ತುಮಕೂರು: ವಾಂತಿ, ಭೇದಿಯಿಂದ 35 ಜನ ಅಸ್ವಸ್ಥರಾಗಿರುವ (Contaminated Water) ಘಟನೆ ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಹೋಬಳಿಯ ಚಿನ್ನೇನಹಳ್ಳಿಯಲ್ಲಿಯಲ್ಲಿ ನಡೆದಿದೆ. ಅಸ್ವಸ್ಥರ ಪೈಕಿ 8 ಜನರ ಪರಿಸ್ಥಿತಿ ಗಂಭೀರವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಲುಷಿತ ನೀರು ಸೇವನೆಯಿಂದ ಜನರು ಅಸ್ವಸ್ಥರಾಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.
ಚಿನ್ನೇನಹಳ್ಳಿ 300 ಮನೆಗಳಿರುವ ಗ್ರಾಮವಾಗಿದ್ದು, ಭಾನುವಾರದಿಂದ 6 ದಿನಗಳ ಕಾಲ ಇಲ್ಲಿ ಲಕ್ಕಮ್ಮ- ಕೆಂಪಮ್ಮ ಜಾತ್ರೆ ನಡೆಯುತ್ತಿದೆ. 29 ವರ್ಷದ ಬಳಿಕ ಜಾತ್ರೆ ನಡೆಯುತ್ತಿದ್ದು, ಭಾನುವಾರ ರಾತ್ರಿ ಗ್ರಾಮಸ್ಥರು ದೇವರ ಕಾರ್ಯ ಮುಗಿಸಿದ್ದರು. ನೆನ್ನೆ ಬೆಳಗ್ಗೆಯಿಂದ ಗ್ರಾಮದ ಹಲವರಲ್ಲಿ ವಾಂತಿ-ಭೇದಿ ಕಾಣಿಸಿಕೊಂಡಿದೆ. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಧುಗಿರಿ ತಾಲೂಕು ಆಸ್ಪತ್ರೆ, ತುಮಕೂರು ಜಿಲ್ಲಾಸ್ಪತ್ರೆ, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಅಸ್ವಸ್ಥರನ್ನು ದಾಖಲಿಸಲಾಗಿದೆ. ಪರಿಸ್ಥಿತಿ ಗಂಭೀರವಾಗಿರುವ ಎಂಟು ಜನರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಲಕ್ಷ್ಮಮ್ಮ , ಪೆದ್ದಣ್ಣಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚಿಕಿತ್ಸೆ ಬಳಿಕ ಇಬ್ಬರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ.
ಇದನ್ನೂ ಓದಿ | Black Magic : 25 ಕುರಿ-ಮೇಕೆಗಳ ರುಂಡ ಕತ್ತರಿಸಿ ವ್ಯಕ್ತಿಗಳ ಫೋಟೊ ಇಟ್ಟು ಭಯಾನಕ ವಾಮಾಚಾರ!
ಕಲುಷಿತ ಕುಡಿಯುವ ನೀರಿನಿಂದಾಗಿ ಜನರಲ್ಲಿ ವಾಂತಿ-ಭೇದಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಸಚಿವ ಕೆ.ಎನ್. ರಾಜಣ್ಣ ಅವರು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ, ಅಸ್ವಸ್ಥರ ಆರೋಗ್ಯ ವಿಚಾರಣೆ ನಡೆಸಿದ್ದಾರೆ.
ಅಪ್ಪಳಿಸಿ ಬಂದ ರಕ್ಕಸ ಅಲೆಗೆ ಕೊಚ್ಚಿ ಹೋದ ಮಹಿಳೆ ಸಾವು; ಮೂವರ ರಕ್ಷಣೆ
ಮಂಗಳೂರು: ಮಂಗಳೂರಿನ ಉಳ್ಳಾಲ ಕಡಲತೀರದಲ್ಲಿ (Drowned in water) ಸಮುದ್ರಪಾಲಾಗುತ್ತಿದ್ದ ಮೂವರು ಮಹಿಳೆಯರ ರಕ್ಷಣೆ ಮಾಡಲಾಗಿದ್ದು, ಓರ್ವ ಮಹಿಳೆ ನೀರುಪಾಲಾಗಿದ್ದಾರೆ. ಪಿ.ಎಲ್ ಪ್ರಸನ್ನ ಎಂಬುವರ ಪತ್ನಿ ಪರಿಮೀ ರತ್ನ ಕುಮಾರಿ (57) ನೀರುಪಾಲಾದವರು.
ಆಂಧ್ರಪ್ರದೇಶದ ಕೊಂಡಾಪುರದ ಸಿರಿಲಿಂಗಪಲ್ಲಿ ನಿವಾಸಿಗಳು ಎಂದು ತಿಳಿದು ಬಂದಿದೆ. ಪರಿಮೀ ರತ್ನ ಕುಮಾರಿ ಹಾಗೂ ಅವರ ಸ್ನೇಹಿತರು ಪ್ರವಾಸಕ್ಕೆಂದು ಆಂಧ್ರಪ್ರದೇಶದಿಂದ ಬಂದಿದ್ದರು. ಸಮುದ್ರಕ್ಕಿಳಿದಾಗ ಬೃಹತ್ ಗಾತ್ರದ ಅಲೆಯೊಂದು ಅಪ್ಪಳಿಸಿದಾಗ ನಾಲ್ವರು ಮಹಿಳೆಯರನ್ನು ಎಳೆದುಹೋಗಿದೆ.
ಕೂಡಲೇ ಎಚ್ಚೆತ್ತ ಸ್ಥಳೀಯರು ಕೊಚ್ಚಿ ಹೋಗುತ್ತಿದ್ದವರನ್ನು ತಕ್ಷಣ ಸಮುದ್ರದಿಂದ ಹೊರಗೆಳೆದು ರಕ್ಷಿಸಿದ್ದಾರೆ. ಈ ಪೈಕಿ ಪರಿಮೀ ರತ್ನ ಕುಮಾರಿ ಪ್ರಜ್ಞೆ ತಪ್ಪಿದ್ದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ಇದನ್ನೂ ಓದಿ: Black Magic : 25 ಕುರಿ-ಮೇಕೆಗಳ ರುಂಡ ಕತ್ತರಿಸಿ ವ್ಯಕ್ತಿಗಳ ಫೋಟೊ ಇಟ್ಟು ಭಯಾನಕ ವಾಮಾಚಾರ!
ಹೈದರಾಬಾದ್‌ನಿಂದ 5 ಮಂದಿ ಮಹಿಳೆಯರ ತಂಡ ಜೂ.6 ಕ್ಕೆ ಮೈಸೂರಿಗೆ ವಿಮಾನದ ಮೂಲಕ ಬಂದಿಳಿದಿದ್ದರು. ಅಲ್ಲಿ ಪ್ರವಾಸ ಮುಗಿಸಿ ಇನೋವಾ ಕಾರಿನ ಮೂಲಕ ಜೂ.7 ಕ್ಕೆ ಕೊಡಗಿಗೆ ತಲುಪಿತ್ತು. ಅಲ್ಲಿಂದ ಜೂ.9 ಕ್ಕೆ ಸುಬ್ರಹ್ಮಣ್ಯ ಕ್ಷೇತ್ರ ಸಂದರ್ಶನ ನಡೆಸಿ, ನಿನ್ನೆ ಸೋಮವಾರವಷ್ಟೇ ಧರ್ಮಸ್ಥಳ ಸಂದರ್ಶನ ನಡೆಸಿದ್ದರು. ಉಳ್ಳಾಲ ಸಮುದ್ರ ತೀರ ವಿಹಾರಕ್ಕೆ ಬಂದಾಗ ಈ ದುರ್ಘಟನೆ ನಡೆದಿದೆ.