ಹಾವೇರಿ: ಬೋರ್‌ವೆಲ್‌ಗೆ ವಿದ್ಯುತ್ ಸಂಪರ್ಕ ಕಲ್ಪಿಸುವಾಗ ವಿದ್ಯುತ್ ತಗುಲಿ ಗುತ್ತಿಗೆ ಕಾರ್ಮಿಕ ಮೃತಪಟ್ಟು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ಮಣಿಗಾರ ಓಣಿಯಲ್ಲಿ ನಡೆದಿದೆ. ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂಲೇ ಯುವಕ ಮೃತಪಟ್ಟಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಹೋವಿನ ಶಿಗ್ಲಿಯ ಗುತ್ತಿಗೆ ಕಾರ್ಮಿಕ ಸುರೇಶ್ ಮೃತ, ನಿಂಗಪ್ಪ ಗಾಯಾಳುವಾಗಿದ್ದಾರೆ. ಇಬ್ಬರು ಯುವಕರು, ಬೋರ್‌ವೆಲ್‌ಗಾಗಿ ಹೊಸ ವಿದ್ಯುತ್ ಲೇನ್ ಅಳವಡಿಸುವಾಗ ಏಕಾಏಕಿ ವಿದ್ಯುತ್ ಹರಿದು ಅವಘಡ ಸಂಭವಿಸಿದೆ. ವಿದ್ಯುತ್ ಕಡಿತ ಮಾಡಿ ಕಾಮಗಾರಿ ಮಾಡುತ್ತಿದ್ದರೂ ಅವಘಡ ನಡೆದಿದೆ. ಮಾಹಿತಿ ನೀಡದೆ ಏಕಾಏಕಿ ವಿದ್ಯುತ್ ಸಂಪರ್ಕ ನೀಡಿದ್ದರಿಂದ ದುರಂತ ನಡೆದಿದೆ ಎಂದು ಯುವಕರ ಕುಟುಂಬಸ್ಥರರು ಆರೋಪಿಸಿದ್ದಾರೆ.
ಅವಘಡದಿಂದ ಕಂಬದಲ್ಲಿಯೇ ಗುತ್ತಿಗೆ ಕಾರ್ಮಿಕನ ಶವ ನೇತಾಡುತ್ತಿರುವುದು ಕಂಡುಬಂದಿದೆ. ಗಾಯಾಳು ನಿಂಗಪ್ಪ ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ | Road Accident : ಮಹಿಳೆ ತಲೆ ಮೇಲೆ ಹರಿದ ಕ್ಯಾಂಟರ್; ಹೆಲ್ಮೆಟ್ ಹಾಕಿದ್ದರೆ ಉಳಿಯುತ್ತಿತ್ತು ಜೀವ
ಲಾರಿಗೆ ಟಿಟಿ ವಾಹನ ಡಿಕ್ಕಿ; ಮೂವರು ಸಾವು, ಮೂವರು ಗಂಭೀರ
ರಾಮನಗರ: ಮದುವೆ ಸಂಭ್ರಮವನ್ನು ಮುಗಿಸಿ ವಾಪಸ್ ಊರಿಗೆ ಟಿಟಿಯಲ್ಲಿ ತೆರಳುತ್ತಿದ್ದ ಅವರಿಗೆ ಯಮರೂಪಿಯಾಗಿ ಬಂದ ಲಾರಿಯು ಪ್ರಾಣವನ್ನೇ (Road Accident) ಕಸಿದಿದೆ. ರಾಮನಗರದ ಚನ್ನಪಟ್ಟಣ ತಾಲೂಕಿನ ಚಾಮುಂಡೇಶ್ವರಿ ಮೆಡಿಕಲ್ ಕಾಲೇಜು ಬಳಿ ಈ ದುರ್ಘಟನೆ ನಡೆದಿದೆ. ರಸ್ತೆ ಅಪಘಾತದಲ್ಲಿ ಸೋಮಲಿಂಗಪ್ಪ (70), ಶಿವಲಿಂಗಪ್ಪ (66), ರಾಜೇಶ್ವರಿ ಎಂಬುವವರು ಸ್ಥಳದಲ್ಲೇ ಮೃತಪಟ್ಟರೆ, ಮೂವರು ಗಂಭೀರ ಸ್ಥಿತಿಯಲ್ಲಿದ್ದಾರೆ.
ತಡರಾತ್ರಿ 2 ಗಂಟೆ ಸುಮಾರಿಗೆ ಕುಟುಂಬ ಸಮೇತ ಮದುವೆ ಮುಗಿಸಿಕೊಂಡು ವಾಪಸ್ ಹೋಗುವಾಗ ಹಿಂಬದಿಯಿಂದ ಬಂದ ಟಿಟಿ ವಾಹನವು ಲಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಮಹಿಳೆ ಸೇರಿ ಸ್ಥಳದಲ್ಲೇ ಮೂವರು ಮಸಣ ಸೇರಿದರೆ, ಮೂವರು ಗಂಭೀರ ಗಾಯಗೊಂಡಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಚನ್ನಪಟ್ಟಣ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಗಾಯಾಳುಗಳಿಗೆ ಚಾಮುಂಡೇಶ್ವರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತದ ರಭಸಕ್ಕೆ ಟಿಟಿ ವಾಹನವು ಸಂಪೂರ್ಣ ನಜ್ಜುಗುಜ್ಜಾಗಿದೆ. ಚನ್ನಪಟ್ಟಣ ತಾಲೂಕಿನ ಬೈರಾಪಟ್ಟಣ ಬಳಿ ಘಟನೆ ನಡೆದಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ