವಮೊಗ್ಗ: ಕೆಎಸ್ಆರ್‌ಟಿಸಿ ಬಸ್ಸಿನಲ್ಲೇ ಡ್ರೈವರ್ ಕಂ ಕಂಡಕ್ಟರ್ (Ksrtc Driver) ವಿಷ ಸೇವಿಸಿ ಆತ್ಮಹತ್ಯೆಗೆ (Self Harming) ಯತ್ನಿಸಿದ್ದಾರೆ. ಶಿವಮೊಗ್ಗದ (Shivamogga News) ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದಲ್ಲಿ (Shivamogga bus Stand) ಘಟನೆ ನಡೆದಿದೆ. ಹೊನ್ನಾಳಿ ಡಿಪೋದಲ್ಲಿ ಡ್ರೈವರ್ ಕಂ ಕಂಡಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಬಸವರಾಜ್ (38) ಆತ್ಮಹತ್ಯೆಗೆ ಯತ್ನಿಸಿದವರು.

10 ವರ್ಷದಿಂದ ಕೆಎಸ್‌ಆರ್‌ಟಿಸಿಯಲ್ಲಿ ಸೇವೆ ಸಲ್ಲಿಸುತ್ತಿರುವ ಬಸವರಾಜ್ ಅವರು ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ವಿಷ ಕುಡಿದು ಬಸ್‌ನಲ್ಲೇ ಒದ್ದಾಡುತ್ತಿರುವ ದೃಶ್ಯ ವಿಸ್ತಾರ ನ್ಯೂಸ್‌ಗೆ ಲಭ್ಯವಾಗಿದೆ.

ಹೊನ್ನಾಳ್ಳಿ ಡಿಪೋದಲ್ಲಿ ಕೆಲಸ ಮಾಡುತ್ತಿದ್ದ ಬಸವರಾಜ್‌ನನ್ನು ಅಧಿಕಾರಿಗಳು ವಿಚಾರಣೆಗೆಂದು ಕರೆಸಿಕೊಂಡಿದ್ದರು. ತನ್ನ ವಿರುದ್ಧ ದಾಖಲಾಗಿದ್ದ ಕೇಸ್‌ಗೆ ಮನ ನೊಂದ ಬಸವರಾಜ್‌ ಶಿವಮೊಗ್ಗ-ಭದ್ರಾವತಿ ಮಾರ್ಗವಾಗಿ ಹೋಗುವ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಇದನ್ನೂ ಓದಿ | Assault Case : ಪದೇಪದೆ ಹಾರ್ನ್‌ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಕಿರಿಕ್‌; ಯುವಕರಿಗೆ ಚಾಕು ಹಾಕಿದ ಪುಂಡರು

ನಿನ್ನೆ ಶನಿವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ವಿಷ ಸೇವಿಸಿ ಒದ್ದಾಡುತ್ತಿದ್ದ ಬಸವರಾಜ್‌ನನ್ನು ಕೂಡಲೇ ಅಲ್ಲಿದ್ದ ಸಿಬ್ಬಂದಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಮೆಗ್ಗಾನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಸವರಾಜ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Exit mobile version